logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಮಠದ ಆವರಣದಲ್ಲಿ ಮಾ.16ರ ಸೋಮವಾರ ಮತ್ತು ಮಾ. 17ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಸೊರಬ: ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಮಠದ ಆವರಣದಲ್ಲಿ ಮಾ.16ರ ಸೋಮವಾರ ಮತ್ತು ಮಾ. 17ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಶ್ರೀ ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ನಿಜಗುಣ ರೆಸಿಡೆನ್ಸಿ ಸಭಾಂಗಣದಲ್ಲಿ ಬುಧವಾರ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾ. 16ರಂದು ಸಂಜೆ 4ಕ್ಕೆ ಗಂಗಾಪೂಜೆ, ಶ್ರೀ ಜಗದ್ಗುರು ಪಂಚಾಚಾರ್ಯ ಧ್ವಜಾರೋಹಣ, ಸಂಜೆ 6ಕ್ಕೆ ಕಲಶಾರಾಧನೆ, ಶ್ರೀ ದುರ್ಗಾಹೋಮ ಪೂರ್ಣಾಹುತಿ ಮಹಾಮಂಗಳಾರತಿ ನಂತರ ಶ್ರೀ ಚೌಡೇಶ್ವರಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಾ. 17ರಂದು ಜಗುದ್ಗುರು ರೇಣುಕಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ, ಶ್ರೀ ಚೌಡೇಶ್ವರಿ ದೇವಿಗೆ, ಲಿಂ. ಶ್ರೀ ಮುರುಘೇಂದ್ರ ಸ್ವಾಮಿ ಅವರ ಗದ್ದುಗೆಗೆ, ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಶ್ರೀ ನಾಗಮೂರ್ತಿಗೆ ರುದ್ರಾಭಿಷೇಕ ಶಿವಾಷ್ಟೋತ್ತರ ವಿಶೇಷ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ನಂತರ ಶ್ರೀ ಜಗದ್ಗುರು ರೇವಣ ಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಸಕಲ ವಾಧ್ಯಮೇಳದೊಂದಿಗೆ ಗ್ರಾಮದಲ್ಲಿ ಜರುಗಲಿದೆ. ಬೆಳಗ್ಗೆ 10ಕ್ಕೆ ಕಾಳಸರ್ಪ ನಿವಾರಣೆಗೆ ಆಶ್ಲೇಷ ಬಲಿ, ಸರ್ಪಶಾಂತಿ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾಧ ವಿನಿಯೋಗ ನಡೆಯಲಿದೆ ಎಂದರು. ಮಹಾರಥೋತ್ಸವ: ಸಂಜೆ 4ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಆಗಮನವಾಗಲಿದ್ದು, ನಂತರ ಜಗದ್ಗುರು ಶ್ರೀ ರೇವಣ ಸಿದ್ಧೇಶ್ವರ ಮಹಾರಥೋತ್ಸವ ಸಕಲ ವಾಧ್ಯ ವೈಭವದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಶ್ರೀ ಶಿವಕುಮಾರ ಶಾಸ್ತ್ರಿ ಹಿರೇಮಠ ಹಾಗೂ ಶ್ರೀ ಮಠದ ಪರೋಹಿತ ಬಳಗದಿಂದ ವೈದಿಕ ಸೇವೆ ನಡೆಯಲಿದೆ. ವಿಶೇಷವಾಗಿ ಈ ಬಾರಿ ಶ್ರೀ ವೀರಭದ್ರೇಶ್ವರ ಮೂರ್ತಿಯ ಪ್ರತಿಷ್ಟಾಪನೆಯ ವರ್ಷಾಚರಣೆ ಅಂಗವಾಗಿ ಶರಬಿ ಗುಗ್ಗಳ ನಡೆಯಲಿದೆ ಎಂದರು. ಧರ್ಮ ಸಮಾರಂಭ: ಶ್ರೀ ಮಠದ ಆವರಣದಲ್ಲಿ ಸಂಜೆ 5.30ಕ್ಕೆ ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಮತ್ತು ಲಿಂಗೈಕ್ಯ ಪೂಜ್ಯರ ಪುಣ್ಯಸ್ಮರಣೆ ಅಂಗವಾಗಿ ಧರ್ಮ ಸಮಾರಂಭ ನಡೆಯಲಿದ್ದು, ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸುಳ್ಳ ಪಂಗೃಹ ಹಿರೇಮಠದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಲಿಂ. ಶ್ರೀಗಲ ಭಾವಚಿತ್ರವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಬಿಡುಗಡೆ ಮಾಡಲಿದ್ದು, ಮುಂಡಗೋಡ ಮಾಜಿ ಶಾಸಕ ವಿ.ಎಸ್. ಪಾಟೀಲ್, ಈಡಿಗ ಸಮಾಜದ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ ಅಗಸನಹಳ್ಳಿ, ವಿವಿಧ ಸಮಾಜ ಪ್ರಮುಖರಾದ ಎನ್. ಸುರೇಶ್, ಎಚ್. ಮಲ್ಲಿಕಾರ್ಜುನಪ್ಪ, ಪಿಡಿಓ ಮಲ್ಲಮ್ಮ ಕಬ್ಬೂರು, ಮೆಸ್ಕಾಂ ಜೆಇ ಬಾಲರಾಜ್ ನಾಗರಾಳ ಸೇರಿದಂತೆ ಇತರರು ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದಲ್ಲಿ ಶ್ರೀಗಳ ದ್ವಾದಶ ಪಟ್ಟಾಧಿಕಾರ ವರ್ಧಂತಿ ವರ್ಷಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀ ಗುರು ರೇವಣಸಿದ್ಧೇಸ್ವರ ಸದ್ಭಾವನಾ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜಗೌಡ ಚಿಕ್ಕಾವಲಿ, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಮುಖರಾದ ಸಿ.ಪಿ. ವೀರೇಶ್ ಗೌಡ, ಮಲ್ಲಿಕಾರ್ಜುನ ನಿಜಗುಣ, ಚಂದ್ರಶೇಖರ ನಿಜಗುಣ, ವಿಜೇಂದ್ರಗೌಡ ತಲಗುಂದ, ಶಶಿಕಾಂತ ಗೌಡ ಬೆನ್ನೂರು, ಜಗದೀಶಗೌಡ ತ್ಯಾವಗೋಡು, ಗಂಗಾಧರ ಗೌಡ ಗುಡುವಿ, ಸತೀಶ್‍ಗೌಡ ಗುಂಜನೂರು, ಗುರುಪ್ರತೀಕ್ ಸೇರಿದಂತೆ ಇತರರಿದ್ದರು.

on 11 March
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
on 11 March
2ef4e411-ac84-4750-b223-5ed6c08591ad

ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಮಠದ ಆವರಣದಲ್ಲಿ ಮಾ.16ರ ಸೋಮವಾರ ಮತ್ತು ಮಾ. 17ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಸೊರಬ: ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಮಠದ ಆವರಣದಲ್ಲಿ ಮಾ.16ರ ಸೋಮವಾರ ಮತ್ತು ಮಾ. 17ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಶ್ರೀ ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ನಿಜಗುಣ ರೆಸಿಡೆನ್ಸಿ ಸಭಾಂಗಣದಲ್ಲಿ ಬುಧವಾರ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾ. 16ರಂದು ಸಂಜೆ 4ಕ್ಕೆ ಗಂಗಾಪೂಜೆ, ಶ್ರೀ ಜಗದ್ಗುರು ಪಂಚಾಚಾರ್ಯ ಧ್ವಜಾರೋಹಣ, ಸಂಜೆ 6ಕ್ಕೆ ಕಲಶಾರಾಧನೆ, ಶ್ರೀ ದುರ್ಗಾಹೋಮ ಪೂರ್ಣಾಹುತಿ ಮಹಾಮಂಗಳಾರತಿ ನಂತರ ಶ್ರೀ ಚೌಡೇಶ್ವರಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಾ. 17ರಂದು ಜಗುದ್ಗುರು ರೇಣುಕಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ, ಶ್ರೀ ಚೌಡೇಶ್ವರಿ ದೇವಿಗೆ, ಲಿಂ. ಶ್ರೀ ಮುರುಘೇಂದ್ರ ಸ್ವಾಮಿ ಅವರ ಗದ್ದುಗೆಗೆ, ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಶ್ರೀ ನಾಗಮೂರ್ತಿಗೆ ರುದ್ರಾಭಿಷೇಕ ಶಿವಾಷ್ಟೋತ್ತರ ವಿಶೇಷ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ನಂತರ ಶ್ರೀ ಜಗದ್ಗುರು ರೇವಣ ಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಸಕಲ ವಾಧ್ಯಮೇಳದೊಂದಿಗೆ ಗ್ರಾಮದಲ್ಲಿ ಜರುಗಲಿದೆ. ಬೆಳಗ್ಗೆ 10ಕ್ಕೆ ಕಾಳಸರ್ಪ ನಿವಾರಣೆಗೆ ಆಶ್ಲೇಷ ಬಲಿ, ಸರ್ಪಶಾಂತಿ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾಧ ವಿನಿಯೋಗ ನಡೆಯಲಿದೆ ಎಂದರು. ಮಹಾರಥೋತ್ಸವ: ಸಂಜೆ 4ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಆಗಮನವಾಗಲಿದ್ದು, ನಂತರ ಜಗದ್ಗುರು ಶ್ರೀ ರೇವಣ ಸಿದ್ಧೇಶ್ವರ ಮಹಾರಥೋತ್ಸವ ಸಕಲ

e7b3ac74-8320-4266-902d-5a5f1d5e180a

ವಾಧ್ಯ ವೈಭವದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಶ್ರೀ ಶಿವಕುಮಾರ ಶಾಸ್ತ್ರಿ ಹಿರೇಮಠ ಹಾಗೂ ಶ್ರೀ ಮಠದ ಪರೋಹಿತ ಬಳಗದಿಂದ ವೈದಿಕ ಸೇವೆ ನಡೆಯಲಿದೆ. ವಿಶೇಷವಾಗಿ ಈ ಬಾರಿ ಶ್ರೀ ವೀರಭದ್ರೇಶ್ವರ ಮೂರ್ತಿಯ ಪ್ರತಿಷ್ಟಾಪನೆಯ ವರ್ಷಾಚರಣೆ ಅಂಗವಾಗಿ ಶರಬಿ ಗುಗ್ಗಳ ನಡೆಯಲಿದೆ ಎಂದರು. ಧರ್ಮ ಸಮಾರಂಭ: ಶ್ರೀ ಮಠದ ಆವರಣದಲ್ಲಿ ಸಂಜೆ 5.30ಕ್ಕೆ ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಮತ್ತು ಲಿಂಗೈಕ್ಯ ಪೂಜ್ಯರ ಪುಣ್ಯಸ್ಮರಣೆ ಅಂಗವಾಗಿ ಧರ್ಮ ಸಮಾರಂಭ ನಡೆಯಲಿದ್ದು, ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸುಳ್ಳ ಪಂಗೃಹ ಹಿರೇಮಠದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಲಿಂ. ಶ್ರೀಗಲ ಭಾವಚಿತ್ರವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಬಿಡುಗಡೆ ಮಾಡಲಿದ್ದು, ಮುಂಡಗೋಡ ಮಾಜಿ ಶಾಸಕ ವಿ.ಎಸ್. ಪಾಟೀಲ್, ಈಡಿಗ ಸಮಾಜದ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ ಅಗಸನಹಳ್ಳಿ, ವಿವಿಧ ಸಮಾಜ ಪ್ರಮುಖರಾದ ಎನ್. ಸುರೇಶ್, ಎಚ್. ಮಲ್ಲಿಕಾರ್ಜುನಪ್ಪ, ಪಿಡಿಓ ಮಲ್ಲಮ್ಮ ಕಬ್ಬೂರು, ಮೆಸ್ಕಾಂ ಜೆಇ ಬಾಲರಾಜ್ ನಾಗರಾಳ ಸೇರಿದಂತೆ ಇತರರು ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದಲ್ಲಿ ಶ್ರೀಗಳ ದ್ವಾದಶ ಪಟ್ಟಾಧಿಕಾರ ವರ್ಧಂತಿ ವರ್ಷಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀ ಗುರು ರೇವಣಸಿದ್ಧೇಸ್ವರ ಸದ್ಭಾವನಾ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜಗೌಡ ಚಿಕ್ಕಾವಲಿ, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಮುಖರಾದ ಸಿ.ಪಿ. ವೀರೇಶ್ ಗೌಡ, ಮಲ್ಲಿಕಾರ್ಜುನ ನಿಜಗುಣ, ಚಂದ್ರಶೇಖರ ನಿಜಗುಣ, ವಿಜೇಂದ್ರಗೌಡ ತಲಗುಂದ, ಶಶಿಕಾಂತ ಗೌಡ ಬೆನ್ನೂರು, ಜಗದೀಶಗೌಡ ತ್ಯಾವಗೋಡು, ಗಂಗಾಧರ ಗೌಡ ಗುಡುವಿ, ಸತೀಶ್‍ಗೌಡ ಗುಂಜನೂರು, ಗುರುಪ್ರತೀಕ್ ಸೇರಿದಂತೆ ಇತರರಿದ್ದರು.

More news from Shivamogga and nearby areas
  • ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು
    2
    ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ  ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ  ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು  ಸ್ವಾಗತಿಸಿದರು
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    18 hrs ago
  • ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್‌ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾ‌ರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾ‌ರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾ‌ರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.
    1
    ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ  ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 
'ವಿಧಾನಪರಿಷತ್‌ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು
'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾ‌ರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾ‌ರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾ‌ರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    21 hrs ago
  • ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    1
    ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    user_ASN News24Kannada
    ASN News24Kannada
    Newsagent Byadgi, Haveri•
    17 hrs ago
  • ಗ್ಯಾಸ್ ಕಳಸಂತೆಯಲ್ಲಿ ಮಾರಾಟ ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ
    1
    ಗ್ಯಾಸ್ ಕಳಸಂತೆಯಲ್ಲಿ ಮಾರಾಟ
ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನುಇ ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಅಗ್ರಗಮಹಿಸಿದ್ದಾರೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 min ago
  • ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    1
    ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    17 hrs ago
  • ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವ ಹಾಗೂ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ, ಇತ್ತೀಚಿಗೆ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಹಣ್ಣು ಹಂಪಲು, ಪುಸ್ತಕ ಹಾಗೂ ಇತರ ಅವಶ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು. ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದ್ದು ಕಾರ್ಯಕ್ರಮದ ರೂವಾರಿಗಳಿಗೆ ತುಂಬು ಹೃದಯದ ಅಭಿನಂದನೆಗಳು. ಬೆಥನಿ ಕನ್ಯಾ ಮಠದ ಭಗಿನಿ ಶುಭಾ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸ್ಥಾಪಕ ಸಂಚಾಲಕ ಫ್ರಾಂಕ್ಲಿನ್ ಮೊಂತೆರೊ, ಪ್ರೀತಿ ಮಿನೇಜಸ್, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಸೈಂಟ್ ತೆರೆಸಾ ಶಾಲೆಯ ಉಪ ಪ್ರಾಂಶುಪಾಲೆ ಸಿ.ವಿದ್ಯಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ್, ಉದ್ಯಮಿ ಸಿಂಥಿಯಾ ಮೊರಾಸ್, ಅರುಣ್ ಡಿಸೋಜ ಉರ್ವ, ಜೂಲಿಯೆಟ್ ಡಿಕುನ್ಹಾ ಉರ್ವಸ್ಟೋರ್, ಪ್ರೀಮಾ ಫೆರ್ನಾಂಡಿಸ್ ಎಕ್ಕೂರು, ಜೂಲಿಯನಾ ಮೊರಾಸ್, ಆಗ್ನೆಸ್ ರೆಬೆಲ್ಲೊ ಮುಂಬೈ, ರಿಯೊ ಮಿನೇಜಸ್, ಓಸ್ವಾಲ್ಡ್ ಡಿಕುನ್ಹ ಬಿಜೈ, ಮಧು ಬಿಜೈ, ಕೊರ್ಡೆಲ್ ಕ್ರಿಕೆಟರ್ಸ್‌ನ ನವೀನ್ ಫರ್ನಾಂಡಿಸ್, ಪ್ರವೀಣ್ ಫರ್ನಾಂಡಿಸ್, ಜೊನ್ಸಿ ರೇಗೊ, ಫಿಲಿಪ್ ಡಿಸೋಜ, ಸಂದೀಪ್ ಡಿಸೋಜ, ರೊನಾಲ್ಡ್ ಕೊರ್ಡೆಲ್ ಮತ್ತು ರಾಬರ್ಟ್ ಕೊರ್ಡೆಲ್ ಉಪಸ್ಥಿತರಿದ್ದರು.
    1
    ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವ ಹಾಗೂ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ, ಇತ್ತೀಚಿಗೆ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಹಣ್ಣು ಹಂಪಲು, ಪುಸ್ತಕ ಹಾಗೂ ಇತರ ಅವಶ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು.
ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದ್ದು ಕಾರ್ಯಕ್ರಮದ ರೂವಾರಿಗಳಿಗೆ ತುಂಬು ಹೃದಯದ ಅಭಿನಂದನೆಗಳು. 
ಬೆಥನಿ ಕನ್ಯಾ ಮಠದ ಭಗಿನಿ ಶುಭಾ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸ್ಥಾಪಕ ಸಂಚಾಲಕ ಫ್ರಾಂಕ್ಲಿನ್ ಮೊಂತೆರೊ, ಪ್ರೀತಿ ಮಿನೇಜಸ್, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಸೈಂಟ್ ತೆರೆಸಾ ಶಾಲೆಯ ಉಪ ಪ್ರಾಂಶುಪಾಲೆ ಸಿ.ವಿದ್ಯಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ್, ಉದ್ಯಮಿ ಸಿಂಥಿಯಾ ಮೊರಾಸ್, ಅರುಣ್ ಡಿಸೋಜ ಉರ್ವ, ಜೂಲಿಯೆಟ್ ಡಿಕುನ್ಹಾ ಉರ್ವಸ್ಟೋರ್, ಪ್ರೀಮಾ ಫೆರ್ನಾಂಡಿಸ್ ಎಕ್ಕೂರು, ಜೂಲಿಯನಾ ಮೊರಾಸ್, ಆಗ್ನೆಸ್ ರೆಬೆಲ್ಲೊ ಮುಂಬೈ, ರಿಯೊ ಮಿನೇಜಸ್, ಓಸ್ವಾಲ್ಡ್ ಡಿಕುನ್ಹ ಬಿಜೈ, ಮಧು ಬಿಜೈ, ಕೊರ್ಡೆಲ್ ಕ್ರಿಕೆಟರ್ಸ್‌ನ ನವೀನ್ ಫರ್ನಾಂಡಿಸ್, ಪ್ರವೀಣ್ ಫರ್ನಾಂಡಿಸ್, ಜೊನ್ಸಿ ರೇಗೊ, ಫಿಲಿಪ್ ಡಿಸೋಜ, ಸಂದೀಪ್ ಡಿಸೋಜ, ರೊನಾಲ್ಡ್ ಕೊರ್ಡೆಲ್ ಮತ್ತು ರಾಬರ್ಟ್ ಕೊರ್ಡೆಲ್ ಉಪಸ್ಥಿತರಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
  • ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.
    1
    ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.