Shuru
Apke Nagar Ki App…
ವೆನೆಜುವೆಲಾ ದೇಶದಲ್ಲಿ ಭೂಕಂಪ ಸಂಭವಿಸಿದ ಸಮಯದಲ್ಲಿ ಚಿತ್ರೀಕರಿಸಲಾದ ಒಂದು ವಿಡಿಯೋ ಪ್ರಸ್ತುತ ವೈರಲ್ ಆಗಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ಎಷ್ಟೊಂದು ಭಯಾನಕವಾಗಿವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ.
H M ಹರಕುಣಿ
ವೆನೆಜುವೆಲಾ ದೇಶದಲ್ಲಿ ಭೂಕಂಪ ಸಂಭವಿಸಿದ ಸಮಯದಲ್ಲಿ ಚಿತ್ರೀಕರಿಸಲಾದ ಒಂದು ವಿಡಿಯೋ ಪ್ರಸ್ತುತ ವೈರಲ್ ಆಗಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ಎಷ್ಟೊಂದು ಭಯಾನಕವಾಗಿವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ.
More news from ಕರ್ನಾಟಕ and nearby areas
- ವೆನೆಜುವೆಲಾ ದೇಶದಲ್ಲಿ ಭೂಕಂಪ ಸಂಭವಿಸಿದ ಸಮಯದಲ್ಲಿ ಚಿತ್ರೀಕರಿಸಲಾದ ಒಂದು ವಿಡಿಯೋ ಪ್ರಸ್ತುತ ವೈರಲ್ ಆಗಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ಎಷ್ಟೊಂದು ಭಯಾನಕವಾಗಿವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ.1
- ಧಾರವಾಡ ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದ ಅಧಿಕಾರಿಗಳ ತಂಡವು ನವಲಗುಂದ ಪಟ್ಟಣದ ಪುರಸಭೆ ಕಚೇರಿಯ ಮೇಲೆ ದಾಳಿ ನಡೆಸಿ ವಿವಿಧ ಕಡತಗಳ ಪರಿಶೀಲನೆ ನಡೆಸಿದೆ. 4-5 ವಿವಿಧ ನೋಂದಣಿಗಳುಳ್ಳ ವಾಹನಗಳಲ್ಲಿ ಬಂದ ಲೋಕಾಯುಕ್ತ ಅಧಿಕಾರಿಗಳನ್ನು ಕಂಡ ಪುರಸಭೆಗೆ ಆಗಮಿಸಿದ ಸಾರ್ವಜನಿಕರು ಗಾಬರಿಗೊಂಡಿದ್ದು ಕಂಡುಬಂದಿದೆ. ಇದೇ ವೇಳೆ, ಲೋಕಾಯುಕ್ತ ಅಧಿಕಾರಿಗಳು ಪುರಸಭೆಗೆ ಬಂದ ಸಾರ್ವಜನಿಕರಿಂದಲೂ ಮಾಹಿತಿ ಕಲೆ ಹಾಕಿದ್ದಾರೆ. ಯಾವ ಕೆಲಸದ ಮೇಲೆ ಬಂದಿದ್ದೀರಿ ಮತ್ತು ಎಷ್ಟು ದಿನಗಳಿಂದ ಕೆಲಸದ ನಿಮಿತ್ಯ ಅಲೆದಾಡುತ್ತಿದ್ದೀರಿ ಎಂಬ ಬಗ್ಗೆ ವಿವರಗಳನ್ನು ಪಡೆದಿದ್ದಾರೆ.1
- Post by Onlinetv24x71
- ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅನರ್ಹ ಪಿಂಚಣಿದಾರರು ಪತ್ತೆಯಾಗಿದ್ದು, ಬರೋಬ್ಬರಿ 1.53 ಲಕ್ಷ ಜನರ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿದೆ. ಸರ್ಕಾರದ ಸೂಚನೆಯಂತೆ ಒಟ್ಟು 1.82 ಲಕ್ಷ ಪ್ರಕರಣಗಳ ಮಾಹಿತಿ ಸಂಗ್ರಹಿಸಲಾಗಿದ್ದು, ಈ ಪೈಕಿ 1.53 ಲಕ್ಷ ಜನರ ಪಿಂಚಣಿ ರದ್ದಾಗಿದೆ ಎಂದು ಡಿಸಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, ವಾರ್ಷಿಕ ₹35,000 ಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಹಾಗೂ ಬೇರೆ ಜಿಲ್ಲೆಗೆ ಸ್ಥಳಾಂತರಗೊಂಡವರ ಪಿಂಚಣಿಯನ್ನು ಈ ನಿರ್ಧಾರದ ಭಾಗವಾಗಿ ಸ್ಥಗಿತಗೊಳಿಸಲಾಗಿದೆ. ಈ ಪ್ರಕರಣಗಳಲ್ಲಿ ಅಧಿಕಾರಿಗಳ ಪಾತ್ರವಿದೆಯೇ ಅಥವಾ ಫಲಾನುಭವಿಗಳು ಸುಳ್ಳು ದಾಖಲೆಗಳನ್ನು ಸಲ್ಲಿಸಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಯಲಿದೆ. ಇದಲ್ಲದೆ, ಬೆಳಗಾವಿ ಜಿಲ್ಲೆಯಲ್ಲಿ ಅತಿರೇಕದ ಸಾಲ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.1
- ಕೇರಳದ ಕೊಟ್ಟಿಯೂರು ದೇವಾಲಯದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ನೊಂದ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಯಾರೂ ಈ ದೇವಾಲಯಕ್ಕೆ ಭೇಟಿ ನೀಡಬೇಡಿ ಎಂದು ಕರೆ ನೀಡಿದ್ದಾರೆ. ಈ ವಿವಾದದ ಬೆನ್ನಲ್ಲೇ, ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ ಅವರು ಕನ್ನಡದಲ್ಲಿಯೇ ಸಂದೇಶ ನೀಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ದಾವಣಗೆರೆ ಮೂಲದ ಅಧಿಕಾರಿಯಾಗಿರುವ ಯತೀಶ್ ಚಂದ್ರ, ವೀಡಿಯೋದಲ್ಲಿ ಕೊಟ್ಟಿಯೂರು ದೇವಸ್ಥಾನದವರು ಮತ್ತು ಪಂಚಾಯತ್ ವೈಶಾಖ ಮಹೋತ್ಸವಕ್ಕೆ ಉತ್ತಮ ಸಿದ್ಧತೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮೂಲಸೌಕರ್ಯ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ದೇವಾಲಯದ ಆವರಣದಲ್ಲಿ ಕನ್ನಡ ನಾಮಫಲಕಗಳು ಮತ್ತು ಕನ್ನಡದಲ್ಲೇ ಧ್ವನಿವರ್ಧಕದ ಮೂಲಕ ಪ್ರಕಟಣೆ ಹೊರಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಪವಿತ್ರವಾದ ಈ ಕಾಡಿನ ಸನ್ನಿಧಿಗೆ ಬರುವಾಗ ಪರಿಸರವನ್ನು ಸ್ವಚ್ಛವಾಗಿಡುವಂತೆ ಮತ್ತು ಪ್ಲಾಸ್ಟಿಕ್ ಹಾಗೂ ಬಟ್ಟೆಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸಹಕರಿಸುವಂತೆ ಕನ್ನಡಿಗರಲ್ಲಿ ಅತ್ಯಂತ ಆಪ್ತವಾಗಿ ವಿನಂತಿಸಿಕೊಂಡಿದ್ದಾರೆ. ಕ್ಯೂನಲ್ಲಿ ಆರಾಮಾಗಿ ಬಂದು ದೇವರ ದರ್ಶನ ಮಾಡುವಂತೆ ಮತ್ತು ಭದ್ರತೆಗೆ ಪೊಲೀಸರು ಎಲ್ಲಾ ತಯಾರಿ ಮಾಡಿರುವುದಾಗಿ ತಿಳಿಸಿದ್ದಾರೆ. ತಾವೆಲ್ಲರೂ ಬಂದು ದರ್ಶನ ಮಾಡಿ 26 ದಿನಗಳ ಈ ಮಹೋತ್ಸವವನ್ನು ಯಶಸ್ವಿಯಾಗಿಸಬೇಕು ಎಂದು ಯತೀಶ್ ಚಂದ್ರ ಮನವಿ ಮಾಡಿದ್ದಾರೆ.2
- ಚಿಕ್ಕೋಡಿ ನಗರದಲ್ಲಿ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಒಟ್ಟಾಗಿ, ಭಾವೈಕ್ಯತೆಯಿಂದ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕರಬಲ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಗ್ಗೂಡಿ ಈ ಹಬ್ಬದಲ್ಲಿ ಭಾಗವಹಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.1
- ಉತ್ತರ ಕರ್ನಾಟಕದ ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ಬಾರದೆ ಇರುವುದರಿಂದ ರೈತ ಸಮೂಹ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಮಳೆ ರಾಯನ ಆಗಮನಕ್ಕಾಗಿ ಕಾತುರತೆಯಿಂದ ಕಾಯುತ್ತಿರುವ ರೈತರು, ವಿಶೇಷ ರೀತಿಯ ಗುರ್ಜಿ ಸೇವೆಗಳನ್ನು ಮಾಡಿ ಮಳೆಯ ಬರುವಿಕೆಗಾಗಿ ಪ್ರಾರ್ಥಿಸುತ್ತಿದ್ದಾರೆ.1
- ತಾವರಕೆರೆ ಶ್ರೀರಾಮ್ ಫೈನಾನ್ಸ್ ಬ್ರಾಂಚ್‌ನಲ್ಲಿ ಲೋನ್ ಕ್ಲಿಯರ್ ಆಗಿ ಎರಡು ತಿಂಗಳು ಕಳೆದರೂ ಎನ್‌ಒಸಿ (NOC) ನೀಡದ ಕಾರಣ ಗಲಾಟೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬ್ರಾಂಚ್ ಮ್ಯಾನೇಜರ್ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.1