logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕುಂದಗೋಳದಲ್ಲಿ ಏ. 18ಕ್ಕೆ ವಿಶ್ವಕರ್ಮ ಜನ ಜಾಗೃತಿ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ​ಕುಂದಗೋಳ: ಪಟ್ಟಣದ ಜೆ.ಎಸ್.ಎಸ್. ವಿದ್ಯಾಪೀಠದ ಸಭಾಭವನದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ (ರಿ) ಬೆಂಗಳೂರು, ಧಾರವಾಡ ಜಿಲ್ಲಾ ಕುಂದಗೋಳ ತಾಲ್ಲೂಕು ಘಟಕದ ವತಿಯಿಂದ ಬರುವ ಶನಿವಾರ (ಏಪ್ರಿಲ್ 18) ಶ್ರೀ ವಿಶ್ವಕರ್ಮ ಜನ ಜಾಗೃತಿ ಸಮಾವೇಶ, ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವಕರ್ಮ ಸಮಾಜ ಸಂಘದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ​ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶಿರೋಳ ಸಂಸ್ಥಾನಗವಿಮಠದ ಪ.ಪೂ. ಶ್ರೀ ಅಭಿನವ ಯಚ್ಚರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಹುಲಗೂರು ಜೀವನ್ಮುಕ್ತಾಲಯ ಕ್ಷೇತ್ರದ ಪ.ಪೂ. ಮೌನೇಶ್ವರ ಮಹಾಸ್ವಾಮಿಗಳು ಹಾಗೂ ಕುಂದಗೋಳ ಶಿವಾನಂದ ಮಠದ ಪ.ಪೂ. ಶ್ರೀ ಶಿವಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ​ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ಆರ್. ಪಾಟೀಲ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ, ಜಿಲ್ಲಾಧ್ಯಕ್ಷ ಕಾಳಪ್ಪ ಬಡಿಗೇರ, ಕಾರ್ಯದರ್ಶಿ ಮಂಜು ಬಡಿಗೇರ, ಹುಬ್ಬಳ್ಳಿ-ಧಾರವಾಡದ ಮಾಜಿ ಮೇಯರ್ ರಾಮಣ್ಣ ಬಡಿಗೇರ ಹಾಗೂ ಶ್ರೀಶೈಲ್ ಸುತಾರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪುರುಷ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ಗೌರವ ಸಮರ್ಪಣೆ ಜರುಗಲಿದೆ. ​ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಮನಪ್ಪ ಪತ್ತಾರ, ಅಧ್ಯಕ್ಷ ಸಕ್ರಪ್ಪ ವೀ. ಕಮ್ಮಾರ, ಉಪಾಧ್ಯಕ್ಷ ಮಹಾರುದ್ರಪ್ಪ ಅರ್ಕಸಾಲಿ, ಮತ್ತು ಮಹಿಳಾ ಘಟಕದ ಗೌರವಾಧ್ಯಕ್ಷೆ ಸಾವಕ್ಕ ಬಡಿಗೇರ, ಅಧ್ಯಕ್ಷೆ ಶಂಕ್ರಮ್ಮ ಸುತಾರ, ರೇಣವ್ವ ಬಡಿಗೇರ ಹಾಗೂ ಸಮಾಜದ ಹಿರಿಯರು ಉಪಸ್ಥಿತರಿರುವರು. ತಾಲ್ಲೂಕಿನಾದ್ಯಂತ ಇರುವ ಸಮಾಜ ಬಾಂಧವರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯ ಮೂಲಕ ಮನವಿ ಮಾಡಲಾಗಿದೆ.

4 days ago
user_Girish Ghatage
Girish Ghatage
Local News Reporter ಧಾರವಾಡ, ಧಾರವಾಡ, ಕರ್ನಾಟಕ•
4 days ago
46184f70-8a81-4eca-86c9-b07ed0c6e9f3

ಕುಂದಗೋಳದಲ್ಲಿ ಏ. 18ಕ್ಕೆ ವಿಶ್ವಕರ್ಮ ಜನ ಜಾಗೃತಿ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ​ಕುಂದಗೋಳ: ಪಟ್ಟಣದ ಜೆ.ಎಸ್.ಎಸ್. ವಿದ್ಯಾಪೀಠದ ಸಭಾಭವನದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ (ರಿ) ಬೆಂಗಳೂರು, ಧಾರವಾಡ ಜಿಲ್ಲಾ ಕುಂದಗೋಳ ತಾಲ್ಲೂಕು ಘಟಕದ ವತಿಯಿಂದ ಬರುವ ಶನಿವಾರ (ಏಪ್ರಿಲ್ 18) ಶ್ರೀ ವಿಶ್ವಕರ್ಮ ಜನ ಜಾಗೃತಿ ಸಮಾವೇಶ, ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವಕರ್ಮ ಸಮಾಜ ಸಂಘದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ​ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶಿರೋಳ ಸಂಸ್ಥಾನಗವಿಮಠದ ಪ.ಪೂ. ಶ್ರೀ ಅಭಿನವ ಯಚ್ಚರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಹುಲಗೂರು ಜೀವನ್ಮುಕ್ತಾಲಯ ಕ್ಷೇತ್ರದ ಪ.ಪೂ. ಮೌನೇಶ್ವರ ಮಹಾಸ್ವಾಮಿಗಳು ಹಾಗೂ ಕುಂದಗೋಳ ಶಿವಾನಂದ ಮಠದ ಪ.ಪೂ. ಶ್ರೀ ಶಿವಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ​ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ಆರ್. ಪಾಟೀಲ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ, ಜಿಲ್ಲಾಧ್ಯಕ್ಷ ಕಾಳಪ್ಪ ಬಡಿಗೇರ, ಕಾರ್ಯದರ್ಶಿ ಮಂಜು ಬಡಿಗೇರ, ಹುಬ್ಬಳ್ಳಿ-ಧಾರವಾಡದ ಮಾಜಿ ಮೇಯರ್ ರಾಮಣ್ಣ ಬಡಿಗೇರ ಹಾಗೂ ಶ್ರೀಶೈಲ್ ಸುತಾರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪುರುಷ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ಗೌರವ ಸಮರ್ಪಣೆ ಜರುಗಲಿದೆ. ​ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಮನಪ್ಪ ಪತ್ತಾರ, ಅಧ್ಯಕ್ಷ ಸಕ್ರಪ್ಪ ವೀ. ಕಮ್ಮಾರ, ಉಪಾಧ್ಯಕ್ಷ ಮಹಾರುದ್ರಪ್ಪ ಅರ್ಕಸಾಲಿ, ಮತ್ತು ಮಹಿಳಾ ಘಟಕದ ಗೌರವಾಧ್ಯಕ್ಷೆ ಸಾವಕ್ಕ ಬಡಿಗೇರ, ಅಧ್ಯಕ್ಷೆ ಶಂಕ್ರಮ್ಮ ಸುತಾರ, ರೇಣವ್ವ ಬಡಿಗೇರ ಹಾಗೂ ಸಮಾಜದ ಹಿರಿಯರು ಉಪಸ್ಥಿತರಿರುವರು. ತಾಲ್ಲೂಕಿನಾದ್ಯಂತ ಇರುವ ಸಮಾಜ ಬಾಂಧವರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯ ಮೂಲಕ ಮನವಿ ಮಾಡಲಾಗಿದೆ.

More news from Karnataka and nearby areas
  • ಭಾಲ್ಕಿಯಲ್ಲಿ ಬೃಹತ್ ಆರೋಗ್ಯ ಶಿಬಿರ: 180 ಜನರಿಗೆ ತಪಾಸಣೆ, 101 ಯುವಕರಿಂದ ರಕ್ತದಾನ ಆರೋಗ್ಯವೇ ಭಾಗ್ಯ: ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾನವೀಯತೆಯ ಮೆರಗು; 101 ಯುನಿಟ್ ರಕ್ತ ಸಂಗ್ರಹ #JB_News_Kannada
    1
    ಭಾಲ್ಕಿಯಲ್ಲಿ ಬೃಹತ್ ಆರೋಗ್ಯ ಶಿಬಿರ: 180 ಜನರಿಗೆ ತಪಾಸಣೆ, 101 ಯುವಕರಿಂದ ರಕ್ತದಾನ
ಆರೋಗ್ಯವೇ ಭಾಗ್ಯ: ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾನವೀಯತೆಯ ಮೆರಗು; 101 ಯುನಿಟ್ ರಕ್ತ ಸಂಗ್ರಹ
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    22 hrs ago
  • *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ* ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು. ​ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು. ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ. ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು. ​"ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."
    1
    *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ*
ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು.
​ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು.
ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ.
ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು.
​"ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    23 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    18 hrs ago
  • ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ, ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    2
    ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ  ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ  ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ,  ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Top 1 Digital Marketing
    Top 1 Digital Marketing
    Digital Marketing Specialist ಹಾಸನ, ಹಾಸನ, ಕರ್ನಾಟಕ•
    21 hrs ago
  • (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    3
    (Weather News)
"ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    user_Vv Vv
    Vv Vv
    ಬಾದಾಮಿ, ಬಾಗಲಕೋಟೆ, ಕರ್ನಾಟಕ•
    37 min ago
  • ಮಹಿಳಾ ಮೀಸಲಾತಿ ಬಿಲ್ ವಿಚಾರದಲ್ಲಿ ದಕ್ಷಿಣ ಭಾರತದ ಸೀಟ್ ಕಡಿಮೆ ಮಾಡಲು ಇದು ಷಡ್ಯಂತ್ರ. ಒಬ್ಬನೇ ಒಬ್ಬ ಬಿಜೆಪಿಯವರು ಮಾತಾಡುತ್ತಿಲ್ಲ. ದಕ್ಷಿಣ ಭಾರತದವರು ಇಲ್ಲದೇ ಇದ್ದರೂ ಅವರದೇ ಸರ್ಕಾರ ತರೋ ಹುನ್ನಾರ ಮಾಡಿದ್ದಾರೆ ಎಂದು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾ‌ರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಿಲ್‌ ಅನ್ನು ನಾವು ಸೋಲಿಸಿದ್ದೇವೆ. ಇದು ಅವರ ಸೋಲಿನ ಆರಂಭ, ಇದು ಮುಂದುವರಿಯಲಿದೆ ಎಂದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಪರವಾನಗಿ ಕೊಡಿಸುತ್ತಿಲ್ಲ, ಬಿಜೆಪಿ ಎಂಪಿ ಗಳು ಕರ್ನಾಟಕ ನೀರಾವರಿಗೆ ಯಾವುದೇ ಕೊಡುಗೆ ನೀಡುತ್ತಿಲ್ಲ. ಎಲ್ಲರೂ ಅಡ್ವಾಂಟೇಜ್ ತೆಗೆದುಕೊಳ್ಳಲು ಹೋಗುತ್ತಿದ್ದಾರೆ. ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ಪೇಲ್ ಆಗಿದೆ. ಪಿಎಂ ಭೇಟಿ ಮಾಡಿ ಮಾತಾಡುವಷ್ಟು ಶಕ್ತಿ ಬಿಜೆಪಿ ಎಂಪಿ ಗಳಿಗೆ ಇಲ್ಲ ಎಂದು ಕಿಡಿಕಾರಿದರು.
    1
    ಮಹಿಳಾ ಮೀಸಲಾತಿ ಬಿಲ್ ವಿಚಾರದಲ್ಲಿ ದಕ್ಷಿಣ ಭಾರತದ ಸೀಟ್ ಕಡಿಮೆ ಮಾಡಲು ಇದು ಷಡ್ಯಂತ್ರ. ಒಬ್ಬನೇ ಒಬ್ಬ ಬಿಜೆಪಿಯವರು ಮಾತಾಡುತ್ತಿಲ್ಲ. ದಕ್ಷಿಣ ಭಾರತದವರು ಇಲ್ಲದೇ ಇದ್ದರೂ ಅವರದೇ ಸರ್ಕಾರ ತರೋ ಹುನ್ನಾರ ಮಾಡಿದ್ದಾರೆ ಎಂದು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾ‌ರ್ ಹೇಳಿದರು.
ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಿಲ್‌ ಅನ್ನು ನಾವು ಸೋಲಿಸಿದ್ದೇವೆ. ಇದು ಅವರ ಸೋಲಿನ ಆರಂಭ, ಇದು ಮುಂದುವರಿಯಲಿದೆ ಎಂದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಪರವಾನಗಿ ಕೊಡಿಸುತ್ತಿಲ್ಲ, ಬಿಜೆಪಿ ಎಂಪಿ ಗಳು ಕರ್ನಾಟಕ ನೀರಾವರಿಗೆ ಯಾವುದೇ ಕೊಡುಗೆ ನೀಡುತ್ತಿಲ್ಲ. ಎಲ್ಲರೂ ಅಡ್ವಾಂಟೇಜ್ ತೆಗೆದುಕೊಳ್ಳಲು ಹೋಗುತ್ತಿದ್ದಾರೆ. ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ಪೇಲ್ ಆಗಿದೆ. ಪಿಎಂ ಭೇಟಿ ಮಾಡಿ ಮಾತಾಡುವಷ್ಟು  ಶಕ್ತಿ ಬಿಜೆಪಿ ಎಂಪಿ ಗಳಿಗೆ  ಇಲ್ಲ ಎಂದು ಕಿಡಿಕಾರಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    22 hrs ago
  • Post by Vv Vv
    1
    Post by Vv Vv
    user_Vv Vv
    Vv Vv
    ಬಾದಾಮಿ, ಬಾಗಲಕೋಟೆ, ಕರ್ನಾಟಕ•
    46 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.