Shuru
Apke Nagar Ki App…
ನಾಗೇಂದ್ರ ಇನ್ನು ಸ್ವಲ್ಪ ದಿನಗಳಲ್ಲಿ ಮೈಮೇಲಿನ ಬಟ್ಟೆ ಹರಿದುಕೊಂಡು ತಿರುಗುವ ಪರಿಸ್ಥಿತಿ ಬಂದ್ರು ಬರಬಹುದು - ಮಾಜಿ ಸಂಸದ ಸಣ್ಣ ಪಕ್ಕೀರಪ್ಪ
YSRmedia vijayanagaraupsates
ನಾಗೇಂದ್ರ ಇನ್ನು ಸ್ವಲ್ಪ ದಿನಗಳಲ್ಲಿ ಮೈಮೇಲಿನ ಬಟ್ಟೆ ಹರಿದುಕೊಂಡು ತಿರುಗುವ ಪರಿಸ್ಥಿತಿ ಬಂದ್ರು ಬರಬಹುದು - ಮಾಜಿ ಸಂಸದ ಸಣ್ಣ ಪಕ್ಕೀರಪ್ಪ
More news from ಕರ್ನಾಟಕ and nearby areas
- ನಾಗೇಂದ್ರ ಇನ್ನು ಸ್ವಲ್ಪ ದಿನಗಳಲ್ಲಿ ಮೈಮೇಲಿನ ಬಟ್ಟೆ ಹರಿದುಕೊಂಡು ತಿರುಗುವ ಪರಿಸ್ಥಿತಿ ಬಂದ್ರು ಬರಬಹುದು - ಮಾಜಿ ಸಂಸದ ಸಣ್ಣ ಪಕ್ಕೀರಪ್ಪ1
- ಜನಾರ್ದನ ರೆಡ್ಡಿ ಇತಿಹಾಸ ನನಗೆ 2002ರಿಂದ ಗೊತ್ತು– ಸಂಸದ ಈ. ತುಕಾರಾಂ ಕೂಡ್ಲಿಗಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಮೊದಲು ಏನಾಗಿದ್ದರು, ನಂತರ ಏನಾದರು, ಯಾವ ಕಂಪೌಂಡ್‌ಗೆ ಬಂದು ಏನು ಕೇಳಿದ್ದರು, ಆಗ ನಾನು ಅವರಿಗೆ ಯಾವ ರೀತಿಯ ಸಹಾಯ ಮಾಡಿದ್ದೆ ಎಂಬುದು ನನಗೆ ಗೊತ್ತಿದೆ ಎಂದು ಬಳ್ಳಾರಿ ಸಂಸದ ಈ. ತುಕಾರಾಂ ಹೇಳಿದರು. ಕೂಡ್ಲಿಗಿ ಪಟ್ಟಣದಲ್ಲಿ ಸೆ.5ರಂದು ನಡೆಯಲಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2002ರಿಂದಲೂ ಜನಾರ್ದನ ರೆಡ್ಡಿ ಅವರ ಇತಿಹಾಸ ನನಗೆ ಗೊತ್ತು. ನಾನು ಅಕೌಂಟೆಂಟ್ ಆಗಿದ್ದಾಗಿನಿಂದ ಅವರನ್ನು ನೋಡುತ್ತಿದ್ದೇನೆ” ಎಂದರು. ಜನಾರ್ದನ ರೆಡ್ಡಿ ಅವರು ಯಾವ ಮೈನಿಂಗ್ ವಿಚಾರದಲ್ಲಿ ಏನು ಮಾಡಿದ್ದಾರೆ ಎಂಬುದೂ ನನಗೆ ತಿಳಿದಿದೆ. ಅವರ ರಾಜಕೀಯ ಜೀವನದ ಹಿಂದಿನ ವಿಚಾರಗಳ ಬಗ್ಗೆ ಮಾತನಾಡುವಷ್ಟು ಮಾಹಿತಿ ನನ್ನಲ್ಲಿದೆ. ಆದರೆ ನಾವು ಜನರಿಗೆ ಲೆಕ್ಕ ನೀಡಬೇಕೇ ಹೊರತು, ಜನಾರ್ದನ ರೆಡ್ಡಿ ಹೇಳಿದ ಪ್ರತಿಯೊಂದು ಮಾತಿಗೂ ಉತ್ತರ ನೀಡುತ್ತಾ ಕೂರುವ ಅಗತ್ಯವಿಲ್ಲ ಎಂದು ತುಕಾರಾಂ ತಿರುಗೇಟು ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಕ್ಷೇತ್ರದ ಅಭಿವೃದ್ಧಿ ಮಾಡುವುದು ಹಾಗೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ನಮ್ಮ ಮುಖ್ಯ ಉದ್ದೇಶ. ರಾಜಕೀಯವಾಗಿ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳಿಗಿಂತ ಜನರ ಮುಂದೆ ನಮ್ಮ ಕೆಲಸದ ಲೆಕ್ಕ ನೀಡುವುದು ಮುಖ್ಯ ಎಂದು ಅವರು ಹೇಳಿದರು.1
- *ಕೂಡ್ಲಿಗಿ : " ಜನ ಸೇವಾ ಆಂದೋಲನ " ಯಶಸ್ವಿಗೊಳಿಸಿ - ಸಚಿವ ಬಸಂತಪ್ಪ ಕರೆ*_ ವಿಜಯನಗರ ಜಿಲ್ಲೆ ಕೂಡ್ಲಿಗಿ : ಮುಖ್ಯಮಂತ್ರಿಗಳ ವಿನೂತನ ಕನಸಿನ ಜನಪರ ಕಾರ್ಯಕ್ರಮ , ಜನಸೇವಾ ಆಂದೋಲನಕ್ಕೆ ಪಟ್ಟಣದಲ್ಲಿ ಮುಖ್ಯಮಂತ್ರಿಗಳು ಸೆ 5ರಂದು ಚಾಲನೆ ನೀಡಲಿದ್ದಾರೆ. ಪಕ್ಷದ ಮುಖಂಡರು ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವೀಗೊಳಿಸಿ ಎಂದು ಉಸ್ತುವಾರಿ ಸಚಿವರಾದ ಬಸಂತಪ್ಪ ಕರೆ ನೀಡಿದರು. ಅವರು ಸೆ 1ರಂದು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ , ಕ್ಷೇತ್ರದ ಪ್ರತಿಕುಟುಂಬದ ಸಮಸ್ಯೆಗೆ ಸ್ಪಂದಿಸುವ ಉದ್ಧೇಶದಿಂದ ಆಂದೋಲನ ಜರುಗಿಸಲಾಗುತ್ತಿದೆ ಎಂದರು. ರಾಜ್ಯಸರ್ಕಾರದಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ , ಸರದಿ ಪ್ರಕಾರ ಪ್ರತಿ ತಿಂಗಳೂ ಒಂದೊಂದು ತಾಲೂಕು ಕೇಂದ್ರದಲ್ಲಿ. ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ , ಜನ ಸೇವಾ ಆಂದೋಲನ ನಡೆಯಲಿದೆ. ಆಂದೋಲನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪ ಮುಖ್ಯಮಂತ್ರಿಗಳು ಎಲ್ಲಾ ಮಂತ್ರಿಗಳು , ವಿಧಾನಸೌಧದ ಅಧಿಕಾರಿವರ್ಗ ಜಿಲ್ಲಾ ತಾಲೂಕು ಮಟ್ಟದ ಆಡಳಿತಾಧಿಕಾರಿಗಳು ಹಾಜರಿರುತ್ತಾರೆ. ಜನರಿದ್ದಲ್ಲಿಗೆ ಸರ್ಕಾರ ದಾವಿಸಿ ಖುದ್ದು ಅಹವಾಲು ಆಲಿಸುವ ಉದ್ಧೇಶದಿಂದ , ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು , ಅಹವಲುಗಳನ್ನು ನಿಗದಿತ ಅರ್ಜಿನಮೂನೆಯ ಮೂಲಕ ನೀಡಿದ್ದಲ್ಲಿ. ಸಂಬಂಧಿಸಿದ ಇಲಾಖೆಗಳ ಮೂಲಕ , ಆಧ್ಯತೆಯ ಮೇರೆಗೆ ಸಮಸ್ಯೆಗೆ ಸ್ಪಂಧನೆ ನೀಡಲಾಗುತ್ತದೆ ಎಂದು ವಿವರಿಸಿದರು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ಮಾತನಾಡಿ , ಜನಸೇವಾ ಆಂದೋಲನ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದ್ದು , ಇದು ಅವರ ಜನಪರ ಕಾಳಜಿಯ ಪ್ರತಿಕವಾಗಿದೆ. ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮದಲ್ಲಿ , ಪಕ್ಷದ ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮುಖಂಡರಲ್ಲಿ ಕೋರಿದರು. ಶಾಸಕರಾದ ಶ್ರಿಮತಿ ಎಂ.ಪಿ.ಲತಮಲ್ಲಿಕಾರ್ಜುನ , ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ , ಸೇರಿದಂತೆ ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು. ಕೂಡ್ಲಿಗಿ ಹೊಸಹಳ್ಳಿ ಗುಡೇಕೋಟೆ ಹೋಬಳಿ ಮುಖಂಡರು , ಕ್ಷೇತ್ರದ ವಿವಿದೆಡೆಯ ಪ್ರಮುಖರು , ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು , ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಅಶೋಕ್‌ಗೆ ವಿಪಕ್ಷ ನಾಯಕ ಆಗ್ತೀಯಾ ಎಂದು ಹೇಳಿದ್ದೇ ನಾನು ಎಂದ ರಾಯರೆಡ್ಡಿ ಅಶೋಕ್ ಅವರೇ, ನೀವು ವಿಪಕ್ಷ ನಾಯಕರಾಗುತ್ತೀರಾ ಎಂದು ಹೇಳಿದ್ದೇ ನಾನು’ ಎಂದು ಸಚಿವ ಶಿವರಾಜ ತಂಗಡಗಿ ಅವರ ಸಮ್ಮುಖದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಯರೆಡ್ಡಿ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಯಲಬುರ್ಗಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಶೋಕ್ ಅವರೊಂದಿಗೆ ನಡೆದ ಹಿಂದಿನ ಮಾತುಕತೆಯನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದರು. ವಿಪಕ್ಷ ನಾಯಕ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೇ ರಾಯರೆಡ್ಡಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.1
- ನಾವೇನು ಪಾಕಿಸ್ತಾನವರಾ?” — ಬಿ. ನಾಗೇಂದ್ರ ವಿರುದ್ಧ ಮಾಜಿ ಸಂಸದ ಎಂ.ಪಿ.ಪಕೀರಪ್ಪ ತೀವ್ರ ವಾಗ್ದಾಳಿ ಮಾಜಿ ಸಂಸದರಾದ ಎಂ.ಪಿ.ಪಕೀರಪ್ಪ ಅವರು ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕೀರಪ್ಪ, “ನಮ್ಮ ಕಮ್ಯುನಿಟಿ ಅಂತ ನಾವು ಮರ್ಯಾದೆ ಕೊಟ್ಟರೆ... ನಾವೇನು ಪಾಕಿಸ್ತಾನವರಾ?” ಎಂದು ಪ್ರಶ್ನಿಸಿ, ಬಳ್ಳಾರಿ ವಿಚಾರವಾಗಿ ನಾಗೇಂದ್ರ ಅವರ ಹೇಳಿಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. #MPFakeerappa #BNagendra #Ballari #BallariNews #KarnatakaPolitics #KarnatakaNews #PoliticalNews #BreakingNews #KannadaNews #KannadaNewsToday #BallariPolitics #Congress #ViralNews #TrendingNews #IndiaNews1
- ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾಡಿಸುತ್ತೇನೆ ಆದರೆ ಬರ ಘೋಷಣೆ ಮಾಡಿಸಿ ಪ್ರಭಾಕರ್ ಮ್ಯಾಸನಾಯಕ ಮೊಳಕಾಲ್ಮುರು ತಾಲ್ಲೂಕು ಸತತ ಬರದಿಂದ ತತ್ತರಿಸಿ ಹೋಗಿದ್ದು, ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದ್ದು, ಮೊಳಕಾಲ್ಮುರು ತಾಲ್ಲೂಕನ್ನು ಕೈಬಿಟ್ಟಿರುವುದು ಯಾವ ನ್ಯಾಯ ಎಂಬುದು ಯಕ್ಷ ಪ್ರಶ್ನೆಯಾಗಿದೆ ಆದಕಾರಣ ನೋವಿನಿಂದ ನಾನು ಹೇಳಿದ್ದೇನೆ ವಿನಾಹ ನಿಮ್ಮನ್ನು ನೋವಿಯಿಸುವ ಮನಸು ನನಗಿಲ್ಲ, ಇದರಿಂದ ನಿಮಗೆ ನೋವಾಗಿದ್ದರೆ ವಿಷಾಡಿಸುತ್ತೇನೆ ಎಂದು ಪ್ರಭಾಕರ್ ಮ್ಯಾಸನಾಯಕ ರವರು ಪತ್ರಿಕಾ ಘೋಷ್ಟಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಈ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ನೋ ವಿನ ಭಾವನೆಯಲ್ಲಿ ನನ್ನ ಬಾಯಿಂದ ಕೆಲವು ಪದಗಳು ಬಂದಿವೆ. ಅದರಿಂದ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮೊಳಕಾಲ್ಮುರು ತಾಲ್ಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸುವಲ್ಲಿ ತಹಸೀಲ್ದಾರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವರದಿ ಪ್ರಮುಖವಾಗಿರುತ್ತದೆ. NDRF ಮತ್ತು SDRF ಮಾನದಂಡ ಹಾಗೂ ವರದಿಗಳ ಆಧಾರದ ಮೇಲೆ ಸರ್ಕಾರದ ಮೊದಲ ಪಟ್ಟಿಯಲ್ಲಿ ನಮ್ಮ ತಾಲ್ಲೂಕು ಘೋಷಣೆಯಾಗಿಲ್ಲ. ಆದ್ದರಿಂದ ಅಧಿಕಾರಿಗಳು ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ, ಸಮರ್ಪಕ ವರದಿ ಸಲ್ಲಿಸಿ ಬರ ಘೋಷಣೆಗೆ ಕ್ರಮ ಕೈಗೊಳ್ಳಬೇಕು. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಕೆಲವರು ನನ್ನನ್ನು ಗಡಿಪಾರು ಮಾಡಬೇಕು ಎಂದು ಹೇಳಿದ್ದಾರೆ. ಆದರೆ ಈ ಮಣ್ಣಿಗೆ ಸೇರಿದ ಮಣ್ಣಿನ ಮಗ ನಾನು, ನನಗೆ ಇಲ್ಲಿಗೆ ಬರಬೇಡಿ ಎನ್ನುವ ಹಕ್ಕು ಯಾರಿಗೂ ಇಲ್ಲ. ತಾಲ್ಲೂಕಿನಲ್ಲಿ ಬರ ತಾಂಡವವಾಡುತ್ತಿರುವಾಗ ಶಾಸಕರು ಬೆಂಗಳೂರಿನಲ್ಲಿದ್ದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೊಳಕಾಲ್ಮುರುವನ್ನು ಬರ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಬೇಕು. ಅಗತ್ಯವಿದ್ದರೆ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಪ್ರಭಾಕರ್ ಮ್ಯಾಸನಾಯಕ ಸವಾಲ್ ಹಾಕಿದರು. ಪತ್ರಿಕಾ ಘೋಷ್ಟಿ ನಡೆಸುವ ಸಂದರ್ಭದಲ್ಲಿ ನಗರ ಬಿಜೆಪಿ ಘಟಕದ ಅಧ್ಯಕ್ಷರು ಕಿರಣ್ ಗಾಯಕ್ ವಾಡ್ , ತಿಪ್ಪೇಸ್ವಾಮಿ ಮಾಜಿ ಪಪ ಉಪ ಅಧ್ಯಕ್ಷರು, ಸಿದ್ದಣ್ಣ, ಭೀಮಣ್ಣ, ಹರೀಶ್ ಕಡೆ ತೋಟ, ಪ್ರಭು ನೇರಳಹಳ್ಳಿ ಭೀಮಣ್ಣ ರಮೇಶ್ ಭಾಗವಹಿಸಿದ್ದರು.2
- ಸೋಮಲಾಪುರದ ಬಸವೇಶ್ವರ ಜಾತ್ರೆಯಲ್ಲಿ ; 2026 ನೇ ಸಾಲಿನ ಬಸವಸಿರಿ ಪ್ರಶಸ್ತಿ ಪ್ರಧಾನ ಪಾರ್ಶ್ವವಾಯು (ಲಕ್ವ) ರೋಗನಿವಾರಣಿಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಬಸವೇಶ್ವರ ಜಾತ್ರೆಯಲ್ಲಿ ಶ್ರೀ ಬಸವರಾಜ ಉಮಾರಾಣಿ ರವರಿಗೆ ಶ್ರೀ ಡಾ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೋಮಲಾಪುರದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ವತಿಯಿಂದ ಬಸವ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.2
- ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಡಿಕೆಶಿಗೆ ಬಿ.ವೈ.ವಿಜಯೇಂದ್ರ ಸವಾಲು ದಲಿತರು, ಹಿಂದುಳಿದವರು ಹಾಗೂ ರೈತರಿಗೆ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಜನರ ತೀರ್ಪಿಗೆ ಹೋಗಿ: ಬಿಜೆಪಿ ರಾಜ್ಯಾಧ್ಯಕ್ಷ ಮಸ್ಕಿ (ರಾಯಚೂರು), ಸೆ. 2: ದಲಿತರು, ಹಿಂದುಳಿದ ವರ್ಗಗಳು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಿ ಚುನಾವಣೆ ಎದುರಿಸಲಿ. ಆಗ ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು. ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಮಸ್ಕಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದ ವರ್ಗಗಳ ಪರವಾಗಿ ಮಾತನಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ವರ್ಷಗಳಿಂದ ಇದೇ ಸಮುದಾಯಗಳಿಗೆ ಅನ್ಯಾಯ ಮಾಡುತ್ತಾ ಬಂದಿದೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ವಿಜಯೇಂದ್ರ, ನಿಗಮದ ಹಣದ ದುರ್ಬಳಕೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೀಸಲಾತಿ ವಿಚಾರದಲ್ಲಿಯೂ ಸರ್ಕಾರ ಸ್ಪಷ್ಟತೆ ತೋರಿಲ್ಲ. ಮೀಸಲಾತಿ ನೆಪದಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ದಲಿತರು ಮಾತ್ರವಲ್ಲದೆ ರಾಜ್ಯದ ಎಲ್ಲ ಸಮುದಾಯಗಳನ್ನೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು. ಡಿಕೆಶಿ ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳಲಿವೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟ ವಿಜಯೇಂದ್ರ, ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಿದರು. ಭ್ರಷ್ಟಾಚಾರವೇ ಈ ಸರ್ಕಾರಕ್ಕೆ ಉರುಳಾಗಲಿದೆ. ಅಧಿಕಾರವೇ ಶಾಶ್ವತ ಎಂಬ ಮನೋಭಾವದಿಂದ ವರ್ತಿಸುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದೆ. ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ರೈತರು ಸೇರಿದಂತೆ ವಿವಿಧ ವರ್ಗಗಳ ಜನರು ಬೆಂಬಲ ನೀಡುತ್ತಿದ್ದಾರೆ ಎಂದರು. ರೈತರ ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನೂ ಮುಖ್ಯಮಂತ್ರಿ ತೋರಿಸುತ್ತಿಲ್ಲ ಎಂದು ಟೀಕಿಸಿದ ಅವರು, ಅನ್ನದಾತರ ಸಂಕಷ್ಟದ ಬಗ್ಗೆ ಸರ್ಕಾರ ಇನ್ನಾದರೂ ಗಂಭೀರವಾಗಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಹೋರಾಟದ ಬಳಿಕವೇ ಬರ ವೀಕ್ಷಣೆ ಆರಂಭ ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಬಿಜೆಪಿ ಈಗಾಗಲೇ ವಿವಿಧ ಜಿಲ್ಲೆಗಳಿಗೆ ತೆರಳಿ ವಾಸ್ತವಾಂಶಗಳನ್ನು ಪರಿಶೀಲಿಸಿದೆ. ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈವರೆಗೆ ಬರಪೀಡಿತ ಪ್ರದೇಶಗಳಿಗೆ ಸಮರ್ಪಕವಾಗಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿರಲಿಲ್ಲ. ಇದೀಗ ಬಿಜೆಪಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಅನಿವಾರ್ಯವಾಗಿ ಬರ ವೀಕ್ಷಣೆಗೆ ಮುಂದಾಗಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು. ಇಷ್ಟು ದಿನ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತಿದ್ದವರು ಇದೀಗ ರೈತರ ಜಮೀನುಗಳಿಗೆ ಭೇಟಿ ನೀಡುವ ಪರಿಸ್ಥಿತಿ ಬಂದಿದೆ. ಬಿಜೆಪಿ ನಡೆಸುತ್ತಿರುವ ಹೋರಾಟದ ಪರಿಣಾಮವಾಗಿಯೇ ಸರ್ಕಾರ ರೈತರ ಸಮಸ್ಯೆಗಳತ್ತ ಗಮನ ಹರಿಸಲು ಮುಂದಾಗಿದೆ ಎಂದು ಅವರು ಹೇಳಿದರು. ‘ಮೂರು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ?’ ರಾಯಚೂರು ಭಾಗದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ರೈತರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸಭೆ ಕರೆಯಲಾಗಿದೆಯೇ ಅಥವಾ ಹಿಂದಿನ ಸರ್ಕಾರದ ವಿರುದ್ಧ ಆರೋಪ ಹುಡುಕಲು ಸಭೆ ನಡೆಸಲಾಗುತ್ತಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೇಳಿದರು. ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಈಗ ಹಿಂದಿನ ಸರ್ಕಾರದ ಹಗರಣಗಳನ್ನು ಹುಡುಕುವುದಾಗಿ ಹೇಳುತ್ತಿದೆ. ಇಷ್ಟು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ? ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ರಾಜಕೀಯ ದ್ವೇಷ ಸಾಧಿಸುವುದರಲ್ಲೇ ಕಾಲ ಕಳೆದಿದ್ದೀರಾ ಎಂದು ಪ್ರಶ್ನಿಸಿದರು. ಸರ್ಕಾರದ ಯಾವುದೇ ರೀತಿಯ ಬೆದರಿಕೆ, ಒತ್ತಡ ಅಥವಾ ಧಮ್ಕಿಗೆ ಬಿಜೆಪಿ ಹೆದರುವುದಿಲ್ಲ. ಜನರ ಪರವಾಗಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೋರ್‌ವೆಲ್‌ಗಳನ್ನು ನೂರಾರು, ಸಾವಿರಾರು ಅಡಿ ಆಳಕ್ಕೆ ಕೊರೆದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವು ದೊರೆಯುತ್ತಿಲ್ಲ. ಹಲವು ಕಡೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಕೊರತೆ ಇದೆ ಎಂದು ಅವರು ಹೇಳಿದರು. ರಾಜ್ಯದ ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು ಮುಖ್ಯಮಂತ್ರಿ ಬೆಂಗಳೂರಿನಲ್ಲೇ ಕುಳಿತು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪವನ್ನು ವಿಜಯೇಂದ್ರ ಮಾಡಿದರು. ಬೆಂಗಳೂರಿನ ಅಭಿವೃದ್ಧಿಯಷ್ಟೇ ರಾಜ್ಯದ ಅಭಿವೃದ್ಧಿಯಲ್ಲ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ಅಭಿವೃದ್ಧಿಯತ್ತ ಸರ್ಕಾರ ಸಮಾನ ಗಮನ ಹರಿಸಬೇಕು. ಇಲ್ಲವಾದರೆ ಜನರು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ‘ಎಲ್ಲ ಕೆಲಸಕ್ಕೂ ಲಂಚ ನೀಡಬೇಕಾದ ಪರಿಸ್ಥಿತಿ’ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸಾಮಾನ್ಯ ಜನರು ಯಾವುದೇ ಕೆಲಸ ಮಾಡಿಸಿಕೊಳ್ಳಬೇಕಾದರೂ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಲಂಚ ನೀಡದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಇದು ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನೇ ಕುಗ್ಗಿಸುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ವಾಸ್ತವವಾಗಿ ಇನ್ನೂ ಅನೇಕ ತಾಲೂಕುಗಳು ಬರದ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು. ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿಕೊಳ್ಳಲು ಕೂಡ ರೈತರು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಕೆ ರೈತರ ಸಂಕಷ್ಟ, ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ, ನಿರುದ್ಯೋಗ ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸುತ್ತಿದೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ದಲಿತರು, ಹಿಂದುಳಿದವರು, ರೈತರು ಹಾಗೂ ಯುವಕರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಲಿ. ಜನರ ತೀರ್ಪನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಾಗಿದೆಯೇ ಎಂದು ವಿಜಯೇಂದ್ರ ಪ್ರಶ್ನಿಸಿದರು.1