Shuru
Apke Nagar Ki App…
ವಿಜಯಪುರ: ಜೆಡಿಎಸ್ ರಾಜಕಾರಣಿಗಳ ನಿರ್ಮಾಣ ಮಾಡುವ ಫ್ಯಾಕ್ಟರಿ ಜೆಡಿಎಸ್ ಪಕ್ಷದಲ್ಲಿ ಕೆಲ ಮುಖಂಡರು ಪಕ್ಷವನ್ನು ತೊರೆದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಪಕ್ಷದಲ್ಲಿ 50ಕ್ಕೂ ಹೆಚ್ಚು ಶಾಸಕರು ಮತ್ತು 9 ಸಚಿವರು ಈವರೆಗೆ ಕಾರ್ಯನಿರ್ವಹಿಸಿದ್ದಾರೆ. ವಿವಿಧ ಕಾರಣಗಳಿಂದ ಕೆಲವರು ಪಕ್ಷ ತೊರೆದರೂ, ಜೆಡಿಎಸ್ ಪಕ್ಷ ಸದೃಢವಾಗಿದೆ. ಪಕ್ಷವು ನಾಯಕರನ್ನು ತಯಾರು ಮಾಡುವ ಕಾರ್ಖಾನೆಯಂತಿದೆ. ಹಿಂದೆ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಯ ಸ್ಥಾನ ನೀಡದಿದ್ದರೆ ಮುಖ್ಯಮಂತ್ರಿಯಾಗುತ್ತಿರಲಿಲ್ಲ. ಈ ಬಾರಿ 2028ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅವರು ಹೇಳಿದರು.
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ: ಜೆಡಿಎಸ್ ರಾಜಕಾರಣಿಗಳ ನಿರ್ಮಾಣ ಮಾಡುವ ಫ್ಯಾಕ್ಟರಿ ಜೆಡಿಎಸ್ ಪಕ್ಷದಲ್ಲಿ ಕೆಲ ಮುಖಂಡರು ಪಕ್ಷವನ್ನು ತೊರೆದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಪಕ್ಷದಲ್ಲಿ 50ಕ್ಕೂ ಹೆಚ್ಚು ಶಾಸಕರು ಮತ್ತು 9 ಸಚಿವರು ಈವರೆಗೆ ಕಾರ್ಯನಿರ್ವಹಿಸಿದ್ದಾರೆ. ವಿವಿಧ ಕಾರಣಗಳಿಂದ ಕೆಲವರು ಪಕ್ಷ ತೊರೆದರೂ, ಜೆಡಿಎಸ್ ಪಕ್ಷ ಸದೃಢವಾಗಿದೆ. ಪಕ್ಷವು ನಾಯಕರನ್ನು ತಯಾರು ಮಾಡುವ ಕಾರ್ಖಾನೆಯಂತಿದೆ. ಹಿಂದೆ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಯ ಸ್ಥಾನ ನೀಡದಿದ್ದರೆ ಮುಖ್ಯಮಂತ್ರಿಯಾಗುತ್ತಿರಲಿಲ್ಲ. ಈ ಬಾರಿ 2028ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅವರು ಹೇಳಿದರು.
- Lalbadshah Peerasabgolವಿಜಯಪುರ, ವಿಜಯಪುರ, ಕರ್ನಾಟಕ👏41 min ago
- Lalbadshah Peerasabgolವಿಜಯಪುರ, ವಿಜಯಪುರ, ಕರ್ನಾಟಕ😤41 min ago
More news from ಕರ್ನಾಟಕ and nearby areas
- ಸೂರಿ ಅಣ್ಣಾ ಚಿತ್ರ ತಂಡದಿಂದ ಪತ್ರಿಕಾ...1
- ತೆರದಾಳ ಪಟ್ಟಣದ ಲಾಡ್ಜ್ ಒಂದರಲ್ಲಿ ಇಬ್ಬರಿಗೆ ಅಗ್ನಿ ಅವಘಡ ಇಬ್ಬರೂ ಸ್ಥಿತಿ ಚಿಂತಾಜನಕ1
- ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. 16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.4
- Post by Omprakash rajkumar khot4
- ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು. ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು. ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ, ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ, ಡಾ.ಆರ್.ಸಿ.ಭಂಡಾರಿ, ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.1
- ಬಾಗಲಕೋಟೆ ತಹಶೀಲ್ದಾರ ಕಚೇರಿ ಆವರಣದಲ್ಲಿ ಸಾರ್ವಜನಿಕರ ಸೌಲಭ್ಯಕ್ಕಾಗಿ 2022ನೇ ಸಾಲಿನಲ್ಲಿ ಸುಮಾರು 8.40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ, ಗ್ರಂಥಾಲಯ ಹಾಗೂ ವಾಚನಾಲಯ ಕಟ್ಟಡ ಉದ್ಘಾಟನೆ ಆಗದೇ ಬೀಗ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದೇ ಇರುವುದರಿಂದ ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರು ಕಟ್ಟಡವನ್ನು ಪರಿಶೀಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಸಾರ್ವಜನಿಕರ ತೆರಿಗೆಯ ಹಣದಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ತಕ್ಷಣವೇ ಸಾರ್ವಜನಿಕರಿಗೆ ತೆರೆಯಬೇಕು. ಇಲ್ಲಿ ಗ್ರಂಥಾಲಯ ಎಂದು ಫಲಕದಲ್ಲಿ ಉಲ್ಲೇಖಿಸಿದ್ದರೆ, ಗ್ರಂಥಾಲಯದ ವ್ಯವಸ್ಥೆ ಎಲ್ಲಿದೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರ ಮೂಲಭೂತ ಹಕ್ಕುಗಳಾದ ನೀರು, ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅವರು ಆಗ್ರಹಿಸಿದರು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇದೀಗ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.1
- ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.3
- ಸಿಂದಗಿ: ಬಲರಾಮ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿದ ಎಂಬಿ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು, ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಲಾರಾಮ್ ಕೃಷ್ಣ ಬಾಗಲಕೋಟ್ ಅವರ ತ್ಯಾಗ ದೇಶಕ್ಕೇ ಮಾದರಿಯಾಗಿದೆ ಎಂದು ಸೋಮವಾರ ನಗರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದಲ್ಲಿ ಮೃತ ಬಲರಾಮ್ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು. ಬಲರಾಮ ಕೃಷ್ಣ ಅವರ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರ ಕುಟುಂಬಕ್ಕೆ ಆಸರೆಯಾಗಲಿ ಎಂದು ಆರೋಗ್ಯ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದರು.1