Shuru
Apke Nagar Ki App…
ಕುಂಟಿನಮಡು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸುವ ಮೂಲಕ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಗದಿಂದಾಗುವ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿಸಿ, ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಪ್ರತಿದಿನ ಯೋಗ ಅಭ್ಯಾಸ ಮಾಡುವಂತೆ ತರಬೇತಿ ನೀಡಿ ಪ್ರೋತ್ಸಾಹಿಸಲಾಯಿತು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಹೇಶ್ ಅವರು ವಿದ್ಯಾರ್ಥಿಗಳನ್ನು ಅಚ್ಚುಕಟ್ಟಾಗಿ ಸಂಘಟಿಸಿ ತರಬೇತಿ ನೀಡುವ ಮೂಲಕ ಯೋಗ ದಿನಾಚರಣೆಯನ್ನು ಸಾರ್ಥಕಗೊಳಿಸಿದರು. ಈ ಆಚರಣೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುನಿಲ್ ಕುಮಾರ್ ಬಿ ಎಸ್
ಕುಂಟಿನಮಡು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸುವ ಮೂಲಕ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಗದಿಂದಾಗುವ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿಸಿ, ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಪ್ರತಿದಿನ ಯೋಗ ಅಭ್ಯಾಸ ಮಾಡುವಂತೆ ತರಬೇತಿ ನೀಡಿ ಪ್ರೋತ್ಸಾಹಿಸಲಾಯಿತು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಹೇಶ್ ಅವರು ವಿದ್ಯಾರ್ಥಿಗಳನ್ನು ಅಚ್ಚುಕಟ್ಟಾಗಿ ಸಂಘಟಿಸಿ ತರಬೇತಿ ನೀಡುವ ಮೂಲಕ ಯೋಗ ದಿನಾಚರಣೆಯನ್ನು ಸಾರ್ಥಕಗೊಳಿಸಿದರು. ಈ ಆಚರಣೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಕುಂಟಿನಮಡು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸುವ ಮೂಲಕ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಗದಿಂದಾಗುವ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿಸಿ, ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಪ್ರತಿದಿನ ಯೋಗ ಅಭ್ಯಾಸ ಮಾಡುವಂತೆ ತರಬೇತಿ ನೀಡಿ ಪ್ರೋತ್ಸಾಹಿಸಲಾಯಿತು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಹೇಶ್ ಅವರು ವಿದ್ಯಾರ್ಥಿಗಳನ್ನು ಅಚ್ಚುಕಟ್ಟಾಗಿ ಸಂಘಟಿಸಿ ತರಬೇತಿ ನೀಡುವ ಮೂಲಕ ಯೋಗ ದಿನಾಚರಣೆಯನ್ನು ಸಾರ್ಥಕಗೊಳಿಸಿದರು. ಈ ಆಚರಣೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.4
- ಸೊರಬದ ಜಡೆ ಸಂಸ್ಥಾನ ಮಠದ ಪರಮ ಪೂಜ್ಯ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಮತ್ತು ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಮತ್ತು ಉತ್ಸಾಹದಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಅವರು, ಯೋಗವು ಕೇವಲ ದೈಹಿಕ ಕಸರತ್ತಲ್ಲದೆ, ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ತಿಳಿಸಿದರು. ಭಾರತೀಯ ಸಂಸ್ಕೃತಿಯ ಈ ಅಮೂಲ್ಯ ಕೊಡುಗೆಯನ್ನು ಇಡೀ ಜಗತ್ತಿಗೆ ತಲುಪಿಸಿದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಪೂಜ್ಯ ಸ್ವಾಮೀಜಿಯವರ ಪ್ರೇರಣೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಾವಿರಾರು ಯುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಬೃಹತ್ ಪ್ರಮಾಣದಲ್ಲಿ ಪಾಲ್ಗೊಂಡು, ಶಿಸ್ತುಬದ್ಧವಾಗಿ ಯೋಗಾಭ್ಯಾಸ ಮಾಡುವ ಮೂಲಕ ಸದೃಢ ಹಾಗೂ ನಿರೋಗಿ ಭಾರತದ ಸಂಕಲ್ಪಕ್ಕೆ ಅಭೂತಪೂರ್ವ ಶಕ್ತಿಯನ್ನು ತುಂಬಿದರು. ಯುವಶಕ್ತಿಯ ಈ ಅಪಾರ ಉತ್ಸಾಹ ನಿಜಕ್ಕೂ ಪ್ರಶಂಸನೀಯ ಎಂದು ಅವರು ಹೇಳಿದರು. ಅಲ್ಲದೆ, ದೈನಂದಿನ ಜೀವನದಲ್ಲಿ ಯೋಗವನ್ನು ನಿರಂತರ ಹವ್ಯಾಸವಾಗಿಸಿಕೊಂಡು, ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಸೊರಬದ ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಹಾಗೂ ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.4
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಅನನ್ಯ ಪ್ರೌಢಶಾಲಾ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ನಾಗರಾಜ್ ಅವರು ಮಾತನಾಡಿ, ಮಾನವನಿಗೆ ಎಲ್ಲದಕ್ಕಿಂತಲೂ ಆರೋಗ್ಯವೇ ಮುಖ್ಯವಾಗಿದ್ದು, ಆರೋಗ್ಯವೇ ಭಾಗ್ಯವೆಂದು ಬಣ್ಣಿಸಿದರು. ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಅವರು ಈ ಸಂದರ್ಭದಲ್ಲಿ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಕುಮಾರ್ ಕೆ ಅವರು ಯೋಗ ದಿನದ ಇತಿಹಾಸ ಮತ್ತು ವಿಶೇಷತೆಗಳನ್ನು ತಿಳಿಸುತ್ತಾ, ಯೋಗವು ಬದುಕಿನ ಒಂದು ಕಲೆ ಎಂದು ಅದರ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದರು. ಈ ದಿನಾಚರಣೆಯ ಭಾಗವಾಗಿ, ದೈಹಿಕ ಶಿಕ್ಷಕ ಕುಮಾರ್ ಆರ್, ನಿಶ್ಚಿತ ಕೆ ಮತ್ತು ಅನನ್ಯ ಯೋಗ ಕೇಂದ್ರದ ಸದಸ್ಯರ ನೇತೃತ್ವದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಕುಮಾರ್ ಬಿ.ಎಸ್, ಆಡಳಿತಾಧಿಕಾರಿ ವೇಣುಗೋಪಾಲ್ ಎಸ್, ಮುಖ್ಯೋಪಾಧ್ಯಾಯರಾದ ಸುನಿತಾ ಆರ್, ತನುಜ ಎ ಸೇರಿದಂತೆ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು. ಶಾರದ ಅವರು ಪ್ರಾರ್ಥನೆ ಸಲ್ಲಿಸಿದರೆ, ಕುಮಾರಿ ಸೃಷ್ಟಿ ಎನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಲಿಪಿ ಮಿಲನ ಸ್ವಾಗತ ಭಾಷಣ ಮಾಡಿದರು ಹಾಗೂ ಕುಮಾರಿ ಪ್ರಾರ್ಥನಾ ವೈ ವಂದನಾರ್ಪಣೆ ಮಾಡಿದರು.1
- ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ, ನಗರಂಗೆರೆ ಗ್ರಾಮಪಂಚಾಯಿತಿ ಹಾಗೂ ಮೂರ್ತಿ ಇನ್ವೆಸ್ಟರ್ಸ್ ಅಂಡ್ ಡೆವಲಪರ್ಸ್ ಗ್ರೂಪ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣ ಜಯಂತಿ ಮತ್ತು ದಿ. ಡಿ. ಸುಧಾಕರ್ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಇಂದು ತಾನು ಇಲ್ಲಿ ನಿಂತು ಮಾತನಾಡಲು ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಹೇಳಿದರು. ಸಂಜೀವಮೂರ್ತಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ, ಮತ್ತು ಅರ್ಥಶಾಸ್ತ್ರಜ್ಞ ಎಂದು ಬಣ್ಣಿಸಿದರು. ಭಾರತದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿದ್ದು, ಅವರು ಸಂವಿಧಾನ ರಚಿಸದಿದ್ದರೆ ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ ಎಂದು ಒತ್ತಿ ಹೇಳಿದರು. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಇದೇ ವೇಳೆ, ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿದೆ ಎಂದು ತಿಳಿಸಿದರು. ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದು ಬಸವಣ್ಣನವರ ಮುಖ್ಯ ಗುರಿಯಾಗಿತ್ತು ಎಂದು ಹೇಳಿದರು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು ಎಂದರು. ದಿ. ಡಿ. ಸುಧಾಕರ್ ಉತ್ತಮ ರಾಜಕಾರಣಿಯಾಗಿದ್ದು, ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಎಂದು ಸಂಜೀವಮೂರ್ತಿ ಸ್ಮರಿಸಿದರು. ಈ ಮಹನೀಯರ ಜಯಂತಿ ಪ್ರಯುಕ್ತ, ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.1
- ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಒಂದು ಚಿರತೆ ಬೋನಿಗೆ ಬಿದ್ದಿದೆ.1
- ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬೆಂಗಳೂರಿನಲ್ಲಿಂದು ಅವರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಒಟ್ಟಾಗಿ ಸೇರಿ ಈ ಪದಗ್ರಹಣ ಕಾರ್ಯಕ್ರಮಕ್ಕೆ ತೆರಳಿದರು. ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ, ಕಾರ್ಯಕರ್ತರು ಸಿ.ಎಂ. ಡಿ.ಕೆ. ಶಿವಕುಮಾರ್ ಮತ್ತು ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೋಟೆನಾಡಿನ (ಚಿತ್ರದುರ್ಗ) ಕಾಂಗ್ರೆಸ್ ಮುಖಂಡರು ಸಹ ತೆರಳಿದ್ದರು.1
- ಶಿವಮೊಗ್ಗದ ಪ್ರತಿಷ್ಠಿತ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SIMS)ಯ 14ನೇ ಪದವಿ ಪ್ರದಾನ ಸಮಾರಂಭ 'ಅನ್ವಯ'ವು ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ವೈದ್ಯಕೀಯ ಪದವಿ ಪಡೆದ ನೂರಾರು ವಿದ್ಯಾರ್ಥಿಗಳಲ್ಲಿ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯದ ವ್ಯಾಪ್ತಿಯ ಹೊಯ್ಸಳಕಟ್ಟೆ ಗ್ರಾಮದ ಬಡ ರೈತ ಕುಟುಂಬದ ಸಿಂಧು ಎಚ್.ಎಸ್. ಅವರ ಸಾಧನೆ ಎಲ್ಲರ ಗಮನ ಸೆಳೆಯಿತು. ಸರಳ ರೈತ ದಂಪತಿಗಳಾದ ಶ್ರೀ ಸಿದ್ದಯ್ಯ ಎಚ್.ವಿ. ಹಾಗೂ ಶ್ರೀಮತಿ ತಿಮ್ಮಕ್ಕ ಅವರ ಮೂರನೇ ಪುತ್ರಿಯಾದ ಸಿಂಧು, ಈಗ ವೈದ್ಯಕೀಯ ಪದವಿ ಮುಗಿಸಿ 'ಡಾಕ್ಟರ್ ಸಿಂಧು' ಆಗಿ ಹೊರಹೊಮ್ಮಿದ್ದಾರೆ. ಯಾವುದೇ ಭವ್ಯ ಹಿನ್ನೆಲೆ ಇಲ್ಲದಿದ್ದರೂ, ನಿರಂತರ ಪರಿಶ್ರಮ ಮತ್ತು ಕಠಿಣ ಛಲದ ಮೂಲಕ ಈ ಸಾಧನೆ ಮಾಡಿರುವ ಡಾ. ಸಿಂಧು, ತಮ್ಮ ಕೃಷಿ ಹಿನ್ನೆಲೆಯ ಕುಟುಂಬದಲ್ಲಿ ವೈದ್ಯೆಯಾದ ಮೊದಲ ವ್ಯಕ್ತಿ. ಪದವಿ ಸ್ವೀಕರಿಸಿದ ಈ ಹೆಮ್ಮೆಯ ಕ್ಷಣದಲ್ಲಿ ಅವರ ಪೋಷಕರ ಕಣ್ಣಾಲಿಗಳು ಆನಂದಬಾಷ್ಪದಿಂದ ತುಂಬಿದ್ದವು. ವೇದಿಕೆಯ ಮೇಲೆ ಗಣ್ಯರಿಂದ ಪದವಿ ಪಡೆಯುವಾಗ ಇಡೀ ಸಭಾಂಗಣ ಚಪ್ಪಾಳೆಯ ಸುರಿಮಳೆಗೈಯಿತು. ಡಾ. ಸಿಂಧು ಅವರನ್ನು "ಕಠಿಣ ಪರಿಶ್ರಮ ಮತ್ತು ಸರಳ ವ್ಯಕ್ತಿತ್ವದವರು, ಪ್ರಕೃತಿ ಪ್ರೇಮಿ" ಎಂದು ಬಣ್ಣಿಸಲಾಯಿತು; ಹಸಿರು ಕಣಿವೆಯ ಸಣ್ಣ ಹಳ್ಳಿಯಿಂದ ಬಂದು ಈಗ ವೈದ್ಯೆಯಾಗಿ ಲೋಕಕ್ಕೆ ಬೆಳಕಾಗಲು ಹೊರಟಿರುವುದು ಹೆಮ್ಮೆಯ ಸಂಗತಿ ಎಂದು ಉಲ್ಲೇಖಿಸಲಾಯಿತು. ನೇರ ನುಡಿ ಹಾಗೂ ಕಠಿಣ ಪರಿಶ್ರಮದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಡಾ. ಸಿಂಧು, ಕಲೆ ಮತ್ತು ಕೈತೋಟದಂತಹ ಹವ್ಯಾಸಗಳನ್ನೂ ಹೊಂದಿದ್ದಾರೆ. ಕೇವಲ ಪದವಿ ಗಳಿಕೆಗೆ ಸೀಮಿತವಾಗದೆ, ಗ್ರಾಮೀಣ ಭಾಗದ ಬಡ ಜನರಿಗೆ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆ ಮಾಡುವ ಉದಾತ್ತ ಮನೋಭಾವವನ್ನು ಅವರು ಮೈಗೂಡಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ, ಈ ಹಳ್ಳಿಯ ಪ್ರತಿಭೆಯು ವೈದ್ಯಕೀಯ ಕಾಲೇಜಿನ ಅತ್ಯುನ್ನತ ವೇದಿಕೆಯಲ್ಲಿ ಮಿಂಚಿ, ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದೆ. ಸಂಸ್ಥೆಯ ನಿರ್ದೇಶಕರು ಮತ್ತು ಗಣ್ಯರು ಡಾ. ಸಿಂಧು ಅವರ ವೈದ್ಯಕೀಯ ಜೀವನ ಯಶಸ್ಸು ಹಾಗೂ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.1
- ಸೊರಬದ ಭದ್ರಾಪುರದಲ್ಲಿರುವ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಯೋಗ ರತ್ನ ಪ್ರಶಸ್ತಿ ವಿಜೇತ ಬೆನಕಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯೋಗ ಮನುಷ್ಯನ ಆರೋಗ್ಯವನ್ನು ಕಾಪಾಡುವಲ್ಲಿ ಒಂದು ವರದಾನವಿದ್ದಂತೆ ಎಂದು ಅವರು ಪ್ರತಿಪಾದಿಸಿದರು. ಪ್ರತಿದಿನ ಯೋಗ ಮಾಡುವುದರಿಂದ ಮನುಷ್ಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢನಾಗುತ್ತಾನೆ, ಅಲ್ಲದೆ ಯೋಗಾಭ್ಯಾಸದಿಂದ ವಿದ್ಯಾರ್ಥಿಗಳು ಏಕಾಗ್ರತೆಯನ್ನು ಪಡೆಯಲು ಸಾಧ್ಯ ಎಂದು ಬೆನಕಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಧ್ಯಾನ ಹಾಗೂ ಅನೇಕ ಯೋಗಾಸನಗಳನ್ನು ಮಾಡಿಸಿ ಅವುಗಳ ಪ್ರಯೋಜನಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರು ಸುಮಾರು ಎರಡು ಗಂಟೆಗಳ ಕಾಲ ಯೋಗಾಭ್ಯಾಸದಲ್ಲಿ ತೊಡಗಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಯೋಗ ಗೀತೆಗಳು ಮತ್ತು ಯೋಗ ನೃತ್ಯಗಳು ಪ್ರದರ್ಶನಗೊಂಡವು. ಮಾಲಿನಿ ಶ್ರೀಧರ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ರೂಪ ಶ್ರೀನಾಥ್, ಪ್ರಾಂಶುಪಾಲರ ಗುತ್ತೇದಾರ್ ಶೇಕ್ ನವಾಬ್, ಉಪ ಪ್ರಾಂಶುಪಾಲರ ಮಂಜುನಾಥ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಯೇಷಾ ಅವರು ಕಾರ್ಯಕ್ರಮ ನಿರೂಪಿಸಿದ್ದು, ಸನ್ನಿಧಿ ಸ್ವಾಗತ ಭಾಷಣ ಮಾಡಿದರು ಮತ್ತು ಕುಮಾರ ಚಿನ್ಮಯ್ ವಂದನಾರ್ಪಣೆ ಮಾಡಿದರು.2