ತಾಯಿ ಎಂಬುದು ಅಮೃತಕ್ಕಿಂತ ಶ್ರೇಷ್ಠ ತಾಯಿಯ ಪ್ರೀತಿ ಎಲ್ಲರಿಗೂ ಸಿಗಲಿ ಶಿವಮೊಗ್ಗ: ತಾಯಿ ಸಂತೋಷ ಕುಟುಂಬದ ಆಧಾರಶಿಲೆ ತಾಯಿ ಎಂಬುದು ಅಮೃತಕ್ಕಿಂತ ಶ್ರೇಷ್ಠ ತಾಯಿಯ ಪ್ರೀತಿ ಎಲ್ಲರಿಗೂ ಸಿಗಲಿ ಎಂದು ನವಲೆ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ತಾಯಂದಿರ ದಿನಾಚರಣೆಯ ಅಂಗವಾಗಿ ಹಿರಿಯ ಮಾತೆಯರಿಗೆ ಹಮ್ಮಿಕೊಳ್ಳಲಾದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ರಾಜಯೋಗಿನಿ ಪ್ರಜಾ ಪಿತಾ ಬ್ರಹ್ಮಕುಮಾರಿ ಸ್ವಾತಿ ಅಕ್ಕನವರು ಮಾತನಾಡಿದರು. ತಾಯಿ ಎಂಬ ಶಬ್ದ ನಮ್ಮ ಜೀವನದ ಅತಿ ದೊಡ್ಡ ಶಕ್ತಿ ತಾಯಿಯ ಪ್ರೀತಿ ಮತ್ತು ಆಶೀರ್ವಾದ ಪ್ರಪಂಚದ ಯಾವ ಸಿರಿ ಸಂಪತ್ತಿಗೂ ಸರಿಸಮಾನವಾಗಿರುವುದಿಲ್ಲ ತಾಯಿಯನ್ನು ಗೌರವಿಸುವುದು ನಮ್ಮ ನಿಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದ ಅವರು ಅಮ್ಮನ ಪದದಲ್ಲಿ ದೈವತ್ವವಿದೆ ಅವಳು ನಮ್ಮ ಬಾಳಿನ ದಾರಿದೀಪ ಅವಳ ಋಣವನ್ನು ತೀರಿಸಲು ಸಾಧ್ಯವಿಲ್ಲ ಬದುಕಿನಲ್ಲಿ ಬರುವ ಕಷ್ಟಗಳನ್ನು ತಾನು ತನ್ನ ಮಡಿಲಿಗೆ ಹಾಕಿಕೊಂಡು ಮಕ್ಕಳಿಗೆ ಸುಂದರವಾದ ಬದುಕನ್ನು ರೂಪಿಸುವಲ್ಲಿ ತಾಯಿ ಪ್ರಮುಖ ಪಾತ್ರವನ್ನು ವಹಿಸಿದ್ದಾಳೆ ತಾಯಿಯ ಪ್ರೀತಿ ಮತ್ತು ತ್ಯಾಗಕ್ಕಾಗಿ ಪ್ರತಿಯಾಗಿ ನಾವು ಏನು ನೀಡಿದರು ಅದು ಕಡಿಮೆ ಅವಳ ಬಗ್ಗೆ ಗೌರವ ಹಾಗೂ ಕೃತಜ್ಞತಾ ಭಾವನೆಯನ್ನು ಇಟ್ಟುಕೊಳ್ಳುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನುಡಿದರು.ಇದೇ ಸಂದರ್ಭದಲ್ಲಿ 93 ವಸಂತಗಳನ್ನ ಕಳೆದ ಮಾತೆ ಲಲಿತಮ್ಮ ಹಾಗೂ 77 ವಸಂತಗಳನ್ನ ಕಳೆದ ಮಾತೆ ವಿನೋದಮ್ಮನವರಿಗೆ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಲಾಯಿತು ಹಾಗೆ ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಾತೆಯರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು. ಮಾತೆಯರು ಕುಟುಂಬದ ಕಣ್ಣು ಅವರು ಸದಾ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಂಡರೆ ಕುಟುಂಬ ಪರಿಪೂರ್ಣವಾಗಿ ಸುಂದರವಾಗಿ ಇರುತ್ತದೆ ಆಸೆ ವ್ಯಾಮೋಹಗಳನ್ನು ತ್ಯಜಿಸಿ ಪರಮಾತ್ಮನ ನಾಮಸ್ಮರಣೆಯಲ್ಲಿ ನಮಗೆ ಸಕಲವೂ ದೊರಕುತ್ತದೆ ಎಂದು ನುಡಿದರು. ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಉಪಾಧ್ಯಕ್ಷ ಜಿ ವಿಜಯ್ ಕುಮಾರ್ ಸಂಸ್ಥೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಯೋಗ,ಆಧ್ಯಾತ್ಮಿಕ, ನೀತಿಶಾಸ್ತ್ರ, ಪ್ರಾಯೋಗಿಕ ಮನೋವಿಜ್ಞಾನ, ತತ್ವಶಾಸ್ತ್ರ, ವಿಶ್ವ ಇತಿಹಾಸ ಮತ್ತು ಸಂಸ್ಕೃತಿಯ ಸಾರಾಂಶ, ಸಮಾಜಶಾಸ್ತ್ರ, ಮತ್ತು ಹಲವಾರು ಇತರ ವಿಷಯಗಳ ಮಿಶ್ರಣವಾಗಿದೆ. ಈ ಸಂಸ್ಥೆಯು ಪ್ರತಿಯೊಬ್ಬ ವ್ಯಕ್ತಿಯಲ್ಲಿನ ತನ್ನ ಆದ್ಯಾತ್ಮಿಕ ಆಂತರಿಕ ಪ್ರತಿಭೆಯನ್ನು ಗುರುತಿಸುತ್ತದೆ ಮತ್ತು ತಮ್ಮೊಳಗಿನ ವ್ಯಕ್ತಿತ್ವ ವನ್ನು ಮರುಶೋಧಿಸಲು ಸಹಾಯ ಮಾಡುತ್ತದೆ. ಜಾತಿ, ಮತ, ವಯಸ್ಸು ಮತ್ತು ಸಾಮಾಜಿಕ, ಆರ್ಥಿಕ ಅಥವಾ ರಾಜಕೀಯ ಸ್ಥಾನಮಾನವನ್ನು ಲೆಕ್ಕಿಸದೆ ಈ ಸಂಸ್ಥೆ ಎಲ್ಲರಿಗೂ ಮುಕ್ತವಾಗಿದೆ. ಎಂದರು. ಈ ಸಂದಭದಲ್ಲಿ ನಾಗು ಅಕ್ಕನವರು. ಸ್ವಾತಿ ಅಕ್ಕನವರು. ಬಿಂದು ವಿಜಯ ಕುಮಾರ್ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1
- ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.1
- ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು1
- *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ* ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..3
- ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.3