ವಿದ್ಯಾಗಿರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹ: ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ದೇವದುರ್ಗ ಬ್ರೇಕಿಂಗ್ ನ್ಯೂಸ್ ವಿದ್ಯಾಗಿರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹ: ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ದೇವದುರ್ಗ, ಆ.27: ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ವಿದ್ಯಾಗಿರಿ ಪ್ರದೇಶದ ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮರ್ಪಕ ಬಸ್‌ಸೌಲಭ್ಯ, ಬಸ್ ನಿಲುಗಡೆ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿದ್ಯಾಗಿರಿ ಪ್ರದೇಶದಲ್ಲಿ 8ಕ್ಕೂ ಹೆಚ್ಚು ವಿದ್ಯಾರ್ಥಿ ವಸತಿ ನಿಲಯಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ವಸತಿ ನಿಲಯಗಳಿಂದ ಮುಖ್ಯ ರಸ್ತೆಯವರೆಗೆ ಸುಮಾರು 4 ಕಿ.ಮೀ.ವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಬಸ್‌ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದು ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ ದೊಡ್ಡಮನಿ ಹೇಳಿದರು. ರಾಯಚೂರು ಮುಖ್ಯ ರಸ್ತೆಯ ಸಮೀಪದಲ್ಲೇ ವಿದ್ಯಾಗಿರಿ ಪ್ರದೇಶವಿದ್ದರೂ, ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್‌ಗಳು ವಿದ್ಯಾರ್ಥಿಗಳಿಗಾಗಿ ನಿಲುಗಡೆ ಮಾಡುತ್ತಿಲ್ಲ. ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ನಿಲ್ಲುವುದರಿಂದ ವಿದ್ಯಾರ್ಥಿಗಳು ಬಿಸಿಲು, ಮಳೆ ಸೇರಿದಂತೆ ಪ್ರತಿಕೂಲ ಹವಾಮಾನದಲ್ಲೂ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ವಿದ್ಯಾರ್ಥಿಗಳ ಅಮೂಲ್ಯ ಸಮಯವೂ ವ್ಯರ್ಥವಾಗುತ್ತಿದೆ ಎಂದು ಅವರು ಆರೋಪಿಸಿದರು. ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ಬಗೆಹರಿದಿಲ್ಲ. ವಿದ್ಯಾರ್ಥಿಗಳ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಡಿಪೋ ಮುತ್ತಿಗೆ ಹಾಕಿ ಹೋರಾಟ ನಡೆಸಬೇಕಾಗುತ್ತದೆ ಎಂದು ಮಹಾಲಿಂಗ ದೊಡ್ಡಮನಿ ಎಚ್ಚರಿಸಿದರು. ಎಸ್‌ಎಫ್‌ಐ ತಾಲೂಕು ಖಜಾಂಚಿ ದಿಲ್‌ಶಾದ್ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿದ್ಯಾಗಿರಿ ಪ್ರದೇಶದ ಸಮೀಪದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಕೆಎಸ್‌ಆರ್‌ಟಿಸಿ ಹಾಗೂ ಇತರೆ ಬಸ್‌ಗಳಿಗೆ ಕಡ್ಡಾಯ ನಿಲುಗಡೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ವಿದ್ಯಾಗಿರಿ ರಸ್ತೆಯ ಎರಡೂ ಬದಿಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಆರಂಭಿಕ ಕಾಮಗಾರಿ ನಡೆದಿದ್ದರೂ, ಕಾಮಗಾರಿ ಪೂರ್ಣಗೊಳ್ಳದೆ ಸ್ಥಗಿತಗೊಂಡಿದೆ. ಆದ್ದರಿಂದ ಬಸ್ ನಿಲ್ದಾಣಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳ ಭೇಟಿ: ಬೇಡಿಕೆ ಈಡೇರಿಸುವ ಭರವಸೆ ಪ್ರತಿಭಟನಾ ಸ್ಥಳಕ್ಕೆ ಡಿಪೋ ಮ್ಯಾನೇಜರ್, ಪಿಡಬ್ಲ್ಯುಡಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಇಂದೇ ಹಾಗೂ ನಾಳೆಯೊಳಗೆ ಈಡೇರಿಸುವ ಭರವಸೆ ನೀಡಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಸಮಯಗಳಲ್ಲಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು. ಗ್ರಾಮ ಪಂಚಾಯಿತಿ ವತಿಯಿಂದ ರಾಜ್ಯ ಹೆದ್ದಾರಿಯಿಂದ ವಿದ್ಯಾರ್ಥಿ ವಸತಿ ನಿಲಯಗಳವರೆಗೆ ಬೀದಿ ದೀಪ ಅಳವಡಿಸಲಾಗುವುದು. ವಸತಿ ನಿಲಯಗಳಿಗೆ ತೆರಳುವ ರಸ್ತೆಯ ಅಕ್ಕಪಕ್ಕದ ಜಾಲಿ ಗಿಡಗಳನ್ನು ತೆರವುಗೊಳಿಸಿ ತಾತ್ಕಾಲಿಕ ಬಸ್ ನಿಲ್ದಾಣದ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು. ಪ್ರಮುಖ ಬೇಡಿಕೆಗಳು 1. ವಿದ್ಯಾಗಿರಿ ಪ್ರದೇಶದ ಸಮೀಪದಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಿಗೆ ಕಡ್ಡಾಯ ನಿಲುಗಡೆ ಕಲ್ಪಿಸಿ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಬೇಕು. 2. ಎರಡೂ ಬದಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಸ್ ನಿಲ್ದಾಣಗಳ ಕಾಮಗಾರಿ ಕೂಡಲೇ ಪೂರ್ಣಗೊಳಿಸಿ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. 3. ನಿಗದಿತ ಸ್ಥಳದಲ್ಲಿ ಸುರಕ್ಷಿತವಾಗಿ ಬಸ್ ನಿಲುಗಡೆ ಮಾಡುವಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಬೇಕು. 4. ವಿದ್ಯಾಗಿರಿ ಪ್ರದೇಶದಲ್ಲಿ ನಿಯಂತ್ರಕರನ್ನು ನೇಮಕ ಮಾಡಬೇಕು. 5. ರಾಜ್ಯ ಹೆದ್ದಾರಿಯಿಂದ ವಿದ್ಯಾರ್ಥಿ ವಸತಿ ನಿಲಯಗಳವರೆಗೆ ಬೀದಿ ದೀಪ ಅಳವಡಿಸಬೇಕು. ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕ ಸಂಘಟನೆಯ ರಾಜ್ಯ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ಯೂಸುಫ್ ಗ್ವಾಡಕರ್, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಭಾಷಾ ಶಾನ್ಯರ್, ಕಾರ್ಯದರ್ಶಿ ಸಂತೋಷ್ ತ್ಯಾಪ್ಲಿ, ಬಾಬು ಶ್ಯಾನೇರ್, ಅಭಿಷೇಕ್, ಶಿವು, ನಿಂಗಯ್ಯ ಸುಣದಕಲ್, ಯಲ್ಲಪ್ಪ ಸುಣದಕಲ್, ಶಿವರಾಜ ಮುಂಡರಗಿ, ಲಕ್ಷ್ಮಣ ಪರಪೂರ, ರಂಗನಾಥ, ಹನುಮಂತ, ನಾಗರಾಜ ಪರಪೂರ, ಅಮೀರ್ ಹುಸೇನ್ ಸೇರಿದಂತೆ ಹಲವರು ಹಾಗೂ ವಿದ್ಯಾರ್ಥಿಗಳಾದ ಅನೀತಾ, ಶಿಲ್ಪಾ, ರೇಷ್ಮಾ, ಸುನೀತಾ, ಬಂಧನ ವಾಜ, ಆಜಿಮಲಾಗಾ, ಹನುಮಂತ ಗಲಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
ವಿದ್ಯಾಗಿರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹ: ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ದೇವದುರ್ಗ ಬ್ರೇಕಿಂಗ್ ನ್ಯೂಸ್ ವಿದ್ಯಾಗಿರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹ: ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ದೇವದುರ್ಗ, ಆ.27: ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ವಿದ್ಯಾಗಿರಿ ಪ್ರದೇಶದ ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮರ್ಪಕ ಬಸ್‌ಸೌಲಭ್ಯ, ಬಸ್ ನಿಲುಗಡೆ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿದ್ಯಾಗಿರಿ ಪ್ರದೇಶದಲ್ಲಿ 8ಕ್ಕೂ ಹೆಚ್ಚು ವಿದ್ಯಾರ್ಥಿ ವಸತಿ ನಿಲಯಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ವಸತಿ ನಿಲಯಗಳಿಂದ ಮುಖ್ಯ ರಸ್ತೆಯವರೆಗೆ ಸುಮಾರು 4 ಕಿ.ಮೀ.ವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಬಸ್‌ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದು ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ ದೊಡ್ಡಮನಿ ಹೇಳಿದರು. ರಾಯಚೂರು ಮುಖ್ಯ ರಸ್ತೆಯ ಸಮೀಪದಲ್ಲೇ ವಿದ್ಯಾಗಿರಿ ಪ್ರದೇಶವಿದ್ದರೂ, ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್‌ಗಳು ವಿದ್ಯಾರ್ಥಿಗಳಿಗಾಗಿ ನಿಲುಗಡೆ ಮಾಡುತ್ತಿಲ್ಲ. ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ನಿಲ್ಲುವುದರಿಂದ ವಿದ್ಯಾರ್ಥಿಗಳು ಬಿಸಿಲು, ಮಳೆ ಸೇರಿದಂತೆ ಪ್ರತಿಕೂಲ ಹವಾಮಾನದಲ್ಲೂ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ವಿದ್ಯಾರ್ಥಿಗಳ ಅಮೂಲ್ಯ ಸಮಯವೂ ವ್ಯರ್ಥವಾಗುತ್ತಿದೆ ಎಂದು ಅವರು ಆರೋಪಿಸಿದರು. ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ಬಗೆಹರಿದಿಲ್ಲ. ವಿದ್ಯಾರ್ಥಿಗಳ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಡಿಪೋ ಮುತ್ತಿಗೆ ಹಾಕಿ ಹೋರಾಟ ನಡೆಸಬೇಕಾಗುತ್ತದೆ ಎಂದು ಮಹಾಲಿಂಗ ದೊಡ್ಡಮನಿ ಎಚ್ಚರಿಸಿದರು. ಎಸ್‌ಎಫ್‌ಐ ತಾಲೂಕು ಖಜಾಂಚಿ ದಿಲ್‌ಶಾದ್ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿದ್ಯಾಗಿರಿ ಪ್ರದೇಶದ ಸಮೀಪದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಕೆಎಸ್‌ಆರ್‌ಟಿಸಿ ಹಾಗೂ ಇತರೆ ಬಸ್‌ಗಳಿಗೆ ಕಡ್ಡಾಯ ನಿಲುಗಡೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ವಿದ್ಯಾಗಿರಿ ರಸ್ತೆಯ ಎರಡೂ ಬದಿಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಆರಂಭಿಕ ಕಾಮಗಾರಿ ನಡೆದಿದ್ದರೂ, ಕಾಮಗಾರಿ ಪೂರ್ಣಗೊಳ್ಳದೆ ಸ್ಥಗಿತಗೊಂಡಿದೆ.
ಆದ್ದರಿಂದ ಬಸ್ ನಿಲ್ದಾಣಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳ ಭೇಟಿ: ಬೇಡಿಕೆ ಈಡೇರಿಸುವ ಭರವಸೆ ಪ್ರತಿಭಟನಾ ಸ್ಥಳಕ್ಕೆ ಡಿಪೋ ಮ್ಯಾನೇಜರ್, ಪಿಡಬ್ಲ್ಯುಡಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಇಂದೇ ಹಾಗೂ ನಾಳೆಯೊಳಗೆ ಈಡೇರಿಸುವ ಭರವಸೆ ನೀಡಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಸಮಯಗಳಲ್ಲಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು. ಗ್ರಾಮ ಪಂಚಾಯಿತಿ ವತಿಯಿಂದ ರಾಜ್ಯ ಹೆದ್ದಾರಿಯಿಂದ ವಿದ್ಯಾರ್ಥಿ ವಸತಿ ನಿಲಯಗಳವರೆಗೆ ಬೀದಿ ದೀಪ ಅಳವಡಿಸಲಾಗುವುದು. ವಸತಿ ನಿಲಯಗಳಿಗೆ ತೆರಳುವ ರಸ್ತೆಯ ಅಕ್ಕಪಕ್ಕದ ಜಾಲಿ ಗಿಡಗಳನ್ನು ತೆರವುಗೊಳಿಸಿ ತಾತ್ಕಾಲಿಕ ಬಸ್ ನಿಲ್ದಾಣದ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು. ಪ್ರಮುಖ ಬೇಡಿಕೆಗಳು 1. ವಿದ್ಯಾಗಿರಿ ಪ್ರದೇಶದ ಸಮೀಪದಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಿಗೆ ಕಡ್ಡಾಯ ನಿಲುಗಡೆ ಕಲ್ಪಿಸಿ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಬೇಕು. 2. ಎರಡೂ ಬದಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಸ್ ನಿಲ್ದಾಣಗಳ ಕಾಮಗಾರಿ ಕೂಡಲೇ ಪೂರ್ಣಗೊಳಿಸಿ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. 3. ನಿಗದಿತ ಸ್ಥಳದಲ್ಲಿ ಸುರಕ್ಷಿತವಾಗಿ ಬಸ್ ನಿಲುಗಡೆ ಮಾಡುವಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಬೇಕು. 4. ವಿದ್ಯಾಗಿರಿ ಪ್ರದೇಶದಲ್ಲಿ ನಿಯಂತ್ರಕರನ್ನು ನೇಮಕ ಮಾಡಬೇಕು. 5. ರಾಜ್ಯ ಹೆದ್ದಾರಿಯಿಂದ ವಿದ್ಯಾರ್ಥಿ ವಸತಿ ನಿಲಯಗಳವರೆಗೆ ಬೀದಿ ದೀಪ ಅಳವಡಿಸಬೇಕು. ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕ ಸಂಘಟನೆಯ ರಾಜ್ಯ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ಯೂಸುಫ್ ಗ್ವಾಡಕರ್, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಭಾಷಾ ಶಾನ್ಯರ್, ಕಾರ್ಯದರ್ಶಿ ಸಂತೋಷ್ ತ್ಯಾಪ್ಲಿ, ಬಾಬು ಶ್ಯಾನೇರ್, ಅಭಿಷೇಕ್, ಶಿವು, ನಿಂಗಯ್ಯ ಸುಣದಕಲ್, ಯಲ್ಲಪ್ಪ ಸುಣದಕಲ್, ಶಿವರಾಜ ಮುಂಡರಗಿ, ಲಕ್ಷ್ಮಣ ಪರಪೂರ, ರಂಗನಾಥ, ಹನುಮಂತ, ನಾಗರಾಜ ಪರಪೂರ, ಅಮೀರ್ ಹುಸೇನ್ ಸೇರಿದಂತೆ ಹಲವರು ಹಾಗೂ ವಿದ್ಯಾರ್ಥಿಗಳಾದ ಅನೀತಾ, ಶಿಲ್ಪಾ, ರೇಷ್ಮಾ, ಸುನೀತಾ, ಬಂಧನ ವಾಜ, ಆಜಿಮಲಾಗಾ, ಹನುಮಂತ ಗಲಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ2
- ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ1
- ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.1
- ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ1
- ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ1