ಪಿ.ಜಿ.ಪಾಳ್ಯದ 38 ರೈತರಿಗೆ 30 ಲಕ್ಷ ರೂ. ಕೆಸಿಸಿ ಬೆಳೆ ಸಾಲ ವಿತರಣೆ ಹನೂರು: ಪಿ.ಜಿ.ಪಾಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2026-27ನೇ ಸಾಲಿನ ಕೆಸಿಸಿ ಬೆಳೆ ಸಾಲ ವಿತರಣಾ ಕಾರ್ಯಕ್ರಮ ಗುರುವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 38 ಫಲಾನುಭವಿ ರೈತರಿಗೆ 30 ಲಕ್ಷ ರೂ. ಮೊತ್ತದ ಬೆಳೆ ಸಾಲದ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಹಾಗೂ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್. ನರೇಂದ್ರ ಅವರು ಮಾತನಾಡಿ, "ಕೆಸಿಸಿ ಯೋಜನೆಯಡಿ ರೈತರಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಬೆಳೆ ಸಾಲ ಸಿಗುತ್ತದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಬಡ್ಡಿ ರಿಯಾಯಿತಿ ಸಹ ದೊರೆಯುತ್ತದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಸಹಕಾರ ಸಂಘಗಳು ರೈತರ ಬೆನ್ನೆಲುಬು, ರೈತರ ಅಭಿವೃದ್ಧಿಯೇ ನಮ್ಮ ಆದ್ಯತೆ" ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಿ.ಜಿ.ಪಾಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಮಹೇಶ್, ಎಂಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಅನಿಲ್ ಸೇರಿದಂತೆ ಫಲಾನುಭವಿ ರೈತರು ಉಪಸ್ಥಿತರಿದ್ದರು.
ಪಿ.ಜಿ.ಪಾಳ್ಯದ 38 ರೈತರಿಗೆ 30 ಲಕ್ಷ ರೂ. ಕೆಸಿಸಿ ಬೆಳೆ ಸಾಲ ವಿತರಣೆ ಹನೂರು: ಪಿ.ಜಿ.ಪಾಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2026-27ನೇ ಸಾಲಿನ ಕೆಸಿಸಿ ಬೆಳೆ ಸಾಲ ವಿತರಣಾ ಕಾರ್ಯಕ್ರಮ ಗುರುವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 38 ಫಲಾನುಭವಿ ರೈತರಿಗೆ 30 ಲಕ್ಷ ರೂ. ಮೊತ್ತದ ಬೆಳೆ ಸಾಲದ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಹಾಗೂ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್. ನರೇಂದ್ರ ಅವರು ಮಾತನಾಡಿ, "ಕೆಸಿಸಿ ಯೋಜನೆಯಡಿ ರೈತರಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಬೆಳೆ ಸಾಲ ಸಿಗುತ್ತದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಬಡ್ಡಿ ರಿಯಾಯಿತಿ ಸಹ ದೊರೆಯುತ್ತದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಸಹಕಾರ ಸಂಘಗಳು ರೈತರ ಬೆನ್ನೆಲುಬು, ರೈತರ ಅಭಿವೃದ್ಧಿಯೇ ನಮ್ಮ ಆದ್ಯತೆ" ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಿ.ಜಿ.ಪಾಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಮಹೇಶ್, ಎಂಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಅನಿಲ್ ಸೇರಿದಂತೆ ಫಲಾನುಭವಿ ರೈತರು ಉಪಸ್ಥಿತರಿದ್ದರು.
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- ಬಾಳೆಹೊನ್ನಿಗ ಗ್ರಾಮದಲ್ಲಿ ಬಾಳೆ ತೋಟಕ್ಕೆ ಕಾಡಾನೆಗಳ ಲಗ್ಗೆ ಮೂರು ಲಕ್ಷ ರೂ ನಷ್ಟ. ಮಳವಳ್ಳಿ: ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳು ಬಾಳೆಹೊನ್ನಿಗ ಗ್ರಾಮದ ಬಿ.ಕೆ.ಇಂದ್ರ ಮತ್ತು ಬಿ.ವಿ.ಕೃಷ್ಣಪ್ಪ ಎಂಬುವರಿಗೆ ಸೇರಿದ ಬಾಳೆ ತೋಟಕ್ಕೆ ಲಗ್ಗೆ ಇಟ್ಟು ಸುಮಾರು 400 ಪಸಲು ಭರಿತವಾದ ಬಾಳೆ ಗಿಡಗಳನ್ನು ಮುರಿದು ಅದರ ತಿರುಳನ್ನು ತಿಂದು ಸುಮಾರು ಮೂರು ಲಕ್ಷ ರೂ ನಷ್ಟ ಸಂಭವಿಸಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದ ಬಳಿ ನಡೆದಿದೆ ಮೂಲತಃ ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಮಾತನಾಡಿ, ನಮ್ಮಮಾವನವರಾದ ಬಿ.ವಿ.ಕೃಷ್ಣಪ್ಪ ಮತ್ತು ನನ್ನ ಪತ್ನಿಯಾದ ಬಿ.ಕೆ.ಇಂದ್ರರಾಜ್ ರವರು ಮೂರು ಎಕರೆ ಜಮೀನಿನಲ್ಲಿ ಸುಮಾರು 2,784 ಯಾಲಕ್ಕಿಬಾಳೆ ಗಿಡಗಳನ್ನು ಹಾಕಿ ರಾತ್ರಿ ಹಗಲು ಎನ್ನದೆ ವಿದ್ಯುತ್ ಕಣ್ಣಮುಚ್ಚಾಲೆ ಆಟದಲ್ಲಿ ಜಮೀನಿಗೆ ನೀರು ಹಾಯಿಸಿ ಪಸಲು ಬೆಳೆದಿದ್ದು, ಇನ್ನು ಎರಡು ತಿಂಗಳೊಳಗೆ ಬಾಳೆ ಗೊನೆಗಳನ್ನು ಕಟಾವ್ ಮಾಡಿ ಮಾರಾಟ ಮಾಡಬೇಕಾಗಿತ್ತು. ಆದರೆ ಸೋಮವಾರ ತಡರಾತ್ರಿ ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳ ಗುಂಪು ನಮ್ಮ ಬಾಳೆ ತೋಟಕ್ಕೆ ನುಗ್ಗಿ ಫಲ ಬಿಟ್ಟಿದ್ದ ಸುಮಾರು 400 ಬಾಳೆ ಗಿಡಗಳನ್ನು ಮುರಿದು ಅದರ ತಿರುಳನ್ನು ತಿಂದು ಬೆಳೆಯನ್ನು ನಾಶಪಡಿಸಿರುತ್ತವೆ. ಸಮಯಕ್ಕೆ ಸರಿಯಾಗಿ ರಾಮನಗರ ವ್ಯಾಪ್ತಿಯ 30ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಟಾಕಿ ಸಿಡಿಸಿ ಮತ್ತೆ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. ಇವರು ರಾತ್ರಿ ಬರದಿದ್ದರೆ ನಮ್ಮ ಬಾಳೆ ತೋಟ ಪೂರ್ತಿ ಕಾಡಾನೆ ಗಳುತುಳಿದು ನಾಶವಾಗುತ್ತಿತ್ತು. ಹಲಗೂರು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಸಮಯಕ್ಕೆ ಸ್ಥಳಕ್ಕೆ ಬರದಿರುವುದಕ್ಕೆರಾಜು ಬೇಸರ ವ್ಯಕ್ತಪಡಿಸಿದರು. ನಾವು ಬೆಳೆದ ಪಸಲುಗಳು ಕೈ ಸೇರುವ ಮುನ್ನವೇ ಕಾಡಾನೆಗಳ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ನಾಶವಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯವರು ಕಾಡಂಚಿನಲ್ಲಿ ಆನೆ ಕಂದಕಗಳನ್ನು ತೆಗೆಯುವುದರ ಮುಖಾಂತರ ಹಾಗೂ ರೈಲ್ವೆ ಕಂಬಿ ಬ್ಯಾರಿಕೇಟ್ ಹಾಗೂ ತೂಗುವ ಸೋಲಾರ್ ಬೇಲಿ ಅಳವಡಿಸಿ ಕಾಡು ಪ್ರಾಣಿಗಳು ಬರದಂತೆ ತಡೆಯುವ ನಿಟ್ಟಿನಲ್ಲಿ ರೈತರ ಬೆಳೆ ಉಳಿಸುವಂತೆ ಆಗ್ರಹಿಸಿ, ಸರ್ಕಾರದಿಂದ ನಮಗೆ ಕೊಡುವಪರಿಹಾರದ ಹಣ ಸಾಲುವುದಿಲ್ಲ ಸೂಕ್ತವಾಗಿ ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಸಿಬ್ಬಂದಿಯವರೆಗೆ ಮನವಿ ಪತ್ರ ಸಲ್ಲಿಸಿದ್ದಾರೆ.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ವಿಎಸ್ ದೊಡ್ಡಿ ಬಳಿ ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.2
- ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಪ್ರತಿಭಟನೆ ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಪ್ರತಿಭಟನೆ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ: ತಾಲೂಕಿನ ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್‌ಶೆಟ್ಟಿ ಬಣದ ತಾಲೂಕು ಘಟಕದ ನೇತೃತ್ವದಲ್ಲಿ ಗ್ರಾಮಸ್ಥರು ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ, ಅಬ್ಕಾರಿ ಇಲಾಖೆಯ ಉಪ ಆಯುಕ್ತ ಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಬೇಡ ಬೇಡ ಅನಧಿಕೃತ ಬಾರ್ ಅಂಗಡಿ ಬೇಡ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ ಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ, ಗ್ರಾಮದಲ್ಲಿ ಈಗಾಗಲೇ ಒಂದು ಮದ್ಯಂಗಡಿವಿದ್ದು, ಅಬ್ಕಾರಿ ಇಲಾಖೆ ಮತ್ತೊಂದು ಮದ್ಯಂಗಡಿ ತೆರೆಯಲು ಹೊರಟಿದ್ದಾರೆ. ಈಗಾಗಲೇ ಸುತ್ತ ಮುತ್ತಲಿನ ಗ್ರಾಮಸ್ಥರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ಈಗಾಗಲೇ ಇರುವ ಬಾರ್ ಅಂಗಡಿ ಸಾಕಾಗಿದೆ. ಮತ್ತೊಂದು ಮದ್ಯಂಗಡಿ ಏಕೆ ಬೇಕಿದೆ ? ಇದು ಒಂದು ದುರಂತವೇ ಸರಿ. ಅಧಿಕಾರಿಗಳು ಶಕ್ತಿ ಇದ್ದರೆ ಇನ್ನೊಂದು ಮದ್ಯಂಗಡಿ ತೆರೆಯಲಿ. ಜನರಿಗೆ ಆಸ್ಪತ್ರೆ, ಶಿಕ್ಷಣ ವ್ಯವಸ್ಥೆ, ಮೆಡಿಕಲ್ ವ್ಯವಸ್ಥೆ ಮಾಡಲಿ ಅದನ್ನು ಬಿಟ್ಟು ಒಂದೇ ಗ್ರಾಮದಲ್ಲಿ ಎರಡು ಬಾರ್‌ಗಳನ್ನು ತೆರೆಯಲು ಮುಂದಾಗಿರುವುದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಮತ್ತೊಂದು ಮತ್ತೊಂದು ಬಾರ್ ಅಂಗಡಿ ತೆರೆದರೆ ಜನರ ಗತಿಯೇನು ಆಗಬೇಕು. ನೂತನವಾಗಿ ಆರಂಭಿಸಲು ಹೊರಟಿರುವ ಬಾರ್ ಅಂಗಡಿ ದಾಖಲೆಗಳು ವ್ಯಾತ್ಯಾಸವಾಗಿರುತ್ತವೆ. ಅದನ್ನು ಪರಿಶೀಲಿಸಿ ನೂತನ ಬಾರ್ ಅಂಗಡಿಯನ್ನು ರದ್ದುಪಡಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ರಾಮಸಮುದ್ರ ಬಾಬು, ಉಮೇಶ, ಪ್ರಧಾನ ಕಾರ್ಯದರ್ಶಿ ಅರ್ಜುನ, ಕಾರ್ಮಿಕ ಅಧ್ಯಕ್ಷ ಹರೀಶ್ ನಾಯಕ, ಟೌನ್ ಅಧ್ಯಕ್ಷ ಅಫ್ನನ್, ಮಹೇಂದ್ರ, ರಿಜ್ವಾನ್, ಚಾಂದು, ಸಿದ್ದರಾಜು, ಅಬ್ದುಲ್‌ಮನಸಿಫ್, ಮೋಸಿನ್, ಸುಹೇಲ್ ಪಾಷ, ಕೇಶವಮೂರ್ತಿ, ಮೂಡಹೊಸಳ್ಳಿ ಗ್ರಾಮಸ್ಥರು, ಸ್ತ್ರೀಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.4
- ಮೈಕ್ರೋ ಗ್ರೀನ್ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್, ಸ್ಯಾಂಡ್‌ವಿಚ್, ಸೂಪ್ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು1
- ಗುಂಡ್ಲುಪೇಟೆ:ಬೊಮ್ಮಲಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆ. ಗುಂಡ್ಲುಪೇಟೆ : ತಾಲೂಕಿನ ಬೊಮ್ಮಲಾಪುರ ಗ್ರಾಮದ ವಿಶ್ವನಾಥ್ ಎಂಬುವವರ ಸೂರ್ಯಕಾಂತಿ ಜಮೀನಿನಲ್ಲಿ ಹುಲಿಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಹುಲಿ ಮೃತಪಟ್ಟಿರುವುದು ಹಲವು ದಿನಗಳ ಹಿಂದೆಯೇ ಎಂದು ಅಂದಾಜಿಸಲಾಗಿದ್ದು, ಮೃತದೇಹ ಕೊಳೆತು ನಶಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಮೀನಿನಲ್ಲಿ ಹುಲಿಯ ಮೃತದೇಹ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಸಾವಿಗೆ ನಿಖರ ಕಾರಣ ತಿಳಿಯಲು ಮೃತದೇಹದ ಅವಶೇಷಗಳನ್ನು ಪರೀಕ್ಷೆಗೆ ಕಳುಹಿಸಲಾಗುವುದು. ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.1
- ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಹೆಚ್ಚಾಗಿ ಬರಲು ಮುಂದಾದ ಯುವಕರು:ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ ಮಳವಳ್ಳಿ: ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಯುವಕರು ಹೆಚ್ಚಾಗಿ ಬರಲು ಮುಂದಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ ತಿಳಿಸಿದರು. ಮಳವಳ್ಳಿ ಪಟ್ಟಣದಲ್ಲಿ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಮ್ ಆದ್ಮಿ ಪಕ್ಷ ದೆಹಲಿ ಹಾಗೂ ಪಂಜಾಬ್ ನಲ್ಲಿ ಉತ್ತಮ ಅಧಿಕಾರ ನಡೆಸಿದ್ದು, ರಾಜ್ಯದ ಜನರು ಇಂತಹ ಅಧಿಕಾರವನ್ನು ಬಯಸುತ್ತಿದ್ದಾರೆ. ರಾಜಕೀಯ ಪಕ್ಷ ಬದಲಾಯಿಸುವ ಬದಲು ಜನರಿಗೆ ಅನುಕೂಲ ಮಾಡಬೇಕಾಗಿದೆ. ಇದಲ್ಲದೆ ಚುನಾವಣೆಯಲ್ಲಿ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವ ಹೊಣೆ ನಮ್ಮ ಜನರಿದ್ದಾಗಿದೆ ಎಂದರು. ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಸಂಘಟನೆ ಮಾಡಲು ಹೊರಟಿದೆ. ಎಂದರು. ಈ ವೇಳೆ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜೀಪ್ ಸಹಾನಿ, ಮಂಡ್ಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಾಸೀಮ್, ರಾಷ್ಟ್ರೀಯ ಸಂವಿಧಾನ ಪರ ವಿಚಾರ ವೇದಿಕೆ ಅಧ್ಯಕ್ಷ ಕೃಷ್ಣಕುಮಾರ ಸೇರಿದಂತೆ ಹಲವರು ಇದ್ದರು.1