Shuru
Apke Nagar Ki App…
ಶಾಲಾ ಬಸ್‌ಗೆ ಸಿಲುಕಿ ನಾಲ್ಕು ವರ್ಷದ ಬಾಲಕಿ ದುರ್ಮರಣ:ಮುಗಿಲು ಮುಟ್ಟಿದಕುಟುಂಬಸ್ಥರ ಆಕ್ರಂದನ ದಾವಣಗೆರೆ : ಮನೆಗೆ ವಾಪಾಸ್ ಹೋಗುತ್ತಿದ್ದ ವೇಳೆ ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ನಾಲ್ಕು ವರ್ಷದ ಪುಟ್ಟ ಮಗುವೊಂದು ಮೃತಪಟ್ಟಿರುವ ಘಟನೆ ಲೋಕಿಕೆರೆಯ ಎಲ್ಲಮ್ಮ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೃಂದಾ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ಮಾಹಿತಿಯ ಪ್ರಕಾರ, ಶಾಲಾ ಬಸ್‌ನಿಂದ ಇಳಿದು ಮನೆಗೆ ತೆರಳುತ್ತಿದ್ದ ವೇಳೆ, ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ. ಪುಟ್ಟ ಕಂದಮ್ಮನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಇನ್ನೂ, ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.ಈ ಘಟನೆ ಮತ್ತೊಮ್ಮೆ ಶಾಲಾ ಬಸ್ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ.
Nandheesh kumar ac
ಶಾಲಾ ಬಸ್‌ಗೆ ಸಿಲುಕಿ ನಾಲ್ಕು ವರ್ಷದ ಬಾಲಕಿ ದುರ್ಮರಣ:ಮುಗಿಲು ಮುಟ್ಟಿದಕುಟುಂಬಸ್ಥರ ಆಕ್ರಂದನ ದಾವಣಗೆರೆ : ಮನೆಗೆ ವಾಪಾಸ್ ಹೋಗುತ್ತಿದ್ದ ವೇಳೆ ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ನಾಲ್ಕು ವರ್ಷದ ಪುಟ್ಟ ಮಗುವೊಂದು ಮೃತಪಟ್ಟಿರುವ ಘಟನೆ ಲೋಕಿಕೆರೆಯ ಎಲ್ಲಮ್ಮ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೃಂದಾ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ಮಾಹಿತಿಯ ಪ್ರಕಾರ, ಶಾಲಾ ಬಸ್‌ನಿಂದ ಇಳಿದು ಮನೆಗೆ ತೆರಳುತ್ತಿದ್ದ ವೇಳೆ, ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ. ಪುಟ್ಟ ಕಂದಮ್ಮನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಇನ್ನೂ, ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.ಈ ಘಟನೆ ಮತ್ತೊಮ್ಮೆ ಶಾಲಾ ಬಸ್ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ.
More news from ಕರ್ನಾಟಕ and nearby areas
- ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್* -ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. *ಪಕ್ಷದ ಗಣ್ಯಾತಿ ಗಣ್ಯರು ಭಾಗಿ*- ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.1
- ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur1
- ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ, ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.1
- ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್1
- ಕೂಡ್ಲಿಗಿ : " ಸಂಘಟನಾ ಸೃಜನ ಅಭಿಯಾನ " ಪಕ್ಷದ ಗಣ್ಯಾತಿ ಗಣ್ಯರು ಭಾಗಿ- ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : " ಸಂಘಟನಾ ಸೃಜನ ಅಭಿಯಾನ " ಪಕ್ಷದ ಗಣ್ಯಾತಿ ಗಣ್ಯರು ಭಾಗಿ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ , ಸಂಘಟನೆ ಸೃಜನ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಟಿಟಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಯಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ರವರು , ಪಟ್ಟಣಕ್ಕೆ ಆಗಮಿಸಿ ಸಭೆಯಲ್ಲಿ ಭಾಗವಹಿಸಿದ್ದರು. ವೇಣುಗೋಪಾಲರವರನ್ನು , ಹಾಗೂ ಅವರೊಟ್ಟಿಗೆ ಆಗಮಿಸಿದ್ದ ಪಕ್ಷದ ಹಿರಿಯರನ್ನು ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹೂ ಗುಚ್ಚ ನೀಡಿ ಆತ್ಮೀಯತೆಯಿಂದ ಬರಮಾಡಿಕೊಂಡರು. ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..1
- "ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು." -ರಾಘವ್ ಚಡ್ಡಾ1
- Post by YSRmedia vijayanagaraupsates1