logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್ ನಿವಾಸಿ ವಿನೋದಕುಮಾರ ಅವರ ಪುತ್ರಿ ಸಿರಿ ಪಾರವತಿನೇನಿ ಅವರು ಅಂತರರಾಷ್ಟ್ರೀಯ ಮಟ್ಟದ ನಾಲ್ಕನೇ ಎಫ್‌ಪಿಜಿ ವಿಶ್ವವಿದ್ಯಾಲಯಗಳ ಎಸ್‌ಡಿಜಿಗಳ ಇಂಗ್ಲಿಷ್ ಫೋರ್ ಫ್ರೇಮ್ ಕಾಮಿಕ್ಸ್ ಸ್ಕ್ರಿಪ್ಟ್ ಸ್ಪರ್ಧೆ-2026ರಲ್ಲಿ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಡಿಸೈನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಿರಿ, "ಜಸ್ಟ್ ಒನ್ ಚಾಯಿಸ್" ಎಂಬ ಶೀರ್ಷಿಕೆಯ ಕಾಮಿಕ್ಸ್ ಕೃತಿಯ ಮೂಲಕ ಈ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಒಂದಾದ ಎಸ್‌ಡಿಜಿ-12 (ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ) ವಿಷಯವನ್ನು ಆಧರಿಸಿ ರಚಿಸಲಾದ ಈ ಕಾಮಿಕ್ಸ್, ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳು ಹಾಗೂ ಪರಿಸರ ಸ್ನೇಹಿ ಆಯ್ಕೆಗಳ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿದೆ ಎಂದು ಹೇಳಲಾಗಿದೆ. ತೈವಾನ್‌ನ ಮಿಂಗ್ ಚಿ ತಂತ್ರಜ್ಞಾನ ವಿಶ್ವವಿದ್ಯಾಲಯ ಹಾಗೂ ಚಾಂಗ್ ಗುಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ಜಂಟಿಯಾಗಿ ಆಯೋಜಿಸಿದ್ದ ಈ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಸಿರಿಯವರ ಸೃಜನಶೀಲತೆ, ಸಾಮಾಜಿಕ ಕಾಳಜಿ ಹಾಗೂ ಪರಿಸರ ಜಾಗೃತಿ ಮೂಡಿಸುವ ಸಂದೇಶಕ್ಕೆ ತೀರ್ಪುಗಾರರಿಂದ ವಿಶೇಷ ಮೆಚ್ಚುಗೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆಯಲ್ಲೂ ಭಾಗವಹಿಸಲು ಸಿರಿ ಸಿದ್ಧತೆ ನಡೆಸುತ್ತಿದ್ದು, ಮತ್ತಷ್ಟು ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 hrs ago
user_ಬಸವರಾಜ ಭೋಗಾವತಿ
ಬಸವರಾಜ ಭೋಗಾವತಿ
Local News Reporter ಮಾನ್ವಿ, ರಾಯಚೂರು, ಕರ್ನಾಟಕ•
2 hrs ago
3c1f52b6-8b92-4e76-8bd8-488aa8acf99c

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್ ನಿವಾಸಿ ವಿನೋದಕುಮಾರ ಅವರ ಪುತ್ರಿ ಸಿರಿ ಪಾರವತಿನೇನಿ ಅವರು ಅಂತರರಾಷ್ಟ್ರೀಯ ಮಟ್ಟದ ನಾಲ್ಕನೇ ಎಫ್‌ಪಿಜಿ ವಿಶ್ವವಿದ್ಯಾಲಯಗಳ ಎಸ್‌ಡಿಜಿಗಳ ಇಂಗ್ಲಿಷ್ ಫೋರ್ ಫ್ರೇಮ್ ಕಾಮಿಕ್ಸ್ ಸ್ಕ್ರಿಪ್ಟ್ ಸ್ಪರ್ಧೆ-2026ರಲ್ಲಿ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಡಿಸೈನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಿರಿ, "ಜಸ್ಟ್ ಒನ್ ಚಾಯಿಸ್" ಎಂಬ ಶೀರ್ಷಿಕೆಯ ಕಾಮಿಕ್ಸ್ ಕೃತಿಯ ಮೂಲಕ ಈ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಒಂದಾದ ಎಸ್‌ಡಿಜಿ-12 (ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ) ವಿಷಯವನ್ನು ಆಧರಿಸಿ ರಚಿಸಲಾದ ಈ ಕಾಮಿಕ್ಸ್, ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳು ಹಾಗೂ ಪರಿಸರ ಸ್ನೇಹಿ ಆಯ್ಕೆಗಳ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿದೆ ಎಂದು ಹೇಳಲಾಗಿದೆ. ತೈವಾನ್‌ನ ಮಿಂಗ್ ಚಿ ತಂತ್ರಜ್ಞಾನ ವಿಶ್ವವಿದ್ಯಾಲಯ ಹಾಗೂ ಚಾಂಗ್ ಗುಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ಜಂಟಿಯಾಗಿ ಆಯೋಜಿಸಿದ್ದ ಈ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಸಿರಿಯವರ ಸೃಜನಶೀಲತೆ, ಸಾಮಾಜಿಕ ಕಾಳಜಿ ಹಾಗೂ ಪರಿಸರ ಜಾಗೃತಿ ಮೂಡಿಸುವ ಸಂದೇಶಕ್ಕೆ ತೀರ್ಪುಗಾರರಿಂದ ವಿಶೇಷ ಮೆಚ್ಚುಗೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆಯಲ್ಲೂ ಭಾಗವಹಿಸಲು ಸಿರಿ ಸಿದ್ಧತೆ ನಡೆಸುತ್ತಿದ್ದು, ಮತ್ತಷ್ಟು ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಮಾನ್ವಿಯ ಮೌನ ಮಿತ್ರ ಯೋಗ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ 21 ದಿನಗಳ ಯೋಗ ಶಿಬಿರದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಯಿತು.
    2
    ಮಾನ್ವಿಯ ಮೌನ ಮಿತ್ರ ಯೋಗ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ 21 ದಿನಗಳ ಯೋಗ ಶಿಬಿರದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಯಿತು.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    2 hrs ago
  • ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ಸಂಬಂಧ ಜಾಲಹಳ್ಳಿ ಪಿಎಸ್‌ಐ ವೈಶಾಲಿ ಮೇಡಂ ಅವರು ಸ್ಥಳೀಯವಾಗಿ ಇಲ್ಲದ ಕೆಲವು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ದೇವದುರ್ಗ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ. ಗಲಾಟೆ ನಡೆದ ಸಮಯದಲ್ಲಿ ಗ್ರಾಮದಲ್ಲಿ ಹಾಜರಿಲ್ಲದ, ಬದಲಿಗೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಒಬ್ಬರ ಮೇಲೆ ಒಬ್ಬರು ಪ್ರಕರಣ ದಾಖಲಿಸಲು ಮುಂದಾದಾಗ ಪಿಎಸ್‌ಐ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
    1
    ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ಸಂಬಂಧ ಜಾಲಹಳ್ಳಿ ಪಿಎಸ್‌ಐ ವೈಶಾಲಿ ಮೇಡಂ ಅವರು ಸ್ಥಳೀಯವಾಗಿ ಇಲ್ಲದ ಕೆಲವು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ದೇವದುರ್ಗ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಗಲಾಟೆ ನಡೆದ ಸಮಯದಲ್ಲಿ ಗ್ರಾಮದಲ್ಲಿ ಹಾಜರಿಲ್ಲದ, ಬದಲಿಗೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಒಬ್ಬರ ಮೇಲೆ ಒಬ್ಬರು ಪ್ರಕರಣ ದಾಖಲಿಸಲು ಮುಂದಾದಾಗ ಪಿಎಸ್‌ಐ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    18 hrs ago
  • ಉಪಲೋಕಾಯುಕ್ತ ಕೆ.ಎನ್‌.ಫಣೀಂದ್ರ ಅವರು ಶುಕ್ರವಾರ ಯಾದಗಿರಿ ನಗರಕ್ಕೆ ದಿಢೀರ್ ಭೇಟಿ ನೀಡಿ ಹಳೆ ಬಸ್ ನಿಲ್ದಾಣ ಮತ್ತು ಚರಂಡಿ ನೀರು ಸೇರುವ ಹಳ್ಳದ ಪ್ರದೇಶಗಳನ್ನು ಪರಿಶೀಲಿಸಿದರು. ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಕೊರತೆ ಕಂಡುಬಂದಾಗ, ಅವರು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಡಿಸಿ ಅವರನ್ನು ತರಾಟೆಗೆ ತೆಗೆದುಕೊಂಡು, “ನಿಮ್ಮ ಮನೆ ಇದ್ದರೆ ಹೀಗೆ ಇಡುತ್ತಿದ್ದಿರಾ?” ಎಂದು ಪ್ರಶ್ನಿಸಿದರು. ಇದೇ ಸಂದರ್ಭದಲ್ಲಿ, ಓರ್ವ ಮಹಿಳೆ ನೀರಿನ ಸಮಸ್ಯೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ನಂತರ, ಹಳ್ಳದ ಪ್ರದೇಶವನ್ನು ವೀಕ್ಷಿಸಿದ ಉಪಲೋಕಾಯುಕ್ತರು, ಚರಂಡಿ ನೀರು ಹಳ್ಳಕ್ಕೆ ಸೇರದಂತೆ ತಡೆಯಲು ನಗರಸಭೆ ಪೌರಾಯುಕ್ತ ಉಮೇಶ್ ಚವ್ಹಾಣ ಅವರಿಗೆ ಸೂಚನೆ ನೀಡಿದರು ಮತ್ತು ಮೈಸೂರು ಮಾದರಿಯನ್ನು ಅಧ್ಯಯನ ಮಾಡುವಂತೆ ಬುದ್ದಿಮಾತು ಹೇಳಿದರು. ಇದಲ್ಲದೆ, ನಗರದ ಬೋರ್‌ವೆಲ್ ನೀರನ್ನು ಪರೀಕ್ಷಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
    1
    ಉಪಲೋಕಾಯುಕ್ತ ಕೆ.ಎನ್‌.ಫಣೀಂದ್ರ ಅವರು ಶುಕ್ರವಾರ ಯಾದಗಿರಿ ನಗರಕ್ಕೆ ದಿಢೀರ್ ಭೇಟಿ ನೀಡಿ ಹಳೆ ಬಸ್ ನಿಲ್ದಾಣ ಮತ್ತು ಚರಂಡಿ ನೀರು ಸೇರುವ ಹಳ್ಳದ ಪ್ರದೇಶಗಳನ್ನು ಪರಿಶೀಲಿಸಿದರು.

ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಕೊರತೆ ಕಂಡುಬಂದಾಗ, ಅವರು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಡಿಸಿ ಅವರನ್ನು ತರಾಟೆಗೆ ತೆಗೆದುಕೊಂಡು, “ನಿಮ್ಮ ಮನೆ ಇದ್ದರೆ ಹೀಗೆ ಇಡುತ್ತಿದ್ದಿರಾ?” ಎಂದು ಪ್ರಶ್ನಿಸಿದರು. ಇದೇ ಸಂದರ್ಭದಲ್ಲಿ, ಓರ್ವ ಮಹಿಳೆ ನೀರಿನ ಸಮಸ್ಯೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು.

ನಂತರ, ಹಳ್ಳದ ಪ್ರದೇಶವನ್ನು ವೀಕ್ಷಿಸಿದ ಉಪಲೋಕಾಯುಕ್ತರು, ಚರಂಡಿ ನೀರು ಹಳ್ಳಕ್ಕೆ ಸೇರದಂತೆ ತಡೆಯಲು ನಗರಸಭೆ ಪೌರಾಯುಕ್ತ ಉಮೇಶ್ ಚವ್ಹಾಣ ಅವರಿಗೆ ಸೂಚನೆ ನೀಡಿದರು ಮತ್ತು ಮೈಸೂರು ಮಾದರಿಯನ್ನು ಅಧ್ಯಯನ ಮಾಡುವಂತೆ ಬುದ್ದಿಮಾತು ಹೇಳಿದರು. ಇದಲ್ಲದೆ, ನಗರದ ಬೋರ್‌ವೆಲ್ ನೀರನ್ನು ಪರೀಕ್ಷಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    17 hrs ago
  • ಕುಷ್ಟಗಿ ನಗರದಲ್ಲಿ ಬಹುನಿರೀಕ್ಷಿತ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಕ್ರಿಕೆಟ್ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ನಾಳೆ ರವಿವಾರದಂದು ನಡೆಯುವ ಈ ಪಂದ್ಯವನ್ನು ಮಾಜಿ ಶಾಸಕರಾದ ಹಸನ ಸಾಬ್ ದೋಟಿಹಾಳ್ ಅವರ ಬಸ್ ಸ್ಟ್ಯಾಂಡ್ ಪಕ್ಕದ ಜಾಗದಲ್ಲಿ ಅಳವಡಿಸಲಾಗಿರುವ ದೊಡ್ಡ ಎಲ್ಇಡಿ ಪರದೆಯ ಮೂಲಕ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ. ದೊಡ್ಡ ಬಸವನಗೌಡ ಪಾಟೀಲ್, ಲಾಡ್ಲೆ ಮಶಾಕ್ ದೋಟಿಹಾಳ್ ಹಾಗೂ ಅವರ ಸ್ನೇಹಿತರು ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಉದ್ಯಮಿಗಳು ಹಾಗೂ ಎಸ್‌ಆರ್‌ಕೆ ಬ್ಯಾಂಕ್ ಅಧ್ಯಕ್ಷರಾದ ಉಮೇಶ್ ಮಂಗಳೂರು ಅವರು ಆರ್‌ಸಿಬಿ ಅಭಿಮಾನಿಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯವನ್ನು ವೀಕ್ಷಿಸಬೇಕೆಂದು ಮನವಿ ಮಾಡಿದ್ದಾರೆ.
    1
    ಕುಷ್ಟಗಿ ನಗರದಲ್ಲಿ ಬಹುನಿರೀಕ್ಷಿತ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಕ್ರಿಕೆಟ್ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ನಾಳೆ ರವಿವಾರದಂದು ನಡೆಯುವ ಈ ಪಂದ್ಯವನ್ನು ಮಾಜಿ ಶಾಸಕರಾದ ಹಸನ ಸಾಬ್ ದೋಟಿಹಾಳ್ ಅವರ ಬಸ್ ಸ್ಟ್ಯಾಂಡ್ ಪಕ್ಕದ ಜಾಗದಲ್ಲಿ ಅಳವಡಿಸಲಾಗಿರುವ ದೊಡ್ಡ ಎಲ್ಇಡಿ ಪರದೆಯ ಮೂಲಕ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ.

ದೊಡ್ಡ ಬಸವನಗೌಡ ಪಾಟೀಲ್, ಲಾಡ್ಲೆ ಮಶಾಕ್ ದೋಟಿಹಾಳ್ ಹಾಗೂ ಅವರ ಸ್ನೇಹಿತರು ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಉದ್ಯಮಿಗಳು ಹಾಗೂ ಎಸ್‌ಆರ್‌ಕೆ ಬ್ಯಾಂಕ್ ಅಧ್ಯಕ್ಷರಾದ ಉಮೇಶ್ ಮಂಗಳೂರು ಅವರು ಆರ್‌ಸಿಬಿ ಅಭಿಮಾನಿಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯವನ್ನು ವೀಕ್ಷಿಸಬೇಕೆಂದು ಮನವಿ ಮಾಡಿದ್ದಾರೆ.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    10 hrs ago
  • ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    1
    ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಾಗರಬೆಟ್ಟ ಗ್ರಾಮದ ದಲಿತ ಯುವಕ ರವಿಚಂದ್ರ ಮಾದರ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸಿ, ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ದಲಿತ ಸಂಘಟನೆಗಳ ಪದಾಧಿಕಾರಿಗಳು ತಾಳಿಕೋಟಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು. ಜೂನ್ 1 ರಂದು ನಡೆಸಲಿರುವ ಪ್ರತಿಭಟನಾ ಮೆರವಣಿಗೆಯ ಕುರಿತು ಈ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಈ ಅಮಾನುಷ ಹತ್ಯೆಯನ್ನು ಮಾಡಿದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ನೀಡುವಂತಾಗಲು ಎಲ್ಲ ದಲಿತ ಸಂಘಟನೆಗಳು ಒಂದಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಜೂನ್ 1 ರಂದು ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಟನೆಗೆ ಎಲ್ಲರ ಸಹಕಾರ ಇರಬೇಕು ಎಂದು ಅವರು ಮನವಿ ಮಾಡಿದರು. ಡಿಎಸ್ಎಸ್ (ನಾಗವಾರ ಬಣ) ಬೆಳಗಾಂವಿ ವಿಭಾಗದ ಸಂಚಾಲಕ ದೇವೇಂದ್ರ ಹಾದಿಮನಿ ಅವರು, ಈ ಬರ್ಬರ ಹತ್ಯೆಯನ್ನು ನಡೆಸಿದ ಕೊಲೆಗೆಡಕರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ, ನೊಂದ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ ಎಂದು ಆಗ್ರಹಿಸಿದರು. ಇದಕ್ಕಾಗಿ ಸರ್ಕಾರದ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಟ ನಡೆಸೋಣ ಎಂದು ಅವರು ಕರೆ ನೀಡಿದರು. ಡಿ.ಎಸ್.ಎಸ್. ಅಂಬೇಡ್ಕರ್ ಧ್ವನಿ (ಚಂದ್ರಕಾಂತ್ ಕಾದ್ರೊಳ್ಳಿ ಬಣ)ದ ತಾಲೂಕಾಧ್ಯಕ್ಷ ರಮೇಶ ದೊಡಮನಿ (ಸಾಸನೂರ) ಮಾತನಾಡಿ, ಇದೊಂದು ಅತ್ಯಂತ ಅಮಾನವೀಯವಾದ ಕೊಲೆ ಘಟನೆಯಾಗಿದ್ದು, ಇದನ್ನು ಜಾತಿ ಮತ ಭೇದವಿಲ್ಲದೆ ಎಲ್ಲರೂ ಖಂಡಿಸಬೇಕಾಗಿದೆ ಎಂದು ಹೇಳಿದರು. ಆದ್ದರಿಂದ ಜೂನ್ 1 ರಂದು ನಡೆಯಲಿರುವ ಪ್ರತಿಭಟನೆಗೆ ಪಟ್ಟಣದ ಎಲ್ಲ ಬಾಂಧವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಅಂಬೇಡ್ಕರ್ ಸೇನೆ ತಾಲೂಕ ಘಟಕದ ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ ಅವರು ಕಾರ್ಯಕ್ರಮದ ರೂಪ-ರೇಷೆ ಕುರಿತು ವಿವರಿಸಿದರು. ಸಭೆಯಲ್ಲಿ ಅಂಬೇಡ್ಕರ್ ಸೇನೆ ತಾಲೂಕ ಘಟಕದ ಖಜಾಂಚಿ ಪರಶುರಾಮ ತಳವಾರ, ಹಾಗೂ ಗಣ್ಯರಾದ ಯಮನಪ್ಪ ಕಟ್ಟಿಮನಿ, ಹುಲಿಗೆಪ್ಪ ಕಟ್ಟಿಮನಿ, ದ್ಯಾಮಣ್ಣ ಸೋಮನಾಳ, ರಮೇಶ ಮಾದರ, ದೇವಪ್ಪ ತುಂಬಗಿ ಮಾದರ, ಶಂಕ್ರಪ್ಪ ದೊಡ್ಡಮನಿ, ಅಯ್ಯಪ್ಪ ಸಾಹಸನೂರ, ನಿಂಗಪ್ಪ ಮಾದರ, ಬಸವರಾಜ ಸಾಸನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಾಗರಬೆಟ್ಟ ಗ್ರಾಮದ ದಲಿತ ಯುವಕ ರವಿಚಂದ್ರ ಮಾದರ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸಿ, ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ದಲಿತ ಸಂಘಟನೆಗಳ ಪದಾಧಿಕಾರಿಗಳು ತಾಳಿಕೋಟಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು. ಜೂನ್ 1 ರಂದು ನಡೆಸಲಿರುವ ಪ್ರತಿಭಟನಾ ಮೆರವಣಿಗೆಯ ಕುರಿತು ಈ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಈ ಅಮಾನುಷ ಹತ್ಯೆಯನ್ನು ಮಾಡಿದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ನೀಡುವಂತಾಗಲು ಎಲ್ಲ ದಲಿತ ಸಂಘಟನೆಗಳು ಒಂದಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಜೂನ್ 1 ರಂದು ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಟನೆಗೆ ಎಲ್ಲರ ಸಹಕಾರ ಇರಬೇಕು ಎಂದು ಅವರು ಮನವಿ ಮಾಡಿದರು. ಡಿಎಸ್ಎಸ್ (ನಾಗವಾರ ಬಣ) ಬೆಳಗಾಂವಿ ವಿಭಾಗದ ಸಂಚಾಲಕ ದೇವೇಂದ್ರ ಹಾದಿಮನಿ ಅವರು, ಈ ಬರ್ಬರ ಹತ್ಯೆಯನ್ನು ನಡೆಸಿದ ಕೊಲೆಗೆಡಕರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ, ನೊಂದ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ ಎಂದು ಆಗ್ರಹಿಸಿದರು. ಇದಕ್ಕಾಗಿ ಸರ್ಕಾರದ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಟ ನಡೆಸೋಣ ಎಂದು ಅವರು ಕರೆ ನೀಡಿದರು.

ಡಿ.ಎಸ್.ಎಸ್. ಅಂಬೇಡ್ಕರ್ ಧ್ವನಿ (ಚಂದ್ರಕಾಂತ್ ಕಾದ್ರೊಳ್ಳಿ ಬಣ)ದ ತಾಲೂಕಾಧ್ಯಕ್ಷ ರಮೇಶ ದೊಡಮನಿ (ಸಾಸನೂರ) ಮಾತನಾಡಿ, ಇದೊಂದು ಅತ್ಯಂತ ಅಮಾನವೀಯವಾದ ಕೊಲೆ ಘಟನೆಯಾಗಿದ್ದು, ಇದನ್ನು ಜಾತಿ ಮತ ಭೇದವಿಲ್ಲದೆ ಎಲ್ಲರೂ ಖಂಡಿಸಬೇಕಾಗಿದೆ ಎಂದು ಹೇಳಿದರು. ಆದ್ದರಿಂದ ಜೂನ್ 1 ರಂದು ನಡೆಯಲಿರುವ ಪ್ರತಿಭಟನೆಗೆ ಪಟ್ಟಣದ ಎಲ್ಲ ಬಾಂಧವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಅಂಬೇಡ್ಕರ್ ಸೇನೆ ತಾಲೂಕ ಘಟಕದ ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ ಅವರು ಕಾರ್ಯಕ್ರಮದ ರೂಪ-ರೇಷೆ ಕುರಿತು ವಿವರಿಸಿದರು. ಸಭೆಯಲ್ಲಿ ಅಂಬೇಡ್ಕರ್ ಸೇನೆ ತಾಲೂಕ ಘಟಕದ ಖಜಾಂಚಿ ಪರಶುರಾಮ ತಳವಾರ, ಹಾಗೂ ಗಣ್ಯರಾದ ಯಮನಪ್ಪ ಕಟ್ಟಿಮನಿ, ಹುಲಿಗೆಪ್ಪ ಕಟ್ಟಿಮನಿ, ದ್ಯಾಮಣ್ಣ ಸೋಮನಾಳ, ರಮೇಶ ಮಾದರ, ದೇವಪ್ಪ ತುಂಬಗಿ ಮಾದರ, ಶಂಕ್ರಪ್ಪ ದೊಡ್ಡಮನಿ, ಅಯ್ಯಪ್ಪ ಸಾಹಸನೂರ, ನಿಂಗಪ್ಪ ಮಾದರ, ಬಸವರಾಜ ಸಾಸನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    1 day ago
  • ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಲಭಿಸಲಿ ಎಂದು ಯಾದಗಿರಿ ನಗರದ ರಾಘವೇಂದ್ರ ಬಡಾವಣೆಯಲ್ಲಿರುವ ಶ್ರೀ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಪೂಜೆಯನ್ನು ಶ್ರೀ ಶರಣಪ್ಪ ಮಾನೇಗಾರ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅನಿಲಕುಮಾರ್ ಹೆಡಗಿಮುದ್ರಾ ಮತ್ತು ವಿರೇಶ್ ಸಜ್ಜನ್ ಸೇರಿದಂತೆ ಹಲವು ಅಭಿಮಾನಿಗಳು ಉಪಸ್ಥಿತರಿದ್ದರು.
    1
    ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಲಭಿಸಲಿ ಎಂದು ಯಾದಗಿರಿ ನಗರದ ರಾಘವೇಂದ್ರ ಬಡಾವಣೆಯಲ್ಲಿರುವ ಶ್ರೀ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಪೂಜೆಯನ್ನು ಶ್ರೀ ಶರಣಪ್ಪ ಮಾನೇಗಾರ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿತ್ತು. 

ಈ ಸಂದರ್ಭದಲ್ಲಿ ಅನಿಲಕುಮಾರ್ ಹೆಡಗಿಮುದ್ರಾ ಮತ್ತು ವಿರೇಶ್ ಸಜ್ಜನ್ ಸೇರಿದಂತೆ ಹಲವು ಅಭಿಮಾನಿಗಳು ಉಪಸ್ಥಿತರಿದ್ದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    17 hrs ago
  • ಜೂನ್ 30, 2026 ರ ಸಾಯಂಕಾಲ 4:20 ರಿಂದ 5:05 ರವರೆಗೆ, ಹುಣಸಗಿ ನಾರಾಯಣಪುರ ಮುಖ್ಯ ರಸ್ತೆಯ ರಾಜಕೊಳ್ಳೂರು ಭಾಗದಲ್ಲಿ ಜೋರಾದ ಗಾಳಿ, ಗುಡುಗು ಮತ್ತು ಆಣೆಕಲ್ಲು ಮಳೆಯ ಪರಿಣಾಮವಾಗಿ ಒಂದು ಮರ ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಮಳೆ ನಿಂತ ಕೆಲವೇ ನಿಮಿಷಗಳಲ್ಲಿ, ಸ್ಥಳೀಯ ಅಧಿಕಾರಿಗಳು ಜೆಸಿಬಿ ಬಳಸಿ ಮರವನ್ನು ತೆರವುಗೊಳಿಸಿ, ರಸ್ತೆಯಲ್ಲಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.
    3
    ಜೂನ್ 30, 2026 ರ ಸಾಯಂಕಾಲ 4:20 ರಿಂದ 5:05 ರವರೆಗೆ, ಹುಣಸಗಿ ನಾರಾಯಣಪುರ ಮುಖ್ಯ ರಸ್ತೆಯ ರಾಜಕೊಳ್ಳೂರು ಭಾಗದಲ್ಲಿ ಜೋರಾದ ಗಾಳಿ, ಗುಡುಗು ಮತ್ತು ಆಣೆಕಲ್ಲು ಮಳೆಯ ಪರಿಣಾಮವಾಗಿ ಒಂದು ಮರ ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಮಳೆ ನಿಂತ ಕೆಲವೇ ನಿಮಿಷಗಳಲ್ಲಿ, ಸ್ಥಳೀಯ ಅಧಿಕಾರಿಗಳು ಜೆಸಿಬಿ ಬಳಸಿ ಮರವನ್ನು ತೆರವುಗೊಳಿಸಿ, ರಸ್ತೆಯಲ್ಲಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.
    user_ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    Electrician ಹುಣಸಗಿ, ಯಾದಗಿರಿ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.