logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಲಿಷ್ಠ ಸಂಘಟನೆಗೆ ಬಲವಾದ ನಾಯಕತ್ವ: ಎಐಸಿಸಿ ವೀಕ್ಷಕ ವೇಣುಗೋಪಾಲ್ ರಾವ್ ಕೂಡ್ಲಿಗಿ: ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ ಎಐಸಿಸಿ ನೇತೃತ್ವದಲ್ಲಿ ನಡೆಯುತ್ತಿರುವ ಸಂಘಟನ ಸೃಜನ್ ಅಭಿಯಾನ ಅಂಗವಾಗಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಸಭೆಯಲ್ಲಿ ಎಐಸಿಸಿ ವೀಕ್ಷಕ ವೇಣುಗೋಪಾಲ್ ರಾವ್ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ತೆಲಂಗಾಣ ರಾಜ್ಯದ ಸಲಹೆಗಾರರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಕೋಆರ್ಡಿನೇಟರ್‌ಗಳು ಆಗಮಿಸಿದ್ದು, ಅವರನ್ನು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ. ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಶ್ರೀನಿವಾಸ್ ಎನ್.ಟಿ. ಅವರು, *"ಬಲಿಷ್ಠ ಸಂಘಟನೆಯೇ ಕಾಂಗ್ರೆಸ್ ಪಕ್ಷದ ಅತಿದೊಡ್ಡ ಶಕ್ತಿ. ಸಮರ್ಥ, ಸಮನ್ವಯದ ಹಾಗೂ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗಬಲ್ಲ ನಾಯಕತ್ವ ಸಂಘಟನೆಗೆ ಹೊಸ ಚೈತನ್ಯ ತುಂಬುತ್ತದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಹಿರಿಯ ಮುಖಂಡರ ಅಭಿಪ್ರಾಯಕ್ಕೆ ಎಐಸಿಸಿ ಮಹತ್ವ ನೀಡುತ್ತಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಹಾಗೂ ಸಂಘಟನಾ ಬದ್ಧತೆಗೆ ಸಾಕ್ಷಿಯಾಗಿದೆ"* ಎಂದು ಹೇಳಿದರು. ಅಲ್ಲದೆ, ಸಂಘಟನೆ ಇನ್ನಷ್ಟು ಸದೃಢಗೊಳ್ಳಬೇಕಾದರೆ ಅನುಭವ, ಸಾಮರ್ಥ್ಯ ಹಾಗೂ ಪಕ್ಷದ ಸಿದ್ಧಾಂತಗಳಿಗೆ ಬದ್ಧತೆಯಿರುವ ನಾಯಕತ್ವ ಹೊರಹೊಮ್ಮಬೇಕು. ಅಂತಹ ನಾಯಕತ್ವದ ಆಯ್ಕೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಮತ್ತಷ್ಟು ಬಲಪಡಿಸುವ ಗುರಿಯನ್ನು *'ಸಂಘಟನ ಸೃಜನ್ ಅಭಿಯಾನ'* ಹೊಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ತಮ್ಮ ಅಮೂಲ್ಯ ಅಭಿಪ್ರಾಯಗಳನ್ನು ಸಮಿತಿಯ ಮುಂದೆ ಮಂಡಿಸಿ, ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕುರಿತು ಸಮಾಲೋಚನೆ ನಡೆಸಿದರು

1 day ago
user_ಹೂಡೇಂ ಮಂಜುನಾಥ
ಹೂಡೇಂ ಮಂಜುನಾಥ
Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
1 day ago
80ff9a98-e812-4d95-8fbb-6b687919b70b

ಬಲಿಷ್ಠ ಸಂಘಟನೆಗೆ ಬಲವಾದ ನಾಯಕತ್ವ: ಎಐಸಿಸಿ ವೀಕ್ಷಕ ವೇಣುಗೋಪಾಲ್ ರಾವ್ ಕೂಡ್ಲಿಗಿ: ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ ಎಐಸಿಸಿ ನೇತೃತ್ವದಲ್ಲಿ ನಡೆಯುತ್ತಿರುವ ಸಂಘಟನ ಸೃಜನ್ ಅಭಿಯಾನ ಅಂಗವಾಗಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಸಭೆಯಲ್ಲಿ ಎಐಸಿಸಿ ವೀಕ್ಷಕ ವೇಣುಗೋಪಾಲ್ ರಾವ್ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ತೆಲಂಗಾಣ ರಾಜ್ಯದ ಸಲಹೆಗಾರರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಕೋಆರ್ಡಿನೇಟರ್‌ಗಳು ಆಗಮಿಸಿದ್ದು, ಅವರನ್ನು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ. ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಶ್ರೀನಿವಾಸ್ ಎನ್.ಟಿ. ಅವರು, *"ಬಲಿಷ್ಠ ಸಂಘಟನೆಯೇ ಕಾಂಗ್ರೆಸ್ ಪಕ್ಷದ ಅತಿದೊಡ್ಡ ಶಕ್ತಿ. ಸಮರ್ಥ, ಸಮನ್ವಯದ ಹಾಗೂ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗಬಲ್ಲ ನಾಯಕತ್ವ ಸಂಘಟನೆಗೆ ಹೊಸ ಚೈತನ್ಯ ತುಂಬುತ್ತದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಹಿರಿಯ ಮುಖಂಡರ ಅಭಿಪ್ರಾಯಕ್ಕೆ ಎಐಸಿಸಿ ಮಹತ್ವ ನೀಡುತ್ತಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಹಾಗೂ ಸಂಘಟನಾ ಬದ್ಧತೆಗೆ ಸಾಕ್ಷಿಯಾಗಿದೆ"* ಎಂದು ಹೇಳಿದರು. ಅಲ್ಲದೆ, ಸಂಘಟನೆ ಇನ್ನಷ್ಟು ಸದೃಢಗೊಳ್ಳಬೇಕಾದರೆ ಅನುಭವ, ಸಾಮರ್ಥ್ಯ ಹಾಗೂ ಪಕ್ಷದ ಸಿದ್ಧಾಂತಗಳಿಗೆ ಬದ್ಧತೆಯಿರುವ ನಾಯಕತ್ವ ಹೊರಹೊಮ್ಮಬೇಕು. ಅಂತಹ ನಾಯಕತ್ವದ ಆಯ್ಕೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಮತ್ತಷ್ಟು ಬಲಪಡಿಸುವ ಗುರಿಯನ್ನು *'ಸಂಘಟನ ಸೃಜನ್ ಅಭಿಯಾನ'* ಹೊಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ತಮ್ಮ ಅಮೂಲ್ಯ ಅಭಿಪ್ರಾಯಗಳನ್ನು ಸಮಿತಿಯ ಮುಂದೆ ಮಂಡಿಸಿ, ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕುರಿತು ಸಮಾಲೋಚನೆ ನಡೆಸಿದರು

More news from ಕರ್ನಾಟಕ and nearby areas
  • ಜಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಣ್ಣು ಚಿರತೆಗಳು ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಜೋಡಿ ಹೆಣ್ಣು ಚಿರತೆಗಳು ಮೃತಪಟ್ಟಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸಮೀಪದ ಸಿಡಿಗೆರೆ ಹೋಬಳಿಯ ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಒಂದು ವರ್ಷದೊಳಗಿನ ಎರಡು ಹೆಣ್ಣು ಚಿರತೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರೈತರು ಜಮೀನಿಗೆ ತೆರಳಿದ ವೇಳೆ ಎರಡು ಚಿರತೆಗಳು ಚಲನೆಯಿಲ್ಲದೆ ಬಿದ್ದಿರುವುದನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಚಿರತೆಗಳ ಮರಣದ ನಿಖರ ಕಾರಣ ತಿಳಿದುಬಂದಿಲ್ಲ. ವಿಷಪ್ರಾಶನ, ವಿದ್ಯುತ್ ಸ್ಪರ್ಶ ಅಥವಾ ಇತರ ಕಾರಣಗಳಿಂದ ಸಾವು ಸಂಭವಿಸಿರಬಹುದೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಎರಡೂ ಚಿರತೆಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಗತ್ಯ ಮಾದರಿಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    1
    ಜಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಣ್ಣು ಚಿರತೆಗಳು
ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಜೋಡಿ ಹೆಣ್ಣು ಚಿರತೆಗಳು ಮೃತಪಟ್ಟಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸಮೀಪದ ಸಿಡಿಗೆರೆ ಹೋಬಳಿಯ ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಒಂದು ವರ್ಷದೊಳಗಿನ ಎರಡು ಹೆಣ್ಣು ಚಿರತೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರೈತರು ಜಮೀನಿಗೆ ತೆರಳಿದ ವೇಳೆ ಎರಡು ಚಿರತೆಗಳು ಚಲನೆಯಿಲ್ಲದೆ ಬಿದ್ದಿರುವುದನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ಚಿರತೆಗಳ ಮರಣದ ನಿಖರ ಕಾರಣ ತಿಳಿದುಬಂದಿಲ್ಲ. ವಿಷಪ್ರಾಶನ, ವಿದ್ಯುತ್ ಸ್ಪರ್ಶ ಅಥವಾ ಇತರ ಕಾರಣಗಳಿಂದ ಸಾವು ಸಂಭವಿಸಿರಬಹುದೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಎರಡೂ ಚಿರತೆಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಗತ್ಯ ಮಾದರಿಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ. ಚಳ್ಳಕೆರೆ :ನಗರದ ಎಪಿಎಂಸಿ‌ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ‌ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ. ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
    1
    ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ.
ಚಳ್ಳಕೆರೆ :ನಗರದ ಎಪಿಎಂಸಿ‌ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ  ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ‌ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ.  ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    16 hrs ago
  • ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    1
    ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    16 hrs ago
  • ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. #DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka
    1
    ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ
ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
#DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka
    user_AsnNews24Kannada
    AsnNews24Kannada
    Local News Reporter Kushtagi, Koppal•
    2 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    17 hrs ago
  • ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    3
    ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ
*ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ  ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ  ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ  ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ,  ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ  ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ.  31 7 2026ರಂದು ,  ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ.  ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು  ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು  ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    16 hrs ago
  • ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". "ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". ಚಳ್ಳಕೆರೆ:-ನಗರದ ಹೊರವಲಯದ ಅಜ್ಜನಗುಡಿ ಸಮೀಪದ ನನ್ನಿವಾಳದ ಕಟ್ಟೆಮನೆಯ ಮುತ್ಯಾಗಾರ ದೇವರ ಎತ್ತುಗಳಿಗೆ ನಗರದ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಗೋಪೂಜೆ, ಬಾಳೆಹಣ್ಣು,ರಾಗಿಹುಲ್ಲು ವಿತರಿಸುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವರ ಎತ್ತುಗಳ ಸಂರಕ್ಷಕರಾದ ಪೂಜಾರಿ ಓಬಯ್ಯ, ಪಾಲಯ್ಯ, ಸಿದ್ದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ.ವಿದ್ಯಾ, ಖಜಾಂಚಿ ಕವಿತಾ ನಾಗೇಶ್,ದೇವರ ಎತ್ತುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷೆ ಶುಭಾ ಸೋಮಶೇಖರ್, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಸದಸ್ಯರಾದ ಮೀರಾ ರಮೇಶ್,ಸುಮಾ, ನಾಗಶ್ರೀ,ಹೀನಾ ಸೇರಿದಂತೆ ದೇವರ ಎತ್ತುಗಳ ಕಿಲಾರಿಗಳು ಮತ್ತು ಆರಾಧಕರು ಉಪಸ್ಥಿತರಿದ್ದರು.
    1
    ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". 
"ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ".                    ಚಳ್ಳಕೆರೆ:-ನಗರದ ಹೊರವಲಯದ ಅಜ್ಜನಗುಡಿ ಸಮೀಪದ ನನ್ನಿವಾಳದ ಕಟ್ಟೆಮನೆಯ ಮುತ್ಯಾಗಾರ ದೇವರ ಎತ್ತುಗಳಿಗೆ ನಗರದ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಗೋಪೂಜೆ, ಬಾಳೆಹಣ್ಣು,ರಾಗಿಹುಲ್ಲು ವಿತರಿಸುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿದರು.                    ಈ ಸಂದರ್ಭದಲ್ಲಿ  ದೇವರ ಎತ್ತುಗಳ ಸಂರಕ್ಷಕರಾದ ಪೂಜಾರಿ ಓಬಯ್ಯ, ಪಾಲಯ್ಯ, ಸಿದ್ದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.                   ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ.ವಿದ್ಯಾ, ಖಜಾಂಚಿ ಕವಿತಾ ನಾಗೇಶ್,ದೇವರ ಎತ್ತುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷೆ ಶುಭಾ ಸೋಮಶೇಖರ್, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಸದಸ್ಯರಾದ ಮೀರಾ ರಮೇಶ್,ಸುಮಾ, ನಾಗಶ್ರೀ,ಹೀನಾ ಸೇರಿದಂತೆ ದೇವರ ಎತ್ತುಗಳ ಕಿಲಾರಿಗಳು ಮತ್ತು ಆರಾಧಕರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    1
    ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ
ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು
ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.