logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಧೈರ್ಯ ಬೆಳೆಸಿಕೊಳ್ಳಿ ಸಂವಿಧಾನದ ಆಶಯ ಅರಿತು ಹಕ್ಕು–ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸಿ: ಶಾಸಕ ಬಸವರಾಜ್ ವಿ. ಶಿವಗಂಗಾ ಚನ್ನಗಿರಿ: ಪ್ರಜಾಪ್ರಭುತ್ವ ವ್ಯವಸ್ಥೆ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಭಿಪ್ರಾಯವನ್ನು ಧೈರ್ಯವಾಗಿ, ನೇರವಾಗಿ ವ್ಯಕ್ತಪಡಿಸುವ ಸ್ವಾತಂತ್ರ್ಯ ನೀಡಿದೆ. ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತುಕೊಂಡು, ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಾಗೂ ಸಮಸ್ಯೆಗಳಿಗೆ ಪರಿಹಾರ ಕೇಳುವ ಮನೋಭಾವವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದು ಶಾಸಕ ಬಸವರಾಜ್ ವಿ. ಶಿವಗಂಗಾ ಹೇಳಿದರು. ಚನ್ನಗಿರಿ ತಾಲೂಕು ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ–2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆಯಲ್ಲಿ ಮತ ಚಲಾಯಿಸುವುದಲ್ಲ. ಜನರು ತಮ್ಮ ಪ್ರತಿನಿಧಿಗಳಿಂದ ಅಭಿವೃದ್ಧಿ ಹಾಗೂ ಸೇವೆಯನ್ನು ನಿರೀಕ್ಷಿಸುವಂತೆಯೇ, ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಹೊಂದಿದ್ದಾರೆ. ಜನರು ತಮ್ಮ ಹಕ್ಕುಗಳನ್ನು ಕೇಳುವುದರ ಜತೆಗೆ ಕರ್ತವ್ಯಗಳನ್ನು ಪಾಲಿಸಬೇಕು. ಯುವಜನರು ಪ್ರಜಾಪ್ರಭುತ್ವದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು. ತಾವು ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ದೊರೆತ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರೆ ಇಂಜಿನಿಯರ್, ವೈದ್ಯ, ಐಎಎಸ್ ಅಥವಾ ಕೆಎಎಸ್ ಅಧಿಕಾರಿಯಾಗುವ ಸಾಧ್ಯತೆ ಇತ್ತು. ಆದರೆ ಇಂದು ಜನಪ್ರತಿನಿಧಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ಸೀಮಿತ ಅವಧಿಯಲ್ಲಿ ಜನರಿಗಾಗಿ ಪರಿಣಾಮಕಾರಿ ಕೆಲಸ ಮಾಡುವುದೇ ಜನಪ್ರತಿನಿಧಿಗಳ ಕರ್ತವ್ಯ ಎಂದು ಹೇಳಿದರು. ಚನ್ನಗಿರಿ ವಕೀಲರ ಸಂಘದ ಅಧ್ಯಕ್ಷ ಮೋಹನ್ ಎಚ್.ಎಂ. ಉಪನ್ಯಾಸ ನೀಡಿ, ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿ ಮತ್ತು ಆಚಾರ–ವಿಚಾರಗಳನ್ನು ಹೊಂದಿರುವ ಭಾರತಕ್ಕೆ ಎಲ್ಲರಿಗೂ ಅನ್ವಯವಾಗುವ ಸಂವಿಧಾನ ರೂಪಿಸಿರುವುದು ಮಹಾನ್ ಸಾಧನೆ. ಸಂವಿಧಾನ ನೀಡಿರುವ ಹಕ್ಕು–ಕರ್ತವ್ಯಗಳನ್ನು ಅರಿತು ಕಾನೂನು ಪಾಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ಮಾತನಾಡಿ, 2008ರಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯುತ್ತಿದ್ದು, ಪ್ರಜಾಪ್ರಭುತ್ವವು ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸುವ ಶಕ್ತಿಯಾಗಿದೆ. ಸಂವಿಧಾನವನ್ನು ಗೌರವಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಅದ್ಯಕ್ಷರು ಎನ್. ಜೆ. ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್. ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ, ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಮುಖಂಡರು, ಪ್ರಗತಿಪರ ಸಂಘಟನೆಗಳ ಮುಖಂಡರು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ಚನ್ನಗಿರಿ

7 hrs ago
user_ದೇವರಾಜ್ ಕೆ ನೆಲ್ಲಿಹಂಕಲು
ದೇವರಾಜ್ ಕೆ ನೆಲ್ಲಿಹಂಕಲು
Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
7 hrs ago
7aef7d5c-d28d-439f-85b9-568280142b71

ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಧೈರ್ಯ ಬೆಳೆಸಿಕೊಳ್ಳಿ ಸಂವಿಧಾನದ ಆಶಯ ಅರಿತು ಹಕ್ಕು–ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸಿ: ಶಾಸಕ ಬಸವರಾಜ್ ವಿ. ಶಿವಗಂಗಾ ಚನ್ನಗಿರಿ: ಪ್ರಜಾಪ್ರಭುತ್ವ ವ್ಯವಸ್ಥೆ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಭಿಪ್ರಾಯವನ್ನು ಧೈರ್ಯವಾಗಿ, ನೇರವಾಗಿ ವ್ಯಕ್ತಪಡಿಸುವ ಸ್ವಾತಂತ್ರ್ಯ ನೀಡಿದೆ. ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತುಕೊಂಡು, ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಾಗೂ ಸಮಸ್ಯೆಗಳಿಗೆ ಪರಿಹಾರ ಕೇಳುವ ಮನೋಭಾವವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದು ಶಾಸಕ ಬಸವರಾಜ್ ವಿ. ಶಿವಗಂಗಾ ಹೇಳಿದರು. ಚನ್ನಗಿರಿ ತಾಲೂಕು ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ–2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆಯಲ್ಲಿ ಮತ ಚಲಾಯಿಸುವುದಲ್ಲ. ಜನರು ತಮ್ಮ ಪ್ರತಿನಿಧಿಗಳಿಂದ ಅಭಿವೃದ್ಧಿ ಹಾಗೂ ಸೇವೆಯನ್ನು ನಿರೀಕ್ಷಿಸುವಂತೆಯೇ, ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಹೊಂದಿದ್ದಾರೆ. ಜನರು ತಮ್ಮ ಹಕ್ಕುಗಳನ್ನು ಕೇಳುವುದರ ಜತೆಗೆ ಕರ್ತವ್ಯಗಳನ್ನು ಪಾಲಿಸಬೇಕು. ಯುವಜನರು ಪ್ರಜಾಪ್ರಭುತ್ವದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು. ತಾವು ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ದೊರೆತ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರೆ ಇಂಜಿನಿಯರ್, ವೈದ್ಯ, ಐಎಎಸ್ ಅಥವಾ ಕೆಎಎಸ್ ಅಧಿಕಾರಿಯಾಗುವ ಸಾಧ್ಯತೆ ಇತ್ತು. ಆದರೆ

a20a3b91-463a-40df-875b-18bb02340cb5

ಇಂದು ಜನಪ್ರತಿನಿಧಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ಸೀಮಿತ ಅವಧಿಯಲ್ಲಿ ಜನರಿಗಾಗಿ ಪರಿಣಾಮಕಾರಿ ಕೆಲಸ ಮಾಡುವುದೇ ಜನಪ್ರತಿನಿಧಿಗಳ ಕರ್ತವ್ಯ ಎಂದು ಹೇಳಿದರು. ಚನ್ನಗಿರಿ ವಕೀಲರ ಸಂಘದ ಅಧ್ಯಕ್ಷ ಮೋಹನ್ ಎಚ್.ಎಂ. ಉಪನ್ಯಾಸ ನೀಡಿ, ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿ ಮತ್ತು ಆಚಾರ–ವಿಚಾರಗಳನ್ನು ಹೊಂದಿರುವ ಭಾರತಕ್ಕೆ ಎಲ್ಲರಿಗೂ ಅನ್ವಯವಾಗುವ ಸಂವಿಧಾನ ರೂಪಿಸಿರುವುದು ಮಹಾನ್ ಸಾಧನೆ. ಸಂವಿಧಾನ ನೀಡಿರುವ ಹಕ್ಕು–ಕರ್ತವ್ಯಗಳನ್ನು ಅರಿತು ಕಾನೂನು ಪಾಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ಮಾತನಾಡಿ, 2008ರಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯುತ್ತಿದ್ದು, ಪ್ರಜಾಪ್ರಭುತ್ವವು ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸುವ ಶಕ್ತಿಯಾಗಿದೆ. ಸಂವಿಧಾನವನ್ನು ಗೌರವಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಅದ್ಯಕ್ಷರು ಎನ್. ಜೆ. ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್. ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ, ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಮುಖಂಡರು, ಪ್ರಗತಿಪರ ಸಂಘಟನೆಗಳ ಮುಖಂಡರು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ಚನ್ನಗಿರಿ

More news from ಕರ್ನಾಟಕ and nearby areas
  • ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ ತರೀಕೆರೆ, ಸೆ.14: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು. ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು. ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು. ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    4
    ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ

ತರೀಕೆರೆ, ಸೆ.14:

 ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು.

ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು.

ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು.

ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು.

ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    user_ಪ್ರದೀಪ್ ಹೆಚ್ ಈ. ತರೀಕೆರೆ
    ಪ್ರದೀಪ್ ಹೆಚ್ ಈ. ತರೀಕೆರೆ
    ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
    23 hrs ago
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    23 hrs ago
  • ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    2
    ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ
ಚಳ್ಳಕೆರೆ  ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ  ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು.
ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ
15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು..
ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ  ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ  ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ  ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು  ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು.
ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ  ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು
.
ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು.
ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು.
ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    1
    ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್
#ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ
#ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ
#ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ
#ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ
#BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    1
    ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    48 min ago
  • ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    1
    ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು 
ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ.
ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    52 min ago
  • ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾ‌ಪ್ರಭುತ್ವ ದಿನದ ಕಾರ್ಯಕ್ರಮವನ್ನು‌ ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ‌ ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ‌ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ‌ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು‌ ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು. ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ.‌ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ‌. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ‌. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರ‌ದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ‌. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು‌. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು‌. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು. ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು‌‌‌. ಇದು ಅಕ್ಷಮ್ಯ ಅಪರಾಧವಾಗಿದೆ‌. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ‌ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು. ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ.‌ ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ.‌ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದು‌ಕೊಂಡರೆ ತಪ್ಪು‌.‌ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ‌.‌ ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು‌. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು‌. ಆದರೆ ಈಗ ಬೇಡವೇ‌ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ‌‌. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.
    1
    ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ 
ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾ‌ಪ್ರಭುತ್ವ ದಿನದ ಕಾರ್ಯಕ್ರಮವನ್ನು‌ ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು.
ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ‌
ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ‌ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ‌ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು‌ ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು.
ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ.‌ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ‌. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ‌. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರ‌ದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ‌. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು.
ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು‌. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು‌. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು.
ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು‌‌‌. ಇದು ಅಕ್ಷಮ್ಯ ಅಪರಾಧವಾಗಿದೆ‌. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ‌ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು.
ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ.‌ ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ.
ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ.‌ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದು‌ಕೊಂಡರೆ ತಪ್ಪು‌.‌ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ‌.‌ ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು‌.
ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು‌. ಆದರೆ ಈಗ ಬೇಡವೇ‌ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ‌‌. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.