logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಕ್ಕನಾಯಕನಹಳ್ಳಿ ತಾಲ್ಲೂಕು ಛಲವಾದಿ ಮಹಾಸಭಾ ಶಾಖೆಯ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಮುದಾಯದ ಒಗ್ಗಟ್ಟು, ಸಾಮಾಜಿಕ ಕಳಕಳಿ ಮತ್ತು ಪ್ರಗತಿಯ ಧೇಯೋದ್ದೇಶಗಳೊಂದಿಗೆ ಈ ಹೊಸ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಗೌರವ ಅಧ್ಯಕ್ಷರುಗಳಾಗಿ ಎಳ್ಳೇನಹಳ್ಳಿಯ ನಿರಂಜನ್ ಮೂರ್ತಿ ಹಾಗೂ ವಿನಾಯಕ ನಗರದ ದೇವರಾಜು ಆಯ್ಕೆಯಾಗಿದ್ದಾರೆ. ತಾಲ್ಲೂಕು ಅಧ್ಯಕ್ಷರಾಗಿ ನರಸಿಂಹ ಮೂರ್ತಿ, ಉಪಾಧ್ಯಕ್ಷರಾಗಿ ಗೋಡೆಕೆರೆಯ ವಸಂತಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಆಶ್ರೀಹಾಳ್‌ನ ಆನಂದ್, ಜಂಟಿ ಕಾರ್ಯದರ್ಶಿಯಾಗಿ ದಿಬ್ಬದಳ್ಳಿಯ ರುದ್ರೇಶ್ ಮತ್ತು ಖಜಾಂಚಿಯಾಗಿ ಆಶ್ರೀಹಾಳ್‌ನ ಗಂಗಾಧರಯ್ಯ ಅವರು ಸಾಂಸ್ಥಿಕ ಜವಾಬ್ದಾರಿಗಳಿಗೆ ನೇಮಕಗೊಂಡಿದ್ದಾರೆ. ಇದೇ ವೇಳೆ ಮಹಾಸಭಾದ ಕಾನೂನು ಮಾರ್ಗದರ್ಶನಕ್ಕಾಗಿ ಆಶ್ರೀಹಾಳ್‌ನ ಪರಮೇಶ್ ಹಾಗೂ ಕಾತ್ರಿಕೆಹಾಳ್ ಜಯಣ್ಣ ವಕೀಲರು ಅವರನ್ನು ಕಾನೂನು ಸಲಹೆಗಾರರನ್ನಾಗಿ ಸರ್ವಸಮ್ಮತಿಯಿಂದ ನೇಮಕ ಮಾಡಲಾಗಿದೆ. ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರತಿನಿಧಿಗಳಾಗಿ ಸಮಿತಿಯ ನಿರ್ದೇಶಕರ ಸ್ಥಾನಕ್ಕೆ ಗೋಡೆಕೆರೆಯ ಮಂಜುನಾಥ್, ಹೊಸಕೆರೆಯ ಸಿದ್ದರಾಮಯ್ಯ, ಹೊಯ್ಸಳಕಟ್ಟೆಯ ದೇವರಾಜ್, ಗೌರಸಾಗರದ ಜಗದೀಶ್, ಮಲಗೊಂಡನಹಳ್ಳಿಯ ನರೇಂದ್ರ, ಅರಳೀಕೆರೆಯ ಕರಿಯಪ್ಪ, ತಿಮ್ಮನಹಳ್ಳಿಯ ಸಿದ್ದರಾಮಯ್ಯ, ದಬ್ಬಗುಂಟೆಯ ಲಕ್ಷ್ಮೀ ಕಾಂತ್, ಸೋಮನಹಳ್ಳಿಯ ಗೋಪಾಲಯ್ಯ ಮತ್ತು ಜೋಗಿಹಳ್ಳಿಯ ಉಮೇಶ್ ಅವರುಗಳು ಆಯ್ಕೆಯಾಗಿದ್ದಾರೆ ಎಂದು ಛಲವಾದಿ ಮಹಾಸಭಾದ ತಾಲ್ಲೂಕು ಶಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

1 hr ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
1 hr ago
278d0d66-2e25-421f-b794-0f1bb8d321f1

ಚಿಕ್ಕನಾಯಕನಹಳ್ಳಿ ತಾಲ್ಲೂಕು ಛಲವಾದಿ ಮಹಾಸಭಾ ಶಾಖೆಯ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಮುದಾಯದ ಒಗ್ಗಟ್ಟು, ಸಾಮಾಜಿಕ ಕಳಕಳಿ ಮತ್ತು ಪ್ರಗತಿಯ ಧೇಯೋದ್ದೇಶಗಳೊಂದಿಗೆ ಈ ಹೊಸ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಗೌರವ ಅಧ್ಯಕ್ಷರುಗಳಾಗಿ ಎಳ್ಳೇನಹಳ್ಳಿಯ ನಿರಂಜನ್ ಮೂರ್ತಿ ಹಾಗೂ ವಿನಾಯಕ ನಗರದ ದೇವರಾಜು ಆಯ್ಕೆಯಾಗಿದ್ದಾರೆ. ತಾಲ್ಲೂಕು ಅಧ್ಯಕ್ಷರಾಗಿ ನರಸಿಂಹ ಮೂರ್ತಿ, ಉಪಾಧ್ಯಕ್ಷರಾಗಿ ಗೋಡೆಕೆರೆಯ ವಸಂತಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಆಶ್ರೀಹಾಳ್‌ನ ಆನಂದ್, ಜಂಟಿ ಕಾರ್ಯದರ್ಶಿಯಾಗಿ ದಿಬ್ಬದಳ್ಳಿಯ ರುದ್ರೇಶ್ ಮತ್ತು ಖಜಾಂಚಿಯಾಗಿ ಆಶ್ರೀಹಾಳ್‌ನ ಗಂಗಾಧರಯ್ಯ ಅವರು ಸಾಂಸ್ಥಿಕ ಜವಾಬ್ದಾರಿಗಳಿಗೆ ನೇಮಕಗೊಂಡಿದ್ದಾರೆ. ಇದೇ ವೇಳೆ ಮಹಾಸಭಾದ ಕಾನೂನು ಮಾರ್ಗದರ್ಶನಕ್ಕಾಗಿ ಆಶ್ರೀಹಾಳ್‌ನ ಪರಮೇಶ್ ಹಾಗೂ ಕಾತ್ರಿಕೆಹಾಳ್ ಜಯಣ್ಣ ವಕೀಲರು ಅವರನ್ನು ಕಾನೂನು ಸಲಹೆಗಾರರನ್ನಾಗಿ ಸರ್ವಸಮ್ಮತಿಯಿಂದ ನೇಮಕ ಮಾಡಲಾಗಿದೆ. ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರತಿನಿಧಿಗಳಾಗಿ ಸಮಿತಿಯ ನಿರ್ದೇಶಕರ ಸ್ಥಾನಕ್ಕೆ ಗೋಡೆಕೆರೆಯ ಮಂಜುನಾಥ್, ಹೊಸಕೆರೆಯ ಸಿದ್ದರಾಮಯ್ಯ, ಹೊಯ್ಸಳಕಟ್ಟೆಯ ದೇವರಾಜ್, ಗೌರಸಾಗರದ ಜಗದೀಶ್, ಮಲಗೊಂಡನಹಳ್ಳಿಯ ನರೇಂದ್ರ, ಅರಳೀಕೆರೆಯ ಕರಿಯಪ್ಪ, ತಿಮ್ಮನಹಳ್ಳಿಯ ಸಿದ್ದರಾಮಯ್ಯ, ದಬ್ಬಗುಂಟೆಯ ಲಕ್ಷ್ಮೀ ಕಾಂತ್, ಸೋಮನಹಳ್ಳಿಯ ಗೋಪಾಲಯ್ಯ ಮತ್ತು ಜೋಗಿಹಳ್ಳಿಯ ಉಮೇಶ್ ಅವರುಗಳು ಆಯ್ಕೆಯಾಗಿದ್ದಾರೆ ಎಂದು ಛಲವಾದಿ ಮಹಾಸಭಾದ ತಾಲ್ಲೂಕು ಶಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

More news from ಕರ್ನಾಟಕ and nearby areas
  • ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಮುತ್ತುಗದಹಳ್ಳಿ ಸರ್ವೆ ನಂಬರ್ 31ರಲ್ಲಿರುವ ಬುಕ್ಕಾಪಟ್ಟಣ ಅರಣ್ಯ ವಲಯದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಈ ತೆರವು ಪ್ರಕ್ರಿಯೆಯು ರೈತನೊಬ್ಬನಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ತಮ್ಮ ಬೆಳೆ ಕಟಾವಿಗೆ ಬರಲು ಕೇವಲ ಮೂರು ತಿಂಗಳು ಬಾಕಿ ಇರುವಾಗ ಅಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಾವು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ ಫಸಲನ್ನು ಕಟಾವು ಮಾಡಲು ಅವಕಾಶ ನೀಡುವಂತೆ ರೈತರು ಅಧಿಕಾರಿಗಳ ಮುಂದೆ ಕೈಮುಗಿದು ಕಾಡಿ ಬೇಡಿಕೊಂಡರೂ, ಅಧಿಕಾರಿಗಳು ತಮ್ಮ ಪಟ್ಟು ಬಿಡದೆ ಜಮೀನನ್ನು ತೆರವುಗೊಳಿಸಿದ್ದಾರೆ. ಅಧಿಕಾರಿಗಳು ಮಾಡಿದ ತಪ್ಪಿಗೆ ರೈತ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    1
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಮುತ್ತುಗದಹಳ್ಳಿ ಸರ್ವೆ ನಂಬರ್ 31ರಲ್ಲಿರುವ ಬುಕ್ಕಾಪಟ್ಟಣ ಅರಣ್ಯ ವಲಯದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಈ ತೆರವು ಪ್ರಕ್ರಿಯೆಯು ರೈತನೊಬ್ಬನಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ.

ತಮ್ಮ ಬೆಳೆ ಕಟಾವಿಗೆ ಬರಲು ಕೇವಲ ಮೂರು ತಿಂಗಳು ಬಾಕಿ ಇರುವಾಗ ಅಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಾವು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ ಫಸಲನ್ನು ಕಟಾವು ಮಾಡಲು ಅವಕಾಶ ನೀಡುವಂತೆ ರೈತರು ಅಧಿಕಾರಿಗಳ ಮುಂದೆ ಕೈಮುಗಿದು ಕಾಡಿ ಬೇಡಿಕೊಂಡರೂ, ಅಧಿಕಾರಿಗಳು ತಮ್ಮ ಪಟ್ಟು ಬಿಡದೆ ಜಮೀನನ್ನು ತೆರವುಗೊಳಿಸಿದ್ದಾರೆ. ಅಧಿಕಾರಿಗಳು ಮಾಡಿದ ತಪ್ಪಿಗೆ ರೈತ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    20 hrs ago
  • ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಹಲವು ದಿನಗಳಿಂದ ಅನಿಶ್ಚಿತವಾಗಿ ಬಾಗಿಲು ಮುಚ್ಚುತ್ತಿದ್ದು, ಇದರಿಂದ ಬಡ ಕೂಲಿ ಕಾರ್ಮಿಕರು, ಆಶಕ್ತರು, ವಯೋವೃದ್ಧರು ಮತ್ತು ಬೀದಿ ವ್ಯಾಪಾರಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಹಸಿವು ನೀಗಿಸಿಕೊಳ್ಳಲು ಬರುವವರಿಗೆ ಗೇಟಿಗೆ ಬೀಗ ಹಾಕಿರುವುದು ನಿತ್ಯದ ಗೋಳಾಗಿದೆ. ಯಾವುದೇ ನಾಮಫಲಕವಿಲ್ಲದ ಈ ಕ್ಯಾಂಟೀನ್ ಮುಂದೆ ಬರುವ ಜನರು, ಗೇಟ್ ಬಂದ್ ಆಗಿರುವುದನ್ನು ಕಂಡು ಹತಾಶರಾಗಿ ಹಿಂತಿರುಗುತ್ತಿದ್ದಾರೆ. ಕ್ಯಾಂಟೀನ್ ಸಿಬ್ಬಂದಿಯನ್ನು ವಿಚಾರಿಸಿದಾಗ ಅವರು ಉಡಾಫೆಯ ಉತ್ತರ ನೀಡುತ್ತಿದ್ದು, ನಾನಾ ನೆಪಗಳನ್ನು ಒಡ್ಡಿ ಆಹಾರ ತಯಾರಿಸದೇ ಸಾರ್ವಜನಿಕರನ್ನು ಕಣ್ಣುಮುಚ್ಚಾಲೆ ಆಟವಾಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಸಿದು ಬರುವ ಜನರು ಬಾಗಿಲು ತೆಗೆಯುವಂತೆ ಅಂಗಲಾಚಿದರೂ ಅಧಿಕಾರಿಗಳಿಗೆ ಆ ಆರ್ತನಾದ ಕೇಳಿಸುತ್ತಿಲ್ಲ. ನಿರ್ವಹಣೆಗಾರರ ನಿರ್ಲಕ್ಷ್ಯ ಮತ್ತು ಮನಸೋ ಇಚ್ಛೆಯ ವರ್ತನೆಯಿಂದಾಗಿ ಸರ್ಕಾರ ಹಾಗೂ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಮತ್ತೆ ಎಂದಿಗೂ ಕಾರ್ಯನಿರ್ವಹಿಸುತ್ತದೆ ಮತ್ತು ಈ ಸಮಸ್ಯೆಗಳಿಗೆ ಯಾವಾಗ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದೇ ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
    2
    ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಹಲವು ದಿನಗಳಿಂದ ಅನಿಶ್ಚಿತವಾಗಿ ಬಾಗಿಲು ಮುಚ್ಚುತ್ತಿದ್ದು, ಇದರಿಂದ ಬಡ ಕೂಲಿ ಕಾರ್ಮಿಕರು, ಆಶಕ್ತರು, ವಯೋವೃದ್ಧರು ಮತ್ತು ಬೀದಿ ವ್ಯಾಪಾರಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಹಸಿವು ನೀಗಿಸಿಕೊಳ್ಳಲು ಬರುವವರಿಗೆ ಗೇಟಿಗೆ ಬೀಗ ಹಾಕಿರುವುದು ನಿತ್ಯದ ಗೋಳಾಗಿದೆ. ಯಾವುದೇ ನಾಮಫಲಕವಿಲ್ಲದ ಈ ಕ್ಯಾಂಟೀನ್ ಮುಂದೆ ಬರುವ ಜನರು, ಗೇಟ್ ಬಂದ್ ಆಗಿರುವುದನ್ನು ಕಂಡು ಹತಾಶರಾಗಿ ಹಿಂತಿರುಗುತ್ತಿದ್ದಾರೆ.

ಕ್ಯಾಂಟೀನ್ ಸಿಬ್ಬಂದಿಯನ್ನು ವಿಚಾರಿಸಿದಾಗ ಅವರು ಉಡಾಫೆಯ ಉತ್ತರ ನೀಡುತ್ತಿದ್ದು, ನಾನಾ ನೆಪಗಳನ್ನು ಒಡ್ಡಿ ಆಹಾರ ತಯಾರಿಸದೇ ಸಾರ್ವಜನಿಕರನ್ನು ಕಣ್ಣುಮುಚ್ಚಾಲೆ ಆಟವಾಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಸಿದು ಬರುವ ಜನರು ಬಾಗಿಲು ತೆಗೆಯುವಂತೆ ಅಂಗಲಾಚಿದರೂ ಅಧಿಕಾರಿಗಳಿಗೆ ಆ ಆರ್ತನಾದ ಕೇಳಿಸುತ್ತಿಲ್ಲ. ನಿರ್ವಹಣೆಗಾರರ ನಿರ್ಲಕ್ಷ್ಯ ಮತ್ತು ಮನಸೋ ಇಚ್ಛೆಯ ವರ್ತನೆಯಿಂದಾಗಿ ಸರ್ಕಾರ ಹಾಗೂ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಮತ್ತೆ ಎಂದಿಗೂ ಕಾರ್ಯನಿರ್ವಹಿಸುತ್ತದೆ ಮತ್ತು ಈ ಸಮಸ್ಯೆಗಳಿಗೆ ಯಾವಾಗ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದೇ ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    6 hrs ago
  • ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರ ನಾಯ್ಕ್ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಂಬಾಣಿ ಸಮುದಾಯವನ್ನು ಸಂಘಟಿಸಿ, ಪಕ್ಷದತ್ತ ಆಕರ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಹೊಳಲ್ಕೆರೆ ಪಟ್ಟಣದ ಜ್ಞಾಪನಂ ಫೌಂಡೇಶನ್‌ಗೆ ಭೇಟಿ ನೀಡಿದ ಅವರು, ಬಿಜೆಪಿ ಹಿರಿಯ ಮುಖಂಡ ಜಯಸಿಂಹ ಖಾಟ್ರೋತ್ ಅವರೊಂದಿಗೆ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಈ ವಿಷಯವನ್ನು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಶಾಸಕರು ತಿಳಿಸಿದರು. ಇದರ ಭಾಗವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಮತ್ತು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಲಂಬಾಣಿ ತಾಂಡಾಗಳನ್ನು ಗುರುತಿಸಿ, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಸಮುದಾಯದ ಸಂಕಷ್ಟಗಳನ್ನು ಆಲಿಸಿ, ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
    1
    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರ ನಾಯ್ಕ್ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಂಬಾಣಿ ಸಮುದಾಯವನ್ನು ಸಂಘಟಿಸಿ, ಪಕ್ಷದತ್ತ ಆಕರ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಹೊಳಲ್ಕೆರೆ ಪಟ್ಟಣದ ಜ್ಞಾಪನಂ ಫೌಂಡೇಶನ್‌ಗೆ ಭೇಟಿ ನೀಡಿದ ಅವರು, ಬಿಜೆಪಿ ಹಿರಿಯ ಮುಖಂಡ ಜಯಸಿಂಹ ಖಾಟ್ರೋತ್ ಅವರೊಂದಿಗೆ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಈ ವಿಷಯವನ್ನು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಶಾಸಕರು ತಿಳಿಸಿದರು. ಇದರ ಭಾಗವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಮತ್ತು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಲಂಬಾಣಿ ತಾಂಡಾಗಳನ್ನು ಗುರುತಿಸಿ, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಸಮುದಾಯದ ಸಂಕಷ್ಟಗಳನ್ನು ಆಲಿಸಿ, ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    26 min ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
    1
    ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
    user_Kumara Swamy
    Kumara Swamy
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    14 hrs ago
  • ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    1
    ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • 'ಲೆನಿನ್' ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ಸಮಾರಂಭದಲ್ಲಿ ಭಾವುಕ ಕ್ಷಣವೊಂದು ಕಂಡುಬಂದಿದೆ. ಈ ಕಾರ್ಯಕ್ರಮದ ವೇಳೆ ನಟ ಅಕ್ಕಿನೇನಿ ನಿಖಿಲ್ ಅವರು ತಮ್ಮ ತಂದೆ ನಾಗಾರ್ಜುನ್ ಅವರನ್ನು ತಬ್ಬಿಕೊಂಡು ಭಾವುಕರಾದರು.
    1
    'ಲೆನಿನ್' ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ಸಮಾರಂಭದಲ್ಲಿ ಭಾವುಕ ಕ್ಷಣವೊಂದು ಕಂಡುಬಂದಿದೆ. ಈ ಕಾರ್ಯಕ್ರಮದ ವೇಳೆ ನಟ ಅಕ್ಕಿನೇನಿ ನಿಖಿಲ್ ಅವರು ತಮ್ಮ ತಂದೆ ನಾಗಾರ್ಜುನ್ ಅವರನ್ನು ತಬ್ಬಿಕೊಂಡು ಭಾವುಕರಾದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    23 hrs ago
  • ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಿಂತ ಅಲ್ಲಿ ನೀಡಲಾಗುವ ಶಿಕ್ಷಣದ ಗುಣಮಟ್ಟ ಮತ್ತು ಸಂಸ್ಥೆಯ ಬೆಳವಣಿಗೆಯು ಅತ್ಯಂತ ಮುಖ್ಯ ಎಂದು ನಿವೃತ್ತ ಪ್ರಾಚಾರ್ಯ ಕೃಷ್ಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಹುಳಿಯಾರಿನ ಕನಕದಾಸ ವಿದ್ಯಾ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ತಿಳಿಸಿದರು. ಸಂಸ್ಥೆಯ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಕೃಷ್ಣಯ್ಯ ಅವರು, ಕೇವಲ 14 ರಿಂದ 16 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು 225ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮಟ್ಟಕ್ಕೆ ಬೆಳೆದಿರುವುದು ಸಂತಸದ ವಿಷಯವಾಗಿದೆ ಎಂದರು. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನವರೆಗೆ ಸಂಸ್ಥೆ ವಿಸ್ತರಣೆಯಾಗಲು ಎಲ್ಲರ ಸಹಕಾರ ಕಾರಣ ಎಂದು ಅವರು ಸ್ಮರಿಸಿದರು. ಇಂದಿನ ದಿನಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ಹಳೆಯ ವಿದ್ಯಾಸಂಸ್ಥೆಯನ್ನು ನೆನಪಿಸಿಕೊಂಡು ಪ್ರತಿಭಾ ಪುರಸ್ಕಾರದಂತಹ ಸತ್ಕಾರ್ಯಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಅವರು ಕೊಂಡಾಡಿದರು. ಭವಿಷ್ಯದಲ್ಲಿ ಸಂಸ್ಥೆಯ ಮತ್ತಷ್ಟು ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.
    1
    ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಿಂತ ಅಲ್ಲಿ ನೀಡಲಾಗುವ ಶಿಕ್ಷಣದ ಗುಣಮಟ್ಟ ಮತ್ತು ಸಂಸ್ಥೆಯ ಬೆಳವಣಿಗೆಯು ಅತ್ಯಂತ ಮುಖ್ಯ ಎಂದು ನಿವೃತ್ತ ಪ್ರಾಚಾರ್ಯ ಕೃಷ್ಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಹುಳಿಯಾರಿನ ಕನಕದಾಸ ವಿದ್ಯಾ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ತಿಳಿಸಿದರು.

ಸಂಸ್ಥೆಯ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಕೃಷ್ಣಯ್ಯ ಅವರು, ಕೇವಲ 14 ರಿಂದ 16 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು 225ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮಟ್ಟಕ್ಕೆ ಬೆಳೆದಿರುವುದು ಸಂತಸದ ವಿಷಯವಾಗಿದೆ ಎಂದರು. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನವರೆಗೆ ಸಂಸ್ಥೆ ವಿಸ್ತರಣೆಯಾಗಲು ಎಲ್ಲರ ಸಹಕಾರ ಕಾರಣ ಎಂದು ಅವರು ಸ್ಮರಿಸಿದರು. ಇಂದಿನ ದಿನಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳು ತಮ್ಮ ಹಳೆಯ ವಿದ್ಯಾಸಂಸ್ಥೆಯನ್ನು ನೆನಪಿಸಿಕೊಂಡು ಪ್ರತಿಭಾ ಪುರಸ್ಕಾರದಂತಹ ಸತ್ಕಾರ್ಯಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಅವರು ಕೊಂಡಾಡಿದರು. ಭವಿಷ್ಯದಲ್ಲಿ ಸಂಸ್ಥೆಯ ಮತ್ತಷ್ಟು ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.