Shuru
Apke Nagar Ki App…
ಮಾಜಿ ಕೇಂದ್ರ ಸಚಿವ ದಿವಂಗತ ಸಿ. ಕೆ. ಜಾಫರ್ ಷರೀಫ್ ಅವರ ಅಳಿಯ ಹಾಗೂ ಮಾಜಿ ಶಾಸಕರಾದ ಸೈಯದ್ ಯಾಸಿನ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಕರ್ನಾಟಕದಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದ ಸೈಯದ್ ಯಾಸಿನ್ ಅವರು, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಗುರುತಿಸಿಕೊಂಡಿದ್ದ ಅವರ ಅಗಲಿಕೆಯು ನಾಡಿಗೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೂ ಈ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಮತ್ತು ಆಪ್ತರಿಗೆ ನೀಡಲಿ ಎಂದು ಪ್ರಾರ್ಥಿಸಲಾಗಿದೆ.
ಸುನೀಲ್ ಲ್ ಬೆಟಗೇರಿ
ಮಾಜಿ ಕೇಂದ್ರ ಸಚಿವ ದಿವಂಗತ ಸಿ. ಕೆ. ಜಾಫರ್ ಷರೀಫ್ ಅವರ ಅಳಿಯ ಹಾಗೂ ಮಾಜಿ ಶಾಸಕರಾದ ಸೈಯದ್ ಯಾಸಿನ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಕರ್ನಾಟಕದಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದ ಸೈಯದ್ ಯಾಸಿನ್ ಅವರು, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಗುರುತಿಸಿಕೊಂಡಿದ್ದ ಅವರ ಅಗಲಿಕೆಯು ನಾಡಿಗೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೂ ಈ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಮತ್ತು ಆಪ್ತರಿಗೆ ನೀಡಲಿ ಎಂದು ಪ್ರಾರ್ಥಿಸಲಾಗಿದೆ.
More news from ಕರ್ನಾಟಕ and nearby areas
- ಬಿಎಂಟಿಸಿ ಕಂಡಕ್ಟರ್ ಒಬ್ಬರು ಸಚಿವರಿಗೇ ಶಾಕ್ ನೀಡಿದ ಘಟನೆಯ ವಿಡಿಯೋ ಒಂದು ಹೊರಬಿದ್ದಿದೆ. ಬಸ್ಸಿನಲ್ಲಿ ಚಿಲ್ಲರೆ ಇಲ್ಲದಿದ್ದಕ್ಕೆ ಕಂಡಕ್ಟರ್ ಅವರು ನೇರವಾಗಿ, "ಚಿಲ್ಲರೆ ಇಲ್ವಾ? ಬಸ್ಸಿನಿಂದ ಕೆಳಗೆ ಇಳಿ" ಎಂದು ಹೇಳಿ ಸಚಿವರಿಗೆ ಆಘಾತ ನೀಡಿದ್ದಾರೆ. ಈ ಇಡೀ ಘಟನೆಯ ವಿಡಿಯೋ ಈಗ ಲಭ್ಯವಿದೆ.1
- ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ದೇಶ ಪ್ರೇಮಿಗಳಿಗೆ ಅಕೌಂಟ್ ಇರಬೇಕಲ್ವಾ ಎಂದು ಪ್ರಶ್ನಿಸಿ ತೀವ್ರವಾಗಿ ಕಿಡಿಕಾರಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಆಕ್ರೋಶವನ್ನು ಹೊರಹಾಕಿರುವ ಅವರು, ದೇಶಪ್ರೇಮಿಗಳ ಅಕೌಂಟ್ ಕುರಿತಾಗಿ ನೇರ ಪ್ರಶ್ನೆಯನ್ನು ಎತ್ತುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ ಪಾಟೀಲ ಅವರು, ಜಿ.ಬಿ.ಎ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರವು ಕುಂಟು ನೆಪ ಹೇಳುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಿದ್ಧತೆ ಮಾಡಿಕೊಂಡಿದ್ದರೂ ಸಹ, ಸರ್ಕಾರವು ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದ ಎಸ್.ಐ.ಆರ್ ಎಂಬ ಕುಂಟು ನೆಪವನ್ನು ಹೇಳಿ ಅರ್ಜಿ ಸಲ್ಲಿಸಿದೆ ಎಂದು ಅವರು ದೂರಿದ್ದಾರೆ. ಪ್ರತಿಯೊಂದಕ್ಕೂ ಎಸ್.ಐ.ಆರ್ ಎನ್ನುವುದು ಸೂಕ್ತವಲ್ಲ ಮತ್ತು ಬಹುತೇಕ ಕಾಂಗ್ರೆಸ್ ಮುಖಂಡರಿಗೆ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವೇ ಇಲ್ಲ ಎಂದು ಅವರು ಟೀಕಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಿ.ಬಿ.ಎ ಚುನಾವಣೆ ನಡೆದಿಲ್ಲ ಎಂದಾಕ್ಷಣ ಈ ಸರ್ಕಾರವೂ ಅದನ್ನು ನಡೆಸಬಾರದೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದ್ದು, ಇನ್ನು ಆರು ತಿಂಗಳು ಇರುವಾಗಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದರು. ನಮಗೆ ಇರುವುದೇ ನಾಲ್ಕೂವರೆ ವರ್ಷಗಳ ಅಧಿಕಾರ ಅವಧಿಯಾಗಿದ್ದು, ಈ ಅವಧಿಯಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.1
- ಭಾರತೀಯ ಸಂಗೀತ ಲೋಕದ ಅಮೂಲ್ಯ ರತ್ನ, ಗಾನ ಕೋಗಿಲೆ ಡಾಕ್ಟರ್ ಎಸ್. ಜಾನಕಿ ಅಮ್ಮ ಅವರ ಅಂತಿಮ ದರ್ಶನ ಪಡೆದು ಹಲವಾರು ಗಣ್ಯರು ಭಾವಪೂರ್ಣ ನಮನ ಸಲ್ಲಿಸಿದ್ದು, ಈ ವೇಳೆ ಸಮಾಜಮುಖಿ ವ್ಯಕ್ತಿತ್ವ ಹಾಗೂ ಯುವ ಉದ್ಯಮಿ ಜಿಮ್ ರವಿ ಅವರೂ ಸಹ ಆಗಮಿಸಿ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಗೀತ ಲೋಕಕ್ಕೆ ಜಾನಕಿ ಅಮ್ಮ ಅವರು ನೀಡಿದ ಅಪಾರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಜಿಮ್ ರವಿ ಅವರು, ಅವರ ಅಗಲಿಕೆಯು ಇಡೀ ದೇಶದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಸುತ್ತಲೂ ಕಸದ ರಾಶಿ ಹಾಗೂ ಕೊಚ್ಛೆ ತುಂಬಿಕೊಂಡಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ ಸ್ವಚ್ಛತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಎನ್. ರಾಜು ಅವರು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ಅವರಿಗೆ ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಕುಟುಂಬಗಳ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರು ರೋಗರುಜಿನಗಳಿಗೆ ತುತ್ತಾಗುವ ಮುನ್ನವೇ ಶಾಲಾ ಆವರಣವನ್ನು ಸ್ವಚ್ಛಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಕೊಚ್ಛೆ ತುಂಬಿಕೊಂಡಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- ಕೂಡ್ಲಿಗಿ ತಾಲೂಕಿನಲ್ಲಿ ಸೋಲಾರ್ ವಿಂಡೋ ಪವರ್ ಕಂಪನಿಗಳ ಹಾವಳಿ ಮಿತಿ ಮೀರಿದ್ದು, ಬಹುತೇಕ ಕಂಪನಿಗಳಿಂದ ಸರ್ಕಾರಕ್ಕೆ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ಹಣ ವಂಚನೆಯಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಿಲ್ಲಾಡಳಿತ, ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಗಳಿಂದ ಸೂಕ್ತ ತನಿಖೆಯಾಗಬೇಕೆಂದು ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೋರಾಟಗಾರರು ಆಗ್ರಹಿಸಿದ್ದಾರೆ. ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನೂರಾರು ರೈತರಿಗೆ ಅನ್ಯಾಯ ಎಸಗಿವೆ. ಈ ಹಗರಣದಲ್ಲಿ ಅನೇಕ ಸ್ಥಳೀಯ ಆಡಳಿತದ ಅಧಿಕಾರಿಗಳು, ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಿನ್ನಬಾರದ ಹೇಸಿಗೆ ತಿಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕಾಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ಇಡಿ, ಲೋಕಾಯುಕ್ತ, ಸಿಬಿಐ, ಸಿಒಡಿ, ಎಸಿಬಿ ಮತ್ತು ಆದಾಯ ತೆರಿಗೆ ಇಲಾಖೆಗಳ ಉನ್ನತಾಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡು, ಮೊದಲು ತಹಶೀಲ್ದಾರರು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಆದಾಯದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. ಒಂದು ವೇಳೆ ತನಿಖೆ ನಡೆಸದಿದ್ದರೆ ಅಗತ್ಯ ಸಾಕ್ಷ್ಯಾಧಾರಗಳ ಸಮೇತ ಕಾನೂನಾತ್ಮಕ ಹೋರಾಟ ನಡೆಸುವುದರ ಜೊತೆಗೆ ಎಲ್ಲಾ ಮಾಧ್ಯಮಗಳ ಹಾಗೂ ಪತ್ರಿಕೆಗಳ ಕೇಂದ್ರ ಕಚೇರಿಗಳಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಲಾಗಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಸಂತೋಷಕುಮಾರ, ವಕೀಲ ಹಾಗೂ ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ಹೋರಾಟಗಾರರು, ರೈತರು ಉಪಸ್ಥಿತರಿದ್ದರು.1
- ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್‌ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್‌ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)4
- ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸಮಾಜವನ್ನು ಉದ್ಧಾರ ಮಾಡುವ ರಾಜಕಾರಣಿಗಳು ಈಗ ಯಾರೂ ಇಲ್ಲ ಎಂದು ರೈತರೊಬ್ಬರು ರಾಜಕಾರಣಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿನ ರಾಜಕೀಯ ವ್ಯವಸ್ಥೆಯೇ ಸರಿಯಿಲ್ಲ ಎಂದು ಕಿಡಿಕಾರಿರುವ ರೈತರು, ರಾಜಕಾರಣಿಗಳ ಜನ್ಮ ಜಾಲಾಡಿದ್ದಾರೆ.1