ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಎಸ್‌ಐಆರ್ ಕಾರ್ಯ ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಭದ್ರಾವತಿ: ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. 112-ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಟ್ಟು 253 ಮತಗಟ್ಟೆ ಹಾಗು 2,14,907 ಮತದಾರರನ್ನು ಒಳಗೊಂಡಿದೆ. ಸುಮಾರು 15 ದಿನಗಳ ಹಿಂದೆಯೇ ಶೇ.100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಸುಮಾರು 1,69,700 ನಮೂನೆಗಳು ಗಣಕೀಕರಣಗೊಂಡಿವೆ. ಬಹುತೇಕ ಮತಗಟ್ಟೆ ಅಧಿಕಾರಿಗಳು ಪ್ರಸ್ತುತ ಶೇ.100ರಷ್ಟು ಗುರಿ ತಲುಪುವ ಹಂತದಲ್ಲಿದ್ದಾರೆ. ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಶೇ.೧೦೦ ಗುರಿ ಸಾಧಿಸಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ. ಮತದಾರರ ನೋಂದಣಾಧಿಕಾರಿಗಳು, ೧೧೨-ಭದ್ರಾವತಿ ವಿಧಾನ ಸಭಾ ಕ್ಷೇತ್ರ ಹಾಗೂ ಉಪ ವಿಭಾಗಾಧಿಕಾರಿಗಳು ಜಿ.ಎಚ್ ಸತ್ಯನಾರಾಯಣ, ತಹಶೀಲ್ದಾರ್ ಪ್ರದೀಪ್ ದೇವಗಿರಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೇರಿದಂತೆ ಇನ್ನಿತರರು ಶೇ.100ರಷ್ಟು ಗುರಿ ಸಾಧಿಸಿರುವ ಮತಗಟ್ಟೆ ಅಧಿಕಾರಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು
ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಎಸ್‌ಐಆರ್ ಕಾರ್ಯ ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಭದ್ರಾವತಿ: ತಾಲೂಕಿನ ಸಿಂಗನ
ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. 112-ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಟ್ಟು 253 ಮತಗಟ್ಟೆ ಹಾಗು
2,14,907 ಮತದಾರರನ್ನು ಒಳಗೊಂಡಿದೆ. ಸುಮಾರು 15 ದಿನಗಳ ಹಿಂದೆಯೇ ಶೇ.100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಸುಮಾರು 1,69,700 ನಮೂನೆಗಳು ಗಣಕೀಕರಣಗೊಂಡಿವೆ. ಬಹುತೇಕ ಮತಗಟ್ಟೆ ಅಧಿಕಾರಿಗಳು ಪ್ರಸ್ತುತ ಶೇ.100ರಷ್ಟು ಗುರಿ ತಲುಪುವ ಹಂತದಲ್ಲಿದ್ದಾರೆ. ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಶೇ.೧೦೦ ಗುರಿ ಸಾಧಿಸಿದ್ದು,
ಪ್ರಶಂಸೆಗೆ ಒಳಗಾಗಿದ್ದಾರೆ. ಮತದಾರರ ನೋಂದಣಾಧಿಕಾರಿಗಳು, ೧೧೨-ಭದ್ರಾವತಿ ವಿಧಾನ ಸಭಾ ಕ್ಷೇತ್ರ ಹಾಗೂ ಉಪ ವಿಭಾಗಾಧಿಕಾರಿಗಳು ಜಿ.ಎಚ್ ಸತ್ಯನಾರಾಯಣ, ತಹಶೀಲ್ದಾರ್ ಪ್ರದೀಪ್ ದೇವಗಿರಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೇರಿದಂತೆ ಇನ್ನಿತರರು ಶೇ.100ರಷ್ಟು ಗುರಿ ಸಾಧಿಸಿರುವ ಮತಗಟ್ಟೆ ಅಧಿಕಾರಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು
- ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು. ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು. ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು. ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು1
- ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು! ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು! ಚಿತ್ರದುರ್ಗ : ನಗರದ ದವಳಗಿರಿ ಬಡಾವಣೆಯ ಮೂರನೇ ಹಂತದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿರುವ ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ) ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಪರಿಣಾಮವಾಗಿ ಇಡೀ ಬಡಾವಣೆಯಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸ್ಥಳೀಯರ ಆತಂಕ: ಶಾರ್ಟ್ ಸರ್ಕ್ಯೂಟ್ ಆದ ತಕ್ಷಣ ಟ್ರಾನ್ಸ್‌ಫಾರ್ಮರ್‌ನಿಂದ ಭಾರಿ ಪ್ರಮಾಣದಲ್ಲಿ ಕಿಡಿಗಳು ಸಿಡಿದು, ಹೊಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳ ಗಮನಕ್ಕೆ ಮನವಿ:ವಿದ್ಯುತ್ ಕೈಕೊಟ್ಟಿರುವುದರಿಂದ ಇಡೀ ಬಡಾವಣೆ ಕತ್ತಲಲ್ಲಿ ಮುಳುಗಿದೆ. ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು. ಹಾನಿಗೊಳಗಾದ ಟ್ರಾನ್ಸ್‌ಫಾರ್ಮರ್ ಅನ್ನು ದುರಸ್ತಿಗೊಳಿಸಿ, ಬಡಾವಣೆಗೆ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾರ್ವಜನಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ.3
- ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ . ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ. ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು.ಸಂಚರಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ. ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.1
- Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.4
- ವಿಶ್ವಕಪ್ ಕಬಡ್ಡಿ ಚಾಂಪಿಯನ್ ಸುರತ್ಕಲ್ ನ ಧನಲಕ್ಷ್ಮೀ ಪೂಜಾರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ವಿಶ್ವಕಪ್ ಕಬಡ್ಡಿ ಚಾಂಪಿಯನ್ ನಮ್ಮ ಸುರತ್ಕಲ್‌ನ ಹೆಮ್ಮೆಯ ಪುತ್ರಿ ಕು. ಧನಲಕ್ಷ್ಮೀ ಪೂಜಾರಿ ಅವರಿಗೆ ಗುಜರಾತ್‌ನ ಅಹಮದಾಬಾದ್‌ನ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ದೊರೆತಿರುವುದು ಸಂತಸದ ಹಾಗೂ ಹೆಮ್ಮೆಯ ವಿಷಯ. ಈ ಅವಕಾಶಕ್ಕೆ ಸಹಕರಿಸಿದ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ, ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು.1
- ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.2