ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ. ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು. ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು. ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು. ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ. ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು. ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು. ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು. ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
- ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ:ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗ್ರಾಮಸ್ಥರ ವತಿಯಿಂದ ಸೋಮವಾರ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಣ್ಣಿನ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು. ಪರಿಸರ ಸ್ನೇಹಿ ಮಣ್ಣಿನ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಗ್ರಾಮಂತರ ವೃತ್ತ ನಿರೀಕ್ಷಕ ಬಸವರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು . ಹಬ್ಬಗಳಲ್ಲಿ ಕೇವಲ ಪೂಜೆಗೆ ಸೀಮಿತವಾಗಬಾರದು. ಇಂತಹ ಕ್ರೀಡಾಕೂಟಗಳಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ, ಒಗ್ಗಟ್ಟು ಬೆಳೆಯುತ್ತದೆ. ಮೊಬೈಲ್ ಬಿಟ್ಟು ಮೈದಾನಕ್ಕೆ ಬರಬೇಕು. ಮಾದಕ ವ್ಯಸನಗಳಿಂದ ದೂರವಿರಬೇಕು" ಎಂದು ಅವರು ಕಿವಿಮಾತು ಹೇಳಿದರು. *ಕಾರ್ಯಕ್ರಮದಲ್ಲಿ* ಗ್ರಾಮದ ಎಲ್ಲಾ ಜನಾಂಗದ ಮುಖಂಡರು, ಯುವಕ ಸಂಘದ ಪದಾಧಿಕಾರಿಗಳು, ಮಹಿಳೆಯರು ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.1
- ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಪರಿಹಾರ: ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯ- ಕೆಆರ್ ಎಸ್ ನೀಡರಿನ ಮಟ್ಟ ಕುಸಿತ ಕಂಡಿರುವ ಹಿನ್ನೆಲೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಹೇಮಾವತಿ ಜಲಾಶಯ ದಿಂದ ನೀರು ಹರಿಸಲಾಗುತ್ತಿದೆ. ಆದರೆ, ಕೆಲವೆಡೆ ರೈತರು ನೀರು ತಡೆಯುತ್ತಿರುವುದು ಗಮನಕ್ಕೆ ಬಂದಿದೆ. ಕೆ.ಆರ್. ಪೇಟೆ ಹಾಗೂ ಪಾಂಡವಪುರ ಭಾಗದ ರೈತರು ಸಹಕರಿಸಿ, ಮದ್ದೂರು ಹಾಗೂ ಮಳವಳ್ಳಿ ಭಾಗದ ಕೆರೆಗಳು ತುಂಬಲು ಅವಕಾಶ ಮಾಡಿಕೊಡಬೇಕು. ಅಗತ್ಯವಿದ್ದರೆ ಪೊಲೀಸ್ ಭದ್ರತೆ ಪಡೆದು ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತು ವಾರಿ ಸಚಿವ ಚಲುವ ರಾಯಸ್ವಾಮಿ ಹೇಳಿದ್ರು. ಮಂಡ್ಯದಲ್ಲಿಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆ ಸಭೆಯಲ್ಲಿ ಬಾಗವಹಿಸಿ ಮಾತನಾಡಿದ ಅವರುಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪೀಠ ಮೂರು ದಿನ ಕಾರ್ಯನಿರ್ವಹಿಸದ ಕಾರಣ, ಕಾವೇರಿ ನೀರು ನಿಯಂತ್ರಣ ಸಮಿತಿಗೆ (CWRC) ಇಂದು ಮಧ್ಯಾಹ್ನವೇ ವಿಶೇಷ ಅರ್ಜಿ ಸಲ್ಲಿಸಿ ರಾಜ್ಯದ ನೀರಿನ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡಲಾಗುವುದು. ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಜಾರಿ ಮಾತ್ರ ಶಾಶ್ವತ ಪರಿಹಾರ ಎಂದು ಅವರು ಪುನರುಚ್ಚರಿಸಿದರು.1
- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು1
- All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*1
- 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju1
- ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.3
- ಗೌರಿ ಗಣೇಶ ಹಬ್ಬದ ಬೆಳಗು ಎಂದರೆ ಅದೇ ಒಂದು ಚಂದ ಮಾಮರ ನ್ಯೂಸ್ ಹಾಗೆ ಸುಮ್ಮನೆ ಗೌರಿ ಗಣೇಶ ಹಬ್ಬದ ಬೆಳಗು ಎಂದರೆ ಅದೇ ಒಂದು ಚಂದ ಮಳವಳ್ಳಿ ಹಬ್ಬದ ಬೆಳಗು ಎಂದರೆ ಅದೇ ಒಂದು ಚಂದ. ಇಂದು ಗೌರಿ ಗಣೇಶ ಹಬ್ಬದ ದಿನ ಬೆಳಿಗ್ಗೆಯಿಂದಲೇ ವಾತಾವರಣ ತುಂಬಾ ಸುಂದರವಾಗಿ ಕಂಗೊಳಿಸುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಮೋಡ ಕವಿದ ವಾತಾವರಣ, ತಂಪಾದ ಗಾಳಿ. ಎಲ್ಲೆಡೆ ಹಬ್ಬದ ಸಂಭ್ರಮ. ಮನೆ ಮನೆಗಳಲ್ಲಿ ಗೌರಿ ದೇವಿ ಮತ್ತು ಗಣಪತಿಯ ಅಲಂಕಾರ, ಮಾವಿನ ತೋರಣ, ಹೂವಿನ ಸುವಾಸನೆ. ಬೀದಿಗಳಲ್ಲಿ ಜನರ ಓಡಾಟ, ಹೊಸ ಬಟ್ಟೆ ತೊಟ್ಟ ಮಕ್ಕಳ ಖುಷಿ. ಮಧ್ಯಾಹ್ನದ ಹೊತ್ತಿಗೆ ಇದ್ದಕ್ಕಿದ್ದಂತೆ ಸಣ್ಣಗೆ ಮಳೆ ಆರಂಭವಾಯಿತು. ಬಿಸಿಲು ಮತ್ತು ಮಳೆಯ ಜುಗಲ್ ಬಂದಿ. ಹಬ್ಬಕ್ಕೆ ಮಳೆ ದೇವರ ಆಶೀರ್ವಾದದಂತೆ ಬಂದಂತಿತ್ತು. *ಮಳೆಯ ಅಂದ ಚಂದ:* - ತುಂತುರು ಮಳೆಯಲ್ಲಿ ಮಣ್ಣಿನ ಪರಿಮಳ ಘಮಿಸುತ್ತಿತ್ತು. - ರಸ್ತೆಗಳು ತೊಳೆದಂತೆ ಸ್ವಚ್ಛವಾದವು, ಮರ ಗಿಡಗಳು ಹಸಿರಾಗಿ ನಳನಳಿಸಿದವು. - ಮಕ್ಕಳು ಮಳೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಗಣಪತಿಯನ್ನು ನೋಡಲು ಸಂಭ್ರಮಿಸಿದರು. - ಮಳೆಯೊಂದಿಗೆ ಬೀಸಿದ ತಂಗಾಳಿಗೆ ಗಣೇಶನ ಮಂಟಪಗಳಲ್ಲಿನ ದೀಪಗಳು ಮಿನುಗುತ್ತಾ ಇನ್ನಷ್ಟು ಸುಂದರವಾಗಿ ಕಾಣುತ್ತಿದ್ದವು. ಈ ಮಳೆ ಕೇವಲ ನೀರಲ್ಲ, ಹಬ್ಬದ ಖುಷಿಗೆ ಇನ್ನಷ್ಟು ಮೆರುಗು ನೀಡಿದ ಪ್ರಕೃತಿಯ ಉಡುಗೊರೆ. ಗೌರಿ ಗಣೇಶನ ಆಗಮನದೊಂದಿಗೆ ಮಳೆಯ ಆಗಮನ ನಾಡಿಗೆ ಸಮೃದ್ಧಿಯ ಸಂಕೇತ ಎಂಬ ನಂಬಿಕೆ ಜನರಲ್ಲಿ ಇದೆ. ಒಟ್ಟಾರೆ, ಭಕ್ತಿ, ಸಂಭ್ರಮ, ಸುಂದರ ವಾತಾವರಣ ಮತ್ತು ಸಂತಸದ ಮಳೆಯೊಂದಿಗೆ ಈ ಬಾರಿಯ ಗೌರಿ ಗಣೇಶ ಹಬ್ಬ ಅವಿಸ್ಮರಣೀಯವಾಗಿ ಮೂಡಿಬಂದಿದೆ.1
- ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರು ಅರಿಯಬೇಕು- ಎನ್. ಚಲುವರಾಯಸ್ವಾಮ ಮಂಡ್ಯ- ಜಾತಿ, ಧರ್ಮ, ಮೇಲು-ಕೀಳು, ಅಂತಸ್ತು, ಅಧಿಕಾರ ಹಾಗೂ ಆರ್ಥಿಕ ಅಸಮಾನತೆಗಳನ್ನು ಮೀರಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ನ್ಯಾಯ, ಸ್ವಾತಂತ್ರ್ಯ ಹಾಗೂ ಅವಕಾಶಗಳನ್ನು ಒದಗಿಸುವ ವ್ಯವಸ್ಥೆಯೇ ಪ್ರಜಾಪ್ರಭುತ್ವವಾಗಿದ್ದು, ಇದರ ಮೌಲ್ಯಗಳನ್ನು ಯುವಜನರು ಆಳವಾಗಿ ಅರಿತುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವು ಕೇವಲ ಆಡಳಿತ ವ್ಯವಸ್ಥೆಯಲ್ಲ. ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಗೌರವವನ್ನು ಸಂರಕ್ಷಿಸುವ ವ್ಯವಸ್ಥೆಯಾಗಿದೆ. ಈ ಮೌಲ್ಯಗಳನ್ನು ನಮಗೆ ನೀಡಿರುವ ಸಂವಿಧಾನವನ್ನು ಗೌರವಿಸಿ, ಅದರ ಆಶಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಪ್ರತಿ ವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ವಿಶ್ವದಾದ್ಯಂತ ಪ್ರಜಾಪ್ರಭುತ್ವದ ಮೌಲ್ಯಗಳು, ಜನರ ಹಕ್ಕುಗಳು ಹಾಗೂ ಜವಾಬ್ದಾರಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಮ್ಮ ದೇಶದಲ್ಲಿಯೂ ಕೇಂದ್ರ, ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಗುತ್ತಿದೆ ಎಂದು ತಿಳಿಸಿದರು. *ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಅಗತ್ಯ* ಇಂದಿನ ಯುವಜನರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಎಷ್ಟು ಆಳವಾಗಿ ಅರ್ಥಮಾಡಿಕೊಳ್ಳುತ್ತಾರೋ, ಅಷ್ಟು ಬಲಿಷ್ಠವಾಗಿ ಹಾಗೂ ಜವಾಬ್ದಾರಿಯುತವಾಗಿ ದೇಶವನ್ನು ಮುನ್ನಡೆಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಎಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಂವಿಧಾನ, ಪ್ರಜಾಪ್ರಭುತ್ವ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ತಿಳಿದುಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು. ದೇಶದ ಸಂವಿಧಾನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಸದಸ್ಯರನ್ನು ಗೌರವದಿಂದ ಸ್ಮರಿಸಬೇಕು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನಾಯಕತ್ವ ನೀಡಿದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜನಸಾಮಾನ್ಯರು ಮಾಡಿದ ತ್ಯಾಗ ಮತ್ತು ಹೋರಾಟದ ಫಲವಾಗಿ ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪುಗೊಂಡಿದೆ ಎಂದರು. *ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನ ಅರಿವು ಮೂಡಿಸಿ* ಶಾಲಾ-ಕಾಲೇಜುಗಳ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಂವಿಧಾನವು ಕೇವಲ ಪಠ್ಯಪುಸ್ತಕದ ವಿಷಯವಾಗದೆ, ವಿದ್ಯಾರ್ಥಿಗಳ ಜೀವನದ ಭಾಗವಾಗಬೇಕು. ಇಂದಿನ ಮಕ್ಕಳು ನಾಳಿನ ದೇಶದ ನಾಯಕರು. ಅವರಲ್ಲಿ ಸಂವಿಧಾನ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸಮಾನತೆಯ ಮನೋಭಾವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ರವರು ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಭೋದಿಸಿದರು* ಕಾರ್ಯಕ್ರಮದಲ್ಲಿ ಮಂಡ್ಯ ನಗರಾಭಿವೃದ್ಥಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ. ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್, ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಆರ್ ನಂದಿನಿ, ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ್, ಡಿ.ವೈ.ಎಸ್.ಪಿ ಹೆಚ್. ಲಕ್ಷ್ಮೀನಾರಾಯಣ ಪ್ರಸಾದ್, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.1
- ಹೆಚ್ಡಿಕೆ ಕೇಂದ್ರ ಮಂತ್ರಿಯಂತೆ ವರ್ತಿಸಲಿ- ಹೆಚ್.ಸಿ.ಬಾಲಕೃಷ್ಣ ವ್ಯಂಗ್ಯ :ಹೆಚ್ಡಿಕೆ ಕೇಂದ್ರ ಮಂತ್ರಿಯಂತೆ ವರ್ತಿಸಲಿ, ಗ್ರಾಮ ಪಂಚಾಯತಿ ಸದಸ್ಯರಂತೆ ಅಲ್ಲ - ಪೌರಾಢಳಿತ ಸಚಿವ ಹೆಚ್.ಸಿ.ಬಾಲಕೃಷ್ಣ: ನೈಸ್, ಕೆಪಿಎಸ್ಸಿ ಹಗರಣ ಹಾಗೂ ಬಿಡದಿ ಟೌನ್ ಶಿಪ್ ವಿಚಾರವಾಗಿ ನಾವು ಧ್ವನಿ ಎತ್ತಿದ್ದಕ್ಕೆ ಪ್ರಜ್ವಲ್ ವಿಚಾರ ಮುನ್ನೆಲೆಗೆ ತಂದಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಕ್ಕೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಪೌರಾಢಳಿತ ಸಚಿವ ಹೆಚ್.ಸಿ.ಬಾಲಕೃಷ್ಣ .ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಆ ಪ್ರಕರಣಗಳಿಗೂ ಏನು ಸಂಬಂಧ.? ಹೀಗೆ ಮಾತನಾಡಿಯೇ ಪ್ರಜ್ವಲ್ ರನ್ನ ಜೈಲಿಗೆ ಕಳುಹಿಸಿದ್ರು. ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಬೇಕು ಅನ್ನೋದು ಕುಮಾರಸ್ವಾಮಿ ಅಭಿಲಾಷೆ. ಜವಾಬ್ದಾರಿಯುತ ಮಂತ್ರಿ ಸ್ವಲ್ಪ ಗೌರವಯುತವಾಗಿ ಮಾತನಾಡಿ. ಕೇಂದ್ರ ಮಂತ್ರಿ ಅನ್ನೋದನ್ನ ಮರೆತು ಪಂಚಾಯ್ತಿ ಮೆಂಬರ್ ರೀತಿ ಆಡ್ತಿದ್ದಾರೆ. ಪ್ರಜ್ವಲ್ ಮುಗಿಸುವ ತನಕ ಕುಮಾರಸ್ವಾಮಿ ಸುಮ್ಮನಿರಲ್ಲ. ಎಂದು ಸಚಿವ ಹೆಚ್.ಸಿ.ಬಾಲಕೃಷ್ಣ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು1