Shuru
Apke Nagar Ki App…
ಲವಂಗ, ಶಾಹಿ ಜೀರಿಗೆ, ಸೋಂಪು ಹಾಗೂ ಸಾಸಿವೆ ಸೇರಿದಂತೆ ಹಲವು ಮಸಾಲೆಗಳಲ್ಲಿ ರಾಸಾಯನಿಕ ಕಲಬೆರಕೆ ಪತ್ತೆಯಾಗಿದ್ದು , ನೀರಿನ ಪರೀಕ್ಷೆ ಮೂಲಕ ನಕಲಿ ಮತ್ತು ಶುದ್ಧ ಮಸಾಲೆಗಳನ್ನು ಗುರುತಿಸಬಹುದೆಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
Anand Kumar
ಲವಂಗ, ಶಾಹಿ ಜೀರಿಗೆ, ಸೋಂಪು ಹಾಗೂ ಸಾಸಿವೆ ಸೇರಿದಂತೆ ಹಲವು ಮಸಾಲೆಗಳಲ್ಲಿ ರಾಸಾಯನಿಕ ಕಲಬೆರಕೆ ಪತ್ತೆಯಾಗಿದ್ದು , ನೀರಿನ ಪರೀಕ್ಷೆ ಮೂಲಕ ನಕಲಿ ಮತ್ತು ಶುದ್ಧ ಮಸಾಲೆಗಳನ್ನು ಗುರುತಿಸಬಹುದೆಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
More news from ಕರ್ನಾಟಕ and nearby areas
- .ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ ಯಾದಗೀರ, ಆ.5: ಜಿಲ್ಲೆಯ ಯಾದಗೀರ ತಾಲೂಕಿನ ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಸಂಭವಿಸಿದ ವಿಷಾನಿಲ (ಗ್ಯಾಸ್) ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೈಗಾರಿಕಾ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಬಳಿಕ ಕಂಪನಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಾರ್ಮಿಕರ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಮೃತರನ್ನು ವಿಕ್ರಮ್ ಸಿಂಗ್ (30), ಸಂಜಯ್ ಸಿಂಗ್ (29) ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಂಪನಿಯ ಉತ್ಪಾದನಾ ಘಟಕದಲ್ಲಿ ಕಾರ್ಮಿಕರು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿಷಾನಿಲ ಸೋರಿಕೆಯಾಗಿದ್ದು, ಮೂವರು ಕಾರ್ಮಿಕರು ಉಸಿರಾಟದ ತೊಂದರೆಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೈದಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳವನ್ನು ಭದ್ರತಾ ವಲಯವಾಗಿ ಪರಿಗಣಿಸಿ, ಸೋರಿಕೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ. ತಾಂತ್ರಿಕ ದೋಷ, ನಿರ್ವಹಣೆಯ ಲೋಪ ಅಥವಾ ಸುರಕ್ಷತಾ ನಿಯಮಗಳ ಉಲ್ಲಂಘನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ಸುರಕ್ಷತಾ ವ್ಯವಸ್ಥೆಗಳು ಸಮರ್ಪಕವಾಗಿದ್ದವೆಯೇ, ಕಾರ್ಮಿಕರಿಗೆ ಅಗತ್ಯವಾದ ಸುರಕ್ಷತಾ ಸಾಧನಗಳನ್ನು ಒದಗಿಸಲಾಗಿತ್ತೇ ಹಾಗೂ ತುರ್ತು ಪರಿಸ್ಥಿತಿ ಎದುರಿಸಲು ಸೂಕ್ತ ವ್ಯವಸ್ಥೆ ಇತ್ತೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಕಾರ್ಮಿಕ ಸಂಘಟನೆಗಳು ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಜಿಲ್ಲಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿತ ಇಲಾಖೆಗಳ ಮೂಲಕ ಸಮಗ್ರ ತನಿಖೆಗೆ ಸೂಚನೆ ನೀಡಲಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ತನಿಖಾ ವರದಿ ಬಳಿಕ ಗ್ಯಾಸ್ ಸೋರಿಕೆಗೆ ನಿಖರ ಕಾರಣ ಹಾಗೂ ಜವಾಬ್ದಾರಿಯ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ನಿರೀಕ್ಷೆಯಿದೆ.. ವರದಿ ನಿಜಾಮುದ್ದಿನ್ ಯಾದಗಿರಿ4
- ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು1
- ಬೆಳೆ ವಿಮೆಯಲ್ಲಿ ತಾರತಮ್ಯ ಆರೋಪ | ಇನ್ಶೂರೆನ್ಸ್ ಕಂಪನಿ ವಿರುದ್ಧ ರೈತರ ಆಕ್ರೋಶ ಕಲಬುರಗಿ: ಜಿಲ್ಲೆಯ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ನಡುವೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಅಸಮಾನತೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಒಂದೇ ರೀತಿಯ ಬೆಳೆ ಹಾನಿಯಾಗಿದ್ದರೂ ಕೆಲವು ಗ್ರಾಮ ಪಂಚಾಯತ್‌ಗಳ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಮೆ ಹಣ ಜಮೆಯಾಗಿದ್ದು, ಇನ್ನೂ ಕೆಲವು ಪಂಚಾಯತ್‌ಗಳ ರೈತರಿಗೆ ಕಡಿಮೆ ಮೊತ್ತ ಅಥವಾ ಯಾವುದೇ ಪರಿಹಾರ ದೊರೆತಿಲ್ಲ ಎಂದು ರೈತರು ದೂರಿದ್ದಾರೆ. ಈ ಕಾರಣದಿಂದ ರೈತರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ವಿಮಾ ಕಂಪನಿಯ ಕಾರ್ಯವೈಖರಿಯನ್ನು ಪ್ರಶ್ನಿಸಲಾಗಿದೆ. ಬರಗಾಲದಿಂದ ಬೆಳೆಗಳು ಒಣಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೈಜ ಬೆಳೆ ಹಾನಿಯ ಆಧಾರದ ಮೇಲೆ ಸಮಾನವಾಗಿ ಪರಿಹಾರ ವಿತರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಹಾಗೂ ಇನ್ಶೂರೆನ್ಸ್ ಕಂಪನಿ ತಕ್ಷಣ ಸಮಸ್ಯೆ ಪರಿಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.1
- ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಇಂದು ಮಾನ್ವಿ ಪಟ್ಣಣದ ಬಸವ ವೃತ್ತದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಮೂಲಕ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಯಪ್ಪ ಉಟಕನೂರು ಮಾತನಾಡಿ, 'ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ' ಎಂದು ದೂರಿದರು. 'ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹40 ಸಾವಿರ ಬರ ಪರಿಹಾರವನ್ನು ನೀಡಬೇಕು. ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿ ನೀರು ಸಂಗ್ರ-ಹವಾಗಿದ್ದು, ಈ ಬಾರಿ ಕಾರ್ಖಾನೆಗಳಿಗೆ ನೀರು ಕೊಡದೇ ರೈತರಿಗೆ ಕಾಲುವೆ ಮೂಲಕ ನೀರನ್ನು ನಿರಂತರವಾಗಿ ಹರಿಸಬೇಕು' ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ ಮಾತನಾಡಿ, 'ತಾಲ್ಲೂಕಿನಲ್ಲಿ ಸರ್ಕಾರಕ್ಕೆ ಜೋಳವನ್ನು ಮಾರಾಟ ಮಾಡಿದ ರೈತರಿಗೆ ಐದು ತಿಂಗಳು ಕಳೆದರೂ ಹಣ ಜಮಾ ಆಗಿಲ್ಲ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ತಾ.ಪಂ. ವತಿಯಿಂದ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ವಿಬಿ- ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಬೇಕು' ಎಂದು ಒತ್ತಾಯಿಸಿದರು.ರೈತ ಸಂಘದ ಪದಾಧಿಕಾರಿಗಳಾದ ಶ್ಯಾಮ ಸಿಂಗ್ ರಜಪೂತ್, ವೀರೇಶ ನಾಯಕ, ಶ್ರೀಧರ ಕೋಟೆಕಲ್, ಉರುಕುಂದ ನಾಯಕ ಬಜಾರ, ಬುಜ್ಜಿಗೌಡ, ವೆಂಕಟೇಶ ಕರಡಿಗುಡ್ಡ ಉಪಸ್ಥಿತರಿದ್ದರು. .3
- ಪತ್ರಕರ್ತರ ಮೇಲಿನ ಆರೋಪಕ್ಕೆ ತೀವ್ರ ಆಕ್ಷೇಪ | ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ1
- ನಿಮ್ಮ ಸಿದ್ಧಾಂತದ ಜನರನ್ನು ಜಡ್ಜ್ ಗಳಾಗಿ ಆಯ್ಕೆ ಮಾಡುತ್ತೀರಿ" ಸುಪ್ರೀಂ ಕೋರ್ಟ್ (ನ್ಯಾಯಾಧೀಶರ " ಸಂಖ್ಯೆ) ತಿದ್ದುಪಡಿ ಮಸೂದೆ ಕುರಿತು ಚರ್ಚೆ ರಾಜ್ಯಸಭಾ ಸಂಸದೆ ಮೇನಕಾ ಗುರುಸ್ವಾಮಿ ಮಾತು1
- ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"1
- ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ;1