logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ ಶಿಷ್ಯವೇತನವನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿ ಕೊಪ್ಪಳದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್) ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ರವಾನಿಸುವಂತೆ ಆಗ್ರಹಿಸಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ದಲಿತ ಮತ್ತು ಆದಿವಾಸಿ ಸಂಶೋಧನಾ ವಿದ್ಯಾರ್ಥಿಗಳು ಕಳೆದ 18 ದಿನಗಳಿಂದ ತಮ್ಮ ನ್ಯಾಯಸಮ್ಮತ ಶಿಷ್ಯವೇತನಕ್ಕಾಗಿ ಬೀದಿಯಲ್ಲಿ ಕುಳಿತು ನಿರಂತರ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸರ್ಕಾರವೇ ಈ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕಡೆಗಣಿಸಿರುವುದು ಖಂಡನೀಯವಾಗಿದ್ದು, ವಿದ್ಯಾರ್ಥಿಗಳು ಪ್ರಯೋಗಾಲಯ ಮತ್ತು ಗ್ರಂಥಾಲಯಗಳಲ್ಲಿ ಇರಬೇಕಾದ ಪರಿಸ್ಥಿತಿ ಬಿಟ್ಟು ರಸ್ತೆಯಲ್ಲಿ ಹೋರಾಡುವಂತೆ ಮಾಡಿರುವುದು ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಮುಖಂಡರು ಆರೋಪಿಸಿದ್ದಾರೆ. ರಾಜ್ಯದ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ತಕ್ಷಣ ಶಿಷ್ಯವೇತನ ಹಾಗೂ ಬಾಕಿ ಮೊತ್ತ ಪಾವತಿಸುವುದು, ಅಗತ್ಯ ಅನುದಾನ ಹೆಚ್ಚಿಸುವುದು, ಉಚಿತ ಲ್ಯಾಪ್‌ಟ್ಯಾಪ್ ವಿತರಿಸುವುದು, ಹಾಸ್ಟೆಲ್ ಅಥವಾ ಮಾಸಿಕ ಬಾಡಿಗೆ ರದ್ದುಗೊಳಿಸುವುದು, ಭೋಜನ ವ್ಯವಸ್ಥೆ ಮುಂದುವರಿಸುವುದು, ಮಹಿಳಾ ಸಂಶೋಧಕಿಯರ ಸುರಕ್ಷತೆ ಖಾತರಿಪಡಿಸುವುದು ಹಾಗೂ ಪಿಎಚ್.ಡಿ. ಪ್ರವೇಶ, ನೋಂದಣಿ ಮತ್ತು ವಾರ್ಷಿಕ ಶುಲ್ಕಗಳನ್ನು ಕಡಿತಗೊಳಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಲಾಗಿದೆ. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಮಿತಿಯ ಯಮನೂರಪ್ಪ ಇಳಿಗನೂರು (ವಕೀಲರು), ಉಮೇಶ್ ಕಾಟಾಪುರ, ವೀರೇಶ್ ಗೊರೆಬಾಳ, ಮಾರುತಿ, ಲಕ್ಷ್ಮಿಕಾಂತ, ಸೋಮನಾಥ ಕಾಟಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

1 hr ago
user_Shiva Belagavi
Shiva Belagavi
Photographer ಅಥಣಿ, ಬೆಳಗಾವಿ, ಕರ್ನಾಟಕ•
1 hr ago
70fdbd31-fba8-4913-b2e6-219389ec9dc4

ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ ಶಿಷ್ಯವೇತನವನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿ ಕೊಪ್ಪಳದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್) ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ರವಾನಿಸುವಂತೆ ಆಗ್ರಹಿಸಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ದಲಿತ ಮತ್ತು ಆದಿವಾಸಿ ಸಂಶೋಧನಾ ವಿದ್ಯಾರ್ಥಿಗಳು ಕಳೆದ 18 ದಿನಗಳಿಂದ ತಮ್ಮ ನ್ಯಾಯಸಮ್ಮತ ಶಿಷ್ಯವೇತನಕ್ಕಾಗಿ ಬೀದಿಯಲ್ಲಿ

3e88f0d8-0635-4b25-873f-1edb22f3919c

ಕುಳಿತು ನಿರಂತರ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸರ್ಕಾರವೇ ಈ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕಡೆಗಣಿಸಿರುವುದು ಖಂಡನೀಯವಾಗಿದ್ದು, ವಿದ್ಯಾರ್ಥಿಗಳು ಪ್ರಯೋಗಾಲಯ ಮತ್ತು ಗ್ರಂಥಾಲಯಗಳಲ್ಲಿ ಇರಬೇಕಾದ ಪರಿಸ್ಥಿತಿ ಬಿಟ್ಟು ರಸ್ತೆಯಲ್ಲಿ ಹೋರಾಡುವಂತೆ ಮಾಡಿರುವುದು ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಮುಖಂಡರು ಆರೋಪಿಸಿದ್ದಾರೆ. ರಾಜ್ಯದ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ತಕ್ಷಣ ಶಿಷ್ಯವೇತನ ಹಾಗೂ ಬಾಕಿ ಮೊತ್ತ ಪಾವತಿಸುವುದು, ಅಗತ್ಯ

31c6102c-e5f6-4b34-83b9-c734929f25fb

ಅನುದಾನ ಹೆಚ್ಚಿಸುವುದು, ಉಚಿತ ಲ್ಯಾಪ್‌ಟ್ಯಾಪ್ ವಿತರಿಸುವುದು, ಹಾಸ್ಟೆಲ್ ಅಥವಾ ಮಾಸಿಕ ಬಾಡಿಗೆ ರದ್ದುಗೊಳಿಸುವುದು, ಭೋಜನ ವ್ಯವಸ್ಥೆ ಮುಂದುವರಿಸುವುದು, ಮಹಿಳಾ ಸಂಶೋಧಕಿಯರ ಸುರಕ್ಷತೆ ಖಾತರಿಪಡಿಸುವುದು ಹಾಗೂ ಪಿಎಚ್.ಡಿ. ಪ್ರವೇಶ, ನೋಂದಣಿ ಮತ್ತು ವಾರ್ಷಿಕ ಶುಲ್ಕಗಳನ್ನು ಕಡಿತಗೊಳಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಲಾಗಿದೆ. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಮಿತಿಯ ಯಮನೂರಪ್ಪ ಇಳಿಗನೂರು (ವಕೀಲರು), ಉಮೇಶ್ ಕಾಟಾಪುರ, ವೀರೇಶ್ ಗೊರೆಬಾಳ, ಮಾರುತಿ, ಲಕ್ಷ್ಮಿಕಾಂತ, ಸೋಮನಾಥ ಕಾಟಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ರಾಯಭಾಗ ತಾಲೂಕಿನ ಭಿರಡಿ ಗ್ರಾಮದ ಬಸವ ನಗರದಲ್ಲಿ ಶ್ರೀ ಬಸವರಾಜ್ ಶೇಖರ ಬೊರಗಾಂವೆ ಅವರ ಮಾಲೀಕತ್ವದ “ಮಾಯಕ್ಕಾ ಆಗ್ರೋ ಮಿಲ್” ನೂತನ ಉದ್ಘಾಟನೆ ಹಾಗೂ ಪ್ರಾರಂಭೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಶ್ರೀಸದ್ಗುರು ರಾಯಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು ಉಪಸ್ಥಿತರಿದ್ದು, ಸದಾಶಿವ ದೇಶಿಂಗೆ ಹಾಗೂ ಭಿರಡಿ ಗ್ರಾಮದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಚೈತನ ಸೇರಿದಂತೆ ಇತರ ಗಣ್ಯರನ್ನು ಸನ್ಮಾನಿಸಿದರು. ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಮಹಾದೇವ ಮಾರುತಿ ಬೋರಗಾಂವೆ, ವೀರಪಾಕ್ಷಿ ಬೋರಗಾಂವೆ, ರಾಜು ಹಿಪ್ಪರಿಗಿ, ಶೇಖರ ಬೋರಗಾಂವೆ, ಕಲ್ಲು ಅಂಬರಗೆ, ಚಿದಾನಂದ ಸ್ವಾಮಿ ಅಲಕನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.
    1
    ರಾಯಭಾಗ ತಾಲೂಕಿನ ಭಿರಡಿ ಗ್ರಾಮದ ಬಸವ ನಗರದಲ್ಲಿ ಶ್ರೀ ಬಸವರಾಜ್ ಶೇಖರ ಬೊರಗಾಂವೆ ಅವರ ಮಾಲೀಕತ್ವದ “ಮಾಯಕ್ಕಾ ಆಗ್ರೋ ಮಿಲ್” ನೂತನ ಉದ್ಘಾಟನೆ ಹಾಗೂ ಪ್ರಾರಂಭೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಶ್ರೀಸದ್ಗುರು ರಾಯಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು ಉಪಸ್ಥಿತರಿದ್ದು, ಸದಾಶಿವ ದೇಶಿಂಗೆ ಹಾಗೂ ಭಿರಡಿ ಗ್ರಾಮದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಚೈತನ ಸೇರಿದಂತೆ ಇತರ ಗಣ್ಯರನ್ನು ಸನ್ಮಾನಿಸಿದರು. ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಮಹಾದೇವ ಮಾರುತಿ ಬೋರಗಾಂವೆ, ವೀರಪಾಕ್ಷಿ ಬೋರಗಾಂವೆ, ರಾಜು ಹಿಪ್ಪರಿಗಿ, ಶೇಖರ ಬೋರಗಾಂವೆ, ಕಲ್ಲು ಅಂಬರಗೆ, ಚಿದಾನಂದ ಸ್ವಾಮಿ ಅಲಕನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.
    user_ಅಮರ ವಾಹಿನಿ ಕನ್ನಡ news
    ಅಮರ ವಾಹಿನಿ ಕನ್ನಡ news
    ರಾಯಬಾಗ, ಬೆಳಗಾವಿ, ಕರ್ನಾಟಕ•
    2 hrs ago
  • Post by ANUSHKA FOOTWEAR Nagarmunnoli
    1
    Post by ANUSHKA   FOOTWEAR   Nagarmunnoli
    user_ANUSHKA   FOOTWEAR   Nagarmunnoli
    ANUSHKA FOOTWEAR Nagarmunnoli
    Salesperson ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    3 hrs ago
  • ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
    1
    ಬಾಗಲಕೋಟೆ ಜಿಲ್ಲೆಯ ಬಿಳಗಿ ಪರಿಸರದಲ್ಲಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ರೈತರು ಮತ್ತು ಕುರಿಗಾಹಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕುರಿ ನಿಮ್ಮ ಅರಣ್ಯಕ್ಕೆ ಬರಬಾರದೆಂದರೆ, ನಿಮ್ಮ ಕಾಡು ಪ್ರಾಣಿಗಳು ನಮ್ಮ ಹೊಲ-ಗದ್ದೆಗೂ ಬರಬಾರದು" ಎಂದು ರೈತ ಸಿದ್ದಪ್ಪ ಬಳಗಾನೂರ ಅವರು ಅರಣ್ಯ ಅಧಿಕಾರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಅರಣ್ಯ ಇಲಾಖೆಯು ರೈತರ ಆಡು ಮತ್ತು ಕುರಿಗಳನ್ನು ವಶಪಡಿಸಿಕೊಳ್ಳುತ್ತಿರುವುದು ಹಾಗೂ ದಂಡ ವಿಧಿಸುತ್ತಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದು ಅಧಿಕಾರಿಗಳು ಮತ್ತು ರೈತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಕಾಡುಹಂದಿ ಹಾಗೂ ಜಿಂಕೆಗಳ ಹಾವಳಿಯಿಂದ ಹೊಲಗಳಲ್ಲಿ ಬೆಳೆ ನಾಶವಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಹಾಗೂ ಸೂಕ್ತ ಪರಿಹಾರ ಧನ ನೀಡುವಂತೆ ಒತ್ತಾಯಿಸಿದ್ದಾರೆ. ಇಲಾಖೆಯು ತನ್ನ ಏಕಪಕ್ಷೀಯ ಕ್ರಮಗಳನ್ನು ನಿಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    8 hrs ago
  • ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಅಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೃಷ್ಣ ನದಿಯ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಈ ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.
    1
    ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಅಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೃಷ್ಣ ನದಿಯ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಈ ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    16 hrs ago
  • ವಿಜಯಪುರದಲ್ಲಿ ಎಸ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್ ಬೆಂಬಲಿಗರು ಹಾಗೂ ಹಮೀದ್ ಮುಶ್ರಿಫ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.
    1
    ವಿಜಯಪುರದಲ್ಲಿ ಎಸ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್ ಬೆಂಬಲಿಗರು ಹಾಗೂ ಹಮೀದ್ ಮುಶ್ರಿಫ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    19 hrs ago
  • ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು. ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    1
    ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು.

ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    27 min ago
  • ಬೆಳಗಾವಿ ಜಿಲ್ಲೆಯ ರಾಯಭಾಗ ಕೆರೆಗಳಿಗೆ ಅಧಿಕಾರಿಗಳು ಯಶಸ್ವಿಯಾಗಿ ಜೀವ ತುಂಬಿದ್ದಾರೆ. ತಹಸೀಲ್ದಾರ್ ಹಾಗೂ ಮಹಾವೀರ ಮೋಹತೆ ಅವರ ಮುಂದಾಳತ್ವದಲ್ಲಿ ಈ ಕಾರ್ಯ ಯಶಸ್ವಿಯಾಗಿ ನಡೆದಿದೆ.
    1
    ಬೆಳಗಾವಿ ಜಿಲ್ಲೆಯ ರಾಯಭಾಗ ಕೆರೆಗಳಿಗೆ ಅಧಿಕಾರಿಗಳು ಯಶಸ್ವಿಯಾಗಿ ಜೀವ ತುಂಬಿದ್ದಾರೆ. ತಹಸೀಲ್ದಾರ್ ಹಾಗೂ ಮಹಾವೀರ ಮೋಹತೆ ಅವರ ಮುಂದಾಳತ್ವದಲ್ಲಿ ಈ ಕಾರ್ಯ ಯಶಸ್ವಿಯಾಗಿ ನಡೆದಿದೆ.
    user_ಅಮರ ವಾಹಿನಿ ಕನ್ನಡ news
    ಅಮರ ವಾಹಿನಿ ಕನ್ನಡ news
    ರಾಯಬಾಗ, ಬೆಳಗಾವಿ, ಕರ್ನಾಟಕ•
    20 hrs ago
  • ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.
    1
    ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.