ತುಮಕೂರು: ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ದ ವತಿಯಿಂದ *ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ* ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಸಿ ಟಿ ಕೆರೆ ವಲಯದ ಬಿಟ್ಟನಕುರಿಕೆ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಬಿಟ್ಟನಕುರಿಕೆ ಕೆರೆ ಅಂಗಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜಣ್ಣ. ತಾಲ್ಲೂಕು ಯೋಜನಾಧಿಕಾರಿ ಸಂದೇಶ್ ಪಿ ಬಿ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕುಸ್ತರ್ ಉನ್ನಿಸ. ಕೆರೆ ಸಮಿತಿ ಅಧ್ಯಕ್ಷರಾದ ನಾರಾಯಣಪ್ಪ. ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯ್ ಕುಮಾರ್. ಶಬೀನಾ ಇಬ್ರಾಹಿಂ. ಗ್ರಾಮದ ಮುಖಂಡರಾದ ಶಿವಣ್ಣ ಗೋವಿಂದಪ್ಪ ಕೆರೆ ಸಮಿತಿ ಪದಾಧಿಕಾರಿಗಳು ಕೃಷಿ ಮೇಲ್ವಿಚಾರಕ ರಾಘವೇಂದ್ರ ಏನ್. ಸೇವಾಪ್ರತಿನಿಧಿ ಶ್ರೀಮತಿ ಮಂಜಮ್ಮ ಊರಿನ ಮುಖಂಡರು ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು
ತುಮಕೂರು: ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ದ ವತಿಯಿಂದ *ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ* ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಸಿ ಟಿ ಕೆರೆ ವಲಯದ ಬಿಟ್ಟನಕುರಿಕೆ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಬಿಟ್ಟನಕುರಿಕೆ ಕೆರೆ ಅಂಗಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜಣ್ಣ. ತಾಲ್ಲೂಕು ಯೋಜನಾಧಿಕಾರಿ ಸಂದೇಶ್ ಪಿ ಬಿ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕುಸ್ತರ್ ಉನ್ನಿಸ. ಕೆರೆ ಸಮಿತಿ ಅಧ್ಯಕ್ಷರಾದ ನಾರಾಯಣಪ್ಪ. ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯ್ ಕುಮಾರ್. ಶಬೀನಾ ಇಬ್ರಾಹಿಂ. ಗ್ರಾಮದ ಮುಖಂಡರಾದ ಶಿವಣ್ಣ ಗೋವಿಂದಪ್ಪ ಕೆರೆ ಸಮಿತಿ ಪದಾಧಿಕಾರಿಗಳು ಕೃಷಿ ಮೇಲ್ವಿಚಾರಕ ರಾಘವೇಂದ್ರ ಏನ್. ಸೇವಾಪ್ರತಿನಿಧಿ ಶ್ರೀಮತಿ ಮಂಜಮ್ಮ ಊರಿನ ಮುಖಂಡರು ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು
- ಶಿರಾದಲ್ಲಿ ಶಾಂತಿಯುತವಾಗಿ ಜರುಗಿದ ಜಷ್ನೇ ಈದ್ ಮಿಲಾದ್ ಮೆರವಣಿಗೆ 6 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರಿಂದ ಅದ್ಧೂರಿ ಆಚರಣೆ ಶಿರಾ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಜಷ್ನೇ ಈದ್ ಮಿಲಾದ್ ಉನ್ನಬಿ ಹಬ್ಬವನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಸುಮಾರು 6 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ನಗರದ ವಿವಿಧ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಬಳಿಕ ಜಾಮಿಯಾ ಮಸೀದಿ ಬಳಿ ಮರಳಿತು. ಅಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಶಾಂತಿಯುತವಾಗಿ ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್, ವಿವಿಧ ಮಸೀದಿಗಳ ಅಧ್ಯಕ್ಷರು, ಮುಖಂಡರು ಹಾಗೂ ರಾಜಕೀಯ ಮುಖಂಡರಿಗೆ ಧನ್ಯವಾದ ಸಲ್ಲಿಸಿದರು. ಯುವಕರಿಗೆ ಸಂದೇಶ ನೀಡಿದ ಅವರು, ಯಾವುದೇ ವದಂತಿಗಳಿಗೆ ಕಿವಿಗೊಡ ಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಅನಗತ್ಯ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳಬಾರದು. ಯುವಕರು ಬೈಕ್ ವೀಲಿಂಗ್ ಹಾಗೂ ಅತಿವೇಗದ ಚಾಲನೆ ಮಾಡದೆ, ಸಂಚಾರ ನಿಯಮಗಳನ್ನು ಪಾಲಿಸಿ ದ್ವಿಚಕ್ರ ವಾಹನಗಳನ್ನು ಸುರಕ್ಷಿತವಾಗಿ ಚಲಾಯಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್, ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಅವರ ಜನ್ಮದಿನದ ಸ್ಮರಣಾರ್ಥ ಜಷ್ನೇ ಈದ್ ಮಿಲಾದ್ ಉನ್ನಬಿ ಆಚರಿಸಲಾಗುತ್ತಿದೆ. ಪ್ರವಾದಿಯವರು ಶಾಂತಿಯಿಂದ ಬಾಳಬೇಕು ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರ ಸಂದೇಶದಂತೆ ಎಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಿಸುತ್ತಿದ್ದು, ಯುವಕರೂ ಸಹ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಹಬ್ಬ ಆಚರಿಸಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ. ಶೇಖರ್, ಸಿಪಿಐ ಪ್ರವೀಣ್ ಕುಮಾರ್, ಶ್ರೀನಿವಾಸ್, ಶಿರಾ ನಗರಸಭೆ ಅಧ್ಯಕ್ಷ ಜೀಷನ್ ಮಹಮ್ಮುದ್, ಮಾಜಿ ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ಉಪ್ಕಾರ್ ಗ್ರೂಪ್ ಮಾಲೀಕ ಅಬ್ದುಲ್ಲಾ ಖಾನ್, ಖಾದರ್ ಖಾನ್, ಸಾಲ್ಮನ್ ಮಹಮ್ಮುದ್, ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಸಮಾಜಸೇವಕ ಸಾದಿಕ್ ಪಾಷಾ, ಅಜ್ಮತ್ ಖಾನ್ ಸೇರಿದಂತೆ ಹಲವು ಮುಖಂಡರು, ಪೊಲೀಸ್ ಅಧಿಕಾರಿಗಳು, ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮೆರವಣಿಗೆಯು ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆಯಿತು.1
- ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.3
- ಚಿಕ್ಕನಾಯಕನಹಳ್ಳಿ: ಬಿ-ಪಾಳ್ಯದಲ್ಲಿ ಈದ್ ಮಿಲಾದ್ ಆಚರಣೆ: ಹಿಂದೂ-ಮುಸ್ಲಿಂ ಭಾವೈಕ್ಯತೆ ಮೆರೆದ ಸಂಘಟನೆಗಳು ಚಿಕ್ಕನಾಯಕನಹಳ್ಳಿ: ಬಿ-ಪಾಳ್ಯದಲ್ಲಿ ಈದ್ ಮಿಲಾದ್ ಆಚರಣೆ: ಹಿಂದೂ-ಮುಸ್ಲಿಂ ಭಾವೈಕ್ಯತೆ ಮೆರೆದ ಸಂಘಟನೆಗಳು -------------------- ಚಿಕ್ಕನಾಯಕನಹಳ್ಳಿ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ತಾಲೂಕಿನ ಬಿ-ಪಾಳ್ಯದಲ್ಲಿರುವ ಶ್ರೀ ಗುರು ಸಿದ್ದರಾಮೇಶ್ವರ ಶ್ರವಣದೋಷ ಹಾಗೂ ಮಾತು ಬಾರದ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅಖಿಲ ಕರ್ನಾಟಕ ಆಂಬುಲೆನ್ಸ್ ರೋಡ್ ಸೇಫ್ಟಿ ಸಂಘ (ರಿ) ಮತ್ತು ರೂಪಾಂತರ ಮಹಿಳಾ ಸಶಕ್ತೀಕರಣ ಹಾಗೂ ಸಮುದಾಯ ಅಭಿವೃದ್ಧಿ ಸಂಸ್ಥೆ (ರಿ) ವತಿಯಿಂದ ವಿಶೇಷ ಚೇತನ ಮಕ್ಕಳೊಂದಿಗೆ ಈದ್ ಮಿಲಾದ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಹಿಂದೂ-ಮುಸ್ಲಿಂ ಬಾಂಧವ್ಯ ಹಾಗೂ ಭಾವೈಕ್ಯತೆ ಮೆರೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೂಪಾಂತರ ಸಂಸ್ಥೆಯ ಸಂಸ್ಥಾಪಕಿ ರೂಪಶ್ರೀ, "ಚಿಕ್ಕನಾಯಕನಹಳ್ಳಿ ತಾಲೂಕು ‘ಹಿಂದೂ-ಮುಸ್ಲಿಂ ನಾವೆಲ್ಲಾ ಒಂದೇ’ ಎಂಬ ಸಾಮರಸ್ಯದ ಸಂದೇಶದೊಂದಿಗೆ ಇಡೀ ದೇಶಕ್ಕೆ ಮಾದರಿಯಾಗಿದೆ. ಭಾರತ ಮಾತೆಯ ಮಕ್ಕಳಾದ ನಾವೆಲ್ಲರೂ ಜಾತಿ ವೈಮನಸ್ಸು ಹಾಗೂ ಭೇದ-ಭಾವಗಳನ್ನು ಮರೆತು ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ. ಇಂದಿನ ಯುವಪಡೆ ಜಾತೀಯತೆಯನ್ನು ತೊರೆದು ದೇಶದ ಉಜ್ವಲ ಭವಿಷ್ಯ ಹಾಗೂ ಸಮಾಜದ ಪ್ರಗತಿಗೆ ಜಾಗೃತರಾಗಿ ಶ್ರಮಿಸಬೇಕು," ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ರೂಪಾಂತರ ಸಂಸ್ಥೆಯ ಸಂಸ್ಥಾಪಕಿ ರೂಪಶ್ರೀ ಹಾಗೂ AKARS ಸಂಘದ ಅಧ್ಯಕ್ಷ ಎಂ.ಡಿ. ಅಫ್ಸರ್, ಪ್ರಮುಖರಾದ ಪ್ರೀತಮ್, ತೋವಿದ್, ಮನು, ಶೇಖ್, ಅಕ್ಬರ್ ಮತ್ತು ಅಫ್ರಿದ್ ಉಪಸ್ಥಿತರಿದ್ದರು.2
- ಚಿಕ್ಕನಾಯಕನಹಳ್ಳಿ: ಅಗಸರಹಳ್ಳಿಯಲ್ಲಿ ಕಿರಾತಕ ಕಿಡಿಗೇಡಿಗಳಿಂದ ಅಡಿಕೆ ಸಸಿಗಳ ಸರ್ವ ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಅಗಸರಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿದ್ದ ನೂರಾರು ಅಡಿಕೆ ಸಸಿಗಳನ್ನು ಯಾರೋ ದುಷ್ಕರ್ಮಿಗಳು ಕಡಿದು ಹಾಕಿ ವಿಕೃತಿ ಮೆರೆದಿರುವ ಘಟನೆ ಬುಧವಾರ ನಡೆದಿದೆ. ಗ್ರಾಮದ ಪುಟ್ಟಬಸವಯ್ಯ ಅವರ ಮಗ ಚಂದ್ರಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಕೃತ್ಯ ನಡೆದಿದೆ. ಚಂದ್ರಣ್ಣ ಅವರು ತಮ್ಮ ಜಮೀನಿನಲ್ಲಿ ಅತ್ಯಂತ ಮುತುವರ್ಜಿಯಿಂದ ಅಡಿಕೆ ಸಸಿಗಳನ್ನು ನೆಟ್ಟು ಪೋಷಿಸುತ್ತಿದ್ದರು. ಆದರೆ, ಇಂದು ಬೆಳಿಗ್ಗೆ ತೋಟಕ್ಕೆ ತೆರಳಿದಾಗ ಸಸಿಗಳನ್ನು ಕಡಿದು ಹಾಕಿರುವುದು ಬೆಳಕಿಗೆ ಬಂದಿದೆ. ಕಷ್ಟಪಟ್ಟು ಬೆಳೆಸಿದ್ದ ಸಸಿಗಳು ನಾಶವಾಗಿರುವುದನ್ನು ಕಂಡು ರೈತ ಚಂದ್ರಣ್ಣ ಕಣ್ಣೀರು ಹಾಕಿದ್ದು, ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. "ಯಾರೊಂದಿಗೂ ಹಗೆತನವಿರಲಿಲ್ಲ, ಈ ರೀತಿ ಬೆಳೆ ನಾಶ ಮಾಡಿ ಹೊಟ್ಟೆಗೆ ಹೊಡೆದಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ನನಗೆ ಪರಿಹಾರ ಕೊಡಿಸಬೇಕು" ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು ರೈತನಿಗೆ ಬೆಂಬಲವಾಗಿ ನಿಂತು, ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.1
- ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.1
- Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ! Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!1
- ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ. 👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. #ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews1
- ಈರುಳ್ಳಿ ದರದಲ್ಲಿ ಭಾರಿ ಏರಿಕೆ ಗ್ರಾಹಕರಿಗೆ ಶಾಕ್ ಮೇಲೆ ಶಾಕ್ 100 ಧರ ಆಗುವ ಸಂಭವ ಬರಗಾಲದಿಂದ ತತ್ತರಿಸಿರುವಂತಹ ರೈತರು ಈರುಳ್ಳಿ ಬೆಳೆಯನ್ನ ಬೆಳೆಯುವುದರಲ್ಲಿ ವಿಫಲರಾಗಿದ್ದಾರೆ ಹಾಗಾಗಿ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಸುಮಾರು 100 ಗಿಂತ ಹೆಚ್ಚಾಗುವ ಸಂಭವ ಕಂಡುಬರುತ್ತದೆ. ನೂರು ರೂಪಾಯಿಗೆ ಮೂರು ಕೆಜಿ ಇದ್ದ ಈರುಳ್ಳಿ ಬೆಲೆ ಮುಂದಿನ ದಿನದಲ್ಲಿ ಒಂದು ಕೆಜಿಗೆ ಇಳಿಯುವ ಸಾಧ್ಯತೆ ಇದೆ. ಹಾಗಾಗಿ ಗ್ರಾಹಕರು ಮುಂದಿನ ದಿನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿದೆ.1