logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಗುಲಬರ್ಗಾ ಉತ್ತರ ಮತ್ತು ದಕ್ಷಿಣ ಕರಡು ಮತದಾರರ ಪಟ್ಟಿ ಪ್ರಕಟ:* ಕಲಬುರಗಿ ಉತ್ತರ-45 ವಿಧಾನಸಭಾ ಕ್ಷೇತ್ರದ ಎಸ್.ಐ. ಆರ್ ಪ್ರಕ್ರಿಯೆ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ, ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಹೇಳಿದರು. ಸೋಮವಾರ ನಗರದ ಕಲಬುರಗಿ ಮಹಾನಗರ ಪಾಲಿಕೆಯ ಟೌನ್ ಹಾಲ್ ಗುಲಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರದ ಮತ್ತು ಗುಲಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್.ಐ.ಆರ್. ಕರಡು ಪಟ್ಟಿ ಪ್ರಕಟ ಕುರಿತಂತೆ ಕರೆಯಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕ್ಷೇತ್ರದಲ್ಲಿ 1,14,271 ಪುರುಷ, 1,15,685 ಮಹಿಳೆ, ಇತರೆ 41 ಸೇರಿ ಒಟ್ಟು 2,29,997 ಮತದಾರರಿದ್ದಾರೆ ಎಂದರು. ಎಸ್.ಐ.ಆರ್. ಪ್ರಕ್ರಿಯೆ ಮುನ್ನ ಇದ್ದ ಒಟ್ಟು 3,35,254 ಮತದಾರರಲ್ಲಿ 8,048 ಮೃತರು, 17,833 ಗೈರು ಹಾಜರಾದವರು, 64,866 ಶಾಶ್ವತವಾಗಿ ಸ್ಥಳಾಂತರಗೊಂಡವರು, 5,179 ಈಗಾಗಲೆ ನೋಮದಾಯಿಸಿದವರು ಹಾಗೂ 9,331 ಇತರ ವ್ಯತ್ಯಾಸಗಳು ಸೇರಿ ಒಟ್ಟು 1,05,257 ಮತದಾರರ ಪಟ್ಟಿಯೊಂದ ಹೊರಗುಳಿದಿದ್ದಾರೆ. ಇನ್ನು ಕರಡು ಪಟ್ಟಿಯಲ್ಲಿ 9,597 ಅನೋಮಲೀಸ್ ಹಾಗೂ 16,261 ನೋ ಮ್ಯಾಪಿಂಗ್ ಪ್ರಕರಣಗಳು ಪತ್ತೆಯಾಗಿದ್ದು, ಇಂತಹ ಮತದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದರು. ನೋ-ಮ್ಯಾಪಿಂಗ್ ಹಾಗೂ ಅಸಂಗತತೆ ಹೊಂದಿರುವ ಮತದಾರರಿಗೆ ಬಿಎಲ್‌ಒಗಳ ಮೂಲಕ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿಯೇ ವಿಚಾರಣೆ ನಡೆಸಲು ಹೆಚ್ಚುವರಿಯಾಗಿ 14 ಎಇಆರ್‌ಒಗಳನ್ನು ನಿಯೋಜಿಸಲು ಶಿಫಾರಸು ಮಾಡಲಾಗಿದೆ ಎಂದ ಅವಿನಾಶ ಶಿಂಧೆ ಅವರು, ನೋಟಿಸ್ ಹಾಗೂ ಹಕ್ಕು-ಆಕ್ಷೇಪಣೆಗಳ ವಿಚಾರಣೆ ಪ್ರಕ್ರಿಯೆಯನ್ನು ಅಕ್ಟೋಬರ್ 22ರೊಳಗೆ ಪೂರ್ಣಗೊಳಿಸಿ, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು. *ದಕ್ಷಿಣದಲ್ಲಿ 1.96 ಲಕ್ಷ ಮತದಾರರು:* ಮಹಾನಗರ ಪಾಲಿಕೆ ಉಪ ಆಯುಕ್ತೆ ಪ್ರಮೀಳಾ ಅವರು ಮಾತನಾಡಿ, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಐ.ಆಶರ್. ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, 96,481 ಪುರುಷ, 1,00,008 ಮಹಿಳೆ, ಇತರೆ 33 ಸೇರಿ ಒಟ್ಟು 1,96,522 ಮತದಾರರಿದ್ದಾರೆ. ಇವರಲ್ಲಿ 1,312 ಯುವ ಮತದಾರರು ಹಾಗೂ 1,702 ವಿಕಲಾಂಗ ಮತದಾರರಿದ್ದಾರೆ. ಕ್ಷೇತ್ರದಲ್ಲಿ ಲಿಂಗಾನುಪಾತ 1,037 ಇದೆ ಎಂದರು. ಪಟ್ಟಿಯಲ್ಲಿ 12,648 ಅಸಂಗತ ಮತ್ತು 18,429 ಮ್ಯಾಪಿಂಗ್ ಆಗದ ಮತದಾರರು ಸೇರಿ ಒಟ್ಟು ಸುಮಾರು 31,000 ಮತದಾರರಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯಲಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು 16 ಹೆಚ್ಚುವರಿ ಎ.ಇ.ಆರ್.ಓ ಗಳನ್ನು ನೇಮಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತಗಟ್ಟೆ ಹಂತದಲ್ಲಿ 5 ರಿಂದ 6 ಕೇಂದ್ರಗಳನ್ನು ವಿಲೀನಗೊಳಿಸಿ ವಿಚಾರಣೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಅರ್ಹ ಮತದಾರರಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ. ಪಟ್ಟಿಯಿಂದ ಹೆಸರು ಬಿಟ್ಟುಹೋಗಿದ್ದರೆ ಸೇರ್ಪಡೆಗೆ ಫಾರ್ಮ್ 6, ತಿದ್ದುಪಡಿಗೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಪೂರ್ಣ ಸಹಕಾರ ನೀಡಬೇಕೆಂದರು.

11 hrs ago
user_R. Koasti
R. Koasti
Kalaburagi, Karnataka•
11 hrs ago
a2b478c0-d628-4199-a3dd-ae84825f8410

*ಗುಲಬರ್ಗಾ ಉತ್ತರ ಮತ್ತು ದಕ್ಷಿಣ ಕರಡು ಮತದಾರರ ಪಟ್ಟಿ ಪ್ರಕಟ:* ಕಲಬುರಗಿ ಉತ್ತರ-45 ವಿಧಾನಸಭಾ ಕ್ಷೇತ್ರದ ಎಸ್.ಐ. ಆರ್ ಪ್ರಕ್ರಿಯೆ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ, ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಹೇಳಿದರು. ಸೋಮವಾರ ನಗರದ ಕಲಬುರಗಿ ಮಹಾನಗರ ಪಾಲಿಕೆಯ ಟೌನ್ ಹಾಲ್ ಗುಲಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರದ ಮತ್ತು ಗುಲಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್.ಐ.ಆರ್. ಕರಡು ಪಟ್ಟಿ ಪ್ರಕಟ ಕುರಿತಂತೆ ಕರೆಯಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕ್ಷೇತ್ರದಲ್ಲಿ 1,14,271 ಪುರುಷ, 1,15,685 ಮಹಿಳೆ, ಇತರೆ 41 ಸೇರಿ ಒಟ್ಟು 2,29,997 ಮತದಾರರಿದ್ದಾರೆ ಎಂದರು. ಎಸ್.ಐ.ಆರ್. ಪ್ರಕ್ರಿಯೆ ಮುನ್ನ ಇದ್ದ ಒಟ್ಟು 3,35,254 ಮತದಾರರಲ್ಲಿ 8,048 ಮೃತರು, 17,833 ಗೈರು ಹಾಜರಾದವರು, 64,866 ಶಾಶ್ವತವಾಗಿ ಸ್ಥಳಾಂತರಗೊಂಡವರು, 5,179 ಈಗಾಗಲೆ ನೋಮದಾಯಿಸಿದವರು ಹಾಗೂ 9,331 ಇತರ ವ್ಯತ್ಯಾಸಗಳು ಸೇರಿ ಒಟ್ಟು 1,05,257 ಮತದಾರರ ಪಟ್ಟಿಯೊಂದ ಹೊರಗುಳಿದಿದ್ದಾರೆ. ಇನ್ನು ಕರಡು ಪಟ್ಟಿಯಲ್ಲಿ 9,597 ಅನೋಮಲೀಸ್ ಹಾಗೂ 16,261 ನೋ ಮ್ಯಾಪಿಂಗ್ ಪ್ರಕರಣಗಳು ಪತ್ತೆಯಾಗಿದ್ದು, ಇಂತಹ ಮತದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದರು. ನೋ-ಮ್ಯಾಪಿಂಗ್ ಹಾಗೂ ಅಸಂಗತತೆ ಹೊಂದಿರುವ ಮತದಾರರಿಗೆ ಬಿಎಲ್‌ಒಗಳ ಮೂಲಕ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು.

6ec1796d-413c-4313-b1d7-12b84de6abf4

ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿಯೇ ವಿಚಾರಣೆ ನಡೆಸಲು ಹೆಚ್ಚುವರಿಯಾಗಿ 14 ಎಇಆರ್‌ಒಗಳನ್ನು ನಿಯೋಜಿಸಲು ಶಿಫಾರಸು ಮಾಡಲಾಗಿದೆ ಎಂದ ಅವಿನಾಶ ಶಿಂಧೆ ಅವರು, ನೋಟಿಸ್ ಹಾಗೂ ಹಕ್ಕು-ಆಕ್ಷೇಪಣೆಗಳ ವಿಚಾರಣೆ ಪ್ರಕ್ರಿಯೆಯನ್ನು ಅಕ್ಟೋಬರ್ 22ರೊಳಗೆ ಪೂರ್ಣಗೊಳಿಸಿ, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು. *ದಕ್ಷಿಣದಲ್ಲಿ 1.96 ಲಕ್ಷ ಮತದಾರರು:* ಮಹಾನಗರ ಪಾಲಿಕೆ ಉಪ ಆಯುಕ್ತೆ ಪ್ರಮೀಳಾ ಅವರು ಮಾತನಾಡಿ, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಐ.ಆಶರ್. ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, 96,481 ಪುರುಷ, 1,00,008 ಮಹಿಳೆ, ಇತರೆ 33 ಸೇರಿ ಒಟ್ಟು 1,96,522 ಮತದಾರರಿದ್ದಾರೆ. ಇವರಲ್ಲಿ 1,312 ಯುವ ಮತದಾರರು ಹಾಗೂ 1,702 ವಿಕಲಾಂಗ ಮತದಾರರಿದ್ದಾರೆ. ಕ್ಷೇತ್ರದಲ್ಲಿ ಲಿಂಗಾನುಪಾತ 1,037 ಇದೆ ಎಂದರು. ಪಟ್ಟಿಯಲ್ಲಿ 12,648 ಅಸಂಗತ ಮತ್ತು 18,429 ಮ್ಯಾಪಿಂಗ್ ಆಗದ ಮತದಾರರು ಸೇರಿ ಒಟ್ಟು ಸುಮಾರು 31,000 ಮತದಾರರಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯಲಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು 16 ಹೆಚ್ಚುವರಿ ಎ.ಇ.ಆರ್.ಓ ಗಳನ್ನು ನೇಮಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತಗಟ್ಟೆ ಹಂತದಲ್ಲಿ 5 ರಿಂದ 6 ಕೇಂದ್ರಗಳನ್ನು ವಿಲೀನಗೊಳಿಸಿ ವಿಚಾರಣೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಅರ್ಹ ಮತದಾರರಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ. ಪಟ್ಟಿಯಿಂದ ಹೆಸರು ಬಿಟ್ಟುಹೋಗಿದ್ದರೆ ಸೇರ್ಪಡೆಗೆ ಫಾರ್ಮ್ 6, ತಿದ್ದುಪಡಿಗೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಪೂರ್ಣ ಸಹಕಾರ ನೀಡಬೇಕೆಂದರು.

More news from ಕರ್ನಾಟಕ and nearby areas
  • ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು‌ ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ‌ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು. ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ,‌ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ, ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
    1
    ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ
ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು‌ ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು.
ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ‌ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು.
ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು.
ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ,‌ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು.
ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ,   ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    20 hrs ago
  • ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
    1
    ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    48 min ago
  • ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಕುಂಬಾರ ರವರ 46ನೇ ಜನ್ಮದಿನ ಅದ್ದೂರಿ ಆಚರಣೆ
    1
    ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಕುಂಬಾರ ರವರ 46ನೇ ಜನ್ಮದಿನ ಅದ್ದೂರಿ ಆಚರಣೆ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    12 hrs ago
  • ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    1
    ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    19 hrs ago
  • ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ ಬೀದರ್: ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ
    1
    ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ
ಬೀದರ್: ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    10 hrs ago
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    1
    ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ
ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು.
ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    user_NERA NUDI NEWS
    NERA NUDI NEWS
    ಸಿಂದಗಿ, ವಿಜಯಪುರ, ಕರ್ನಾಟಕ•
    23 hrs ago
  • ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು. ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.
    1
    ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.
ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    55 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.