ಕೊಲೆಗೀಡಾದ ಮಹಿಳೆಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೆ ಜೊತೆಗಿರುತ್ತೇವೆ ಅಂಜುಮನ್ ಕಮಿಟಿ ಅಭಯ. ಕೊಲೆಗೀಡಾದ ಮಹಿಳೆಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೆ ಜೊತೆಗಿರುತ್ತೇವೆ ಅಂಜುಮನ್ ಕಮಿಟಿ ಅಭಯ. ಲಿಂಗಸುಗೂರು : ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ.1ರ ಕರಡಕಲ್–ಜಾಲಿಬೆಂಚಿ ರಸ್ತೆಯ ಪಕ್ಕದ ಖಾಸಗಿ ಜಮೀನಿನಲ್ಲಿ ಕ್ರೂರವಾಗಿ ಹತ್ಯೆಯಾಗಿದ್ದ ಕರಡಕಲ್ ನಿವಾಸಿ ರಾಣೆಮ್ಮ ಗಂಡ ತಿಪ್ಪಣ್ಣ ಅವರ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವ ಮೂಲಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಕಮಿಟಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಿರಂತರವಾಗಿ ಧ್ವನಿ ಎತ್ತಿ ಹೋರಾಟ ನಡೆಸಿದ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಸಮಿತಿಯ ನಾಮನಿರ್ದೇಶಿತ ಸದಸ್ಯ ಮೋಹನ್ ಗೋಸ್ಲೆ ಕರಡಕಲ್ ಹಾಗೂ ಅವರ ತಂಡದ ಕಾರ್ಯವನ್ನು ಅಂಜುಮನ್ ಕಮಿಟಿಯ ಮುಖಂಡರು ಶ್ಲಾಘಿಸಿದರು. ಬಡ ಕುಟುಂಬದ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅಂಜುಮನ್ ಕಮಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಕರಡಕಲ್ ಗ್ರಾಮದಲ್ಲಿರುವ ಮೃತ ರಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ದುಃಖದಲ್ಲಿರುವ ಕುಟುಂಬದವರಿಗೆ ಧೈರ್ಯ ತುಂಬಿ, ಅಗತ್ಯ ನೆರವಿನ ಭಾಗವಾಗಿ ರೇಷನ್ ಕಿಟ್ ವಿತರಿಸಿದರು. ಹುಟ್ಟು ಮತ್ತು ಸಾವು ಪ್ರತಿಯೊಬ್ಬರ ಜೀವನದ ಅನಿವಾರ್ಯ ಸತ್ಯ. ಆದರೆ ಯಾವುದೇ ಸಮುದಾಯದ ಮೇಲಾಗಲಿ ಅನ್ಯಾಯ, ದೌರ್ಜನ್ಯ ಹಾಗೂ ಕೊಲೆಯಂತಹ ಘಟನೆಗಳು ನಡೆದಾಗ ಯುವಕರು ಮೌನವಾಗಿರದೆ ನ್ಯಾಯಕ್ಕಾಗಿ ಧ್ವನಿ ಎತ್ತಬೇಕು. ಸಮಾಜದಲ್ಲಿ ನ್ಯಾಯ ಮತ್ತು ಮಾನವೀಯತೆ ಉಳಿಯಬೇಕಾದರೆ ಇಂತಹ ಘಟನೆಗಳ ವಿರುದ್ಧ ಎಲ್ಲರೂ ಒಂದಾಗಿ ನಿಲ್ಲಬೇಕು ಎಂದರು. ಸಂತ್ರಸ್ತ ಕುಟುಂಬಕ್ಕೆ ಯಾವುದೇ ರೀತಿಯ ತೊಂದರೆ, ಸಮಸ್ಯೆ ಅಥವಾ ನೆರವಿನ ಅಗತ್ಯ ಉಂಟಾದಲ್ಲಿ ತಕ್ಷಣ ಅಂಜುಮನ್ ಕಮಿಟಿ ಅಥವಾ ಸ್ಥಳೀಯ ಮುಖಂಡರನ್ನು ಸಂಪರ್ಕಿಸುವಂತೆ ಕಮಿಟಿಯ ಅಧ್ಯಕ್ಷರು ಮನವಿ ಮಾಡಿದರು. ನ್ಯಾಯ ಸಂಪೂರ್ಣವಾಗಿ ದೊರೆಯುವವರೆಗೆ ಕುಟುಂಬದೊಂದಿಗೆ ನಿಲ್ಲುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಕಮಿಟಿಯ ಅಧ್ಯಕ್ಷ ಹುಸೇನ್ ಭಾಷಾ, ಉಪಾಧ್ಯಕ್ಷ ಮುಸ್ತಫಾ, ಸದಸ್ಯರಾದ ವಸೀಮ್ ಭಾಯಿ, ಅಲ್ಲಾಸಾಬ್, ಅಮೀನ್ ಭಾಯಿ, ಉಬೆದ್ ಖುರೇಶಿ, ಅಲ್ಲಾಬಕ್ಷ, ಸಾಬೀರ್ ಖುರೇಶಿ, ಸಿಕಂದರ್ ಮನಿಯಾರ್ ಸೇರಿದಂತೆ ಇದ್ದರು.

- ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.1
- ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ2
- ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು1
- ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ1
- ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿತ ಆರೋಪ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ರೈತರು ಬುಧವಾರ ಸಿರವಾರ ಪಟ್ಟಣದಲ್ಲಿ ರಸ್ತೆ ತಡೆದು ಎರಡನೇ ದಿನದ ಬೃಹತ್ ಪ್ರತಿಭಟನೆ ನಡೆಸಿದರು. ಸಮರ್ಪಕವಾಗಿ ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಕಿಡಿಕಾರಿದರು. ಬೆಳಿಗ್ಗೆಯಿಂದ ನೀರಾವರಿ ಇಲಾಖೆಯ ಮುಂಭಾಗದಲ್ಲಿ ರೈತರು ಪ್ರತಿಭಟಿಸಿದರು. ನೀರಾವರಿ ಇಲಾಖೆಯ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಬಂದು ರೈತರ ಸಮಸ್ಯೆ ಆಲಿಸುವಂತೆ ಪಟ್ಟು ಹಿಡಿದರು. ಆದರೆ ರೈತರ ಹೋರಾಟ ಕಡೆಗಣಿಸಿದ್ದರಿಂದ ರೈತರು ರೊಚ್ಚಿಗೆದ್ದು ಮುಖ್ಯ ರಸ್ತೆ ತಡೆದು ಹೋರಾಟಕ್ಕೆ ಮುಂದಾದರು. ಈ ಹೋರಾಟದಲ್ಲಿ ರಾಜಕೀಯ ಮುಖಂಡರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.4