Shuru
Apke Nagar Ki App…
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ
H M ಹರಕುಣಿ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ
More news from ಕರ್ನಾಟಕ and nearby areas
- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ1
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು1
- ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ1
- ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1
- ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”1