logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನವೆಂಬರ್ 28 ಮತ್ತು 29ರಂದು 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿಯ ನೂಪುರ ನೃತ್ಯ ಮತ್ತು ಸಂಗೀತ ಅಕಾಡೆಮಿಯ 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ನವೆಂಬರ್ 28 ಮತ್ತು 29ರಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಪವಮಾನ್ ಪಿ.ಎಸ್. ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.28ರಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ನೂಪುರದ ವಿದ್ಯಾರ್ಥಿಗಳ ಸಂಗೀತ ಕಾರ್ಯಕ್ರಮ ಹಾಗೂ ಹುಬ್ಬಳ್ಳಿಯ ವಿದ್ವಾನ್ ಸುಜಯ್ ಶಾನುಭೋಗ್ ಮತ್ತು ಬೆಂಗಳೂರಿನ ವಿದುಷಿ ಗೌರಿ ಸಾಗರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದರು. ನ.29ರಂದು ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ, ವಿದ್ವಾನ್ ಗಣೇಶ್‌ರಾಜ್ ಎಂ.ವಿ. ಹಾಗೂ ಡಾ. ಪಿ. ಶ್ರೀಧರ ಆಚಾರ್ಯ ಅವರಿಗೆ ‘ನೂಪುರ ಕಸ್ತೂರಿ’ ಬಿರುದು ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ‘ನೂಪುರ ಸಿಂಚನ’ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ವಿದುಷಿ ಶುಭಶ್ರೀ ಅಡಿಗ ಅವರ ವೀಣಾವಾದನ ಹಾಗೂ ವಿದ್ಯಾರ್ಥಿಗಳಿಂದ ‘ಮಹಿಷಾಸುರ ಮರ್ದಿನಿ’ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸುಧಾಕರ ರಾವ್ ಪೇಜಾವರ, ಸುಲೋಚನಾ ವಿ. ಭಟ್, ಪ್ರಶಾಂತ್ ಹಾಗೂ ಅನು ಉಪಸ್ಥಿತರಿದ್ದರು.

19 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
19 hrs ago

ನವೆಂಬರ್ 28 ಮತ್ತು 29ರಂದು 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿಯ ನೂಪುರ ನೃತ್ಯ ಮತ್ತು ಸಂಗೀತ ಅಕಾಡೆಮಿಯ 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ನವೆಂಬರ್ 28 ಮತ್ತು 29ರಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಪವಮಾನ್ ಪಿ.ಎಸ್. ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.28ರಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ನೂಪುರದ ವಿದ್ಯಾರ್ಥಿಗಳ ಸಂಗೀತ ಕಾರ್ಯಕ್ರಮ ಹಾಗೂ ಹುಬ್ಬಳ್ಳಿಯ ವಿದ್ವಾನ್ ಸುಜಯ್ ಶಾನುಭೋಗ್ ಮತ್ತು ಬೆಂಗಳೂರಿನ ವಿದುಷಿ ಗೌರಿ ಸಾಗರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದರು. ನ.29ರಂದು ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ, ವಿದ್ವಾನ್ ಗಣೇಶ್‌ರಾಜ್ ಎಂ.ವಿ. ಹಾಗೂ ಡಾ. ಪಿ. ಶ್ರೀಧರ ಆಚಾರ್ಯ ಅವರಿಗೆ ‘ನೂಪುರ ಕಸ್ತೂರಿ’ ಬಿರುದು ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ‘ನೂಪುರ ಸಿಂಚನ’ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ವಿದುಷಿ ಶುಭಶ್ರೀ ಅಡಿಗ ಅವರ ವೀಣಾವಾದನ ಹಾಗೂ ವಿದ್ಯಾರ್ಥಿಗಳಿಂದ ‘ಮಹಿಷಾಸುರ ಮರ್ದಿನಿ’ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸುಧಾಕರ ರಾವ್ ಪೇಜಾವರ, ಸುಲೋಚನಾ ವಿ. ಭಟ್, ಪ್ರಶಾಂತ್ ಹಾಗೂ ಅನು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಉಡುಪಿಯಲ್ಲಿ ನವೆಂಬರ್ 29ರಂದು ಉಡುಪಿಯಲ್ಲಿ ಭವ್ಯ ಶ್ರೀ ಮಹಾಧನ್ವಂತರಿ ಯಾಗ ಆರೋಗ್ಯ ಸಂಪನ್ನ ಸಮಾಜ ನಿರ್ಮಾಣ, ರಾಷ್ಟ್ರದ ಸುರಕ್ಷತೆ, ಲೋಕಕಲ್ಯಾಣ ಹಾಗೂ ಸಮಾಜದ ಶಾರೀರಿಕ ಮತ್ತು ಮಾನಸಿಕ ಕಷ್ಟಗಳ ನಿವಾರಣೆಯ ಸಂಕಲ್ಪದೊಂದಿಗೆ ಸನಾತನ ಸಂಸ್ಥೆಯ ವತಿಯಿಂದ ನವೆಂಬರ್ 29ರಂದು ಉಡುಪಿಯಲ್ಲಿ ಭವ್ಯ ಶ್ರೀ ಮಹಾಧನ್ವಂತರಿ ಯಾಗ ಆಯೋಜಿಸಲಾಗಿದೆ. ಉಡುಪಿಯ ಕುಂಜಿಬೆಟ್ಟಿನ ಎಂಜಿಎಂ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಯಾಗ ನಡೆಯಲಿದೆ. ಈಗಾಗಲೇ 9 ಸಾವಿರಕ್ಕೂ ಅಧಿಕ ಭಕ್ತರು ಉಚಿತವಾಗಿ ನೋಂದಣಿ ಮಾಡಿಕೊಂಡಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಯಾಗದ ಆಯೋಜನಾ ಸಮಿತಿಯ ಸಂಯೋಜಕ ಗುರುಪ್ರಸಾದ ಗೌಡ ತಿಳಿಸಿದರು. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾಗದ ವಿಶೇಷ ಆಕರ್ಷಣೆಯಾಗಿ ಪ್ರಾಚೀನ ಸೋಮನಾಥ ಜ್ಯೋತಿರ್ಲಿಂಗದ ಪವಿತ್ರ ಅವಶೇಷಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕ್ರಿ.ಶ. 1026ರಲ್ಲಿ ಮಹಮ್ಮದ್ ಗಝನಿ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ ಸಂದರ್ಭದಲ್ಲಿ ದೇವಾಲಯದ ಜ್ಯೋತಿರ್ಲಿಂಗದ ಕೆಲವು ಭಾಗಗಳನ್ನು ಅರ್ಚಕರು ಸಂರಕ್ಷಿಸಿದ್ದರು ಎನ್ನಲಾಗಿದೆ. ನೂರಾರು ವರ್ಷಗಳಿಂದ ರಹಸ್ಯವಾಗಿ ಸಂರಕ್ಷಿಸಿಕೊಂಡು ಬಂದಿದ್ದ ಈ ಅವಶೇಷಗಳನ್ನು ತಂಜಾವೂರಿನ ವೇದಕುಲಪತಿ ಜಿ.ಕೆ. ಸೀತಾರಾಮನ್ ಗುರೂಜಿ ಜಗತ್ತಿಗೆ ಪರಿಚಯಿಸಿದ್ದಾರೆ. ಈ ಪವಿತ್ರ ಅವಶೇಷಗಳ ಪೈಕಿ ನಾಲ್ಕನ್ನು ಸನಾತನ ಸಂಸ್ಥೆಗೆ ಹಸ್ತಾಂತರಿಸಲಾಗಿದ್ದು, ಅವುಗಳನ್ನು ಉಡುಪಿಯ ಯಾಗದ ಸಂದರ್ಭದಲ್ಲಿ ಭಕ್ತರ ದರ್ಶನಕ್ಕೆ ಇರಿಸಲಾಗುವುದು ಎಂದರು. ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತ ಪೂಜ್ಯ ರಮಾನಂದ ಗೌಡ ಮಾತನಾಡಿ, ಭಗವಾನ್ ಶ್ರೀ ಧನ್ವಂತರಿಯು ಮಹಾವಿಷ್ಣುವಿನ ಅವತಾರವಾಗಿದ್ದು, ಆಯುರ್ವೇದದ ಅಧಿದೇವತೆ ಹಾಗೂ ಸಮಸ್ತ ಜೀವಿಗಳಿಗೆ ಆರೋಗ್ಯ ಕರುಣಿಸುವ ದೇವರಾಗಿದ್ದಾರೆ. ಧನ್ವಂತರಿ ದೇವರ ಆರಾಧನೆಯು ಆರೋಗ್ಯ, ಆಯುಷ್ಯ ಮತ್ತು ಲೋಕಕಲ್ಯಾಣದ ಸಂಕಲ್ಪವನ್ನು ಒಳಗೊಂಡಿದೆ. ಪ್ರಸ್ತುತ ಜಗತ್ತು ಸಾಂಕ್ರಾಮಿಕ ರೋಗಗಳು, ಹವಾಮಾನ ವೈಪರೀತ್ಯ, ಬರಗಾಲ, ಅತಿವೃಷ್ಟಿ, ಅನಾವೃಷ್ಟಿ, ಆಹಾರ ಭದ್ರತೆಯ ಆತಂಕ ಹಾಗೂ ಜಾಗತಿಕ ಸಂಘರ್ಷಗಳಂತಹ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮಾನವಕುಲದ ಆರೋಗ್ಯ, ಪ್ರಕೃತಿಯ ಸಮತೋಲನ, ಆಹಾರ ಸಮೃದ್ಧಿ ಮತ್ತು ರಾಷ್ಟ್ರದ ಸುರಕ್ಷತೆಗಾಗಿ ಸಾಮೂಹಿಕ ಪ್ರಾರ್ಥನೆ ಅಗತ್ಯವಾಗಿದೆ ಎಂದರು.
    1
    ಉಡುಪಿಯಲ್ಲಿ ನವೆಂಬರ್ 29ರಂದು ಉಡುಪಿಯಲ್ಲಿ ಭವ್ಯ ಶ್ರೀ ಮಹಾಧನ್ವಂತರಿ ಯಾಗ
ಆರೋಗ್ಯ ಸಂಪನ್ನ ಸಮಾಜ ನಿರ್ಮಾಣ, ರಾಷ್ಟ್ರದ ಸುರಕ್ಷತೆ, ಲೋಕಕಲ್ಯಾಣ ಹಾಗೂ ಸಮಾಜದ ಶಾರೀರಿಕ ಮತ್ತು ಮಾನಸಿಕ ಕಷ್ಟಗಳ ನಿವಾರಣೆಯ ಸಂಕಲ್ಪದೊಂದಿಗೆ ಸನಾತನ ಸಂಸ್ಥೆಯ ವತಿಯಿಂದ ನವೆಂಬರ್ 29ರಂದು ಉಡುಪಿಯಲ್ಲಿ ಭವ್ಯ ಶ್ರೀ ಮಹಾಧನ್ವಂತರಿ ಯಾಗ ಆಯೋಜಿಸಲಾಗಿದೆ.
ಉಡುಪಿಯ ಕುಂಜಿಬೆಟ್ಟಿನ ಎಂಜಿಎಂ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಯಾಗ ನಡೆಯಲಿದೆ. ಈಗಾಗಲೇ 9 ಸಾವಿರಕ್ಕೂ ಅಧಿಕ ಭಕ್ತರು ಉಚಿತವಾಗಿ ನೋಂದಣಿ ಮಾಡಿಕೊಂಡಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಯಾಗದ ಆಯೋಜನಾ ಸಮಿತಿಯ ಸಂಯೋಜಕ ಗುರುಪ್ರಸಾದ ಗೌಡ ತಿಳಿಸಿದರು.
ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾಗದ ವಿಶೇಷ ಆಕರ್ಷಣೆಯಾಗಿ ಪ್ರಾಚೀನ ಸೋಮನಾಥ ಜ್ಯೋತಿರ್ಲಿಂಗದ ಪವಿತ್ರ ಅವಶೇಷಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕ್ರಿ.ಶ. 1026ರಲ್ಲಿ ಮಹಮ್ಮದ್ ಗಝನಿ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ ಸಂದರ್ಭದಲ್ಲಿ ದೇವಾಲಯದ ಜ್ಯೋತಿರ್ಲಿಂಗದ ಕೆಲವು ಭಾಗಗಳನ್ನು ಅರ್ಚಕರು ಸಂರಕ್ಷಿಸಿದ್ದರು ಎನ್ನಲಾಗಿದೆ. ನೂರಾರು ವರ್ಷಗಳಿಂದ ರಹಸ್ಯವಾಗಿ ಸಂರಕ್ಷಿಸಿಕೊಂಡು ಬಂದಿದ್ದ ಈ ಅವಶೇಷಗಳನ್ನು ತಂಜಾವೂರಿನ ವೇದಕುಲಪತಿ ಜಿ.ಕೆ. ಸೀತಾರಾಮನ್ ಗುರೂಜಿ ಜಗತ್ತಿಗೆ ಪರಿಚಯಿಸಿದ್ದಾರೆ. ಈ ಪವಿತ್ರ ಅವಶೇಷಗಳ ಪೈಕಿ ನಾಲ್ಕನ್ನು ಸನಾತನ ಸಂಸ್ಥೆಗೆ ಹಸ್ತಾಂತರಿಸಲಾಗಿದ್ದು, ಅವುಗಳನ್ನು ಉಡುಪಿಯ ಯಾಗದ ಸಂದರ್ಭದಲ್ಲಿ ಭಕ್ತರ ದರ್ಶನಕ್ಕೆ ಇರಿಸಲಾಗುವುದು ಎಂದರು.
ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತ ಪೂಜ್ಯ ರಮಾನಂದ ಗೌಡ ಮಾತನಾಡಿ, ಭಗವಾನ್ ಶ್ರೀ ಧನ್ವಂತರಿಯು ಮಹಾವಿಷ್ಣುವಿನ ಅವತಾರವಾಗಿದ್ದು, ಆಯುರ್ವೇದದ ಅಧಿದೇವತೆ ಹಾಗೂ ಸಮಸ್ತ ಜೀವಿಗಳಿಗೆ ಆರೋಗ್ಯ ಕರುಣಿಸುವ ದೇವರಾಗಿದ್ದಾರೆ. ಧನ್ವಂತರಿ ದೇವರ ಆರಾಧನೆಯು ಆರೋಗ್ಯ, ಆಯುಷ್ಯ ಮತ್ತು ಲೋಕಕಲ್ಯಾಣದ ಸಂಕಲ್ಪವನ್ನು ಒಳಗೊಂಡಿದೆ. ಪ್ರಸ್ತುತ ಜಗತ್ತು ಸಾಂಕ್ರಾಮಿಕ ರೋಗಗಳು, ಹವಾಮಾನ ವೈಪರೀತ್ಯ, ಬರಗಾಲ, ಅತಿವೃಷ್ಟಿ, ಅನಾವೃಷ್ಟಿ, ಆಹಾರ ಭದ್ರತೆಯ ಆತಂಕ ಹಾಗೂ ಜಾಗತಿಕ ಸಂಘರ್ಷಗಳಂತಹ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮಾನವಕುಲದ ಆರೋಗ್ಯ, ಪ್ರಕೃತಿಯ ಸಮತೋಲನ, ಆಹಾರ ಸಮೃದ್ಧಿ ಮತ್ತು ರಾಷ್ಟ್ರದ ಸುರಕ್ಷತೆಗಾಗಿ ಸಾಮೂಹಿಕ ಪ್ರಾರ್ಥನೆ ಅಗತ್ಯವಾಗಿದೆ ಎಂದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • ### ಚಿಕ್ಕಮಗಳೂರಿನಲ್ಲಿ ಸರಗಳ್ಳರ ಅಟ್ಟಹಾಸಕ್ಕೆ ಬ್ರೇಕ್: ಮೂವರು ಆರೋಪಿಗಳ ಬಂಧನ, 21 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ವಶ! 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ, ನಾಲ್ಕು ತಿಂಗಳ ಕಾರ್ಯಾಚರಣೆ; ನಗರ ಮತ್ತು ಗ್ರಾಮಾಂತರ ಠಾಣೆಗಳ 6 ಸರಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು. ಚಿಕ್ಕಮಗಳೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಹಿಳೆಯರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ ಸರಗಳ್ಳರ ತಂಡವನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ನಾಲ್ಕು ತಿಂಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರು ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ ಸೇರಿದಂತೆ ಒಟ್ಟು 21 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್ ಬಳಿ ನವೆಂಬರ್ 6ರಂದು ರಾತ್ರಿ 9.20ರ ಸುಮಾರಿಗೆ ನಂದಿನಿ ಎಂಬುವವರು ಊಟ ಮುಗಿಸಿಕೊಂಡು ವಾಕಿಂಗ್ ಮಾಡುತ್ತಿದ್ದ ವೇಳೆ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಕುತ್ತಿಗೆಯಲ್ಲಿದ್ದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ 15 ಗ್ರಾಂ ತೂಕದ ಮತ್ತೊಂದು ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ನವೆಂಬರ್ 7ರಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಾಯ್ಕಾ ಅವರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ. ಹಾಗೂ ಪೊಲೀಸ್ ಉಪಾಧೀಕ್ಷಕರಾದ ನಾಗರಾಜ್ ಕೆ.ಆರ್. ಮತ್ತು ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ತನಿಖೆ ಆರಂಭವಾಗಿತ್ತು. ಸುಮಾರು ನಾಲ್ಕು ತಿಂಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಚಿಕ್ಕಮಗಳೂರು ನಗರ ಹಾಗೂ ಹೊರವಲಯದ 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಗಳ ಸುಳಿವು ಪತ್ತೆಹಚ್ಚಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರನ್ನು ಚಿಕ್ಕಮಗಳೂರು ಕರ್ಕಿಪೇಟೆಯ ಆದರ್ಶ ಕೆ.ಪಿ. (28), ಬೀಕನಹಳ್ಳಿಯ ಪ್ರತಾಪ್ (26) ಹಾಗೂ ಹಾಸನ ಜಿಲ್ಲೆಯ ಬೇಲೂರು ಜೆ.ಪಿ. ನಗರದ ಮಹಮ್ಮದ್ ಶಾಯಿದ್ (30) ಎಂದು ಗುರುತಿಸಲಾಗಿದೆ. ಬಂಧಿತರಿಂದ 116 ಗ್ರಾಂ ತೂಕದ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿಗಳು, 70 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮತ್ತು ಪಲ್ಸರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 16 ಲಕ್ಷ ರೂಪಾಯಿ, ಕಾರಿನ ಮೌಲ್ಯ 4 ಲಕ್ಷ ರೂಪಾಯಿ ಹಾಗೂ ಬೈಕಿನ ಮೌಲ್ಯ ಒಂದು ಲಕ್ಷ ರೂಪಾಯಿ ಸೇರಿದಂತೆ ಒಟ್ಟು 21 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕಾರ್ಯಾಚರಣೆಯಿಂದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ನಾಲ್ಕು ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಎರಡು ಸೇರಿದಂತೆ ಒಟ್ಟು ಆರು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆ ಹಾಗೂ ಕದ್ದ ಮಾಲು ವಶಪಡಿಸಿಕೊಳ್ಳುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ. 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ, ತಾಂತ್ರಿಕ ತನಿಖೆ ಹಾಗೂ ಸತತ ಕಾರ್ಯಾಚರಣೆಯ ಮೂಲಕ ಸರಗಳ್ಳತನ ಪ್ರಕರಣಗಳನ್ನು ಭೇದಿಸಿರುವ ಚಿಕ್ಕಮಗಳೂರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
    2
    ### ಚಿಕ್ಕಮಗಳೂರಿನಲ್ಲಿ ಸರಗಳ್ಳರ ಅಟ್ಟಹಾಸಕ್ಕೆ ಬ್ರೇಕ್: ಮೂವರು ಆರೋಪಿಗಳ ಬಂಧನ, 21 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ವಶ!
800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ, ನಾಲ್ಕು ತಿಂಗಳ ಕಾರ್ಯಾಚರಣೆ; ನಗರ ಮತ್ತು ಗ್ರಾಮಾಂತರ ಠಾಣೆಗಳ 6 ಸರಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು.
ಚಿಕ್ಕಮಗಳೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಹಿಳೆಯರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ ಸರಗಳ್ಳರ ತಂಡವನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ನಾಲ್ಕು ತಿಂಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರು ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ ಸೇರಿದಂತೆ ಒಟ್ಟು 21 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್ ಬಳಿ ನವೆಂಬರ್ 6ರಂದು ರಾತ್ರಿ 9.20ರ ಸುಮಾರಿಗೆ ನಂದಿನಿ ಎಂಬುವವರು ಊಟ ಮುಗಿಸಿಕೊಂಡು ವಾಕಿಂಗ್ ಮಾಡುತ್ತಿದ್ದ ವೇಳೆ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಕುತ್ತಿಗೆಯಲ್ಲಿದ್ದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ 15 ಗ್ರಾಂ ತೂಕದ ಮತ್ತೊಂದು ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ನವೆಂಬರ್ 7ರಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಾಯ್ಕಾ ಅವರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ. ಹಾಗೂ ಪೊಲೀಸ್ ಉಪಾಧೀಕ್ಷಕರಾದ ನಾಗರಾಜ್ ಕೆ.ಆರ್. ಮತ್ತು ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ತನಿಖೆ ಆರಂಭವಾಗಿತ್ತು.
ಸುಮಾರು ನಾಲ್ಕು ತಿಂಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಚಿಕ್ಕಮಗಳೂರು ನಗರ ಹಾಗೂ ಹೊರವಲಯದ 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಗಳ ಸುಳಿವು ಪತ್ತೆಹಚ್ಚಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತರನ್ನು ಚಿಕ್ಕಮಗಳೂರು ಕರ್ಕಿಪೇಟೆಯ ಆದರ್ಶ ಕೆ.ಪಿ. (28), ಬೀಕನಹಳ್ಳಿಯ ಪ್ರತಾಪ್ (26) ಹಾಗೂ ಹಾಸನ ಜಿಲ್ಲೆಯ ಬೇಲೂರು ಜೆ.ಪಿ. ನಗರದ ಮಹಮ್ಮದ್ ಶಾಯಿದ್ (30) ಎಂದು ಗುರುತಿಸಲಾಗಿದೆ.
ಬಂಧಿತರಿಂದ 116 ಗ್ರಾಂ ತೂಕದ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿಗಳು, 70 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮತ್ತು ಪಲ್ಸರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 16 ಲಕ್ಷ ರೂಪಾಯಿ, ಕಾರಿನ ಮೌಲ್ಯ 4 ಲಕ್ಷ ರೂಪಾಯಿ ಹಾಗೂ ಬೈಕಿನ ಮೌಲ್ಯ ಒಂದು ಲಕ್ಷ ರೂಪಾಯಿ ಸೇರಿದಂತೆ ಒಟ್ಟು 21 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕಾರ್ಯಾಚರಣೆಯಿಂದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ನಾಲ್ಕು ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಎರಡು ಸೇರಿದಂತೆ ಒಟ್ಟು ಆರು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ.
ಆರೋಪಿಗಳ ಪತ್ತೆ ಹಾಗೂ ಕದ್ದ ಮಾಲು ವಶಪಡಿಸಿಕೊಳ್ಳುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ.
800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ, ತಾಂತ್ರಿಕ ತನಿಖೆ ಹಾಗೂ ಸತತ ಕಾರ್ಯಾಚರಣೆಯ ಮೂಲಕ ಸರಗಳ್ಳತನ ಪ್ರಕರಣಗಳನ್ನು ಭೇದಿಸಿರುವ ಚಿಕ್ಕಮಗಳೂರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
    user_Reporter
    Reporter
    ಚಿಕ್ಕಮಗಳೂರು, ಚಿಕ್ಕಮಗಳೂರು, ಕರ್ನಾಟಕ•
    17 hrs ago
  • ರೈತರ ಪರವಾಗಿ RFO ವಿರುದ್ಧ ಕೆಂಡಾಮಂಡಲವಾದ ಡಿ.ಎನ್. ಜೀವರಾಜ್ – ಅಧಿಕಾರಿಗಳ ವಿರುದ್ಧ ಸ್ಥಳದಲ್ಲೇ ಆಕ್ರೋಶ! ಚಿಕ್ಕಮಗಳೂರು: ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳೇ ಮನವಿ ಸ್ವೀಕರಿಸಲು ನಿರ್ಲಕ್ಷ್ಯ ತೋರಿದರೆ ರೈತರು ಯಾರ ಬಳಿ ತಮ್ಮ ಅಳಲು ತೋಡಿಕೊಳ್ಳಬೇಕು? ಎಂಬ ಪ್ರಶ್ನೆ ಇದೀಗ ಎದುರಾಗಿದೆ. ರೈತರ ಮನವಿ ಪತ್ರ ಸ್ವೀಕರಿಸಲು ನಿರ್ಲಕ್ಷ್ಯ ತೋರಿದ RFO ವಿರುದ್ಧ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸ್ಥಳದಲ್ಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲಿಗಾದರೂ ಭೇಟಿ ನೀಡಿದಾಗ ಪೊಲೀಸ್ ಇಲಾಖೆಯ ಸಿಬ್ಬಂದಿ ಬಾಡಿಗಾರ್ಡ್‌ಗಳಂತೆ ರಕ್ಷಣೆ ನೀಡುತ್ತಾರೆ. ಆದರೆ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು ತಮ್ಮ ತೋಟಗಳಿಗೆ ಹೋಗುವಾಗಲೂ ಇದೇ ರೀತಿಯ ಪೊಲೀಸ್ ರಕ್ಷಣೆ ನೀಡಲು ಸಾಧ್ಯವಿಲ್ಲವೇ ಎಂದು ಜೀವರಾಜ್ ಪ್ರಶ್ನಿಸಿದ್ದಾರೆ. ಇದೇ ವೇಳೆ ಅಧಿಕಾರಿಗಳು ಹಾಗೂ ಶಾಸಕರ ಕಾರ್ಯವೈಖರಿಯನ್ನು ಪ್ರಶ್ನಿಸಿದ ಅವರು, "ಅಧಿಕಾರಿಗಳು, ಶಾಸಕರು ಯಾವಾಗ ಕ್ಲಬ್‌ನಲ್ಲಿ ಪಾರ್ಟಿ ಮಾಡಿದ್ರೋ ಅವತ್ತೇ ರೈತರ ಕಥೆ ಮುಗಿಸಿದ್ರು" ಎಂದು ವ್ಯಂಗ್ಯವಾಡುವ ಮೂಲಕ ರೈತರ ಸಂಕಷ್ಟದ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕಾದ ಅಧಿಕಾರಿಗಳು ಮನವಿ ಪತ್ರ ಸ್ವೀಕರಿಸುವುದಕ್ಕೂ ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ಜೀವರಾಜ್ ಅವರ ಈ ಆಕ್ರೋಶ ವ್ಯಕ್ತಪಡಿಸಿದೆ. ರೈತರ ಪರವಾಗಿ ಅಧಿಕಾರಿಗಳ ವಿರುದ್ಧ ನೇರವಾಗಿ ಧ್ವನಿ ಎತ್ತಿರುವ ಈ ಘಟನೆ ಇದೀಗ ಗಮನ ಸೆಳೆದಿದೆ.
    1
    ರೈತರ ಪರವಾಗಿ RFO ವಿರುದ್ಧ ಕೆಂಡಾಮಂಡಲವಾದ ಡಿ.ಎನ್. ಜೀವರಾಜ್ – ಅಧಿಕಾರಿಗಳ ವಿರುದ್ಧ ಸ್ಥಳದಲ್ಲೇ ಆಕ್ರೋಶ!
ಚಿಕ್ಕಮಗಳೂರು: ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳೇ ಮನವಿ ಸ್ವೀಕರಿಸಲು ನಿರ್ಲಕ್ಷ್ಯ ತೋರಿದರೆ ರೈತರು ಯಾರ ಬಳಿ ತಮ್ಮ ಅಳಲು ತೋಡಿಕೊಳ್ಳಬೇಕು? ಎಂಬ ಪ್ರಶ್ನೆ ಇದೀಗ ಎದುರಾಗಿದೆ. ರೈತರ ಮನವಿ ಪತ್ರ ಸ್ವೀಕರಿಸಲು ನಿರ್ಲಕ್ಷ್ಯ ತೋರಿದ RFO ವಿರುದ್ಧ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸ್ಥಳದಲ್ಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲಿಗಾದರೂ ಭೇಟಿ ನೀಡಿದಾಗ ಪೊಲೀಸ್ ಇಲಾಖೆಯ ಸಿಬ್ಬಂದಿ ಬಾಡಿಗಾರ್ಡ್‌ಗಳಂತೆ ರಕ್ಷಣೆ ನೀಡುತ್ತಾರೆ. ಆದರೆ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು ತಮ್ಮ ತೋಟಗಳಿಗೆ ಹೋಗುವಾಗಲೂ ಇದೇ ರೀತಿಯ ಪೊಲೀಸ್ ರಕ್ಷಣೆ ನೀಡಲು ಸಾಧ್ಯವಿಲ್ಲವೇ ಎಂದು ಜೀವರಾಜ್ ಪ್ರಶ್ನಿಸಿದ್ದಾರೆ.
ಇದೇ ವೇಳೆ ಅಧಿಕಾರಿಗಳು ಹಾಗೂ ಶಾಸಕರ ಕಾರ್ಯವೈಖರಿಯನ್ನು ಪ್ರಶ್ನಿಸಿದ ಅವರು, "ಅಧಿಕಾರಿಗಳು, ಶಾಸಕರು ಯಾವಾಗ ಕ್ಲಬ್‌ನಲ್ಲಿ ಪಾರ್ಟಿ ಮಾಡಿದ್ರೋ ಅವತ್ತೇ ರೈತರ ಕಥೆ ಮುಗಿಸಿದ್ರು" ಎಂದು ವ್ಯಂಗ್ಯವಾಡುವ ಮೂಲಕ ರೈತರ ಸಂಕಷ್ಟದ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕಾದ ಅಧಿಕಾರಿಗಳು ಮನವಿ ಪತ್ರ ಸ್ವೀಕರಿಸುವುದಕ್ಕೂ ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ಜೀವರಾಜ್ ಅವರ ಈ ಆಕ್ರೋಶ ವ್ಯಕ್ತಪಡಿಸಿದೆ. ರೈತರ ಪರವಾಗಿ ಅಧಿಕಾರಿಗಳ ವಿರುದ್ಧ ನೇರವಾಗಿ ಧ್ವನಿ ಎತ್ತಿರುವ ಈ ಘಟನೆ ಇದೀಗ ಗಮನ ಸೆಳೆದಿದೆ.
    user_Megha
    Megha
    ಚಿಕ್ಕಮಗಳೂರು, ಚಿಕ್ಕಮಗಳೂರು, ಕರ್ನಾಟಕ•
    21 hrs ago
  • ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ ರೈನಾ ಹಾಗೂ ಕುಟುಂಬದ ಸದಸ್ಯರು ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಹಾರಕ್ಕಾಗಿ ಮಡಿಕೇರಿಗೆ ಆಗಮಿಸಿರುವ ಸುರೇಶ ರೈನಾ ಕುಟುಂಬ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಸುರೇಶ್ ರೈನಾ ತಮ್ಮ ಪತ್ನಿ ಪ್ರಿಯಾಂಕ ಚೌದರಿ, ಪುತ್ರಿ ಗ್ರೇಶಿಯಾ ರೈನಾ ಹಾಗೂ ಪುತ್ರ ರಿಯೋ ರೈನಾ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ಕುಟುಂಬದ ಹೆಸರಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಜರಿದ್ದರು.
    1
    ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಕ್ರಿಕೆಟರ್ ಸುರೇಶ್ ರೈನಾ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ ರೈನಾ ಹಾಗೂ ಕುಟುಂಬದ ಸದಸ್ಯರು ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಹಾರಕ್ಕಾಗಿ ಮಡಿಕೇರಿಗೆ ಆಗಮಿಸಿರುವ ಸುರೇಶ ರೈನಾ ಕುಟುಂಬ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಸುರೇಶ್ ರೈನಾ ತಮ್ಮ ಪತ್ನಿ ಪ್ರಿಯಾಂಕ ಚೌದರಿ, ಪುತ್ರಿ ಗ್ರೇಶಿಯಾ ರೈನಾ ಹಾಗೂ ಪುತ್ರ ರಿಯೋ ರೈನಾ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ಕುಟುಂಬದ ಹೆಸರಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಜರಿದ್ದರು.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    15 hrs ago
  • ನಾಡಕಚೇರಿಯಲ್ಲಿ ಕನಕ ಜಯಂತಿ ಆಚರಣೆಗೆ ನಿರ್ಲಕ್ಷ್ಯದ ಆರೋಪ: ಗ್ರಾಮಸ್ಥರ ಆಕ್ಷೇಪ ಶಿವಮೊಗ್ಗ: ರಾಜ್ಯಾದ್ಯಂತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕಿದ್ದ ದಿನದಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ನಾಡಕಚೇರಿಯಲ್ಲಿ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾತ್ರ ಜಯಂತಿ ಆಚರಿಸಿದ್ದು, ಉಳಿದ ಸಿಬ್ಬಂದಿ ಗೈರಾಗಿರುವು ದಕ್ಕೆ ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಆಕ್ಷೇಪ ವ್ಯಕ್ತಪಡಿಸಿದೆ. ಇಂದು ಕನಕದಾಸರ ಜಯಂತಿ ಆಚರಣೆಗೆ ಸರ್ಕಾರದ ವತಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಆದರೆ ಶಿಕಾರಿಪುರ ತಾಲೂಕು ತಾಳಗುಂದ ಹೋಬಳಿಯ ನಾಡಕಚೇರಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಭಾಗವಹಿಸಿ ಜಯಂತಿ ಆಚರಿಸದಿ ರುವುದು ಖಂಡನೀಯ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡಕಚೇರಿಯಲ್ಲಿ 14 ಗ್ರಾಮ ಲೆಕ್ಕಾಧಿಕಾರಿ ಗಳು, 20 ಡಿ-ಗ್ರೂಪ್ ನೌಕರರು ಸೇರಿದಂತೆ ಸಿಬ್ಬಂದಿ ಇದ್ದರೂ, ಜಯಂತಿ ಆಚರಣೆಯಲ್ಲಿ ಕೆಲವೇ ಮಂದಿ ಭಾಗವಹಿಸಿದ್ದಾರೆ ಎಂದು ದೂರಲಾಗಿದೆ. ಗ್ರಾಮಸ್ಥರು ನಾಡಕಚೇರಿಗೆ ಭೇಟಿ ನೀಡಿದಾಗ, ತಾಳಗುಂದದ ಗ್ರಾಮ ಲೆಕ್ಕಾಧಿಕಾರಿ ಕರಿಬಸವರಾಜು ಹಾಗೂ ಗ್ರಾಮ ಸಹಾಯಕ ಬಸವರಾಜು ಅವರು ಮಾತ್ರ ಕನಕದಾಸರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿರುವುದು ಕಂಡುಬಂದಿದೆ. ಉಳಿದ ಸಿಬ್ಬಂದಿ ಗೈರಾಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳನ್ನು ಆಚರಿಸು ವಲ್ಲಿ ನಾಡಕಚೇರಿಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿರುವುದು ಇದೇ ಮೊದಲಲ್ಲ. ವಿವಿಧ ಸರ್ಕಾರಿ ಕಾರ್ಯಕ್ರಮಗಳ ಸಂದರ್ಭ ದಲ್ಲಿಯೂ ಕೆಲವರು ಮಾತ್ರ ಭಾಗವಹಿಸು ತ್ತಿದ್ದು, ಉಳಿದವರು ಗೈರಾಗುತ್ತಿರುವುದು ನಿರಂತರವಾಗಿ ಕಂಡುಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ತಾಳಗುಂದ ಗ್ರಾಮದಲ್ಲಿ ಕನಕದಾಸರ ಜಯಂತಿಯಂತಹ ಸರ್ಕಾರಿ ಕಾರ್ಯಕ್ರಮ ವನ್ನು ನಿರ್ಲಕ್ಷಿಸಿರುವುದು ಊರಿಗೆ ಕಪ್ಪುಚುಕ್ಕೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಮಾತನಾಡಿದ ಡಿಎಸ್ಎಸ್ ಸಂಘಟನಾ ಸಂಚಾಲಕ ಶಶಿಕುಮಾರ್, ಸರ್ಕಾರಿ ಕಾರ್ಯಕ್ರಮಗಳನ್ನು ಗೌರವದಿಂದ ಆಚರಿಸುವುದು ಅಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ. ಆದರೆ ತಾಳಗುಂದ ನಾಡಕಚೇರಿಯಲ್ಲಿ ಕೆಲವೇ ಸಿಬ್ಬಂದಿ ಜಯಂತಿ ಆಚರಿಸಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು. ಗ್ರಾಮಸ್ಥರು ಹಾಗೂ ಡಿಎಸ್ಎಸ್ ಮುಖಂಡರು ಈ ಘಟನೆಗೆ ಸಂಬಂಧಿಸಿ ದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿಗಳ ಗಮನಕ್ಕೆ ತಂದು, ಮುಂದಿನ ದಿನಗಳಲ್ಲಿ ಸರ್ಕಾರಿ ಕಾರ್ಯಕ್ರಮ ಗಳ ಆಚರಣೆಯಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
    1
    ನಾಡಕಚೇರಿಯಲ್ಲಿ ಕನಕ ಜಯಂತಿ ಆಚರಣೆಗೆ ನಿರ್ಲಕ್ಷ್ಯದ ಆರೋಪ: ಗ್ರಾಮಸ್ಥರ ಆಕ್ಷೇಪ
ಶಿವಮೊಗ್ಗ: ರಾಜ್ಯಾದ್ಯಂತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕಿದ್ದ ದಿನದಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ನಾಡಕಚೇರಿಯಲ್ಲಿ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾತ್ರ ಜಯಂತಿ ಆಚರಿಸಿದ್ದು, ಉಳಿದ ಸಿಬ್ಬಂದಿ ಗೈರಾಗಿರುವು ದಕ್ಕೆ ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಆಕ್ಷೇಪ ವ್ಯಕ್ತಪಡಿಸಿದೆ.
ಇಂದು ಕನಕದಾಸರ ಜಯಂತಿ ಆಚರಣೆಗೆ ಸರ್ಕಾರದ ವತಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಆದರೆ ಶಿಕಾರಿಪುರ ತಾಲೂಕು ತಾಳಗುಂದ ಹೋಬಳಿಯ ನಾಡಕಚೇರಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಭಾಗವಹಿಸಿ ಜಯಂತಿ ಆಚರಿಸದಿ ರುವುದು ಖಂಡನೀಯ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಡಕಚೇರಿಯಲ್ಲಿ 14 ಗ್ರಾಮ ಲೆಕ್ಕಾಧಿಕಾರಿ ಗಳು, 20 ಡಿ-ಗ್ರೂಪ್ ನೌಕರರು ಸೇರಿದಂತೆ ಸಿಬ್ಬಂದಿ ಇದ್ದರೂ, ಜಯಂತಿ ಆಚರಣೆಯಲ್ಲಿ ಕೆಲವೇ ಮಂದಿ ಭಾಗವಹಿಸಿದ್ದಾರೆ ಎಂದು ದೂರಲಾಗಿದೆ. ಗ್ರಾಮಸ್ಥರು ನಾಡಕಚೇರಿಗೆ ಭೇಟಿ ನೀಡಿದಾಗ, ತಾಳಗುಂದದ ಗ್ರಾಮ ಲೆಕ್ಕಾಧಿಕಾರಿ ಕರಿಬಸವರಾಜು ಹಾಗೂ ಗ್ರಾಮ ಸಹಾಯಕ ಬಸವರಾಜು ಅವರು ಮಾತ್ರ ಕನಕದಾಸರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿರುವುದು ಕಂಡುಬಂದಿದೆ. ಉಳಿದ ಸಿಬ್ಬಂದಿ ಗೈರಾಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸರ್ಕಾರಿ ಕಾರ್ಯಕ್ರಮಗಳನ್ನು ಆಚರಿಸು ವಲ್ಲಿ ನಾಡಕಚೇರಿಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿರುವುದು ಇದೇ ಮೊದಲಲ್ಲ. ವಿವಿಧ ಸರ್ಕಾರಿ ಕಾರ್ಯಕ್ರಮಗಳ ಸಂದರ್ಭ ದಲ್ಲಿಯೂ ಕೆಲವರು ಮಾತ್ರ ಭಾಗವಹಿಸು ತ್ತಿದ್ದು, ಉಳಿದವರು ಗೈರಾಗುತ್ತಿರುವುದು ನಿರಂತರವಾಗಿ ಕಂಡುಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ತಾಳಗುಂದ ಗ್ರಾಮದಲ್ಲಿ ಕನಕದಾಸರ ಜಯಂತಿಯಂತಹ ಸರ್ಕಾರಿ ಕಾರ್ಯಕ್ರಮ ವನ್ನು ನಿರ್ಲಕ್ಷಿಸಿರುವುದು ಊರಿಗೆ ಕಪ್ಪುಚುಕ್ಕೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಡಿಎಸ್ಎಸ್ ಸಂಘಟನಾ ಸಂಚಾಲಕ ಶಶಿಕುಮಾರ್, ಸರ್ಕಾರಿ ಕಾರ್ಯಕ್ರಮಗಳನ್ನು ಗೌರವದಿಂದ ಆಚರಿಸುವುದು ಅಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ. ಆದರೆ ತಾಳಗುಂದ ನಾಡಕಚೇರಿಯಲ್ಲಿ ಕೆಲವೇ ಸಿಬ್ಬಂದಿ ಜಯಂತಿ ಆಚರಿಸಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರು ಹಾಗೂ ಡಿಎಸ್ಎಸ್ ಮುಖಂಡರು ಈ ಘಟನೆಗೆ ಸಂಬಂಧಿಸಿ ದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿಗಳ ಗಮನಕ್ಕೆ ತಂದು, ಮುಂದಿನ ದಿನಗಳಲ್ಲಿ ಸರ್ಕಾರಿ ಕಾರ್ಯಕ್ರಮ ಗಳ ಆಚರಣೆಯಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    15 hrs ago
  • ಗ್ರಾಮದ ಬಸವೇಶ್ವರ ದೇವಸ್ಥಾನ ನಳ್ ಮಾರಮ್ಮ ಮಾದೇಶ್ವರ ದೇವಸ್ಥಾನ ಹಾಗೂ ಬಂಡಳ್ಳಿ ಬಸಪ್ಪ ದೇವಸ್ಥಾನಕ್ಕೆ ಕಾರ್ತಿಗೆ ದೀಪ ಹಚ್ಚುವ ಕಾರ್ಯಕ್ರಮಮಾರಮ್ಮ ಹುಣಸೂರು ತಾಲೂಕು ಹನಗೂಡು ಹೋಬಳಿ ಸಿಂಡೆನಹಳ್ಳಿ ಗ್ರಾಮದಲ್ಲಿ ದಿನಾಂಕ 30 11 2026ರಂದು ಸೋಮವಾರ ರಂದು ಸಾಯಂಕಾಲ ಸುಮಾರು ಏಳು ಗಂಟೆಯಿಂದ ರಾತ್ರಿ 10:00 ವರೆಗೆ ಸಂಡೆನಹಳ್ಳಿ ಗ್ರಾಮಸ್ಥರು ಹಾಗೂ ಸಟ್ಟಳ್ಳಿ ಗ್ರಾಮಸ್ಥರು ಮತ್ತು ಚಿಕ್ಕೇಗೌಡನ ಕೊಪ್ಪಲು ಗ್ರಾಮಸ್ಥರು ಸೇರಿ ಕಾರ್ತಿಗೆಯನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಒಂದು ಕಾರ್ಯಕ್ರಮದಲ್ಲಿ ಸುಮಾರು 300 ಜನರು ಸೇರಲಿದ್ದಾರೆ ಮೂರು ಗ್ರಾಮಗಳು ಸೇರಿ ಸುಮಾರು 300 ಕುಟುಂಬಗಳಿವೆ ಸೇರುತ್ತದೆ
    1
    ಗ್ರಾಮದ ಬಸವೇಶ್ವರ ದೇವಸ್ಥಾನ ನಳ್ ಮಾರಮ್ಮ ಮಾದೇಶ್ವರ ದೇವಸ್ಥಾನ ಹಾಗೂ ಬಂಡಳ್ಳಿ ಬಸಪ್ಪ ದೇವಸ್ಥಾನಕ್ಕೆ ಕಾರ್ತಿಗೆ ದೀಪ ಹಚ್ಚುವ ಕಾರ್ಯಕ್ರಮಮಾರಮ್ಮ
ಹುಣಸೂರು ತಾಲೂಕು ಹನಗೂಡು ಹೋಬಳಿ ಸಿಂಡೆನಹಳ್ಳಿ ಗ್ರಾಮದಲ್ಲಿ ದಿನಾಂಕ 30 11 2026ರಂದು ಸೋಮವಾರ ರಂದು ಸಾಯಂಕಾಲ ಸುಮಾರು ಏಳು ಗಂಟೆಯಿಂದ ರಾತ್ರಿ 10:00 ವರೆಗೆ ಸಂಡೆನಹಳ್ಳಿ ಗ್ರಾಮಸ್ಥರು ಹಾಗೂ ಸಟ್ಟಳ್ಳಿ ಗ್ರಾಮಸ್ಥರು ಮತ್ತು ಚಿಕ್ಕೇಗೌಡನ ಕೊಪ್ಪಲು ಗ್ರಾಮಸ್ಥರು ಸೇರಿ ಕಾರ್ತಿಗೆಯನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಒಂದು ಕಾರ್ಯಕ್ರಮದಲ್ಲಿ ಸುಮಾರು 300 ಜನರು ಸೇರಲಿದ್ದಾರೆ ಮೂರು ಗ್ರಾಮಗಳು ಸೇರಿ ಸುಮಾರು 300 ಕುಟುಂಬಗಳಿವೆ ಸೇರುತ್ತದೆ
    user_Nagendra Gowda
    Nagendra Gowda
    Farmer ಹುಣಸೂರು, ಮೈಸೂರು, ಕರ್ನಾಟಕ•
    27 min ago
  • ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ರದ್ದು: ಗುಡ್ಡದ ಕೊಮ್ಮಾರನಹಳ್ಳಿ ಗ್ರಾಮಸ್ಥರ ಆಕ್ರೋಶ ಸಚಿವರ ಕಾರ್ಯಕ್ರಮಕ್ಕಾಗಿ ಅದ್ದೂರಿ ಸಿದ್ಧತೆ, ವೇದಿಕೆ–ಶಾಮಿಯಾನ ನಿರ್ಮಾಣ; ಮುಂಚಿತ ಮಾಹಿತಿ ಇಲ್ಲದೆ ರದ್ದುಗೊಳಿಸಿದ್ದಕ್ಕೆ ಅಸಮಾಧಾನ ಚನ್ನಗಿರಿ, ನ.27: ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಹೋಬಳಿಗೆ ಒಳಪಡುವ, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗುಡ್ಡದ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನವೆಂಬರ್ 28ರಂದು ಆಯೋಜಿಸಲಾಗಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಏಕಾಏಕಿ ರದ್ದಾಗಿದೆ ಎಂಬ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಕೆ.ಎಸ್. ಬಸವಂತಪ್ಪ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಈ ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಹಲವು ದಿನಗಳಿಂದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವೇದಿಕೆ ನಿರ್ಮಿಸಿ, ಶಾಮಿಯಾನ ಹಾಕಲಾಗಿತ್ತು. ಹೂವಿನ ಅಲಂಕಾರ, ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿ, ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಸ್ವಾಗತಿಸಲು ಸಕಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ, ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಕೊನೆಯ ಕ್ಷಣದಲ್ಲಿ ತಿಳಿದುಬಂದಿರುವುದು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ನಿರಾಸೆ ಮೂಡಿಸಿದೆ. ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ನಡೆಸಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ರದ್ದತಿಯ ಮಾಹಿತಿ ಬಂದಿರುವುದಕ್ಕೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರ ಸಮಸ್ಯೆಗಳಿಗೆ ವೇದಿಕೆಯಾಗಬೇಕಿದ್ದ ಕಾರ್ಯಕ್ರಮ ಪ್ರಜಾ ಸೇವಾ ಆಂದೋಲನವು ಕೇವಲ ರಾಜಕೀಯ ಕಾರ್ಯಕ್ರಮವಾಗಿರದೆ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರುವ ವೇದಿಕೆಯಾಗಬೇಕಿತ್ತು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗುಡ್ಡದ ಕೊಮ್ಮಾರನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರ ಸಮಸ್ಯೆಗಳು, ಕುಡಿಯುವ ನೀರಿನ ಕೊರತೆ, ರಸ್ತೆ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಹಾಗೂ ಗ್ರಾಮೀಣ ಮೂಲಸೌಕರ್ಯಗಳ ಬೇಡಿಕೆಗಳನ್ನು ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತರಲು ಗ್ರಾಮಸ್ಥರು ನಿರೀಕ್ಷಿಸಿದ್ದರು. ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದೆಂಬ ಆಶಯದಿಂದ ಕಾರ್ಯಕ್ರಮದ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಈ ಭಾಗದ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಅವಕಾಶ ಕೈತಪ್ಪಿದಂತಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ. ದುಂದು ವೆಚ್ಚದ ಬಗ್ಗೆಯೂ ಪ್ರಶ್ನೆ ಕಾರ್ಯಕ್ರಮಕ್ಕಾಗಿ ವೇದಿಕೆ, ಶಾಮಿಯಾನ, ಹೂವಿನ ಅಲಂಕಾರ, ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಈ ಸಿದ್ಧತೆಗಳಿಗೆ ಮಾಡಿರುವ ವೆಚ್ಚದ ಬಗ್ಗೆ ಸ್ಥಳೀಯರು ಪ್ರಶ್ನೆ ಎತ್ತಿದ್ದಾರೆ. ಸಾರ್ವಜನಿಕರ ನಿರೀಕ್ಷೆ ಮತ್ತು ಸಿದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ಕಾರ್ಯಕ್ರಮ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳುವ ಮುನ್ನ ಸೂಕ್ತ ಮಾಹಿತಿ ನೀಡಬೇಕಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿದೆ. ಕಾರ್ಯಕ್ರಮ ರದ್ದತಿಗೆ ನಿಖರವಾದ ಕಾರಣವೇನು ಎಂಬುದರ ಕುರಿತು ಅಧಿಕೃತ ಸ್ಪಷ್ಟನೆ ದೊರೆತಿದೆಯೇ ಎಂಬುದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಈ ಕುರಿತು ಸಂಬಂಧಪಟ್ಟವರು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮತ್ತೊಂದು ದಿನಾಂಕ ನಿಗದಿಪಡಿಸಲು ಆಗ್ರಹ “ಸಚಿವರ ಮೇಲೆ ನಮಗೆ ಯಾವುದೇ ವೈಯಕ್ತಿಕ ಅಸಮಾಧಾನವಿಲ್ಲ. ನಮ್ಮ ಭಾಗದ ಜನರು ಬಹಳ ನಿರೀಕ್ಷೆಯಿಂದ ಕಾರ್ಯಕ್ರಮಕ್ಕಾಗಿ ಕಾಯುತ್ತಿದ್ದರು. ಗ್ರಾಮಸ್ಥರು ಮತ್ತು ಕಾರ್ಯಕರ್ತರು ಶ್ರಮವಹಿಸಿ ಸಿದ್ಧತೆ ಮಾಡಿಕೊಂಡಿದ್ದರು. ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾದ ಮಾಹಿತಿ ಬಂದಿರುವುದು ನಿರಾಸೆ ಮೂಡಿಸಿದೆ. ಆದ್ದರಿಂದ ಸಚಿವರು ಮತ್ತೊಂದು ದಿನಾಂಕ ನಿಗದಿಪಡಿಸಿ, ಇದೇ ಗ್ರಾಮದಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಸಿಕೊಡಬೇಕು” ಎಂದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಸಚಿವರು ಕೆ.ಎಸ್. ಬಸವಂತಪ್ಪ ಅವರೊಂದಿಗೆ ಸಂಬಂಧಪಟ್ಟ ಅಧಿಕಾರಿಗಳೂ ಗ್ರಾಮಕ್ಕೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಾರ್ಯಕ್ರಮವನ್ನು ಕೇವಲ ಔಪಚಾರಿಕವಾಗಿ ನಡೆಸದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ಕಾರ್ಯಕ್ರಮವನ್ನಾಗಿ ರೂಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಶಿವಕುಮಾರ್, ಕಾಂಗ್ರೆಸ್ ಮುಖಂಡ ರಮೇಶಣ್ಣ ಮಲ್ಗೆನಳ್ಳಿ, ಹಾಲೇಶ್, ತಿಪ್ಪೇಶ್, ಪ್ರಭಾಕರ್, ಪ್ರಕಾಶ್ ಬಿ., ಮಂಜಪ್ಪ ಗಿಡ್ಡಜ್ಜಿ, ಹಾಲೇಶಪುರ ವಿಶ್ವನಾಥ್, ವೆಂಕಟೇಶ್ ಸೇರಿದಂತೆ ಸ್ಥಳೀಯ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಒಟ್ಟಾರೆ, ಗುಡ್ಡದ ಕೊಮ್ಮಾರನಹಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ರದ್ದಾಗಿರುವುದು ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಸರ್ಕಾರ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಭಾಗದ ಜನರ ನಿರೀಕ್ಷೆಗಳಿಗೆ ಸ್ಪಂದಿಸಿ, ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಬೇಕೆಂಬುದು ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದೆ.
    4
    ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ರದ್ದು: ಗುಡ್ಡದ ಕೊಮ್ಮಾರನಹಳ್ಳಿ ಗ್ರಾಮಸ್ಥರ ಆಕ್ರೋಶ

ಸಚಿವರ ಕಾರ್ಯಕ್ರಮಕ್ಕಾಗಿ ಅದ್ದೂರಿ ಸಿದ್ಧತೆ, ವೇದಿಕೆ–ಶಾಮಿಯಾನ ನಿರ್ಮಾಣ; ಮುಂಚಿತ ಮಾಹಿತಿ ಇಲ್ಲದೆ ರದ್ದುಗೊಳಿಸಿದ್ದಕ್ಕೆ ಅಸಮಾಧಾನ
ಚನ್ನಗಿರಿ, ನ.27: ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಹೋಬಳಿಗೆ ಒಳಪಡುವ, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗುಡ್ಡದ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನವೆಂಬರ್ 28ರಂದು ಆಯೋಜಿಸಲಾಗಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಏಕಾಏಕಿ ರದ್ದಾಗಿದೆ ಎಂಬ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಕೆ.ಎಸ್. ಬಸವಂತಪ್ಪ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಈ ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಹಲವು ದಿನಗಳಿಂದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವೇದಿಕೆ ನಿರ್ಮಿಸಿ, ಶಾಮಿಯಾನ ಹಾಕಲಾಗಿತ್ತು. ಹೂವಿನ ಅಲಂಕಾರ, ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿ, ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಸ್ವಾಗತಿಸಲು ಸಕಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.
ಆದರೆ, ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಕೊನೆಯ ಕ್ಷಣದಲ್ಲಿ ತಿಳಿದುಬಂದಿರುವುದು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ನಿರಾಸೆ ಮೂಡಿಸಿದೆ. ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ನಡೆಸಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ರದ್ದತಿಯ ಮಾಹಿತಿ ಬಂದಿರುವುದಕ್ಕೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜನರ ಸಮಸ್ಯೆಗಳಿಗೆ ವೇದಿಕೆಯಾಗಬೇಕಿದ್ದ ಕಾರ್ಯಕ್ರಮ
ಪ್ರಜಾ ಸೇವಾ ಆಂದೋಲನವು ಕೇವಲ ರಾಜಕೀಯ ಕಾರ್ಯಕ್ರಮವಾಗಿರದೆ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರುವ ವೇದಿಕೆಯಾಗಬೇಕಿತ್ತು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗುಡ್ಡದ ಕೊಮ್ಮಾರನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರ ಸಮಸ್ಯೆಗಳು, ಕುಡಿಯುವ ನೀರಿನ ಕೊರತೆ, ರಸ್ತೆ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಹಾಗೂ ಗ್ರಾಮೀಣ ಮೂಲಸೌಕರ್ಯಗಳ ಬೇಡಿಕೆಗಳನ್ನು ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತರಲು ಗ್ರಾಮಸ್ಥರು ನಿರೀಕ್ಷಿಸಿದ್ದರು.
ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದೆಂಬ ಆಶಯದಿಂದ ಕಾರ್ಯಕ್ರಮದ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಈ ಭಾಗದ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಅವಕಾಶ ಕೈತಪ್ಪಿದಂತಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ.
ದುಂದು ವೆಚ್ಚದ ಬಗ್ಗೆಯೂ ಪ್ರಶ್ನೆ
ಕಾರ್ಯಕ್ರಮಕ್ಕಾಗಿ ವೇದಿಕೆ, ಶಾಮಿಯಾನ, ಹೂವಿನ ಅಲಂಕಾರ, ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಈ ಸಿದ್ಧತೆಗಳಿಗೆ ಮಾಡಿರುವ ವೆಚ್ಚದ ಬಗ್ಗೆ ಸ್ಥಳೀಯರು ಪ್ರಶ್ನೆ ಎತ್ತಿದ್ದಾರೆ. ಸಾರ್ವಜನಿಕರ ನಿರೀಕ್ಷೆ ಮತ್ತು ಸಿದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ಕಾರ್ಯಕ್ರಮ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳುವ ಮುನ್ನ ಸೂಕ್ತ ಮಾಹಿತಿ ನೀಡಬೇಕಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿದೆ.
ಕಾರ್ಯಕ್ರಮ ರದ್ದತಿಗೆ ನಿಖರವಾದ ಕಾರಣವೇನು ಎಂಬುದರ ಕುರಿತು ಅಧಿಕೃತ ಸ್ಪಷ್ಟನೆ ದೊರೆತಿದೆಯೇ ಎಂಬುದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಈ ಕುರಿತು ಸಂಬಂಧಪಟ್ಟವರು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮತ್ತೊಂದು ದಿನಾಂಕ ನಿಗದಿಪಡಿಸಲು ಆಗ್ರಹ
“ಸಚಿವರ ಮೇಲೆ ನಮಗೆ ಯಾವುದೇ ವೈಯಕ್ತಿಕ ಅಸಮಾಧಾನವಿಲ್ಲ. ನಮ್ಮ ಭಾಗದ ಜನರು ಬಹಳ ನಿರೀಕ್ಷೆಯಿಂದ ಕಾರ್ಯಕ್ರಮಕ್ಕಾಗಿ ಕಾಯುತ್ತಿದ್ದರು. ಗ್ರಾಮಸ್ಥರು ಮತ್ತು ಕಾರ್ಯಕರ್ತರು ಶ್ರಮವಹಿಸಿ ಸಿದ್ಧತೆ ಮಾಡಿಕೊಂಡಿದ್ದರು. ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾದ ಮಾಹಿತಿ ಬಂದಿರುವುದು ನಿರಾಸೆ ಮೂಡಿಸಿದೆ. ಆದ್ದರಿಂದ ಸಚಿವರು ಮತ್ತೊಂದು ದಿನಾಂಕ ನಿಗದಿಪಡಿಸಿ, ಇದೇ ಗ್ರಾಮದಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಸಿಕೊಡಬೇಕು” ಎಂದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಸಚಿವರು ಕೆ.ಎಸ್. ಬಸವಂತಪ್ಪ ಅವರೊಂದಿಗೆ ಸಂಬಂಧಪಟ್ಟ ಅಧಿಕಾರಿಗಳೂ ಗ್ರಾಮಕ್ಕೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಾರ್ಯಕ್ರಮವನ್ನು ಕೇವಲ ಔಪಚಾರಿಕವಾಗಿ ನಡೆಸದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ಕಾರ್ಯಕ್ರಮವನ್ನಾಗಿ ರೂಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಶಿವಕುಮಾರ್, ಕಾಂಗ್ರೆಸ್ ಮುಖಂಡ ರಮೇಶಣ್ಣ ಮಲ್ಗೆನಳ್ಳಿ, ಹಾಲೇಶ್, ತಿಪ್ಪೇಶ್, ಪ್ರಭಾಕರ್, ಪ್ರಕಾಶ್ ಬಿ., ಮಂಜಪ್ಪ ಗಿಡ್ಡಜ್ಜಿ, ಹಾಲೇಶಪುರ ವಿಶ್ವನಾಥ್, ವೆಂಕಟೇಶ್ ಸೇರಿದಂತೆ ಸ್ಥಳೀಯ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಒಟ್ಟಾರೆ, ಗುಡ್ಡದ ಕೊಮ್ಮಾರನಹಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ರದ್ದಾಗಿರುವುದು ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಸರ್ಕಾರ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಭಾಗದ ಜನರ ನಿರೀಕ್ಷೆಗಳಿಗೆ ಸ್ಪಂದಿಸಿ, ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಬೇಕೆಂಬುದು ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದೆ.
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    11 hrs ago
  • ನವೆಂಬರ್ 28 ಮತ್ತು 29ರಂದು 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿಯ ನೂಪುರ ನೃತ್ಯ ಮತ್ತು ಸಂಗೀತ ಅಕಾಡೆಮಿಯ 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ನವೆಂಬರ್ 28 ಮತ್ತು 29ರಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಪವಮಾನ್ ಪಿ.ಎಸ್. ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.28ರಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ನೂಪುರದ ವಿದ್ಯಾರ್ಥಿಗಳ ಸಂಗೀತ ಕಾರ್ಯಕ್ರಮ ಹಾಗೂ ಹುಬ್ಬಳ್ಳಿಯ ವಿದ್ವಾನ್ ಸುಜಯ್ ಶಾನುಭೋಗ್ ಮತ್ತು ಬೆಂಗಳೂರಿನ ವಿದುಷಿ ಗೌರಿ ಸಾಗರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದರು. ನ.29ರಂದು ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ, ವಿದ್ವಾನ್ ಗಣೇಶ್‌ರಾಜ್ ಎಂ.ವಿ. ಹಾಗೂ ಡಾ. ಪಿ. ಶ್ರೀಧರ ಆಚಾರ್ಯ ಅವರಿಗೆ ‘ನೂಪುರ ಕಸ್ತೂರಿ’ ಬಿರುದು ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ‘ನೂಪುರ ಸಿಂಚನ’ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ವಿದುಷಿ ಶುಭಶ್ರೀ ಅಡಿಗ ಅವರ ವೀಣಾವಾದನ ಹಾಗೂ ವಿದ್ಯಾರ್ಥಿಗಳಿಂದ ‘ಮಹಿಷಾಸುರ ಮರ್ದಿನಿ’ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸುಧಾಕರ ರಾವ್ ಪೇಜಾವರ, ಸುಲೋಚನಾ ವಿ. ಭಟ್, ಪ್ರಶಾಂತ್ ಹಾಗೂ ಅನು ಉಪಸ್ಥಿತರಿದ್ದರು.
    1
    ನವೆಂಬರ್ 28 ಮತ್ತು 29ರಂದು 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ
ಮಂಗಳೂರಿನ ಕದ್ರಿಯ ನೂಪುರ ನೃತ್ಯ ಮತ್ತು ಸಂಗೀತ ಅಕಾಡೆಮಿಯ 45ನೇ ವಾರ್ಷಿಕೋತ್ಸವದ ಅಂಗವಾಗಿ ‘ನೂಪುರ ಧ್ವನಿ-2026’ ಸಾಂಸ್ಕೃತಿಕ ಕಾರ್ಯಕ್ರಮ ನವೆಂಬರ್ 28 ಮತ್ತು 29ರಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಪವಮಾನ್ ಪಿ.ಎಸ್. ತಿಳಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.28ರಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ನೂಪುರದ ವಿದ್ಯಾರ್ಥಿಗಳ ಸಂಗೀತ ಕಾರ್ಯಕ್ರಮ ಹಾಗೂ ಹುಬ್ಬಳ್ಳಿಯ ವಿದ್ವಾನ್ ಸುಜಯ್ ಶಾನುಭೋಗ್ ಮತ್ತು ಬೆಂಗಳೂರಿನ ವಿದುಷಿ ಗೌರಿ ಸಾಗರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದರು.
ನ.29ರಂದು ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಪುರಸ್ಕೃತೆ ವಿದುಷಿ ನಯನ ವಿ. ರೈ, ವಿದ್ವಾನ್ ಗಣೇಶ್‌ರಾಜ್ ಎಂ.ವಿ. ಹಾಗೂ ಡಾ. ಪಿ. ಶ್ರೀಧರ ಆಚಾರ್ಯ ಅವರಿಗೆ ‘ನೂಪುರ ಕಸ್ತೂರಿ’ ಬಿರುದು ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ‘ನೂಪುರ ಸಿಂಚನ’ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ವಿದುಷಿ ಶುಭಶ್ರೀ ಅಡಿಗ ಅವರ ವೀಣಾವಾದನ ಹಾಗೂ ವಿದ್ಯಾರ್ಥಿಗಳಿಂದ ‘ಮಹಿಷಾಸುರ ಮರ್ದಿನಿ’ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುಧಾಕರ ರಾವ್ ಪೇಜಾವರ, ಸುಲೋಚನಾ ವಿ. ಭಟ್, ಪ್ರಶಾಂತ್ ಹಾಗೂ ಅನು ಉಪಸ್ಥಿತರಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.