Shuru
Apke Nagar Ki App…
ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರೀಫ್ ಕೊಲೆ ಕೇಸ್: ಆರೋಪಿಗಳ ಪತ್ತೆಗೆ ಶೋಧ ಕಾರ್ಯ ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Shamsheer Budoli

More news from ಕರ್ನಾಟಕ and nearby areas
- ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ರವಿವಾರ ಆರಂಭಗೊಂಡ ವಿಮಾನ ಯಾನ ಸಂಸ್ಥೆಗಳ ಬೇಸಿಗೆ ವೇಳಾಪಟ್ಟಿಯಂತೆ ಮುಂಬೈ ಪ್ರದೇಶಕ್ಕೆ ಆರು ವಿಮಾನಗಳು ಸಂಚರಿಸಲಿವೆ. ಸೋಮವಾರ ಮತ್ತು ಗುರುವಾರದಂದು ಮುಂಬೈ ಪ್ರದೇಶಕ್ಕೆ ಒಟ್ಟು 5 ವಿಮಾನಗಳು ಪ್ರಯಾಣಕ್ಕೆ ಲಭ್ಯವಾಗಲಿವೆ. ಈ ಪೈಕಿ ಇಂಡಿಗೋ ಸಂಸ್ಥೆಯಿಂದ ನವಿ ಮುಂಬೈ ಮತ್ತು ಮುಂಬೈಗೆ ತಲಾ ಎರಡು , ಏರ್ ಇಂಡಿಯಾ ಎಕ್ಸ್‌ನಿಂದ ಮುಂಬೈಗೆ 1 ವಿಮಾನ ಹಾರಾಟ ನಡೆಸಲಿದೆ.1
- ಶಿವಮೊಗ್ಗ: ಮಳೆಯ ಅವಾಂತರಕ್ಕೆ ಇಂದು ನಗರದ ವಿನೋಬನಗರ ಬಡಾವಣೆಯ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದು, ಮರ ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ದೃಶ್ಯ ಕಂಡು ಬಂದಿದೆ. ಮಳೆಗಾಲದ ಸಮಯದಲ್ಲಿ ಎಷ್ಟೇ ಸುರಕ್ಷಿತವಾಗಿದ್ದರು ಅಪಾಯಗಳು ತಪ್ಪೋದಿಲ್ಲ ಎಂಬ ಕಾರಣಕ್ಕೆ ಸಾಕ್ಷಿಯಾಗಿದೆ. ಈ ರೀತಿಯ ಮತ್ತೊಂದು ಘಟನೆ ಹೊಸ ಮನೆ ಬಡಾವಣೆಯ 4ನೇ ತಿರುವಿನಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಅವಘಡ ನಡೆದಿದೆ.1
- ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಅನೇಕ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ದಾವಣಗೆರೆಯಿಂದ ಹೊರಟಿದ್ದ ಬಸ್ ಚನ್ನಗಿರಿ ದಾಟಿ ಕಾಗೆಹಳ್ಳದ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪತನಗೊಂಡಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದು, ಮೂವರು-ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಇಬ್ಬರ ಕಾಲು ಮುರಿದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಧಾವಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಹೊರತೆಗೆದಿದ್ದಾರೆ. ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.3
- ಸೊರಬದಲ್ಲಿ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ ನೂತನ ಬ್ರಹ್ಮ ರಥ ಸಮರ್ಪಣೆ ಅಂಗವಾಗಿ ಇದೇ ಪ್ರಪ್ರಥಮ ಬಾರಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಅರ್ಚಕರಾದ ವೇ.ಬ್ರ. ನಾರಾಯಣ ಭಟ್ ಮರಾಟೆ ನೇತೃತ್ವದಲ್ಲಿ ಹಲವಾರು ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರೀನಿವಾಸ ಕಲ್ಯಾಣವನ್ನು ಕಣ್ತುಂಬಿಕೊಂಡರು.1
- Post by Md Aleemulla Shariff1
- EID HARMONY GATHERING HELD @ MILAN FUNCTION HALL IN MYSURU Organised by jamat e Islami HIND #kvnews1
- ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಾನೆಗಳು ದಾಂಧಲೆ ನಡೆಸಿವೆ. ಮುಖ್ಯ ರಸ್ತೆಗೆ ಬಂದು ಅಡ್ಡಾಡಿಡ್ಡಿ ಓಡಿದ ಕಾಡಾನೆಗಳು ಕೆಲಕಾಲ ಆತಂಕ ಸೃಷ್ಟಿಸಿವೆ. ಕಾಡಾನೆ ಓಡಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂಧಿಗಳು ಇದ್ದ ಜೀಪ್ ಜಖಂಗೊಳಿಸಿದೆ. ಅದೃಷ್ಟವಶಾತ್ ಜೀಪ್ ಡ್ರೈವ್ ಮಾಡುತ್ತಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊನೆಗೂ ಕಾಡಿಗೆ ಆನೆಗಳನ್ನು ಓಡಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಓಡಿಸಿದ್ದಾರೆ.1
- ನೀರಿನ ತೋಡನ್ನು ಮುಚ್ಚಿದ ವಿಷಯಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊರ್ವ ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ರವಿವಾರ ಘಟನೆ ನಡೆದಿದೆ. ಪಟ್ನಮೊಗರು ನಿವಾಸಿ ನಾಗೇಶ್ ಶೇಣವ ಹಲ್ಲೆ ನಡೆಸಿರುವ ವ್ಯಕ್ತಿಯಾಗಿದ್ದು, ನೆರೆಮನೆಯ ಬೇಬಿ (56), ಅವರ ಪುತ್ರ ರವಿರಾಜ್ ಮತ್ತು ಸೊಸೆ ವರ್ಷಾ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.1