logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ನರೇಂದ್ರಸ್ವಾಮಿ ಉದ್ಘಾಟಿಸಿದರು. ಈ ವೇಳೆ 23 ವಾರ್ಡುನ 896 ನಿವೇಶನ ಫಲಾನುಭವಿಗಳಿಗೆ ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು ಫಲಾನುಭವಿಗಳು ಲಾಟರಿ ಮೂಲಕ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

4 hrs ago
user_ಸುಮಿತ್ರ‌ ಹೆಚ್‌ ಪಿ
ಸುಮಿತ್ರ‌ ಹೆಚ್‌ ಪಿ
ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
4 hrs ago

33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ನರೇಂದ್ರಸ್ವಾಮಿ ಉದ್ಘಾಟಿಸಿದರು. ಈ ವೇಳೆ 23 ವಾರ್ಡುನ 896 ನಿವೇಶನ ಫಲಾನುಭವಿಗಳಿಗೆ ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು ಫಲಾನುಭವಿಗಳು ಲಾಟರಿ ಮೂಲಕ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

More news from ಕರ್ನಾಟಕ and nearby areas
  • ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ‌ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ‌ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.
    1
    ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ
ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ  ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ  ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ‌ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು.    ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ  ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು.    ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು  ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ‌ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ  ಯೋಜನಾಧಿಕಾರಿ ಚಂದ್ರ ಶೇಖರ್.  ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ  ಹಾಜರಿ ದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    1
    ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ 
ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ  ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು  ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ 33 ಎಕರೆ  ನಿವೇಶನದ ಆವರಣದಲ್ಲಿ  ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ  ಛಲ ಬಿಡದೆ  ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ  ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು  ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು.
ಈ  ವೇಳೆ  ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    3 hrs ago
  • ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ. ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು. ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು. ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು. ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
    1
    ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ
ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ.
ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ  ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು.
ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು.
ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು.
ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. 
ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    23 hrs ago
  • ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.
    1
    ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. 
ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ  ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ  ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ  ನೀಡಿದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    7 hrs ago
  • ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    1
    ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ
ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು.
ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ
ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    2 hrs ago
  • ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    3
    ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ.
ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    52 min ago
  • ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು. ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
    1
    ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು.

ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು.
ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ನರೇಂದ್ರಸ್ವಾಮಿ ಉದ್ಘಾಟಿಸಿದರು. ಈ ವೇಳೆ 23 ವಾರ್ಡುನ 896 ನಿವೇಶನ ಫಲಾನುಭವಿಗಳಿಗೆ ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು ಫಲಾನುಭವಿಗಳು ಲಾಟರಿ ಮೂಲಕ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.
    1
    33  ಎಕರೆಯ 896 ನಿವೇಶನವನ್ನು  ಅರ್ಹ ಬಿಪಿಎಲ್  ಫಲಾನುಭವಿಗಳಿಗೆ  ನಿವೇಶನ ಹಂಚಿಕೆ ಕಾರ್ಯಕ್ರಮ 
ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ  33  ಎಕರೆಯ 896 ನಿವೇಶನವನ್ನು  ಅರ್ಹ ಬಿಪಿಎಲ್  ಫಲಾನುಭವಿಗಳಿಗೆ  ನಿವೇಶನ ಹಂಚಿಕೆ ಕಾರ್ಯಕ್ರಮ  ಮಳವಳ್ಳಿ ಪಟ್ಟಣದ  33 ಎಕರೆ ನಿವೇಶನ ಆವರಣದಲ್ಲಿ  ನಡೆಸಲಾಯಿತು.
ಕಾರ್ಯಕ್ರಮವನ್ನು  ಕೃಷಿ ಸಚಿವ ನರೇಂದ್ರಸ್ವಾಮಿ  ಉದ್ಘಾಟಿಸಿದರು.
ಈ ವೇಳೆ  23 ವಾರ್ಡುನ   896 ನಿವೇಶನ ಫಲಾನುಭವಿಗಳಿಗೆ  ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು  ಫಲಾನುಭವಿಗಳು ಲಾಟರಿ ಮೂಲಕ   ಅವಕಾಶ ಕಲ್ಪಿಸಲಾಯಿತು. 
ಈ ವೇಳೆ  ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ  ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.