logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಕ್ಕಬಳ್ಳಾಪುರದಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಪ್ರಭು ಅವರು, ದೈಹಿಕ ಧೃಡತೆ, ಮಾನಸಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆ ಹಾಗೂ ಆಧ್ಯಾತ್ಮಿಕ ಸಾಧನೆಯನ್ನು ಒದಗಿಸುವ ಜಗತ್ತಿನ ಏಕೈಕ ಮಾರ್ಗ ಭಾರತೀಯ ಯೋಗ ಜೀವನ ಪದ್ಧತಿ ಎಂದು ಬಣ್ಣಿಸಿದರು. ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಭಾರತವು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು ಪ್ರಮುಖ ಪರಂಪರೆಯಾಗಿದೆ ಎಂದು ಜಿ. ಪ್ರಭು ತಿಳಿಸಿದರು. ಯೋಗ ಕೇವಲ ದೈಹಿಕ ವ್ಯಾಯಾಮವಲ್ಲದೆ, ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಸಾಧಿಸುವ ಸಮಗ್ರ ಜೀವನಶೈಲಿಯಾಗಿದೆ. ಇಂದಿನ ವೇಗದ ಬದುಕಿನಲ್ಲಿ ಮಾನಸಿಕ ಒತ್ತಡ, ಆತಂಕ ಹಾಗೂ ಆಧುನಿಕ ಜೀವನಶೈಲಿ ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿದ್ದು, ಯೋಗದ ಅಗತ್ಯತೆ ಇನ್ನಷ್ಟು ಹೆಚ್ಚಿದೆ. ಪ್ರತಿಯೊಬ್ಬರೂ ದಿನನಿತ್ಯದ ಬದುಕಿನಲ್ಲಿ ಕನಿಷ್ಠ 15 ರಿಂದ 30 ನಿಮಿಷಗಳ ಕಾಲ ಯೋಗಾಭ್ಯಾಸಕ್ಕೆ ಮೀಸಲಿಟ್ಟರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. ಯೋಗದಿಂದ ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಯುತ್ತದೆ, ಜೊತೆಗೆ ತಾಳ್ಮೆ, ಸಹನೆ ಮತ್ತು ಸಕಾರಾತ್ಮಕ ಚಿಂತನೆಗಳು ವೃದ್ಧಿಸುತ್ತವೆ. ಯೋಗವನ್ನು ಪ್ರತಿನಿತ್ಯದ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡರೆ ಉತ್ತಮ ಆರೋಗ್ಯದ ಜೊತೆಗೆ ಮಾನಸಿಕ ಹಾಗೂ ಆಧ್ಯಾತ್ಮಿಕ ಸಮತೋಲನವೂ ಲಭಿಸಿ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ಬೆಳೆಸಲು ನೆರವಾಗುತ್ತದೆ ಎಂದು ಅವರು ಹೇಳಿದರು. ಆರೋಗ್ಯಕರ ಜೀವನಶೈಲಿಗೆ ಸಿರಿಧಾನ್ಯಗಳ ಬಳಕೆಯೂ ಅತ್ಯಂತ ಅಗತ್ಯ ಎಂದು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು. ಸಿರಿಧಾನ್ಯಗಳಲ್ಲಿ ನಾರಿನಾಂಶ, ಕಬ್ಬಿಣ, ಕ್ಯಾಲ್ಸಿಯಂ ಹಾಗೂ ಅಗತ್ಯ ಪೋಷಕಾಂಶಗಳು ಸಮೃದ್ಧವಾಗಿದ್ದು, ಮಧುಮೇಹ, ಸ್ಥೂಲಕಾಯ ಮತ್ತು ಹೃದಯ ಸಂಬಂಧಿ ಸಮಸ್ಯೆಗಳ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಸಾರ್ವಜನಿಕರು ತಮ್ಮ ದೈನಂದಿನ ಆಹಾರದಲ್ಲಿ ರಾಗಿ, ನವಣೆ, ಸಜ್ಜೆ, ಸಾಮೆ, ಊದಲು ಮುಂತಾದ ಸಿರಿಧಾನ್ಯಗಳನ್ನು ಸೇರಿಸಿಕೊಳ್ಳಬೇಕು. ಸಿರಿಧಾನ್ಯಗಳ ಬಳಕೆಯಿಂದ ಪೌಷ್ಟಿಕ ಆಹಾರದ ಭದ್ರತೆ ಹೆಚ್ಚುವುದರ ಜೊತೆಗೆ ಪರಿಸರ ಸ್ನೇಹಿ ಕೃಷಿಗೂ ಉತ್ತೇಜನ ಸಿಗುತ್ತದೆ ಎಂದು ಅವರು ತಿಳಿಸಿದರು. ಯುವಜನರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಯೋಗದ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಒಂದು ಗಂಟೆ ಕಾಲ ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನದ ಪ್ರಾತ್ಯಕ್ಷಿಕೆಗಳನ್ನು ನಡೆಸಲಾಯಿತು. ಬಯಲು ಕ್ರೀಡಾಂಗಣದಲ್ಲಿ ಅದ್ದೂರಿ ವೇದಿಕೆ ನಿರ್ಮಿಸಿ ಮೊದಲ ಬಾರಿಗೆ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪತಂಜಲಿ ಯೋಗ ಸಂಸ್ಥೆಯ ಜಿ. ಗೋವಿಂದ್, ಯೋಗ ಗುರುಗಳಾದ ಲೋಕನಾಥ್ ಮತ್ತು ನಾಗರಾಜ್ ಅವರು ಯೋಗ ಮಾಡುವ ವಿಧಾನವನ್ನು ಲಯಬದ್ಧವಾಗಿ ಹಾಗೂ ಪ್ರಾಯೋಗಿಕವಾಗಿ ಹೇಳಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ. ಎಚ್. ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಎಂ. ಎಲ್. ಸುಂದರರಾಜ್, ತಹಸೀಲ್ದಾರ್ ರಶ್ಮಿ, ಯೋಗ ಗುರುಗಳಾದ ವೀಣಾ ಲೋಕನಾಥ್, ಮುನಿರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಯೋಗ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಹಿರಿಯ ದೈಹಿಕ ಶಿಕ್ಷಕ ಮಾರುತಿ ಅವರು ಕಾರ್ಯಕ್ರಮ ನಿರೂಪಿಸಿದರು.

7 hrs ago
user_Govindappa K
Govindappa K
Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
7 hrs ago
675189ed-17c8-4a07-9012-d8ec4d8c1307

ಚಿಕ್ಕಬಳ್ಳಾಪುರದಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಪ್ರಭು ಅವರು, ದೈಹಿಕ ಧೃಡತೆ, ಮಾನಸಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆ ಹಾಗೂ ಆಧ್ಯಾತ್ಮಿಕ ಸಾಧನೆಯನ್ನು ಒದಗಿಸುವ ಜಗತ್ತಿನ ಏಕೈಕ ಮಾರ್ಗ ಭಾರತೀಯ ಯೋಗ ಜೀವನ ಪದ್ಧತಿ ಎಂದು ಬಣ್ಣಿಸಿದರು. ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಭಾರತವು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು ಪ್ರಮುಖ ಪರಂಪರೆಯಾಗಿದೆ ಎಂದು ಜಿ. ಪ್ರಭು ತಿಳಿಸಿದರು. ಯೋಗ ಕೇವಲ ದೈಹಿಕ ವ್ಯಾಯಾಮವಲ್ಲದೆ, ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಸಾಧಿಸುವ ಸಮಗ್ರ ಜೀವನಶೈಲಿಯಾಗಿದೆ. ಇಂದಿನ ವೇಗದ ಬದುಕಿನಲ್ಲಿ ಮಾನಸಿಕ ಒತ್ತಡ,

86290c38-f37b-4aa0-b988-5bae2ca0a767

ಆತಂಕ ಹಾಗೂ ಆಧುನಿಕ ಜೀವನಶೈಲಿ ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿದ್ದು, ಯೋಗದ ಅಗತ್ಯತೆ ಇನ್ನಷ್ಟು ಹೆಚ್ಚಿದೆ. ಪ್ರತಿಯೊಬ್ಬರೂ ದಿನನಿತ್ಯದ ಬದುಕಿನಲ್ಲಿ ಕನಿಷ್ಠ 15 ರಿಂದ 30 ನಿಮಿಷಗಳ ಕಾಲ ಯೋಗಾಭ್ಯಾಸಕ್ಕೆ ಮೀಸಲಿಟ್ಟರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. ಯೋಗದಿಂದ ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಯುತ್ತದೆ, ಜೊತೆಗೆ ತಾಳ್ಮೆ, ಸಹನೆ ಮತ್ತು ಸಕಾರಾತ್ಮಕ ಚಿಂತನೆಗಳು ವೃದ್ಧಿಸುತ್ತವೆ. ಯೋಗವನ್ನು ಪ್ರತಿನಿತ್ಯದ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡರೆ ಉತ್ತಮ ಆರೋಗ್ಯದ ಜೊತೆಗೆ ಮಾನಸಿಕ ಹಾಗೂ ಆಧ್ಯಾತ್ಮಿಕ ಸಮತೋಲನವೂ ಲಭಿಸಿ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ಬೆಳೆಸಲು ನೆರವಾಗುತ್ತದೆ ಎಂದು ಅವರು ಹೇಳಿದರು. ಆರೋಗ್ಯಕರ ಜೀವನಶೈಲಿಗೆ ಸಿರಿಧಾನ್ಯಗಳ ಬಳಕೆಯೂ ಅತ್ಯಂತ ಅಗತ್ಯ ಎಂದು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು. ಸಿರಿಧಾನ್ಯಗಳಲ್ಲಿ

86e15d8d-7ec9-48b6-8df6-8f66ef50dfdc

ನಾರಿನಾಂಶ, ಕಬ್ಬಿಣ, ಕ್ಯಾಲ್ಸಿಯಂ ಹಾಗೂ ಅಗತ್ಯ ಪೋಷಕಾಂಶಗಳು ಸಮೃದ್ಧವಾಗಿದ್ದು, ಮಧುಮೇಹ, ಸ್ಥೂಲಕಾಯ ಮತ್ತು ಹೃದಯ ಸಂಬಂಧಿ ಸಮಸ್ಯೆಗಳ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಸಾರ್ವಜನಿಕರು ತಮ್ಮ ದೈನಂದಿನ ಆಹಾರದಲ್ಲಿ ರಾಗಿ, ನವಣೆ, ಸಜ್ಜೆ, ಸಾಮೆ, ಊದಲು ಮುಂತಾದ ಸಿರಿಧಾನ್ಯಗಳನ್ನು ಸೇರಿಸಿಕೊಳ್ಳಬೇಕು. ಸಿರಿಧಾನ್ಯಗಳ ಬಳಕೆಯಿಂದ ಪೌಷ್ಟಿಕ ಆಹಾರದ ಭದ್ರತೆ ಹೆಚ್ಚುವುದರ ಜೊತೆಗೆ ಪರಿಸರ ಸ್ನೇಹಿ ಕೃಷಿಗೂ ಉತ್ತೇಜನ ಸಿಗುತ್ತದೆ ಎಂದು ಅವರು ತಿಳಿಸಿದರು. ಯುವಜನರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಯೋಗದ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಒಂದು ಗಂಟೆ ಕಾಲ ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನದ ಪ್ರಾತ್ಯಕ್ಷಿಕೆಗಳನ್ನು ನಡೆಸಲಾಯಿತು. ಬಯಲು ಕ್ರೀಡಾಂಗಣದಲ್ಲಿ ಅದ್ದೂರಿ ವೇದಿಕೆ ನಿರ್ಮಿಸಿ ಮೊದಲ ಬಾರಿಗೆ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪತಂಜಲಿ ಯೋಗ

c20ea2e1-9095-4ff9-b89f-3cdf50ac41a9

ಸಂಸ್ಥೆಯ ಜಿ. ಗೋವಿಂದ್, ಯೋಗ ಗುರುಗಳಾದ ಲೋಕನಾಥ್ ಮತ್ತು ನಾಗರಾಜ್ ಅವರು ಯೋಗ ಮಾಡುವ ವಿಧಾನವನ್ನು ಲಯಬದ್ಧವಾಗಿ ಹಾಗೂ ಪ್ರಾಯೋಗಿಕವಾಗಿ ಹೇಳಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ. ಎಚ್. ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಎಂ. ಎಲ್. ಸುಂದರರಾಜ್, ತಹಸೀಲ್ದಾರ್ ರಶ್ಮಿ, ಯೋಗ ಗುರುಗಳಾದ ವೀಣಾ ಲೋಕನಾಥ್, ಮುನಿರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಯೋಗ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಹಿರಿಯ ದೈಹಿಕ ಶಿಕ್ಷಕ ಮಾರುತಿ ಅವರು ಕಾರ್ಯಕ್ರಮ ನಿರೂಪಿಸಿದರು.

More news from ಕರ್ನಾಟಕ and nearby areas
  • ಬಿಕೆ ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ, ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರದಿಂದ ಹೊರಟು ಬೆಂಗಳೂರಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ, 7,000 ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀವ್ ಗೌಡರೊಂದಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
    1
    ಬಿಕೆ ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ, ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರದಿಂದ ಹೊರಟು ಬೆಂಗಳೂರಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ, 7,000 ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀವ್ ಗೌಡರೊಂದಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • ಕೋರ್ ಕಮಿಟಿ ಅಧ್ಯಕ್ಷರಾದ ಜೆ ಕೆ ಕೃಷ್ಣಾರೆಡ್ಡಿ ಅವರು 'ನಮ್ಮ ಭೂಮಿ - ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.
    1
    ಕೋರ್ ಕಮಿಟಿ ಅಧ್ಯಕ್ಷರಾದ ಜೆ ಕೆ ಕೃಷ್ಣಾರೆಡ್ಡಿ ಅವರು 'ನಮ್ಮ ಭೂಮಿ - ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • ರಾಜ್ಯ ರಾಜಕಾರಣದಲ್ಲಿ ಅಡ್ಡ ಮತದಾನದ ವಿವಾದದಿಂದಾಗಿ ಭಾರೀ ಸಂಚಲನ ಮೂಡಿದ್ದು, ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರಹಸ್ಯ ಮತದಾನದ ಕಾರಣದಿಂದ ಎಲ್ಲಾ ಶಾಸಕರ ಮೇಲೂ ಅನುಮಾನ ಮೂಡಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದ್ದು, ಧರ್ಮಕ್ಷೇತ್ರದಲ್ಲೇ ಮುಕ್ತ ಚರ್ಚೆ ನಡೆಸಿ ಸತ್ಯಾಸತ್ಯತೆ ಹೊರತರಲು ಬಿಜೆಪಿ ಮುಂದಾಗಿದೆ. ವಿಜಯೇಂದ್ರ ಅವರ ಈ ನಡೆಯು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ, ಅಡ್ಡ ಮತದಾನದ ರಹಸ್ಯವನ್ನು ಬಯಲಿಗೆಳೆಯಲು ಇದು 'ಮಾಸ್ಟರ್ ಪ್ಲಾನ್' ಎಂದು ವಿಶ್ಲೇಷಿಸಲಾಗುತ್ತಿದೆ.
    1
    ರಾಜ್ಯ ರಾಜಕಾರಣದಲ್ಲಿ ಅಡ್ಡ ಮತದಾನದ ವಿವಾದದಿಂದಾಗಿ ಭಾರೀ ಸಂಚಲನ ಮೂಡಿದ್ದು, ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ರಹಸ್ಯ ಮತದಾನದ ಕಾರಣದಿಂದ ಎಲ್ಲಾ ಶಾಸಕರ ಮೇಲೂ ಅನುಮಾನ ಮೂಡಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದ್ದು, ಧರ್ಮಕ್ಷೇತ್ರದಲ್ಲೇ ಮುಕ್ತ ಚರ್ಚೆ ನಡೆಸಿ ಸತ್ಯಾಸತ್ಯತೆ ಹೊರತರಲು ಬಿಜೆಪಿ ಮುಂದಾಗಿದೆ. ವಿಜಯೇಂದ್ರ ಅವರ ಈ ನಡೆಯು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ, ಅಡ್ಡ ಮತದಾನದ ರಹಸ್ಯವನ್ನು ಬಯಲಿಗೆಳೆಯಲು ಇದು 'ಮಾಸ್ಟರ್ ಪ್ಲಾನ್' ಎಂದು ವಿಶ್ಲೇಷಿಸಲಾಗುತ್ತಿದೆ.
    user_A News24Kannada
    A News24Kannada
    Newsagent Bengaluru East, Bengaluru Urban•
    7 hrs ago
  • ಕೋಲಾರದಲ್ಲಿ ಇದೇ ತಿಂಗಳ 27ರ ಶನಿವಾರದಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವವನ್ನು ಜಿಲ್ಲಾಡಳಿತದ ಸಹಯೋಗದಲ್ಲಿ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಕೆ.ವಿ.ಶಂಕರಪ್ಪ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅದ್ದೂರಿ ಪಲ್ಲಕ್ಕಿಗಳ ಮೆರವಣಿಗೆಯು ನಗರದ ಪ್ರವಾಸಿ ಮಂದಿರದಿಂದ ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ, ನಗರದ ಪ್ರಮುಖ ರಸ್ತೆಗಳ ಮೂಲಕ ರಂಗ ಮಂದಿರ ತಲುಪಲಿದೆ ಎಂದು ಅವರು ವಿವರಿಸಿದರು. ಇದೇ ದಿನ ಸಂಜೆ 4 ಗಂಟೆಗೆ ಟಿ. ಚನ್ನಯ್ಯ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪರಮಪೂಜ್ಯರಾದ ಡಾ. ಶ್ರೀ ನಿರ್ಮಲದನಾಥ ಮಹಾ ಸ್ವಾಮೀಜಿಗಳು ಬರುವ ನಿರೀಕ್ಷೆ ಇದ್ದು, ಶಿರ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಸ್ಪಟಿಕಪುರ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹಾಗೂ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿಗಳು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಸಮುದಾಯದ ಅನೇಕ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ, ಶೇಕಡ 95 ರಷ್ಟು ಅಂಕ ಗಳಿಸಿರುವ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ, ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲಾ ಪಲ್ಲಕ್ಕಿಗಳಿಗೂ ನೆನಪಿನ ಕಾಣಿಕೆ ನೀಡಲು ತೀರ್ಮಾನಿಸಲಾಗಿದೆ. ತಾಲ್ಲೂಕಿನ ಪ್ರತಿ ಹಳ್ಳಿಯಿಂದ ಕೆಂಪೇಗೌಡರ ಅಭಿಮಾನಿಗಳು ಹಾಗೂ ಸಮುದಾಯದ ಎಲ್ಲಾ ಜನತೆ ಕೆಂಪೇಗೌಡರ ಭಾವಚಿತ್ರ, ಪುತ್ತಳಿಕೆ ಹೊತ್ತ ಪಲ್ಲಕ್ಕಿಗಳೊಂದಿಗೆ ಕಲಾ ತಂಡಗಳು ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೆ.ವಿ. ಶಂಕರಪ್ಪ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹಾಗೂ ಹಿರಿಯ ವಕೀಲರಾದ ಬಿಸಪಪ್ಪ ಗೌಡರು, ಉಪಾಧ್ಯಕ್ಷರಾದ ಕೃಷ್ಣಾರೆಡ್ಡಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರಮೇಶ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಪವನ್ ನಾರಾಯಣಸ್ವಾಮಿ, ನಿರ್ದೇಶಕರಾದ ಲಕ್ಷಣಗೌಡ, ಲೋಕೇಶ್, ಮತ್ತು ವೆಂಕಟರಾಮೇಗೌಡ ಉಪಸ್ಥಿತರಿದ್ದರು.
    3
    ಕೋಲಾರದಲ್ಲಿ ಇದೇ ತಿಂಗಳ 27ರ ಶನಿವಾರದಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವವನ್ನು ಜಿಲ್ಲಾಡಳಿತದ ಸಹಯೋಗದಲ್ಲಿ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಕೆ.ವಿ.ಶಂಕರಪ್ಪ ತಿಳಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅದ್ದೂರಿ ಪಲ್ಲಕ್ಕಿಗಳ ಮೆರವಣಿಗೆಯು ನಗರದ ಪ್ರವಾಸಿ ಮಂದಿರದಿಂದ ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ, ನಗರದ ಪ್ರಮುಖ ರಸ್ತೆಗಳ ಮೂಲಕ ರಂಗ ಮಂದಿರ ತಲುಪಲಿದೆ ಎಂದು ಅವರು ವಿವರಿಸಿದರು. ಇದೇ ದಿನ ಸಂಜೆ 4 ಗಂಟೆಗೆ ಟಿ. ಚನ್ನಯ್ಯ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪರಮಪೂಜ್ಯರಾದ ಡಾ. ಶ್ರೀ ನಿರ್ಮಲದನಾಥ ಮಹಾ ಸ್ವಾಮೀಜಿಗಳು ಬರುವ ನಿರೀಕ್ಷೆ ಇದ್ದು, ಶಿರ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಸ್ಪಟಿಕಪುರ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹಾಗೂ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿಗಳು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಸಮುದಾಯದ ಅನೇಕ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವೇದಿಕೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ, ಶೇಕಡ 95 ರಷ್ಟು ಅಂಕ ಗಳಿಸಿರುವ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ, ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲಾ ಪಲ್ಲಕ್ಕಿಗಳಿಗೂ ನೆನಪಿನ ಕಾಣಿಕೆ ನೀಡಲು ತೀರ್ಮಾನಿಸಲಾಗಿದೆ. ತಾಲ್ಲೂಕಿನ ಪ್ರತಿ ಹಳ್ಳಿಯಿಂದ ಕೆಂಪೇಗೌಡರ ಅಭಿಮಾನಿಗಳು ಹಾಗೂ ಸಮುದಾಯದ ಎಲ್ಲಾ ಜನತೆ ಕೆಂಪೇಗೌಡರ ಭಾವಚಿತ್ರ, ಪುತ್ತಳಿಕೆ ಹೊತ್ತ ಪಲ್ಲಕ್ಕಿಗಳೊಂದಿಗೆ ಕಲಾ ತಂಡಗಳು ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೆ.ವಿ. ಶಂಕರಪ್ಪ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹಾಗೂ ಹಿರಿಯ ವಕೀಲರಾದ ಬಿಸಪಪ್ಪ ಗೌಡರು, ಉಪಾಧ್ಯಕ್ಷರಾದ ಕೃಷ್ಣಾರೆಡ್ಡಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರಮೇಶ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಪವನ್ ನಾರಾಯಣಸ್ವಾಮಿ, ನಿರ್ದೇಶಕರಾದ ಲಕ್ಷಣಗೌಡ, ಲೋಕೇಶ್, ಮತ್ತು ವೆಂಕಟರಾಮೇಗೌಡ ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    48 min ago
  • ಇದು ಕೋಲಾರದಿಂದ ಕಾರ್ಯನಿರ್ವಹಿಸುವ 'ಕೋಲಾರ ಕಿ. ಆವಾಜ್ ಕೌಸರ್ ನ್ಯೂಸ್' ಎಂಬ ಮಾಧ್ಯಮ ಸಂಸ್ಥೆಯಾಗಿದೆ.
    1
    ಇದು ಕೋಲಾರದಿಂದ ಕಾರ್ಯನಿರ್ವಹಿಸುವ 'ಕೋಲಾರ ಕಿ. ಆವಾಜ್ ಕೌಸರ್ ನ್ಯೂಸ್' ಎಂಬ ಮಾಧ್ಯಮ ಸಂಸ್ಥೆಯಾಗಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    3 hrs ago
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಒಂದು ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಚೊಕ್ಕನಹಳ್ಳಿ ಎನರ್ಜಿ ಇನ್‌ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣವೇ ರಸ್ತೆ ಬದಿಗೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಲಾರಿಯು ಸಂಪೂರ್ಣವಾಗಿ ಹೊತ್ತಿ ಉರಿಯಿತು. ಲಾರಿಯಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಟೋಲ್ ಸಿಬ್ಬಂದಿಗೆ ಮಾಹಿತಿ ರವಾನಿಸಲಾಗಿತ್ತು. ಆದರೆ, ಲಾರಿ ಹೊತ್ತಿ ಉರಿಯುತ್ತಿದ್ದರೂ ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಸಹಾಯ ಮಾಡದ ಸಿಬ್ಬಂದಿ ವಿರುದ್ಧ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    2
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಒಂದು ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಚೊಕ್ಕನಹಳ್ಳಿ ಎನರ್ಜಿ ಇನ್‌ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣವೇ ರಸ್ತೆ ಬದಿಗೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಲಾರಿಯು ಸಂಪೂರ್ಣವಾಗಿ ಹೊತ್ತಿ ಉರಿಯಿತು.

ಲಾರಿಯಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಟೋಲ್ ಸಿಬ್ಬಂದಿಗೆ ಮಾಹಿತಿ ರವಾನಿಸಲಾಗಿತ್ತು. ಆದರೆ, ಲಾರಿ ಹೊತ್ತಿ ಉರಿಯುತ್ತಿದ್ದರೂ ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಸಹಾಯ ಮಾಡದ ಸಿಬ್ಬಂದಿ ವಿರುದ್ಧ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.