logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಬರೋಬ್ಬರಿ 21,000 ಕ್ಯುಸೆಕ್ ನೀರು ಹರಿದು ಬಂದಿದೆ. ಕಳೆದ ಒಂದು ತಿಂಗಳಿಂದ ನೀರಿನ ಕೊರತೆಯಿಂದ ತೀವ್ರ ಆತಂಕದಲ್ಲಿದ್ದ ಜಲಾಶಯ ವ್ಯಾಪ್ತಿಯ ರೈತರಿಗೆ ಈ ಸುದ್ದಿ ದೊಡ್ಡ ಸಂತಸ ತಂದಿದೆ. ಜಲಾಶಯದ ನೀರಿನ ಮಟ್ಟ ಅತ್ಯಂತ ವೇಗವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಚರ್ಚಿಸಲು ಸರ್ಕಾರ ತಕ್ಷಣವೇ ನೀರಾವರಿ ಸಲಹಾ ಸಮಿತಿ (ICC) ಸಭೆ ಕರೆಯಬೇಕು ಎಂದು ರೈತ ಸಂಘಟನೆಗಳು ತೀವ್ರವಾಗಿ ಆಗ್ರಹಿಸಿವೆ. ಜಲಾಶಯದ ನೀರಿನ ಮಟ್ಟ 65 ರಿಂದ 70 ಟಿಎಂಸಿ ತಲುಪಿ, ತಮ್ಮ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯಲಿ ಎಂಬುದು ಸದ್ಯ ರೈತರ ನಿರೀಕ್ಷೆಯಾಗಿದೆ.

4 hrs ago
user_AsnNews24Kannada
AsnNews24Kannada
Local News Reporter Ballari, Karnataka•
4 hrs ago

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಬರೋಬ್ಬರಿ 21,000 ಕ್ಯುಸೆಕ್ ನೀರು ಹರಿದು ಬಂದಿದೆ. ಕಳೆದ ಒಂದು ತಿಂಗಳಿಂದ ನೀರಿನ ಕೊರತೆಯಿಂದ ತೀವ್ರ ಆತಂಕದಲ್ಲಿದ್ದ ಜಲಾಶಯ ವ್ಯಾಪ್ತಿಯ ರೈತರಿಗೆ ಈ ಸುದ್ದಿ ದೊಡ್ಡ ಸಂತಸ ತಂದಿದೆ. ಜಲಾಶಯದ ನೀರಿನ ಮಟ್ಟ ಅತ್ಯಂತ ವೇಗವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಚರ್ಚಿಸಲು ಸರ್ಕಾರ ತಕ್ಷಣವೇ ನೀರಾವರಿ ಸಲಹಾ ಸಮಿತಿ (ICC) ಸಭೆ ಕರೆಯಬೇಕು ಎಂದು ರೈತ ಸಂಘಟನೆಗಳು ತೀವ್ರವಾಗಿ ಆಗ್ರಹಿಸಿವೆ. ಜಲಾಶಯದ ನೀರಿನ ಮಟ್ಟ 65 ರಿಂದ 70 ಟಿಎಂಸಿ ತಲುಪಿ, ತಮ್ಮ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯಲಿ ಎಂಬುದು ಸದ್ಯ ರೈತರ ನಿರೀಕ್ಷೆಯಾಗಿದೆ.

More news from Karnataka and nearby areas
  • ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಬರೋಬ್ಬರಿ 21,000 ಕ್ಯುಸೆಕ್ ನೀರು ಹರಿದು ಬಂದಿದೆ. ಕಳೆದ ಒಂದು ತಿಂಗಳಿಂದ ನೀರಿನ ಕೊರತೆಯಿಂದ ತೀವ್ರ ಆತಂಕದಲ್ಲಿದ್ದ ಜಲಾಶಯ ವ್ಯಾಪ್ತಿಯ ರೈತರಿಗೆ ಈ ಸುದ್ದಿ ದೊಡ್ಡ ಸಂತಸ ತಂದಿದೆ. ಜಲಾಶಯದ ನೀರಿನ ಮಟ್ಟ ಅತ್ಯಂತ ವೇಗವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಚರ್ಚಿಸಲು ಸರ್ಕಾರ ತಕ್ಷಣವೇ ನೀರಾವರಿ ಸಲಹಾ ಸಮಿತಿ (ICC) ಸಭೆ ಕರೆಯಬೇಕು ಎಂದು ರೈತ ಸಂಘಟನೆಗಳು ತೀವ್ರವಾಗಿ ಆಗ್ರಹಿಸಿವೆ. ಜಲಾಶಯದ ನೀರಿನ ಮಟ್ಟ 65 ರಿಂದ 70 ಟಿಎಂಸಿ ತಲುಪಿ, ತಮ್ಮ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯಲಿ ಎಂಬುದು ಸದ್ಯ ರೈತರ ನಿರೀಕ್ಷೆಯಾಗಿದೆ.
    1
    ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಬರೋಬ್ಬರಿ 21,000 ಕ್ಯುಸೆಕ್ ನೀರು ಹರಿದು ಬಂದಿದೆ. ಕಳೆದ ಒಂದು ತಿಂಗಳಿಂದ ನೀರಿನ ಕೊರತೆಯಿಂದ ತೀವ್ರ ಆತಂಕದಲ್ಲಿದ್ದ ಜಲಾಶಯ ವ್ಯಾಪ್ತಿಯ ರೈತರಿಗೆ ಈ ಸುದ್ದಿ ದೊಡ್ಡ ಸಂತಸ ತಂದಿದೆ.

ಜಲಾಶಯದ ನೀರಿನ ಮಟ್ಟ ಅತ್ಯಂತ ವೇಗವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಚರ್ಚಿಸಲು ಸರ್ಕಾರ ತಕ್ಷಣವೇ ನೀರಾವರಿ ಸಲಹಾ ಸಮಿತಿ (ICC) ಸಭೆ ಕರೆಯಬೇಕು ಎಂದು ರೈತ ಸಂಘಟನೆಗಳು ತೀವ್ರವಾಗಿ ಆಗ್ರಹಿಸಿವೆ. ಜಲಾಶಯದ ನೀರಿನ ಮಟ್ಟ 65 ರಿಂದ 70 ಟಿಎಂಸಿ ತಲುಪಿ, ತಮ್ಮ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯಲಿ ಎಂಬುದು ಸದ್ಯ ರೈತರ ನಿರೀಕ್ಷೆಯಾಗಿದೆ.
    user_AsnNews24Kannada
    AsnNews24Kannada
    Local News Reporter Ballari, Karnataka•
    4 hrs ago
  • ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
    1
    ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ.

ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ.

ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    20 hrs ago
  • ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    2
    ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    user_ಚನ್ನಯ್ಯ ಹಿರೇಮಠ ಕುಕನೂರು
    ಚನ್ನಯ್ಯ ಹಿರೇಮಠ ಕುಕನೂರು
    Koppal, Karnataka•
    14 hrs ago
  • ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    2
    ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ.

ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    22 hrs ago
  • ಬಳ್ಳಾರಿ ನಗರದ ಪೋಲಾ ಹೋಟೆಲ್‌ನಲ್ಲಿ ಮಾನವ ಅಧಿಕಾರ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಕ್ರಿಯವಾಗಿ ಭಾಗವಹಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಹೊಸ ಸದಸ್ಯರನ್ನು ಪಕ್ಷಕ್ಕೆ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಭರ್ಜರಿ ಸೇರ್ಪಡೆ ಪ್ರಕ್ರಿಯೆ ನೆರವೇರಿತು. ಇದೇ ವೇಳೆ ಪಕ್ಷದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಖಾಜಾ ಹುಸೇನ್ ಡಿ.ಆರ್., ರಾಜ್ಯ ಸಂಸ್ಥೆಯ ಕಾರ್ಯದರ್ಶಿಯಾಗಿ ಶಾಷಾವಲಿ, ರಾಜ್ಯ ಖಜಾಂಚಿಯಾಗಿ ಶೇಕ್ಷಾವಲಿ ಹಾಗೂ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಸೈಯದ್ ಚಾಂದ್ ಬಾಷಾ ಅವರನ್ನು ನೇಮಕಗೊಳಿಸಿ ಅಧಿಕೃತ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರು, ಸಮರ್ಥ ಪದಾಧಿಕಾರಿಗಳ ನೇಮಕದ ಮೂಲಕ ಪಕ್ಷದ ಸಂಘಟನೆಗೆ ಹೊಸ ಚೈತನ್ಯವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಜನರ ಸಮಸ್ಯೆಗಳ ಪರಿಹಾರ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ಪಕ್ಷವು ಸದಾ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
    1
    ಬಳ್ಳಾರಿ ನಗರದ ಪೋಲಾ ಹೋಟೆಲ್‌ನಲ್ಲಿ ಮಾನವ ಅಧಿಕಾರ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಕ್ರಿಯವಾಗಿ ಭಾಗವಹಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಹೊಸ ಸದಸ್ಯರನ್ನು ಪಕ್ಷಕ್ಕೆ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಭರ್ಜರಿ ಸೇರ್ಪಡೆ ಪ್ರಕ್ರಿಯೆ ನೆರವೇರಿತು.

ಇದೇ ವೇಳೆ ಪಕ್ಷದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಖಾಜಾ ಹುಸೇನ್ ಡಿ.ಆರ್., ರಾಜ್ಯ ಸಂಸ್ಥೆಯ ಕಾರ್ಯದರ್ಶಿಯಾಗಿ ಶಾಷಾವಲಿ, ರಾಜ್ಯ ಖಜಾಂಚಿಯಾಗಿ ಶೇಕ್ಷಾವಲಿ ಹಾಗೂ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಸೈಯದ್ ಚಾಂದ್ ಬಾಷಾ ಅವರನ್ನು ನೇಮಕಗೊಳಿಸಿ ಅಧಿಕೃತ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರು, ಸಮರ್ಥ ಪದಾಧಿಕಾರಿಗಳ ನೇಮಕದ ಮೂಲಕ ಪಕ್ಷದ ಸಂಘಟನೆಗೆ ಹೊಸ ಚೈತನ್ಯವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಜನರ ಸಮಸ್ಯೆಗಳ ಪರಿಹಾರ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ಪಕ್ಷವು ಸದಾ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
    user_AsnNews24Kannada
    AsnNews24Kannada
    Local News Reporter Ballari, Karnataka•
    10 hrs ago
  • ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್‌ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.
    1
    ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್‌ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.