logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ಸಿ.ಪಿ.ಐ.ಎಂ.ನ ಆಶಯ: ಆನೇಕಲ್ ಮಂಜುನಾಥ್* ಕೋಲಾರ: ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳಿಗೆ ನೈಜ ಕಾರಣಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ರೂಪಿಸುವುದು ಸಿಪಿಐಎಂ ಪಕ್ಷದ ಆಶಯವಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ಆನೇಕಲ್ ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬುಧವಾರ ನಡೆದ ಸಿಪಿಐಎಂ ಪಕ್ಷದ ಎರಡು ದಿನಗಳ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ದೇಶದ ದೊಡ್ಡ ಸಂಖ್ಯೆಯ ಕುಟುಂಬಗಳಿಗೆ ಸ್ವಂತ ನಿವೇಶನ ಹಾಗೂ ವಸತಿ ಸೌಲಭ್ಯ ದೊರೆತಿಲ್ಲ. ಬಡವರಿಗೆ ನೀಡಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿ, ಹೆಚ್ಚಿನ ಬಿಲ್‌ಗಳ ನೆಪದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಮತ್ತೆ ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬದಲು ಇರುವ ಉದ್ಯೋಗಗಳನ್ನೂ ಕಡಿಮೆ ಮಾಡಿದೆ. ಇದರಿಂದ ಯುವಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸದಸ್ಯರಿಗೆ ಸೈದ್ಧಾಂತಿಕ ತರಬೇತಿ ನೀಡುವುದು ಶಿಬಿರದ ಉದ್ದೇಶವಾಗಿದೆ. ಜಿಲ್ಲೆಯ ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ, ಕಾರ್ಮಿಕರ ಸಮಸ್ಯೆ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಕೊರತೆ, ವಿಧವಾ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸ್ಥಳೀಯ ಸಮಸ್ಯೆಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ಶಿಬಿರ ಸಹಕಾರಿಯಾಗಬೇಕು ಎಂದರು. ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಾತಕೋಟ ಪಿ.ಆರ್. ನವೀನ್ ಕುಮಾರ್, ಪಿ. ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಗಂಗಮ್ಮ, ಎಸ್.ಡಿ. ಆನಂದನ್, ಮಾಲೂರು ಅಶೋಕ್, ನುಕ್ಕನಹಳ್ಳಿ ಶ್ರೀರಾಮ್ ಉಪಸ್ಥಿತರಿದ್ದರು.

10 hrs ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
Grain Trader ಕೋಲಾರ, ಕೋಲಾರ, ಕರ್ನಾಟಕ•
10 hrs ago
c7345c1f-3e4d-4504-aa47-8bcc854bcb1b

*ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ಸಿ.ಪಿ.ಐ.ಎಂ.ನ ಆಶಯ: ಆನೇಕಲ್ ಮಂಜುನಾಥ್* ಕೋಲಾರ: ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳಿಗೆ ನೈಜ ಕಾರಣಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ರೂಪಿಸುವುದು ಸಿಪಿಐಎಂ ಪಕ್ಷದ ಆಶಯವಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ಆನೇಕಲ್ ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬುಧವಾರ ನಡೆದ ಸಿಪಿಐಎಂ ಪಕ್ಷದ ಎರಡು ದಿನಗಳ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ದೇಶದ ದೊಡ್ಡ ಸಂಖ್ಯೆಯ ಕುಟುಂಬಗಳಿಗೆ ಸ್ವಂತ ನಿವೇಶನ ಹಾಗೂ ವಸತಿ ಸೌಲಭ್ಯ ದೊರೆತಿಲ್ಲ. ಬಡವರಿಗೆ ನೀಡಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿ, ಹೆಚ್ಚಿನ ಬಿಲ್‌ಗಳ ನೆಪದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಮತ್ತೆ ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬದಲು ಇರುವ ಉದ್ಯೋಗಗಳನ್ನೂ ಕಡಿಮೆ ಮಾಡಿದೆ. ಇದರಿಂದ ಯುವಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸದಸ್ಯರಿಗೆ ಸೈದ್ಧಾಂತಿಕ ತರಬೇತಿ ನೀಡುವುದು ಶಿಬಿರದ ಉದ್ದೇಶವಾಗಿದೆ. ಜಿಲ್ಲೆಯ ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ, ಕಾರ್ಮಿಕರ ಸಮಸ್ಯೆ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಕೊರತೆ, ವಿಧವಾ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸ್ಥಳೀಯ ಸಮಸ್ಯೆಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ಶಿಬಿರ ಸಹಕಾರಿಯಾಗಬೇಕು ಎಂದರು. ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಾತಕೋಟ ಪಿ.ಆರ್. ನವೀನ್ ಕುಮಾರ್, ಪಿ. ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಗಂಗಮ್ಮ, ಎಸ್.ಡಿ. ಆನಂದನ್, ಮಾಲೂರು ಅಶೋಕ್, ನುಕ್ಕನಹಳ್ಳಿ ಶ್ರೀರಾಮ್ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು
    1
    ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    11 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    1
    ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು!
ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    user_NAYAN NEWS
    NAYAN NEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.
    1
    ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.  
ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.  
ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ! Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!
    1
    Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!

Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ. 👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. #ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews
    1
    ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ.
👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.
#ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    8 hrs ago
  • ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ" ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ ​ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ​ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ: "ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್‌ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು. ​ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ: ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್‌ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು. ​ಆಶಾಕಿರಣವಾದ 'ರೈತ ಸಂತೆ': ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ​ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.
    1
    ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ"
ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ
​ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
​ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ:
"ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್‌ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು.
​ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ:
ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್‌ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು.
​ಆಶಾಕಿರಣವಾದ 'ರೈತ ಸಂತೆ':
ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
​ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.
    user_Aslam Basha
    Aslam Basha
    Local News Reporter Bengaluru East, Bengaluru Urban•
    9 hrs ago
  • ಬಿಜೆಪಿ-ಜೆಡಿಎಸ್ ಪಾದಯಾತ್ರೆ ರೂಟ್ ಫೈನಲ್! ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಜನಾರ್ದನ ರೆಡ್ಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಯ ಮಹತ್ವದ ಪಾದಯಾತ್ರೆಯ ರೂಟ್ ಮ್ಯಾಪ್ ಅಂತಿಮಗೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾಗುವ ಈ ಪಾದಯಾತ್ರೆ ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಹಾಗೂ ಸಂಡೂರು ಮಾರ್ಗವಾಗಿ ಬಳ್ಳಾರಿ ನಗರದಲ್ಲಿ ಅಂತ್ಯಗೊಳ್ಳಲಿದೆ. ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ASN News24 Kannadaಗೆ Subscribe ಮಾಡಿ ಮತ್ತು Bell Icon ಒತ್ತಿ. #BJPJDSPadayatra #BYVijayendra #JanardhanaReddy #Ballari #Gangavathi #Sindhanur #KarnatakaPolitics #PoliticalNews #BreakingNews #Raichur #Lingasugur #KarnatakaNews #ASNNews24Kannada #KannadaNews #bjpkarnataka
    1
    ಬಿಜೆಪಿ-ಜೆಡಿಎಸ್ ಪಾದಯಾತ್ರೆ ರೂಟ್ ಫೈನಲ್! ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಜನಾರ್ದನ ರೆಡ್ಡಿ 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಯ ಮಹತ್ವದ ಪಾದಯಾತ್ರೆಯ ರೂಟ್ ಮ್ಯಾಪ್ ಅಂತಿಮಗೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾಗುವ ಈ ಪಾದಯಾತ್ರೆ ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಹಾಗೂ ಸಂಡೂರು ಮಾರ್ಗವಾಗಿ ಬಳ್ಳಾರಿ ನಗರದಲ್ಲಿ ಅಂತ್ಯಗೊಳ್ಳಲಿದೆ. ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ASN News24 Kannadaಗೆ Subscribe ಮಾಡಿ ಮತ್ತು Bell Icon ಒತ್ತಿ.
#BJPJDSPadayatra #BYVijayendra #JanardhanaReddy #Ballari #Gangavathi #Sindhanur #KarnatakaPolitics #PoliticalNews #BreakingNews #Raichur #Lingasugur #KarnatakaNews #ASNNews24Kannada #KannadaNews #bjpkarnataka
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    9 hrs ago
  • ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.
    1
    ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ
ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ.
ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು  ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ.
ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ! ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ! ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ! ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
    1
    ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ!
ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ!
ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.