*ಚಳಗೇರಾ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ* ಕುಷ್ಟಗಿ:- ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚಳಗೇರಾದಲ್ಲಿ ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳಲ್ಲೊಂದಾದ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಸಂಗಣ್ಣ ಬಳಿಗಾರ ಅವರು, ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಸರ್ಕಾರ ಹಲವಾರು ಪ್ರೋತ್ಸಾಹದಾಯಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಶೂ ಮತ್ತು ಸಾಕ್ಸ್ ವಿತರಣೆ ಕೂಡ ಒಂದು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಈ ಯೋಜನೆ ತುಂಬಾ ಪ್ರಯೋಜನಕಾರಿಯಾಗಿದ್ದು, ಮಕ್ಕಳು ಶಾಲೆಯಲ್ಲಿ ಶಿಸ್ತಿನಿಂದ ವರ್ತಿಸಲು ಸಹಾಯಕಾರಿಯಾಗಿದೆ ಎಂದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶ್ರೀ ಮಂಜುನಾಥ ಕಲಕೇರಿ ಮಾತನಾಡಿ, ಸರ್ಕಾರ ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ವಿತರಿಸುವುದರಿಂದ ಶಾಲಾ ಮಕ್ಕಳಲ್ಲಿ ಏಕತೆ ಹಾಗೂ ಶಿಸ್ತು ಕಂಡು ಬರುತ್ತದೆ. ಅಲ್ಲದೆ ನಮ್ಮ ಶಾಲೆಯಲ್ಲಿ ಟೈ ಹಾಗೂ ಬೆಲ್ಟ್‌ಗಳನ್ನು ಕೊಟ್ಟಿರುವುದರಿಂದ ಮಕ್ಕಳು ಸಂತೋಷದಿಂದ ಕಲಿಕೆಯಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆ ತಂದಿದೆ ಎಂದರು. ಮುಖ್ಯ ಶಿಕ್ಷಕರಾದ ಶ್ರೀ ಹನುಮಂತಪ್ಪ ಮಾತನಾಡಿ, ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಈ ಸೌಲಭ್ಯ ಪೂರಕವಾಗಿದೆ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀ ಮಲ್ಲಪ್ಪ ಕುದರಿ ಮಾತನಾಡಿ, ಶೂ ಮತ್ತು ಸಾಕ್ಸ್ ಧರಿಸುವುದರಿಂದ ಮಕ್ಕಳ ಕಾಲುಗಳಿಗೆ ಧೂಳು, ಮುಳ್ಳು ಮತ್ತು ಸೋಂಕು ತಗಲುವುದನ್ನು ತಡೆಯಬಹುದು. ಫಂಗಸ್‌ನಂತಹ ಚರ್ಮದ ಕಾಯಿಲೆಗಳಿಂದ ಕಾಲುಗಳನ್ನು ರಕ್ಷಿಸಬಹುದು. ಈ ಯೋಜನೆಯಿಂದ ಶಾಲಾ ಮಕ್ಕಳ ಹಾಜರಾತಿ ಹೆಚ್ಚಳವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರಾದ ವೀರೇಶ್ ಬಸರಕೋಡ್, ಚಂದ್ರಶೇಖರಯ್ಯ ದಮ್ಮೂರಮಠ, ಶರಣಪ್ಪ ನೆಲಾಗಣಿ, ಅಭಿಷೇಕ್ ಜಗ್ಗಲ, ಕಾಮಮ್ಮ ನವಲಿ, ಆಶಾಲತಾ ಪಾಟೀಲ್, ಚಂದ್ರಕಲಾ ಬಳೆಗಾರ, ಮಂಜುಳಾ ಗಾಡಗೋಳಿ, ದುರ್ಗಮ್ಮ ಭಜಂತ್ರಿ, ಉಮಾ ಭಾಗ್ಯದ ಹಾಗೂ ಇತರರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. *ಫೋಟೋ ಕ್ಯಾಪ್ಷನ್:* ಚಳಗೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಯಿತು.
*ಚಳಗೇರಾ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ* ಕುಷ್ಟಗಿ:- ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚಳಗೇರಾದಲ್ಲಿ ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳಲ್ಲೊಂದಾದ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಸಂಗಣ್ಣ ಬಳಿಗಾರ ಅವರು, ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಸರ್ಕಾರ ಹಲವಾರು ಪ್ರೋತ್ಸಾಹದಾಯಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಶೂ ಮತ್ತು ಸಾಕ್ಸ್ ವಿತರಣೆ ಕೂಡ
ಒಂದು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಈ ಯೋಜನೆ ತುಂಬಾ ಪ್ರಯೋಜನಕಾರಿಯಾಗಿದ್ದು, ಮಕ್ಕಳು ಶಾಲೆಯಲ್ಲಿ ಶಿಸ್ತಿನಿಂದ ವರ್ತಿಸಲು ಸಹಾಯಕಾರಿಯಾಗಿದೆ ಎಂದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶ್ರೀ ಮಂಜುನಾಥ ಕಲಕೇರಿ ಮಾತನಾಡಿ, ಸರ್ಕಾರ ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ವಿತರಿಸುವುದರಿಂದ ಶಾಲಾ ಮಕ್ಕಳಲ್ಲಿ ಏಕತೆ ಹಾಗೂ ಶಿಸ್ತು ಕಂಡು ಬರುತ್ತದೆ. ಅಲ್ಲದೆ ನಮ್ಮ ಶಾಲೆಯಲ್ಲಿ ಟೈ ಹಾಗೂ ಬೆಲ್ಟ್‌ಗಳನ್ನು ಕೊಟ್ಟಿರುವುದರಿಂದ ಮಕ್ಕಳು ಸಂತೋಷದಿಂದ ಕಲಿಕೆಯಲ್ಲಿ ಪಾಲ್ಗೊಳ್ಳುತ್ತಿರುವುದು
ಹೆಮ್ಮೆ ತಂದಿದೆ ಎಂದರು. ಮುಖ್ಯ ಶಿಕ್ಷಕರಾದ ಶ್ರೀ ಹನುಮಂತಪ್ಪ ಮಾತನಾಡಿ, ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಈ ಸೌಲಭ್ಯ ಪೂರಕವಾಗಿದೆ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀ ಮಲ್ಲಪ್ಪ ಕುದರಿ ಮಾತನಾಡಿ, ಶೂ ಮತ್ತು ಸಾಕ್ಸ್ ಧರಿಸುವುದರಿಂದ ಮಕ್ಕಳ ಕಾಲುಗಳಿಗೆ ಧೂಳು, ಮುಳ್ಳು ಮತ್ತು ಸೋಂಕು ತಗಲುವುದನ್ನು ತಡೆಯಬಹುದು. ಫಂಗಸ್‌ನಂತಹ ಚರ್ಮದ ಕಾಯಿಲೆಗಳಿಂದ ಕಾಲುಗಳನ್ನು ರಕ್ಷಿಸಬಹುದು. ಈ ಯೋಜನೆಯಿಂದ ಶಾಲಾ ಮಕ್ಕಳ ಹಾಜರಾತಿ ಹೆಚ್ಚಳವಾಗಿದೆ ಎಂದು
ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರಾದ ವೀರೇಶ್ ಬಸರಕೋಡ್, ಚಂದ್ರಶೇಖರಯ್ಯ ದಮ್ಮೂರಮಠ, ಶರಣಪ್ಪ ನೆಲಾಗಣಿ, ಅಭಿಷೇಕ್ ಜಗ್ಗಲ, ಕಾಮಮ್ಮ ನವಲಿ, ಆಶಾಲತಾ ಪಾಟೀಲ್, ಚಂದ್ರಕಲಾ ಬಳೆಗಾರ, ಮಂಜುಳಾ ಗಾಡಗೋಳಿ, ದುರ್ಗಮ್ಮ ಭಜಂತ್ರಿ, ಉಮಾ ಭಾಗ್ಯದ ಹಾಗೂ ಇತರರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. *ಫೋಟೋ ಕ್ಯಾಪ್ಷನ್:* ಚಳಗೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಯಿತು.
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ4