ಆ. 2ರಂದು ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಲಿಖಿತ ಪರೀಕ್ಷೆ : ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಸೂಚನೆ* *ಆ. 2ರಂದು ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಲಿಖಿತ ಪರೀಕ್ಷೆ : ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಸೂಚನೆ* ಚಾಮರಾಜನಗರ, ಜುಲೈ 31 (ಕರ್ನಾಟಕ ವಾರ್ತೆ):- ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2 ರಂದು ಜಿಲ್ಲೆಯಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇರ ನೇಮಕಾತಿ ಸಂಬಂಧ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಮಾರ್ಗಾಧಿಕಾರಿಗಳು, ಪ್ರಶ್ನೆಪತ್ರಿಕೆ ಪಾಲಕರು, ಪರೀಕ್ಷಾ ವೀಕ್ಷಕರು, ವಿಶೇಷ ಜಾಗೃತ ದಳದ ಸದಸ್ಯರೊಂದಿಗೆ ನಡೆದ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 3395 ಮತ್ತು ಸ್ಥಳೀಯ ವೃಂದದ 596 ಸಿವಿಲ್ ಪೆÇಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2ರಂದು ಚಾಮರಾಜನಗರ ಪಟ್ಟಣದ 12 ಹಾಗೂ ಕೊಳ್ಳೇಗಾಲ ಪಟ್ಟಣದ 6 ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ನಿರ್ವಹಣೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದರು. ಪರೀಕ್ಷಾ ಕಾರ್ಯದಲ್ಲಿ ಪಾರದರ್ಶಕತೆ ಕಾಪಾಡಲು ಹಾಗೂ ಆಡಳಿತಾತ್ಮಕ ಭದ್ರತೆ ವ್ಯವಸ್ಥೆಗಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಉಸ್ತುವಾರಿ, ಪರೀಕ್ಷಾ ಮಾರ್ಗಸೂಚಿಗಳು ಹಾಗೂ ಇಲಾಖಾವಾರು ನೀಡಿರುವ ಜವಾಬ್ದಾರಿಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು. ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು. ಪರೀಕ್ಷಾ ಕೇಂದ್ರಗಳಿಗೆ ಪಠ್ಯಪುಸ್ತಕ ಸಾಮಗ್ರಿಗಳಾದ ಪೇಪರ್ ಚೀಟಿಗಳು, ಜಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಲ್ಸ್, ಪೆನ್ ಡ್ರೈವ್, ಮೈಕ್ರೋಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಕ್ಯಾಲುಕುಲೇಟರ್, ವೈಯಕ್ತಿಕ ಸಾಧನಗಳಾದ ವಾಲೆಟ್, ಗಾಗಲ್ಸ್, ಕ್ಯಾಪ್ ಕೈಚೀಲಗಳು, ಬೆಲ್ಟ್, ಮೊಬೈಲ್, ಕೈಗಡಿಯಾರ, ಬ್ಲೂಟೂತ್, ಕ್ಯಾಮೆರಾ, ಇಯರ್ ಫೋನ್, ಪೇಜರ್, ಸಂವಹನಾ ಸಾಧನಗಳು ಹಾಗೂ ನೀರಿನ ಬಾಟಲ್ ಯಾವುದೇ ಬಗೆಯ ಆಹಾರ ಸಾಮಗ್ರಿಗಳನ್ನು ನಿಷೇಧಿಸಲಾಗಿದೆ ಎಂದರು. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಅಭ್ಯರ್ಥಿಗಳು ತಲೆ, ಮುಖ, ಕಿವಿ ಮುಚ್ಚುವಂತಹ ಯಾವುದೇ ಉಡುಪುಗಳು, ಉದ್ದ ತೋಳಿನ ಶರ್ಟ್ ಧರಿಸಿರಬಾರದು. ಮಹಿಳೆಯರು ಮೂಗುತಿ ಹಾಗೂ ಮಂಗಳ ಸೂತ್ರವನ್ನು ಹೊರತುಪಡಿಸಿ ಇನ್ನಿತರೆ ಯಾವುದೇ ಅಭರಣಗಳ ಧರಿಸುವಿಕೆ ನಿಷಿದ್ಧವಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹೈಹೀಲ್ಡ್ ಚಪ್ಪಲಿ ಹಾಗೂ ಶೂ ಧರಿಸದೇ ಕಡಿಮೆ ಹಿಮ್ಮಡಿ ಇರುವ ಚಪ್ಪಲಿ ಧರಿಸುವಂತಹ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಧಾರ್ಮಿಕ ಹಾಗೂ ಸಾಂಸ್ಕøತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಮಾತನಾಡಿ ಆಗಸ್ಟ್ 2ರಂದು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗಾಗಿ ಸಕಲ ಸಿದ್ದತೆಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಲಾಗಿದೆ. ಪರೀಕ್ಷಾ ಕಾರ್ಯವು ಸಿ.ಸಿ. ಟಿವಿ ಕಣ್ಗಾವಲಿನಲ್ಲಿ ನಡೆಯಲು ಕ್ರಮಗಳನ್ನು ವಹಿಸಲಾಗಿದೆ. ಪ್ರಶ್ನೆಪತ್ರಿಕೆಗಳ ವಿತರಣೆ, ಸಾಗಣೆ, ಗೌಪ್ಯ ಸಾಮಗ್ರಿಗಳ ತಪಾಸಣೆ, ಮೂಲಸೌಕರ್ಯ ಕುರಿತು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಮಂಜುಳ, ತಹಶೀಲ್ದಾರ್ ಗಿರಿಜಾ, ಶಿಕ್ಷಣ ಇಲಾಖೆ ಹಾಗೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

- ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ. ಚಳ್ಳಕೆರೆ :ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ. ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.1
- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.1
- " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.1
- ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". "ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". ಚಳ್ಳಕೆರೆ:-ನಗರದ ಹೊರವಲಯದ ಅಜ್ಜನಗುಡಿ ಸಮೀಪದ ನನ್ನಿವಾಳದ ಕಟ್ಟೆಮನೆಯ ಮುತ್ಯಾಗಾರ ದೇವರ ಎತ್ತುಗಳಿಗೆ ನಗರದ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಗೋಪೂಜೆ, ಬಾಳೆಹಣ್ಣು,ರಾಗಿಹುಲ್ಲು ವಿತರಿಸುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವರ ಎತ್ತುಗಳ ಸಂರಕ್ಷಕರಾದ ಪೂಜಾರಿ ಓಬಯ್ಯ, ಪಾಲಯ್ಯ, ಸಿದ್ದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ.ವಿದ್ಯಾ, ಖಜಾಂಚಿ ಕವಿತಾ ನಾಗೇಶ್,ದೇವರ ಎತ್ತುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷೆ ಶುಭಾ ಸೋಮಶೇಖರ್, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಸದಸ್ಯರಾದ ಮೀರಾ ರಮೇಶ್,ಸುಮಾ, ನಾಗಶ್ರೀ,ಹೀನಾ ಸೇರಿದಂತೆ ದೇವರ ಎತ್ತುಗಳ ಕಿಲಾರಿಗಳು ಮತ್ತು ಆರಾಧಕರು ಉಪಸ್ಥಿತರಿದ್ದರು.1