ಆಗಸ್ಟ್ 02 ರಂದು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ: ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮ:ಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲೆಯಲ್ಲಿ ಆಗಸ್ಟ್ 02 ರಂದು ಜರುಗುವ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆ, ಅಡಚಣೆ ಉಂಟಾಗದಂತೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ತಿಳಿಸಿದ್ದಾರೆ. ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 07 ಪರೀಕ್ಷಾ ಕೇಂದ್ರಗಳು ಸ್ಥಾಪಿಸಲಾಗಿದ್ದು, ಬೆಳಿಗ್ಗೆ 10:30 ರಿಂದ 12:00 ರವರೆಗೆ ಜರುಗುವ ಪರೀಕ್ಷೆಗೆ ಒಟ್ಟು 3463 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಿಸಿ ಟಿವಿ ಲೈವ್ ವೆಬ್ ಕ್ಯಾಸ್ಟಿಂಗ್ ವೀಕ್ಷಣಾ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝರಾಕ್ಸ್ ಮತ್ತು ಸೈಬರ್ ಕೇಂದ್ರಗಳ ಬಂದ್,200 ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಪ್ರವೇಶ ಪತ್ರದಲ್ಲಿ ತಿಳಿಸಿರುವ ಕಡ್ಡಾಯ ವಸ್ತ್ರಸಂಹಿತೆಯೊಂದಿಗೆ ಪರೀಕ್ಷಾ ಸಮಯಕ್ಕೂ ಮುನ್ನ ಹಾಜರಾಗಿ ಯಾವುದೇ ರೀತಿ ಗೊಂದಲ ಮಾಡಿಕೊಳ್ಳದೆ ಪ್ರಶ್ನೆಗಳು ಚೆನ್ನಾಗಿ ಓದಿ ಉತ್ತರಿಸುವಂತೆ ಜಿಲ್ಲಾಧಿಕಾರಿಗಳು ಪರೀಕ್ಷಾರ್ಥಿಗಳಿಗೆ ಸಲಹೆ ನೀಡಿದ್ದಾರೆ. *ಬಾಕ್ಸ್* *ಪರೀಕ್ಷಾ ಕೇಂದ್ರಗಳು ಹಾಗೂ ಅಭ್ಯರ್ಥಿಗಳ ಸಂಖ್ಯೆ:* * ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು(BB0009), ವಿವೇಕಾನಂದ ರಸ್ತೆ, ದೊಡ್ಡಬಳ್ಳಾಪುರ, ಕೇಂದ್ರ ಸಂಖ್ಯೆ: 101, ಅಭ್ಯರ್ಥಿಗಳ ಸಂಖ್ಯೆ: 751. * ಸರ್ಕಾರಿ ಪದವಿ ಪೂರ್ವ ಕಾಲೇಜು(BB0010), ಗಂಗಾಧರಪುರ, ಮಾದಗೊಂಡನಹಳ್ಳಿ ರಸ್ತೆ, ದೊಡ್ಡಬಳ್ಳಾಪುರ ಕೇಂದ್ರ ಸಂಕೇತ: 102, ಅಭ್ಯರ್ಥಿಗಳ ಸಂಖ್ಯೆ: 432. * ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲೆ ವಿಭಾಗ) (BB0047), ಹೊಸ ಬಸ್ ನಿಲ್ದಾಣ(ಕೆಎಸ್ಆರ್ಟಿಸಿ), ದೊಡ್ಡಬಳ್ಳಾಪುರ ಕೇಂದ್ರ ಸಂಕೇತ: 103, ಅಭ್ಯರ್ಥಿಗಳ ಸಂಖ್ಯೆ: 504. * ಶ್ರೀ ದೇವರಾಜ್ ಅರಸು ಪದವಿ ಪೂರ್ವ ಕಾಲೇಜು(BB0088), ಕೊಡಿಗೆಹಳ್ಳಿ, ದೊಡ್ಡಬಳ್ಳಾಪುರ, ಕೇಂದ್ರ ಸಂಕೇತ: 104, ಅಭ್ಯರ್ಥಿಗಳ ಸಂಖ್ಯೆ: 600. * ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜು(BB0162), ಗಂಗಾಧರಪುರ ದೊಡ್ಡಬಳ್ಳಾಪುರ, ಕೇಂದ್ರ ಸಂಕೇತ: 105, ಅಭ್ಯರ್ಥಿಗಳ ಸಂಖ್ಯೆ: 312. * ಶ್ರೀ ವಾಣಿ ಪದವಿ ಪೂರ್ವ ಕಾಲೇಜು (BB0209) ಪಾಲನಜೋಗಿಹಳ್ಳಿ, ದೊಡ್ಡಬಳ್ಳಾಪುರ, ಕೇಂದ್ರ ಸಂಕೇತ: 106, ಅಭ್ಯರ್ಥಿಗಳ ಸಂಖ್ಯೆ: 384. * ಸರ್ಕಾರಿ ಪ್ರಥಮ ದರ್ಜೆ ಕಾಲೇಜು, (BB3001), ಮಾದಗೊಂಡನಹಳ್ಳಿ, ಬಸವ ಭವನ ರಸ್ತೆ, ದೊಡ್ಡಬಳ್ಳಾಪುರ, ಕೇಂದ್ರ ಸಂಕೇತ: 107, ಅಭ್ಯರ್ಥಿಗಳ ಸಂಖ್ಯೆ: 480.

- ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ಆತ್ಮೀಯವಾಗಿ ಸ್ವಾಗತಿಸಿದ ಸಾಂಸ್ಕೃತಿಕ ನಗರಿಯ ಜನರು ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ನೀಡಿದ್ದು, ಸಾಂಸ್ಕೃತಿಕ ನಗರಿಯ ಜನರು ನೀಡಿದ ಆತ್ಮೀಯವಾಗಿ ಸ್ವಾಗತಿಸಿದರು.1
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- *ಅಭಿಮಾನಿಗಳಿಂದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ ಮತ್ತು ಕ್ರೀಡಾಕೂಟ* *ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ-ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ* ಭಾಗ್ಯನಗರ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು,ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದಢವಾಗಿರುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು. ಪಟ್ಟಣದ 12ನೇ ವಾರ್ಡಿನ ಹಿಂಭಾಗದ ಕೊರ್ಲಕುಂಟೆ ಕ್ರಿಕೆಟ್ ಮೈದಾನದಲ್ಲಿ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಜನ್ಮದಿನದ ಅಂಗವಾಗಿ ಭಾಗ್ಯನಗರ ಬಿ.ಝೆಡ್ ಗ್ರೂಪ್ಸ್ ಹಾಗೂ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳ ಬಳಗವತಿಯಿಂದ ಸತತ ನೇ ವರ್ಷದ ಕ್ರಿಕೆಟ್ ಟೂರ್ನೀ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ,ಮನುಷ್ಯನಿಗೆ ಕ್ರೀಡೆ ದೈಹಿಕ ಚಟುವಟಿಕೆ ಅಥವಾ ಮಾನಸಿಕ ಚಟುವಟಿಕೆ, ಸ್ಪರ್ಧೆ, ಮನರಂಜನೆ ಅಥವಾ ವ್ಯಾಯಾಮಕ್ಕಾಗಿ ನಡೆಸಲಾಗುತ್ತದೆ. ಕ್ರೀಡೆಯ ಮಹತ್ವವೆಂದರೆ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಮತ್ತು ಸಮಾಜದಲ್ಲಿ ಏಕತೆಯನ್ನು ತರುತ್ತದೆ,ಮುಖ್ಯವಾಗಿ ಯುವಕರು ದುಶ್ಚಟಗಳನ್ನು ತ್ಯಜಿಸಿ ಸದೃಢ ದೇಹ ಹೊಂದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಾಗೇಪಲ್ಲಿ ಬಿ ಜೆಡ್ ಗ್ರೂಪ್ ಮತ್ತು ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳಿಂದ ಅನ್ನದಾನ ಮತ್ತು ಕ್ರೀಡಾಕೂಟ ಹಾಗೂ ಸೇವಾ ಕಾರ್ಯಗಳು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪುರಸಭೆ ನಾಮ ನಿರ್ದೇಶನ ಸದಸ್ಯ ಹಾಗೂ ಬಿ ಜೆಡ್ ಗ್ರೂಪ್ ಅಧ್ಯಕ್ಷ ಅನ್ಸರ್ ಮಾತನಾಡಿ,ನಮ್ಮ ಅಲ್ಪಸಂಖ್ಯಾತರ ನಾಯಕರು ಹಾಗೂ ನಮ್ಮ ರಾಜ್ಯದ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಪ್ರೀತಿಯಿಂದ ವಿಶೇಷ ಅನ್ನದಾನ ಹಾಗೂ ಸಿಹಿ ವಿತರಿಸುವ ಮೂಲಕ ಬಾಗೇಪಲ್ಲಿ ಝೆಡ್ ಗ್ರೂಪ್ ವತಿಯಿಂದ ಸೇವಾ ಕಾರ್ಯಗಳು ಮಾಡಲಾಗುತ್ತಿದೆ, ಅವರಿಗೆ ಸದಾ ದೇವರ ಅನುಗ್ರಹ ಮತ್ತು ದೇವರ ಆಶೀರ್ವಾದ ಇರಬೇಕು ಎಂದು ಶುಭಹಾರೈಸುತ್ತೇನೆ ಎಂದರು. ಪಟ್ಟಣದ ವಿವಿಧ ವಾರ್ಡ್ ಗಳಿಂದ ಆಗಮಿಸಿದ್ದ ಸುಮಾರು 5 ಕ್ಕೂ ಹೆಚ್ಚು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ 10,000 ಸಾವಿರ ರೂ.ನಗದು, ಟ್ರೋಫಿ, ದ್ವಿತೀಯ ಬಹುಮಾನ 5,000 ರೂಪಾಯಿ ನಗದು ಮತ್ತು ಟ್ರೋಫಿ ಹಾಗೂ ಪಾದ್ಯವಳಿಯಲ್ಲಿ ಭಾಗವಹಿಸಿದ ಆಟಗಾರರಿಗೆ ಕುಡಿಯುವ ನೀರು,ಉಟೋಪಚಾರ,ನೆನಪಿನ ಕಾಣಿಕೆ ನೀಡಲಾಗುವುದು ಎಂದು ಬಿ ಝೆಡ್ ಗ್ರೂಪ್ ಕ್ರಿಕೆಟ್ ಟೂರ್ನೀಮೆಂಟ್ ಆಯೋಜಕರು ತಿಳಿಸಿದ್ದಾರೆ. ಈ ಸಂಧರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಜಯಪ್ರಕಾಶ್,ಅಲ್ಪಸಂಖ್ಯಾತರ ಅಧ್ಯಕ್ಷ ವಸೀo,ಜುಬೇದ ಟ್ರಾನ್ಸ್ಪೋರ್ಟ್ ಆಸೀಫ್, ಅಬ್ಜಲ್,ಫೈರೋಜ್,ಜಾವಿದ್ ಕಾಯುo,ಪೀರ್,ಪರ್ವಿಜ್, ಮೂರ್ತಿ ಆಝಾಮ್,ಮಕ್ಕ ಮಸೀದಿ ಅಧ್ಯಕ್ಷ ಮನೋಹರ್ ರಫೀಕ್ ಸೇರಿದಂತೆ ವಿವಿಧ ತಂಡಗಳ ಕ್ರೀಡಾಪಟುಗಳು ಇದ್ದರು.4
- Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.1
- ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.2
- ಹೇಮಾವತಿ ನೀರಿಗಾಗಿ ಹೋರಾಟ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಸಿ ಬಿ ಸುರೇಶ್ ಬಾಬು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನಾಲೆ ಶೀಘ್ರವೇ ಮುಗಿಸಬೇಕು ನೀರನ್ನು ಹರಿಸಬೇಕು ಎಂಬ ಹೋರಾಟ ಮೂರು ದಿನಗಳಿಂದ ನಡೆಯುತ್ತಿದ್ದು ಇಂದು ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸುರೇಶ್ ಬಾಬು ನೇರವಾಗಿ ತಾಲೂಕು ಕಚೇರಿಯ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಹೋರಾಟಗಾರರ ಜೊತೆ ನೇರವಾಗಿ ಮಾತನಾಡಿದ್ದಾರೆ ಮಂಗಳವಾರದ ಒಳಗೆ ಕಾಮಗಾರಿಯನ್ನ ಮುಗಿಸುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.1
- ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..1
- 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ಬೆಂಗಳೂರು ನಗರವನ್ನು ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.1