ಮಾನವೀಯ ಮೌಲ್ಯಗಳೊಂದಿಗೆ ಸಹಬಾಳ್ವೆಯ ಜೀವನ ನಡೆಸುವುದು ಇಂದಿನ ಅಗತ್ಯ: ಹಿರಿಯ ಸಾಹಿತಿ ಹ.ವಾಯ್. ಈಟಿ ಇಂದಿನಿಂದ ಸೆಪ್ಟೆಂಬರ್ 06ರವರೆಗೆ ರಾಜ್ಯಾದ್ಯಂತ ‘ಸೀರತ್ ಅಭಿಯಾನ’ ಕುಷ್ಟಗಿ: “ಸಮಾಜದಲ್ಲಿ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬದುಕಬೇಕು. ಮನುಷ್ಯ ಮನುಷ್ಯತ್ವದಿಂದ ಬದುಕುವುದರ ಜೊತೆಗೆ ಜಾತಿ, ಮತ, ಭೇದ-ಭಾವಗಳನ್ನು ಮರೆತು ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯಿಂದ ಜೀವನ ಸಾಗಿಸುವುದು ಇಂದಿನ ಕಾಲಘಟ್ಟದ ಅತ್ಯಂತ ತುರ್ತು ಅಗತ್ಯವಾಗಿದೆ” ಎಂದು ಹಿರಿಯ ಸಾಹಿತಿ ಹ.ವಾಯ್. ಈಟಿ ಅಭಿಪ್ರಾಯಪಟ್ಟರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಕುಷ್ಟಗಿ ಘಟಕದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ರಾಜ್ಯವ್ಯಾಪಿ ಅಭಿಯಾನದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ರಚಿತ ‘ಮಾನವ ಮನಸ್ಸಿನ ಕೃಷಿಕ - ಮನದೊಡೆಯ ಮುಹಮ್ಮದ್(ಸ)’ ಹಾಗೂ ‘ವಾರ್ತಾ ಭಾರತಿ’ ಪ್ರಧಾನ ಸಂಪಾದಕ ಎ.ಎಸ್. ಪುತ್ತಿಗೆ ರಚಿಸಿರುವ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಕೃತಿಗಳನ್ನು ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, “ಪ್ರವಾದಿ ಮುಹಮ್ಮದ್ ಅವರ ಸಮಗ್ರ ಜೀವನ ಚರಿತ್ರೆ, ಆದರ್ಶ ತತ್ವಗಳು ಹಾಗೂ ಮಾನವೀಯ ಸಂದೇಶಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕೈಗೊಂಡಿರುವ ಈ ಅಭಿಯಾನ ಅತ್ಯಂತ ಶ್ಲಾಘನೀಯ. ಜಾತಿ, ಮತ, ಭೇದಗಳ ಎಲ್ಲೆ ಮೀರಿ ಮಾನವೀಯತೆ ಹಾಗೂ ಪರಸ್ಪರ ಗೌರವವೇ ಬದುಕಿನ ಶ್ರೇಷ್ಠ ಮಾನದಂಡವಾಗಬೇಕು” ಎಂದರು. ಜಮಾಅತೆ ಇಸ್ಲಾಮೀ ಹಿಂದ್ ಸ್ಥಳೀಯ ಅಧ್ಯಕ್ಷರಾದ ಸೈಯದ್ ಮಹಬೂಬಸಾಬ್ ಮಾತನಾಡಿ, “ಪ್ರವಾದಿ ಮುಹಮ್ಮದ್(ಸ)ರವರ ಜನ್ಮದಿನದ ಪ್ರಯುಕ್ತ ಆಗಸ್ಟ್ 26 ರಿಂದ ಸೆಪ್ಟೆಂಬರ್ 06 ರವರೆಗೆ 10 ದಿನಗಳ ಕಾಲ ರಾಜ್ಯಾದ್ಯಂತ ‘ಸೀರತ್ ಅಭಿಯಾನ’ ನಡೆಯಲಿದೆ. ಪ್ರವಾದಿಯವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಸಮಾನತೆ ಮತ್ತು ಮಾನವ ಘನತೆಯ ಅಡಿಪಾಯದ ಮೇಲೆ ನಿಂತಿದೆ. ಜನರ ಮನಸ್ಸನ್ನು ಸಂಸ್ಕರಿಸಿ, ನೈತಿಕತೆ-ಚಾರಿತ್ರ್ಯ ಶುದ್ಧೀಕರಿಸುವ ಮೂಲಕ ಅವರು ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳನ್ನು ಬೆಳಗಿಸಿದರು. ಸುಭಿಕ್ಷ ಹಾಗೂ ನಿರ್ಭಯ ಸಮಾಜ ನಿರ್ಮಾಣ ಅವರ ಮೂಲ ಧ್ಯೇಯವಾಗಿತ್ತು. ಪ್ರವಾದಿಯವರ ಈ ಸಂದೇಶಗಳನ್ನು ಕನ್ನಡ ಜನತೆಗೆ ತಲುಪಿಸುವುದು, ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಸೌಹಾರ್ದ ಬಾಂಧವ್ಯವನ್ನು ಗಟ್ಟಿಗೊಳಿಸುವುದೇ ಈ ಅಭಿಯಾನದ ಮೂಲ ಉದ್ದೇಶ” ಎಂದು ವಿವರಿಸಿದರು. ವೈವಿಧ್ಯಮಯ ರಾಜ್ಯ ಹಾಗೂ ಸ್ಥಳೀಯ ಕಾರ್ಯಕ್ರಮಗಳು: ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ಮತ್ತು ಸ್ಥಳೀಯವಾಗಿ ಹಲವು ಸಾರ್ವಜನಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ: ರಾಜ್ಯಮಟ್ಟದ ಚಟುವಟಿಕೆಗಳು: ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ-ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ,ಸೀರತ್ ಎಕ್ಸಿಬಿಷನ್, ಸಮಾಜಸೇವಾ ಕಾರ್ಯಗಳು ಹಾಗೂ ಸೌಹಾರ್ದ ಸಂದೇಶ ರ‍್ಯಾಲಿಗಳು ನಡೆಯಲಿವೆ. ಸ್ಥಾನೀಯ ಕಾರ್ಯಕ್ರಮಗಳು: ಪುಸ್ತಕ ಬಿಡುಗಡೆ, ಪತ್ರಿಕಾಗೋಷ್ಠಿ, ಆಯ್ದ ಎರಡು ಗ್ರಾಮಗಳಲ್ಲಿ ಸೀರತ್ ವಚನ, ಕುಷ್ಟಗಿ ನಗರದಲ್ಲಿ ವಿಚಾರ ಸಂಕೀರ್ಣ, ಓದುಗರಿಗೆ ಪುಸ್ತಕ ತೆರೆದಂತೆ,ರೋಗಿಗಳ ಸಂದರ್ಶನ , ಮಹಿಳಾ ಕಾರ್ಯಕ್ರಮ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕೊಪ್ಪಳ ಜಿಲ್ಲಾ ಸಂಚಾಲಕರಾದ ದಿಲಾವರ್ ಅಂಬರ್‌ಖಾನ್, ಶಿಕ್ಷಕ ಜಿ.ಎಸ್. ಕಡೆಮನಿ, ಮುಖಂಡರಾದ ಆಫ್ತಾಬ್ ಪವನ, ಮುಖ್ತಾರ್ ಅಹ್ಮದ್, ಅನ್ವರ್ ಪವನ್, ಮಹಿಳಾ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಉಮ್ಮೆ ನಿಖಿತ್, ಸ್ಥಾನೀಯ ಸಂಚಾಲಕಿ ಹಲೀಮಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮಾನವೀಯ ಮೌಲ್ಯಗಳೊಂದಿಗೆ ಸಹಬಾಳ್ವೆಯ ಜೀವನ ನಡೆಸುವುದು ಇಂದಿನ ಅಗತ್ಯ: ಹಿರಿಯ ಸಾಹಿತಿ ಹ.ವಾಯ್. ಈಟಿ ಇಂದಿನಿಂದ ಸೆಪ್ಟೆಂಬರ್ 06ರವರೆಗೆ ರಾಜ್ಯಾದ್ಯಂತ ‘ಸೀರತ್ ಅಭಿಯಾನ’ ಕುಷ್ಟಗಿ: “ಸಮಾಜದಲ್ಲಿ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬದುಕಬೇಕು. ಮನುಷ್ಯ ಮನುಷ್ಯತ್ವದಿಂದ ಬದುಕುವುದರ ಜೊತೆಗೆ ಜಾತಿ, ಮತ, ಭೇದ-ಭಾವಗಳನ್ನು ಮರೆತು ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯಿಂದ ಜೀವನ ಸಾಗಿಸುವುದು ಇಂದಿನ ಕಾಲಘಟ್ಟದ ಅತ್ಯಂತ ತುರ್ತು ಅಗತ್ಯವಾಗಿದೆ” ಎಂದು ಹಿರಿಯ ಸಾಹಿತಿ ಹ.ವಾಯ್. ಈಟಿ ಅಭಿಪ್ರಾಯಪಟ್ಟರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಕುಷ್ಟಗಿ ಘಟಕದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ರಾಜ್ಯವ್ಯಾಪಿ ಅಭಿಯಾನದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ರಚಿತ ‘ಮಾನವ ಮನಸ್ಸಿನ ಕೃಷಿಕ - ಮನದೊಡೆಯ ಮುಹಮ್ಮದ್(ಸ)’ ಹಾಗೂ ‘ವಾರ್ತಾ ಭಾರತಿ’ ಪ್ರಧಾನ ಸಂಪಾದಕ ಎ.ಎಸ್. ಪುತ್ತಿಗೆ ರಚಿಸಿರುವ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಕೃತಿಗಳನ್ನು ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, “ಪ್ರವಾದಿ ಮುಹಮ್ಮದ್
ಅವರ ಸಮಗ್ರ ಜೀವನ ಚರಿತ್ರೆ, ಆದರ್ಶ ತತ್ವಗಳು ಹಾಗೂ ಮಾನವೀಯ ಸಂದೇಶಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕೈಗೊಂಡಿರುವ ಈ ಅಭಿಯಾನ ಅತ್ಯಂತ ಶ್ಲಾಘನೀಯ. ಜಾತಿ, ಮತ, ಭೇದಗಳ ಎಲ್ಲೆ ಮೀರಿ ಮಾನವೀಯತೆ ಹಾಗೂ ಪರಸ್ಪರ ಗೌರವವೇ ಬದುಕಿನ ಶ್ರೇಷ್ಠ ಮಾನದಂಡವಾಗಬೇಕು” ಎಂದರು. ಜಮಾಅತೆ ಇಸ್ಲಾಮೀ ಹಿಂದ್ ಸ್ಥಳೀಯ ಅಧ್ಯಕ್ಷರಾದ ಸೈಯದ್ ಮಹಬೂಬಸಾಬ್ ಮಾತನಾಡಿ, “ಪ್ರವಾದಿ ಮುಹಮ್ಮದ್(ಸ)ರವರ ಜನ್ಮದಿನದ ಪ್ರಯುಕ್ತ ಆಗಸ್ಟ್ 26 ರಿಂದ ಸೆಪ್ಟೆಂಬರ್ 06 ರವರೆಗೆ 10 ದಿನಗಳ ಕಾಲ ರಾಜ್ಯಾದ್ಯಂತ ‘ಸೀರತ್ ಅಭಿಯಾನ’ ನಡೆಯಲಿದೆ. ಪ್ರವಾದಿಯವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಸಮಾನತೆ ಮತ್ತು ಮಾನವ ಘನತೆಯ ಅಡಿಪಾಯದ ಮೇಲೆ ನಿಂತಿದೆ. ಜನರ ಮನಸ್ಸನ್ನು ಸಂಸ್ಕರಿಸಿ, ನೈತಿಕತೆ-ಚಾರಿತ್ರ್ಯ ಶುದ್ಧೀಕರಿಸುವ ಮೂಲಕ ಅವರು ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳನ್ನು ಬೆಳಗಿಸಿದರು. ಸುಭಿಕ್ಷ ಹಾಗೂ ನಿರ್ಭಯ ಸಮಾಜ ನಿರ್ಮಾಣ ಅವರ ಮೂಲ ಧ್ಯೇಯವಾಗಿತ್ತು. ಪ್ರವಾದಿಯವರ ಈ ಸಂದೇಶಗಳನ್ನು ಕನ್ನಡ
ಜನತೆಗೆ ತಲುಪಿಸುವುದು, ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಸೌಹಾರ್ದ ಬಾಂಧವ್ಯವನ್ನು ಗಟ್ಟಿಗೊಳಿಸುವುದೇ ಈ ಅಭಿಯಾನದ ಮೂಲ ಉದ್ದೇಶ” ಎಂದು ವಿವರಿಸಿದರು. ವೈವಿಧ್ಯಮಯ ರಾಜ್ಯ ಹಾಗೂ ಸ್ಥಳೀಯ ಕಾರ್ಯಕ್ರಮಗಳು: ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ಮತ್ತು ಸ್ಥಳೀಯವಾಗಿ ಹಲವು ಸಾರ್ವಜನಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ: ರಾಜ್ಯಮಟ್ಟದ ಚಟುವಟಿಕೆಗಳು: ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ-ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ,ಸೀರತ್ ಎಕ್ಸಿಬಿಷನ್, ಸಮಾಜಸೇವಾ ಕಾರ್ಯಗಳು ಹಾಗೂ ಸೌಹಾರ್ದ ಸಂದೇಶ ರ‍್ಯಾಲಿಗಳು ನಡೆಯಲಿವೆ. ಸ್ಥಾನೀಯ ಕಾರ್ಯಕ್ರಮಗಳು: ಪುಸ್ತಕ ಬಿಡುಗಡೆ, ಪತ್ರಿಕಾಗೋಷ್ಠಿ, ಆಯ್ದ ಎರಡು ಗ್ರಾಮಗಳಲ್ಲಿ ಸೀರತ್ ವಚನ, ಕುಷ್ಟಗಿ ನಗರದಲ್ಲಿ ವಿಚಾರ ಸಂಕೀರ್ಣ, ಓದುಗರಿಗೆ ಪುಸ್ತಕ ತೆರೆದಂತೆ,ರೋಗಿಗಳ ಸಂದರ್ಶನ , ಮಹಿಳಾ ಕಾರ್ಯಕ್ರಮ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕೊಪ್ಪಳ ಜಿಲ್ಲಾ ಸಂಚಾಲಕರಾದ ದಿಲಾವರ್ ಅಂಬರ್‌ಖಾನ್, ಶಿಕ್ಷಕ ಜಿ.ಎಸ್. ಕಡೆಮನಿ, ಮುಖಂಡರಾದ ಆಫ್ತಾಬ್ ಪವನ, ಮುಖ್ತಾರ್ ಅಹ್ಮದ್, ಅನ್ವರ್ ಪವನ್, ಮಹಿಳಾ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಉಮ್ಮೆ ನಿಖಿತ್, ಸ್ಥಾನೀಯ ಸಂಚಾಲಕಿ ಹಲೀಮಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
- ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.2
- ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆ ;ನಾಳೆ ಇಳಕಲ್ ದಿಂದ ಬಾದಾಮಿ ಬನಶಂಕರಿ ದೇವಸ್ಥಾನದ ವರೆಗೆ ಅಭಿಮಾನಿಗಳಿಂದ ಪಾದಯಾತ್ರೆ.. ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆ ;ನಾಳೆ ಇಳಕಲ್ ದಿಂದ ಬಾದಾಮಿ ಬನಶಂಕರಿ ದೇವಸ್ಥಾನದ ವರೆಗೆ ಅಭಿಮಾನಿಗಳಿಂದ ಪಾದಯಾತ್ರೆ.. ವಿಜಯಾನಂದ ಎಸ್ ಕಾಶಪ್ಪನವರ ಅಭಿಮಾನಿ ಬಳಗವು ವಿಜಯಾನಂದ ಕಾಶಪ್ಪನವರು ಸಚಿವ ಸ್ಥಾನ ಸಿಗಲೆಂದು ಬಾದಾಮಿಯ ಬನಶಂಕರಿ ದೇವಿಯಲ್ಲಿ ಪಾದಯಾತ್ರೆ ಬರುತ್ತೇವೆ ಎಂದು ಅಭಿಮಾನಿಗಳು ಹಾಗೂ ಯುನಿಯನ್ ಸಾಂಸ್ಕೃತಿಕ & ಕ್ರೀಡಾ ಸಂಸ್ಥೆಯ ಪದಾಧಿಕಾರಿಗಳು ಹರಕೆ ಹೊತ್ತಿದ್ದರು ಅದರಂತೆ ಸಚಿವ ಸ್ಥಾನ ದೊರೆತ ಹಿನ್ನೆಲೆ ಇಳಕಲ್ ದಿಂದ ಬಾದಾಮಿ ಬನಶಂಕರಿ ದೇವಿಯ ದೇವಸ್ಥಾನದವರೆಗೂ ಅಭಿಮಾನಿಗಳು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಸಚಿವರ ಅಭಿಮಾನಿಗಳು ತಿಳಿಸಿದರು.4
- ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.2
- ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.2
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------1
- ಈದ್ ಮಿಲಾದ ಹಬ್ಬ ; ನಾವೆಲ್ಲರೂ ಒಂದೇ ಎಂದು ಹೇಳಿದ ಸವಿತಾ ಅಶೋಕ ಚಲವಾದಿ ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿದರು. ದಾರಿಯಲ್ಲಿ ತಂಪು ಪಾನೀಯವನ್ನು ವಿತರಿಸಿ ಮಾತನಾಡಿದ ಸಮಾಜ ಸೇವಕಿ ಸವಿತಾ ಅಶೋಕ್ ಚಲವಾದಿ ಮಾತನಾಡಿ ಹಿಂದೂ ಮುಸ್ಲಿಂ ಎಂಬ ಬೇಧ ಮಾಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಇದ್ದೇವೆ. ಮುಂದು ಇರುತ್ತೇವೆ ಎಂಬ ಸಂದೇಶವನ್ನು ನೀಡಿದರು.1
- ಬ್ರೇಕಿಂಗ್ ನ್ಯೂಸ್ ಸೂರ್ಯಪೇಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಖಾಸಗಿ ಟ್ರಾವೆಲ್ಸ್ ಬಸ್ (ತಾಜಾ ಬಸ್) ಸ್ಟೇಷನರಿ ಲಾರಿಗೆ ಡಿಕ್ಕಿ.. ಆರು ಸಾವು, 20 ಜನರಿಗೆ ಗಾಯ ಹೈದರಾಬಾದ್ ನಿಂದ ಏಲೂರಿಗೆ ಪ್ರಯಾಣಿಸುತ್ತಿದ್ದಾಗ ಕೊಡಡ ಮಂಡಲದ ದ್ವಾರಕುಂಟ್ ಬಳಿ ಅಪಘಾತ ಸಂಭವಿಸಿದೆ ಅಪಘಾತದ ಸಮಯದಲ್ಲಿ 42 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಗುರುತಿಸಲಾಗಿದೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಪೊಲೀಸ್ ಪ್ರಕರಣ ದಾಖಲಿಸಿ, ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಮತ್ತು ಕ್ಲೀನರ್‌ಗಾಗಿ ಹುಡುಕಾಟ1