Shuru
Apke Nagar Ki App…
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಮದ್ದಾನೇಶ್ವರ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ. ತಾಲೂಕಿನ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆಯ 14 ವರ್ಷದೊಳಗಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕರ ವಿಭಾಗದ 600 ಮೀಟರ್ ಹಾಗೂ 400 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದ 400 ಹಾಗೂ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಬಾಲಕರ ಕಬಡ್ಡಿ ಹಾಗೂ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮುಖ್ಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
Tara Nagendra
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಮದ್ದಾನೇಶ್ವರ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ. ತಾಲೂಕಿನ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆಯ 14 ವರ್ಷದೊಳಗಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕರ ವಿಭಾಗದ 600 ಮೀಟರ್ ಹಾಗೂ 400 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದ 400 ಹಾಗೂ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಬಾಲಕರ ಕಬಡ್ಡಿ ಹಾಗೂ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮುಖ್ಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
More news from ಕರ್ನಾಟಕ and nearby areas
- ಗುಂಡ್ಲುಪೇಟೆಯಲ್ಲಿ ಸಂಭ್ರಮದ ಈದ್ ಮಿಲಾದ್: ಸೌಹಾರ್ದತೆಯ ಸಂದೇಶ. ಗುಂಡ್ಲುಪೇಟೆ: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪ್ರವಚನಗಳು ನಡೆದವು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಲಂಕಾರ ಮಾಡಲಾಗಿದ್ದು, ಮುಸ್ಲಿಂ ಸಮುದಾಯದವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಹಿನ್ನೆಲೆಯಲ್ಲಿ ವಿವಿಧೆಡೆ ಅನ್ನದಾನ ಹಾಗೂ ಸಿಹಿ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಂಡಿತ್ತು.1
- ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಪ್ರತಿಭಟನೆ ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಪ್ರತಿಭಟನೆ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ: ತಾಲೂಕಿನ ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್‌ಶೆಟ್ಟಿ ಬಣದ ತಾಲೂಕು ಘಟಕದ ನೇತೃತ್ವದಲ್ಲಿ ಗ್ರಾಮಸ್ಥರು ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ, ಅಬ್ಕಾರಿ ಇಲಾಖೆಯ ಉಪ ಆಯುಕ್ತ ಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಬೇಡ ಬೇಡ ಅನಧಿಕೃತ ಬಾರ್ ಅಂಗಡಿ ಬೇಡ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ ಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ, ಗ್ರಾಮದಲ್ಲಿ ಈಗಾಗಲೇ ಒಂದು ಮದ್ಯಂಗಡಿವಿದ್ದು, ಅಬ್ಕಾರಿ ಇಲಾಖೆ ಮತ್ತೊಂದು ಮದ್ಯಂಗಡಿ ತೆರೆಯಲು ಹೊರಟಿದ್ದಾರೆ. ಈಗಾಗಲೇ ಸುತ್ತ ಮುತ್ತಲಿನ ಗ್ರಾಮಸ್ಥರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ಈಗಾಗಲೇ ಇರುವ ಬಾರ್ ಅಂಗಡಿ ಸಾಕಾಗಿದೆ. ಮತ್ತೊಂದು ಮದ್ಯಂಗಡಿ ಏಕೆ ಬೇಕಿದೆ ? ಇದು ಒಂದು ದುರಂತವೇ ಸರಿ. ಅಧಿಕಾರಿಗಳು ಶಕ್ತಿ ಇದ್ದರೆ ಇನ್ನೊಂದು ಮದ್ಯಂಗಡಿ ತೆರೆಯಲಿ. ಜನರಿಗೆ ಆಸ್ಪತ್ರೆ, ಶಿಕ್ಷಣ ವ್ಯವಸ್ಥೆ, ಮೆಡಿಕಲ್ ವ್ಯವಸ್ಥೆ ಮಾಡಲಿ ಅದನ್ನು ಬಿಟ್ಟು ಒಂದೇ ಗ್ರಾಮದಲ್ಲಿ ಎರಡು ಬಾರ್‌ಗಳನ್ನು ತೆರೆಯಲು ಮುಂದಾಗಿರುವುದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಮತ್ತೊಂದು ಮತ್ತೊಂದು ಬಾರ್ ಅಂಗಡಿ ತೆರೆದರೆ ಜನರ ಗತಿಯೇನು ಆಗಬೇಕು. ನೂತನವಾಗಿ ಆರಂಭಿಸಲು ಹೊರಟಿರುವ ಬಾರ್ ಅಂಗಡಿ ದಾಖಲೆಗಳು ವ್ಯಾತ್ಯಾಸವಾಗಿರುತ್ತವೆ. ಅದನ್ನು ಪರಿಶೀಲಿಸಿ ನೂತನ ಬಾರ್ ಅಂಗಡಿಯನ್ನು ರದ್ದುಪಡಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ರಾಮಸಮುದ್ರ ಬಾಬು, ಉಮೇಶ, ಪ್ರಧಾನ ಕಾರ್ಯದರ್ಶಿ ಅರ್ಜುನ, ಕಾರ್ಮಿಕ ಅಧ್ಯಕ್ಷ ಹರೀಶ್ ನಾಯಕ, ಟೌನ್ ಅಧ್ಯಕ್ಷ ಅಫ್ನನ್, ಮಹೇಂದ್ರ, ರಿಜ್ವಾನ್, ಚಾಂದು, ಸಿದ್ದರಾಜು, ಅಬ್ದುಲ್‌ಮನಸಿಫ್, ಮೋಸಿನ್, ಸುಹೇಲ್ ಪಾಷ, ಕೇಶವಮೂರ್ತಿ, ಮೂಡಹೊಸಳ್ಳಿ ಗ್ರಾಮಸ್ಥರು, ಸ್ತ್ರೀಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.4
- ಕೊಳ್ಳೇಗಾಲ. ಪಾಳ್ಯ ಕೆರೆಗಳಿಗೆ ನೀರು ಹರಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟುದಾರರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು ಕುಳಿತು ಘೋಷಣೆಯ ಮೂಲಕ ಪ್ರತಿಭಟಿಸಿ, ನಂತರ ಕಚೇರಿಯ ಟೆಕ್ನಿಕಲ್ ಅಸಿಸ್ಟೆಂಟ್ ಪುಣ್ಯಶ್ರೀ ರವರಿಗೆ ಮನವಿಪತ್ರ ಸಲ್ಲಿಸಿದರು. ನಂತರ ಯುವ ರೈತ ಹರೀಶ್ ಮಾತನಾಡಿ, ನಮ್ಮ ಪಾಳ್ಯ ಗ್ರಾಮದ ಕೆರೆಗಳಿಗೆ ನೀರು ಬೀಡದೇ ಕಬಿನಿ ಜಲಾಶಯದ ನೀರು ಕಳೆದ 15 ದಿನಗಳಿಂದ ಚಾನಲ್ ಮೂಲಕ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇದ್ದರಿಂದ ಪಾಳ್ಯ ಗ್ರಾಮದ ಸಾವಿರಾರು ಎಕರೆ ಜಮೀನುಗಳು ಸರಿಯಾದ ಸಮಯಕ್ಕೆ ಮಳೆಯಾಗದೇ ಹಾಗೂ ಜಲಾಶಯದಿಂದ ನೀರು ಬೀಡದೇ ಒಣಗುತ್ತಿದೆ ಎಂದು ಆರೋಪಿಸಿದರು. ರೈತರು ಐದಾರು ಬಾರಿ ಬಂದು ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಅಧಿಕಾರಿಗಳು ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಪಾಳ್ಯ ಗ್ರಾಮದ ಚಿಕ್ಕ ಕೆರೆ ಹಾಗೂ ದೊಡ್ಡ ಕೆರೆಗೆ ನೀರು ತುಂಬಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಪಾಳ್ಯ ಗ್ರಾಮದ ಸಿದ್ದಪ್ಪನಾಯಕ, ಸೀಗನಾಯಕ, ದೊಡ್ಡರಾಜನಾಯಕ, ತಂಬಡಿ ಬಸವರಾಜಪ್ಪ, ನಂಜುಂಡಸ್ವಾಮಿ, ಪಕಾಲಿನಾಯಕ, ದೊಡ್ಡಸೀಗನಾಯಕ, ರಾಜಪ್ಪ, ಪಾರ್ಥ, ರೈತ ಮುಖಂಡರು ಇದ್ದರು.4
- All About,Who shud be held responsible/Accountable for all Kinds of Irregularities in #KSBA #Bengaluru *ಭಾರತ ನಲ್ಲಿ ವೈರಲ್*1
- ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.1
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- ಮದ್ದೂರು ಕಾಲೋನಿಯಲ್ಲಿ ಹುಲಿ ಸೆರೆ: ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು. ಗುಂಡ್ಲುಪೇಟೆ: ತಾಲೂಕಿನ ಮದ್ದೂರು ಕಾಲೋನಿ ಗ್ರಾಮದ ರೈತರ ಜಮೀನಿನಲ್ಲಿ ಮಂಗಳವಾರ ಹುಲಿಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯ ರೈತರ ಕಣ್ಣಿಗೆ ಹುಲಿ ಪ್ರತ್ಯಕ್ಷವಾಗುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಗ್ರಾಮಸ್ಥರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಅರಣ್ಯ ವಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ, ಡ್ರೋನ್ ಮೂಲಕ ಹುಲಿಯ ಚಲನವಲನವನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದರು. ಸುಮಾರು ರಾತ್ರಿ 10 ಗಂಟೆಯ ವೇಳೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಯಿತು. ಇದರಿಂದ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಯಿತು. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದರು. ಹುಲಿಯನ್ನು ಕೂಡಲೇ ಸೆರೆಹಿಡಿದು ಜನರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಡಾ. ವಸೀಮ್ ಮಿರ್ಜಾ ಹಾಗೂ ಡ್ರೋನ್ ಪೈಲಟ್‌ಗಳಾದ ಕೌಶಿಕ್ ಮತ್ತು ಕಾರ್ತಿಕ್ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.1
- ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ–ಕರಡಿಗುಡ್ಡ ಅರಣ್ಯ ಪ್ರದೇಶದಲ್ಲಿ ಆ.15ರಂದು ನಡೆದ ಶೂಟೌಟ್‌ನಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ನ್ಯಾಯಾಂಗ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಗುರುವಾರ ಹನೂರಿನಲ್ಲಿ ಪ್ರತಿಭಟನೆ ನಡೆಸಿದವು. ಕೆಂಪೇಗೌಡ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಧರಣಿ ನಡೆಸಿ, ಪ್ರಕರಣದ ನಿಷ್ಪಕ್ಷಪಾತ ತನಿಖೆ, ಆರೋಪಿತ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಹಾಗೂ ಮೃತರ ಕುಟುಂಬಗಳಿಗೆ ತಲಾ ₹2 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಸರ್ಕಾರ ಒಂದು ವಾರದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘ, ಡಿಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಮೃತರ ಕುಟುಂಬಸ್ಥರು ಭಾಗವಹಿಸಿದ್ದರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ–ಕರಡಿಗುಡ್ಡ ಅರಣ್ಯ ಪ್ರದೇಶದಲ್ಲಿ ಆ.15ರಂದು ನಡೆದ ಶೂಟೌಟ್‌ನಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ನ್ಯಾಯಾಂಗ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಗುರುವಾರ ಹನೂರಿನಲ್ಲಿ ಪ್ರತಿಭಟನೆ ನಡೆಸಿದವು. ಕೆಂಪೇಗೌಡ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಧರಣಿ ನಡೆಸಿ, ಪ್ರಕರಣದ ನಿಷ್ಪಕ್ಷಪಾತ ತನಿಖೆ, ಆರೋಪಿತ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಹಾಗೂ ಮೃತರ ಕುಟುಂಬಗಳಿಗೆ ತಲಾ ₹2 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಸರ್ಕಾರ ಒಂದು ವಾರದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘ, ಡಿಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಮೃತರ ಕುಟುಂಬಸ್ಥರು ಭಾಗವಹಿಸಿದ್ದರು4