ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ....... ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ. ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.
ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ....... ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರತಿಷ್ಠಿತ ವಿನಾಯಕ ಸೇವಾ
ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ
ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ. ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.
- ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಈಚಘಟ್ಟ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದ ಸರ್ವೆ ನಂಬರ್ 6ರಲ್ಲಿರುವ 52 ಎಕರೆ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಸರ್ಕಾರ ಅನುಮತಿ ನೀಡಿದೆ. 2022ರಲ್ಲಿ ಈ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದವರನ್ನು ಅರಣ್ಯ ಇಲಾಖೆಯಿಂದ ಸಸಿ ನೆಡಲಾಗುತ್ತದೆ ಎಂದು ಹೇಳಿ ಅಲ್ಲಿಂದ ಒಕ್ಕಲೆಬ್ಬಿಸಲಾಗಿತ್ತು. ಆದರೆ ಇದೀಗ ಸರ್ಕಾರ ಏಕಾಏಕಿ ಇದೇ ಜಾಗದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಅನುಮತಿ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಚಘಟ್ಟ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ದನಕರುಗಳನ್ನು ಮೇಯಿಸಲು ಈ ಜಾಗ ಬಿಟ್ಟರೆ ಬೇರೆ ಯಾವುದೇ ಜಾಗವಿಲ್ಲ. ಹೀಗಾಗಿ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.1
- ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.1
- ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು1
- ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.1
- ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *1
- ‘ಮಾನವೀಯ ನೆರವಿಗೆ ಕೃತಜ್ಞತೆಯಾಗಿ ನಾವೇ ಜಿಪಿಎ ಕೊಟ್ಟಿದ್ದೇವೆ’: ಅಕ್ರಮ ಖಾತೆ ಆರೋಪ ತಳ್ಳಿಹಾಕಿದ ಕುಟುಂಬಸ್ಥರು, ದಾಖಲೆ ಸಮೇತ ರಮೇಶ್ ಸ್ಪಷ್ಟನೆ. ತುರುವೇಕೆರೆ: ರೈತ ಸಂಘ ತನ್ನ ವಿರುದ್ಧ ಮಾಡಿರುವ ಅಕ್ರಮ ಖಾತೆ ವರ್ಗಾವಣೆ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಹಳೆಯ ರಾಜಕೀಯ ದ್ವೇಷದಿಂದ ಸುಳ್ಳು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ನಾಗೇಗೌಡನಪಾಳ್ಯದ ಮಾಜಿ ವಿಎಸ್‌ಎಸ್‌ಎನ್ ಅಧ್ಯಕ್ಷ ರಮೇಶ್ ಪಿ. ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಮೀನಿನ ಮೂಲ ದಾಖಲೆಗಳು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಫೋಟೋಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ಮಾನವೀಯ ನೆರವು ಮತ್ತು ಕಾನೂನುಬದ್ಧ ಒಪ್ಪಂದ: ಮುಹಮ್ಮದ್ ಗೌಸ್ ಎಂಬುವವರಿಗೆ ಸರ್ಕಾರದಿಂದ ಸುಮಾರು 3 ಎಕರೆ ದರಖಾಸ್ತು ಜಮೀನು ಮಂಜೂರಾಗಿತ್ತು. 1991–92ರಲ್ಲಿ ಅರ್ಜಿ ಸಲ್ಲಿಸಿ, 2008ರಲ್ಲಿ ಸಾಗುವಳಿ ಚೀಟಿ ಪಡೆದು, 2015ರಲ್ಲಿ ಖಾತೆ ಮಾಡಿಸಿಕೊಂಡು ಅವರೇ ಸಾಗುವಳಿ ಅನುಭವದಲ್ಲಿದ್ದರು. 80 ವರ್ಷ ದಾಟಿದ್ದ ಮುಹಮ್ಮದ್ ಗೌಸ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ಕುಟುಂಬದ ಕೋರಿಕೆಯಂತೆ ಮಾನವೀಯ ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ವೆಚ್ಚ ಹಾಗೂ ಆರ್ಥಿಕ ನೆರವು ನೀಡಲಾಗಿತ್ತು. ಆ ಸಮಯದಲ್ಲಿ ನಿಯಮಾನುಸಾರ ಒಪ್ಪಂದ (ಅಗ್ರಿಮೆಂಟ್) ಮಾಡಿಕೊಳ್ಳಲಾಗಿತ್ತು ಎಂದು ರಮೇಶ್ ವಿವರಿಸಿದರು. ಮುಹಮ್ಮದ್ ಗೌಸ್ ಅವರ ನಿಧನದ ಬಳಿಕ, ತಮಗೆ ಯಾವುದೇ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಅವರ ಪತ್ನಿ ಮುಮ್ತಾಜ್ ಹಾಗೂ ಐವರು ಮಕ್ಕಳು ಸ್ವಇಚ್ಛೆಯಿಂದ ಕಾನೂನುಬದ್ಧವಾಗಿ ತಮ್ಮ ಹೆಸರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೋಂದಣಿ ಮಾಡಿಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಣ್ಣೀರಿಟ್ಟ ಮುಹಮ್ಮದ್ ಗೌಸ್ ಕುಟುಂಬಸ್ಥರು: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಭಾವುಕರಾಗಿ ಕಣ್ಣೀರು ಹಾಕುತ್ತಾ ಮಾತನಾಡಿ, "ಸುಮಾರು 20 ವರ್ಷಗಳಿಂದ ನಾವೇ ಜಮೀನಿನ ಸ್ವಾಧೀನ ಅನುಭವದಲ್ಲಿದ್ದೇವೆ. ಸರ್ಕಾರದ ಸಾಗುವಳಿ ಚೀಟಿ, ಖಾತೆ ಸೇರಿದಂತೆ ಎಲ್ಲಾ ಸಕ್ರಮ ದಾಖಲೆಗಳು ನಮ್ಮ ಬಳಿಯೇ ಇವೆ. ನಮ್ಮ ಸಂಕಷ್ಟದ ಪರಿಸ್ಥಿತಿಯಲ್ಲಿ ರಮೇಶ್ ಅವರು ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಲು ಪ್ರಯತ್ನಿಸಿದರು. ಅವರಿಗೆ ಮೋಸವಾಗಬಾರದೆಂದು ಇಡೀ ಕುಟುಂಬ ಒಟ್ಟಾಗಿ ಜಿಪಿಎ ಮಾಡಿಕೊಟ್ಟಿದ್ದೇವೆ. ಇದರಲ್ಲಿ ಯಾರ ಒತ್ತಾಯವೂ ಇಲ್ಲ, ಯಾವುದೇ ಅಕ್ರಮವೂ ನಡೆದಿಲ್ಲ" ಎಂದು ತಿಳಿಸಿದರು. ಎಲ್ಲವೂ ಕಾನೂನುಬದ್ಧ, ತನಿಖೆಗೆ ಸಿದ್ಧ: ತಹಶೀಲ್ದಾರ್ ಅವರ ಆದೇಶದಂತೆ ತಾಲೂಕು ಸರ್ವೆ ಇಲಾಖೆಯಿಂದ ಜಾಗದ ಅಧಿಕೃತ ನಕ್ಷೆ (ಸ್ಕೆಚ್) ಮಾಡಿಸಲಾಗಿದೆ. ಜಮೀನು ನೀಡಿದ ಕುಟುಂಬಕ್ಕಾಗಲಿ ಅಥವಾ ಅಕ್ಕಪಕ್ಕದ ರೈತರಿಗಾಗಲಿ ಯಾವುದೇ ತಕರಾರಿಲ್ಲದಿರುವಾಗ, ಕೆಲವರು ರೈತ ಸಂಘದ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ತೇಜೋವಧೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ತಾನು ಸರ್ಕಾರಕ್ಕಾಗಲಿ, ಜನರಿಗಾಗಲಿ ನಯಾಪೈಸೆ ಮೋಸ ಮಾಡಿಲ್ಲ. ಈ ವಿಚಾರದಲ್ಲಿ ಎಂತಹ ತನಿಖೆ ಎದುರಿಸಲೂ ಸಿದ್ಧ ಎಂದು ರಮೇಶ್ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಬೀ ಹಾಗೂ ಪುತ್ರ ನೂರುಲ್ಲಾ ಉಪಸ್ಥಿತರಿದ್ದರು.4
- ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.1
- ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಹಮ್ಮಿಕೊಳ್ಳಲಾಗಿತ್ತು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ರಾಜ್ಯದಲ್ಲಿ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಶಿಕ್ಷಣ ತರುವುದು ಅತ್ಯಗತ್ಯ ಎಂದು ತಿಳಿಸಿದರು. ಮಕ್ಕಳು ಬಾಲ್ಯದಲ್ಲಿದ್ದಾಗಲೇ ಅವರಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಮಾದಕ ವಸ್ತುಗಳ ವಿಜ್ಞಾನ ಹಾಗೂ ದುಷ್ಪರಿಣಾಮಗಳ ಅರಿವು ಮೂಡಿಸಬೇಕು ಎಂದು ತಿಳಿಸಿದರು.1
- ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.1