ಹಾವೇರಿ ನಗರದ ಸಿದ್ಧಾರೂಢ ಕಾಲೋನಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ವಾಚನ ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಯಿತು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಸಿಇಒ ದಲ್ಜಿತ್ ಕುಮಾರ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ, ಹನುಮಂತಪ್ಪ ಮರಗಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡರಾದ ಉಡಚಪ್ಪ ಮಾಳಗಿ, ವಿರೂಪಾಕ್ಷಪ್ಪ ವೈ.ಕೆ. ಸುನೀಲ ಬೆಟಗೇರಿ, ಮಾಲತೇಶ ಯಲ್ಲಾಪುರ, ಭೀಮಣ್ಣ ಯಲ್ಲಾಪುರ, ರಮೇಶ ಆನವಟ್ಡಿ, ರಮೇಶ ಜಾಲಿಹಾಳ, ಮಂಜುನಾಥ ಪಾಟೀಲ, ದಯಾನಂದ ಸುತ್ತಕೋಟಿ, ನಾಗರಾಜ ವರದಾಹಳ್ಳಿ, ಮಂಜುಳಾ, ಎಂ.ಆಂಜನೇಯ, ಮಲ್ಲಿಕಾರ್ಜುನ ಬೂದಗಟ್ಟಿ, ನಿಂಗರಾಜ ಗಾಳೆಮ್ಮನವರ ಸೇರಿದಂತೆ ಶಾಲಾ- ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಾವೇರಿ ನಗರದ ಸಿದ್ಧಾರೂಢ ಕಾಲೋನಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ವಾಚನ ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಯಿತು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಸಿಇಒ ದಲ್ಜಿತ್ ಕುಮಾರ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ, ಹನುಮಂತಪ್ಪ ಮರಗಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡರಾದ ಉಡಚಪ್ಪ ಮಾಳಗಿ, ವಿರೂಪಾಕ್ಷಪ್ಪ ವೈ.ಕೆ. ಸುನೀಲ ಬೆಟಗೇರಿ, ಮಾಲತೇಶ ಯಲ್ಲಾಪುರ, ಭೀಮಣ್ಣ ಯಲ್ಲಾಪುರ, ರಮೇಶ ಆನವಟ್ಡಿ, ರಮೇಶ ಜಾಲಿಹಾಳ, ಮಂಜುನಾಥ ಪಾಟೀಲ, ದಯಾನಂದ ಸುತ್ತಕೋಟಿ, ನಾಗರಾಜ ವರದಾಹಳ್ಳಿ, ಮಂಜುಳಾ, ಎಂ.ಆಂಜನೇಯ, ಮಲ್ಲಿಕಾರ್ಜುನ ಬೂದಗಟ್ಟಿ, ನಿಂಗರಾಜ ಗಾಳೆಮ್ಮನವರ ಸೇರಿದಂತೆ ಶಾಲಾ- ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು1
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1
- ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.2