logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅತ್ತಾವರ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19 ರಿಂದ 23ರ ತನಕ ಬ್ರಹ್ಮ ಕಳಸ ಸಂಭ್ರಮ ಅತ್ತಾವರ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19 ರಿಂದ 23ರ ತನಕ ಬ್ರಹ್ಮ ಕಳಶ ನಡೆಯಲಿದೆ. ಎಂದು ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿ ಅಧ್ಯಕ್ಷರಾದ ಸೂರಜ್ ರಾಘವನ್ ತಿಳಿಸಿದರು. ಪುರಾಣ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಬ್ರಹ್ಮ ಕಳಸ ಸೌಭಾಗ್ಯ ಒದಗಿರುವುದು ನಮ್ಮೆಲ್ಲರ ಭಾಗ್ಯವೆಂದರು. ಮೊದಲು ಮೈದಾನದಲ್ಲಿ ಫೋಟೋ ಇಟ್ಟು ಪೂಜೆ ನಡೆಯುತ್ತಿತ್ತು. ಪ್ರಸ್ತುತ ಇರುವ ಗುಡಿಯ ದುರಸ್ತಿ ಕಾರ್ಯ ನಡೆದು ಎರಡುವರೆ ಕೋಟಿ ವೆಚ್ಚದಲ್ಲಿ ನೂತನ ಅಯ್ಯಪ್ಪ ಸ್ವಾಮಿ ದೇವಾಲಯ ನಿರ್ಮಾಣಗೊಳ್ಳಲಿದೆ ಎಂದರು .ಅಯ್ಯಪ್ಪ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಕ್ಷಿತಿ ಮಂಗ್ಳೂರು ಬೃಹ್ಮ ಕಲಶ ಹೊರೆ ಕಾಣಿಕೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು .ಅಯ್ಯಪ್ಪ ಭಕ್ತ ಸಮಿತಿ ಕಾರ್ಯಾಧ್ಯಕ್ಷರಾದ ಗೋಕುಲ್ ದಾಸ್ ರವರು ಸಾವಿರಾರು ಮಾಲಾಧಾರಿಗಳು ಈ ಕ್ಷೇತ್ರದಲ್ಲಿ ಮಾಲೆ ಹಾಕಿ ಶಬರಿಮಲೆ ಯಾತ್ರೆ ಮಾಡಿದ್ದು, ವಿಶೇಷವಾಗಿ ಈ ಕಾರ್ಯಕ್ರಮಕ್ಕೆಪಂದಳ ರಾಜಾ ವಂಶಸ್ಥರಾದ. ಶ್ರೀ ನಾರಾಯಣ ವರ್ಮಾ ತಾಂಬುರಾನ್ ಬರುವುದು ವಿಶೇಷವಾಗಿದೆ ಎಂದರು .ಅಯ್ಯಪ್ಪ ಭಕ್ತಿ ಸಮಿತಿ ಕಾರ್ಯಾಧ್ಯಕ್ಷರಾದ ಮುರಳೀಧರ್ ,ಅಯ್ಯಪ್ಪ ಸ್ವಾಮಿ ಬ್ರಹ್ಮ ಕಳಸ ಸಮಿತಿ ಅಧ್ಯಕ್ಷರಾದ ರಾಜರತ್ನ ಸನಿಲ್ ,ಸ್ವಾಗತ ಸಮಿತಿಯ ಗೌರವ ಕಾರ್ಯದರ್ಶಿ ಜನಾರ್ಧನ್ ಅತ್ತಾವರ ,ಸ್ವಾಗತ ಸಮಿತಿಯ ಉಪಾಧ್ಯಕ್ಷೆ ಡಾ. ಮಾಲತಿ ಶೆಟ್ಟಿ ಮಾಣೂರು ,ಅಯ್ಯಪ್ಪ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸೂರ್ಯಕಾಂತ ಎ. ಉಪಸ್ಥಿತರಿದ್ದರು. ಡಾ. ಮಾಲತಿ ಶೆಟ್ಟಿ ಮಾಣೂರು ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿ, ವಂದಿಸಿದರು.

18 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
18 hrs ago

ಅತ್ತಾವರ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19 ರಿಂದ 23ರ ತನಕ ಬ್ರಹ್ಮ ಕಳಸ ಸಂಭ್ರಮ ಅತ್ತಾವರ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19 ರಿಂದ 23ರ ತನಕ ಬ್ರಹ್ಮ ಕಳಶ ನಡೆಯಲಿದೆ. ಎಂದು ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿ ಅಧ್ಯಕ್ಷರಾದ ಸೂರಜ್ ರಾಘವನ್ ತಿಳಿಸಿದರು. ಪುರಾಣ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಬ್ರಹ್ಮ ಕಳಸ ಸೌಭಾಗ್ಯ ಒದಗಿರುವುದು ನಮ್ಮೆಲ್ಲರ ಭಾಗ್ಯವೆಂದರು. ಮೊದಲು ಮೈದಾನದಲ್ಲಿ ಫೋಟೋ ಇಟ್ಟು ಪೂಜೆ ನಡೆಯುತ್ತಿತ್ತು. ಪ್ರಸ್ತುತ ಇರುವ ಗುಡಿಯ ದುರಸ್ತಿ ಕಾರ್ಯ ನಡೆದು ಎರಡುವರೆ ಕೋಟಿ ವೆಚ್ಚದಲ್ಲಿ ನೂತನ ಅಯ್ಯಪ್ಪ ಸ್ವಾಮಿ ದೇವಾಲಯ ನಿರ್ಮಾಣಗೊಳ್ಳಲಿದೆ ಎಂದರು .ಅಯ್ಯಪ್ಪ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಕ್ಷಿತಿ ಮಂಗ್ಳೂರು ಬೃಹ್ಮ ಕಲಶ ಹೊರೆ ಕಾಣಿಕೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು .ಅಯ್ಯಪ್ಪ ಭಕ್ತ ಸಮಿತಿ ಕಾರ್ಯಾಧ್ಯಕ್ಷರಾದ ಗೋಕುಲ್ ದಾಸ್ ರವರು ಸಾವಿರಾರು ಮಾಲಾಧಾರಿಗಳು ಈ ಕ್ಷೇತ್ರದಲ್ಲಿ ಮಾಲೆ ಹಾಕಿ ಶಬರಿಮಲೆ ಯಾತ್ರೆ ಮಾಡಿದ್ದು, ವಿಶೇಷವಾಗಿ ಈ ಕಾರ್ಯಕ್ರಮಕ್ಕೆಪಂದಳ ರಾಜಾ ವಂಶಸ್ಥರಾದ. ಶ್ರೀ ನಾರಾಯಣ ವರ್ಮಾ ತಾಂಬುರಾನ್ ಬರುವುದು ವಿಶೇಷವಾಗಿದೆ ಎಂದರು .ಅಯ್ಯಪ್ಪ ಭಕ್ತಿ ಸಮಿತಿ ಕಾರ್ಯಾಧ್ಯಕ್ಷರಾದ ಮುರಳೀಧರ್ ,ಅಯ್ಯಪ್ಪ ಸ್ವಾಮಿ ಬ್ರಹ್ಮ ಕಳಸ ಸಮಿತಿ ಅಧ್ಯಕ್ಷರಾದ ರಾಜರತ್ನ ಸನಿಲ್ ,ಸ್ವಾಗತ ಸಮಿತಿಯ ಗೌರವ ಕಾರ್ಯದರ್ಶಿ ಜನಾರ್ಧನ್ ಅತ್ತಾವರ ,ಸ್ವಾಗತ ಸಮಿತಿಯ ಉಪಾಧ್ಯಕ್ಷೆ ಡಾ. ಮಾಲತಿ ಶೆಟ್ಟಿ ಮಾಣೂರು ,ಅಯ್ಯಪ್ಪ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸೂರ್ಯಕಾಂತ ಎ. ಉಪಸ್ಥಿತರಿದ್ದರು. ಡಾ. ಮಾಲತಿ ಶೆಟ್ಟಿ ಮಾಣೂರು ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿ, ವಂದಿಸಿದರು.

More news from ಕರ್ನಾಟಕ and nearby areas
  • ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ವಯ ಕಡಬ ಠಾಣಾ ಪೊಲೀಸರು ಶುಕ್ರವಾರ ಬೆಳಗಿನ ಜಾವ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದಾರೆ. ಈ ವೇಳೆ ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.
    1
    ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ವಯ ಕಡಬ ಠಾಣಾ ಪೊಲೀಸರು ಶುಕ್ರವಾರ ಬೆಳಗಿನ ಜಾವ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದಾರೆ. ಈ ವೇಳೆ ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
  • ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ  ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ.  ಮದುವೆ ವಿಚಾರದಲ್ಲಿ ಮಾನಸಿಕವಾಗಿ ‌ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ  ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ.  ಮದುವೆ ವಿಚಾರದಲ್ಲಿ ಮಾನಸಿಕವಾಗಿ ‌ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • SHINE ARENA F⚽⚽TBALL AND CRICKET 🏏 TRUF INNAGURATED IN RAJIV NAGAR MYSURU #kvnews
    1
    SHINE ARENA F⚽⚽TBALL AND CRICKET 🏏 TRUF INNAGURATED IN RAJIV NAGAR MYSURU #kvnews
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    14 hrs ago
  • STATEMENT GIVEN BY SYED ASIM GENERAL SECRETARY MYSORE CITY KPCC
    1
    STATEMENT GIVEN BY SYED ASIM GENERAL SECRETARY MYSORE CITY KPCC
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಹಿರಿಕಾಟಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯವಾದ ರಸ್ತೆ ನಿರ್ಮಾಣ ಇನ್ನೂ ಸಾಕಾರವಾಗದೇ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಇಂದಿಗೂ ಮಣ್ಣಿನ ರಸ್ತೆಯಾಗಿ ಉಳಿದಿದ್ದು, ವಾಹನ ಸಂಚಾರ ಹೆಚ್ಚಾದಾಗ ಭಾರೀ ಪ್ರಮಾಣದಲ್ಲಿ ಧೂಳು ಏಳುತ್ತದೆ. ಈ ಧೂಳು ನೇರವಾಗಿ ಮನೆಗಳೊಳಗೆ ಪ್ರವೇಶಿಸುತ್ತಿದ್ದು, ದಿನನಿತ್ಯದ ಜೀವನವೇ ಸಂಕಷ್ಟಕರವಾಗಿದೆ. ಮಕ್ಕಳಿಗೆ ಉಸಿರಾಟದ ತೊಂದರೆ, ವೃದ್ಧರಿಗೆ ಕೆಮ್ಮು, ಅಲರ್ಜಿ ಹಾಗೂ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಗಳು ಹೆಚ್ಚಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಗ್ರಾಮಸ್ಥರ ಅಳಲು. ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ದುಸ್ಥಿತಿಯಾಗುತ್ತದೆ. ಮಣ್ಣಿನ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟು ಜನರು ಸಂಚಾರ ಮಾಡಲು ಪರದಾಡಬೇಕಾಗುತ್ತದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ವಾಹನಗಳು ಗ್ರಾಮಕ್ಕೆ ಸುಲಭವಾಗಿ ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಚುನಾವಣೆ ಸಮಯದಲ್ಲಿ ಮಾತ್ರ ರಸ್ತೆ ನಿರ್ಮಾಣದ ಭರವಸೆ ನೀಡಲಾಗುತ್ತದೆ. ಆದರೆ ನಂತರ ಸಮಸ್ಯೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶತಮಾನ ಕಳೆದರೂ ಗ್ರಾಮಕ್ಕೆ ಪಕ್ಕಾ ರಸ್ತೆ ಸಿಗದಿರುವುದು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮೂಡಿಸಿದೆ. ತಕ್ಷಣವೇ ಹಿರಿಕಾಟಿ ಗ್ರಾಮಕ್ಕೆ ಶಾಶ್ವತ ಡಾಂಬರು ರಸ್ತೆ ನಿರ್ಮಿಸಿ ಧೂಳು ಸಮಸ್ಯೆಗೆ ಅಂತ್ಯ ಕಲ್ಪಿಸಬೇಕು. ಜೊತೆಗೆ ಗ್ರಾಮಸ್ಥರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನಾದರೂ ಸಂಬಂಧಿತ ಇಲಾಖೆ ಎಚ್ಚೆತ್ತು ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸುತ್ತಾರೆಯೇ ಎಂಬುದು ಇದೀಗ ಸಾರ್ವಜನಿಕರ ಪ್ರಶ್ನೆಯಾಗಿದೆ.
    3
    ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಹಿರಿಕಾಟಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯವಾದ ರಸ್ತೆ ನಿರ್ಮಾಣ ಇನ್ನೂ ಸಾಕಾರವಾಗದೇ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಇಂದಿಗೂ ಮಣ್ಣಿನ ರಸ್ತೆಯಾಗಿ ಉಳಿದಿದ್ದು, ವಾಹನ ಸಂಚಾರ ಹೆಚ್ಚಾದಾಗ ಭಾರೀ ಪ್ರಮಾಣದಲ್ಲಿ ಧೂಳು ಏಳುತ್ತದೆ. ಈ ಧೂಳು ನೇರವಾಗಿ ಮನೆಗಳೊಳಗೆ ಪ್ರವೇಶಿಸುತ್ತಿದ್ದು, ದಿನನಿತ್ಯದ ಜೀವನವೇ ಸಂಕಷ್ಟಕರವಾಗಿದೆ. ಮಕ್ಕಳಿಗೆ ಉಸಿರಾಟದ ತೊಂದರೆ, ವೃದ್ಧರಿಗೆ ಕೆಮ್ಮು, ಅಲರ್ಜಿ ಹಾಗೂ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಗಳು ಹೆಚ್ಚಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಗ್ರಾಮಸ್ಥರ ಅಳಲು.
ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ದುಸ್ಥಿತಿಯಾಗುತ್ತದೆ. ಮಣ್ಣಿನ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟು ಜನರು ಸಂಚಾರ ಮಾಡಲು ಪರದಾಡಬೇಕಾಗುತ್ತದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ವಾಹನಗಳು ಗ್ರಾಮಕ್ಕೆ ಸುಲಭವಾಗಿ ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ.
ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಚುನಾವಣೆ ಸಮಯದಲ್ಲಿ ಮಾತ್ರ ರಸ್ತೆ ನಿರ್ಮಾಣದ ಭರವಸೆ ನೀಡಲಾಗುತ್ತದೆ. ಆದರೆ ನಂತರ ಸಮಸ್ಯೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶತಮಾನ ಕಳೆದರೂ ಗ್ರಾಮಕ್ಕೆ ಪಕ್ಕಾ ರಸ್ತೆ ಸಿಗದಿರುವುದು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮೂಡಿಸಿದೆ.
ತಕ್ಷಣವೇ ಹಿರಿಕಾಟಿ ಗ್ರಾಮಕ್ಕೆ ಶಾಶ್ವತ ಡಾಂಬರು ರಸ್ತೆ ನಿರ್ಮಿಸಿ ಧೂಳು ಸಮಸ್ಯೆಗೆ ಅಂತ್ಯ ಕಲ್ಪಿಸಬೇಕು. ಜೊತೆಗೆ ಗ್ರಾಮಸ್ಥರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇನ್ನಾದರೂ ಸಂಬಂಧಿತ ಇಲಾಖೆ ಎಚ್ಚೆತ್ತು ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸುತ್ತಾರೆಯೇ ಎಂಬುದು ಇದೀಗ ಸಾರ್ವಜನಿಕರ ಪ್ರಶ್ನೆಯಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    15 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಕ್ರೈಸ್ತರು ಯೇಸುವಿನ ಸ್ಮರಣೆ ಮೂಲಕ ಶುಭ ಶುಕ್ರವಾರ (ಗುಡ್ ಫ್ರೈಡೇ) ಆಚರಿಸುತ್ತಿದ್ದಾರೆ. ಇಂದು ಮಂಗಳೂರು ನಗರದ ವಿವಿಧ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆಯೊಂದಿಗೆ ಆಚರಿಸಲಾಗುತ್ತಿದೆ. ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಹಾದಿ, ಶಿಲುಬೆಯ ಆರಾಧನೆ ಮತ್ತಿತರ ಕಾರ್ಯಕ್ರಮಗಳು ಬೆಳಗ್ಗೆಯಿಂದ ಆರಂಭಗೊಂಡಿವೆ. ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಆರಂಭಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗೆ ಸಂಬಂಧಿಸಿದ 'ಶಿಲುಬೆಯ ಹಾದಿ' (ವೇ ಆಫ್ ದಿ ಕ್ರಾಸ್) ಪ್ರಮುಖ ಕಾರ್ಯಕ್ರಮವಾಗಿದೆ.
    1
    ಕ್ರೈಸ್ತರು ಯೇಸುವಿನ ಸ್ಮರಣೆ ಮೂಲಕ ಶುಭ ಶುಕ್ರವಾರ (ಗುಡ್ ಫ್ರೈಡೇ) ಆಚರಿಸುತ್ತಿದ್ದಾರೆ. ಇಂದು ಮಂಗಳೂರು ನಗರದ ವಿವಿಧ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆಯೊಂದಿಗೆ ಆಚರಿಸಲಾಗುತ್ತಿದೆ. ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಹಾದಿ, ಶಿಲುಬೆಯ ಆರಾಧನೆ ಮತ್ತಿತರ ಕಾರ್ಯಕ್ರಮಗಳು ಬೆಳಗ್ಗೆಯಿಂದ ಆರಂಭಗೊಂಡಿವೆ.
ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಆರಂಭಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗೆ ಸಂಬಂಧಿಸಿದ 'ಶಿಲುಬೆಯ ಹಾದಿ' (ವೇ ಆಫ್ ದಿ ಕ್ರಾಸ್) ಪ್ರಮುಖ ಕಾರ್ಯಕ್ರಮವಾಗಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.