ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗವಟೂರು ಹೊಳೆ ಬಸ್ ನಿಲ್ದಾಣದಲ್ಲಿ ಹೆತ್ತ ಕರುಳನ್ನೇ ಕಸದಂತೆ ಎಸೆದು ಪರಾರಿಯಾಗಿದ್ದ ಪೋಷಕರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ವಾರದ ಹಿಂದೆ ಸುಮಾರು 10ರಿಂದ 15 ದಿನಗಳ ಪ್ರಾಯದ ನವಜಾತ ಹೆಣ್ಣು ಶಿಶುವನ್ನು ಅನಾಥವಾಗಿ ಬಿಟ್ಟು ಹೋಗಿದ್ದ ಪ್ರಕರಣವನ್ನು ರಿಪ್ಪನ್‌ಪೇಟೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ಈ ಅಮಾನವೀಯ ಘಟನೆಯನ್ನು ಸವಾಲಾಗಿ ಸ್ವೀಕರಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದ ಪೊಲೀಸ್ ತಂಡವು ತಕ್ಷಣವೇ ಕಾರ್ಯಾಚರಣೆ ಆರಂಭಿಸಿತ್ತು. ಕೃತ್ಯ ನಡೆದ ಸ್ಥಳದ ಮೊಬೈಲ್ ಟವರ್ ಡಂಪ್ ಡೇಟಾ, ತಾಂತ್ರಿಕ ಸಾಕ್ಷ್ಯಗಳು ಮತ್ತು ರಹಸ್ಯ ಮಾಹಿತಿ ಆಧಾರದ ಮೇಲೆ ಬಲೆ ಬೀಸಿ, ಸಾಗರ ಮೂಲದ 21 ವರ್ಷದ ಯುವತಿ ಹಾಗೂ 20 ವರ್ಷದ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಇವರಿಬ್ಬರು ತಾವೇ ಮಗುವನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಪರಾರಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಶಿಶುವಿನ ತಾಯಿಯನ್ನು ರಕ್ಷಣೆ ಮತ್ತು ಆರೈಕೆಗಾಗಿ ಸುರಭಿ ಕೇಂದ್ರಕ್ಕೆ ರವಾನಿಸಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ವಾರದ ಹಿಂದೆ ರಾತ್ರಿ ಸುಮಾರು 9 ಗಂಟೆಗೆ ಸ್ಥಳೀಯ ನಿವಾಸಿಯೊಬ್ಬರಿಗೆ ಮಗುವಿನ ಅಳುವಿನ ಶಬ್ದ ಕೇಳಿಸಿದ್ದು, ಕೈಚೀಲದಲ್ಲಿ ಬಟ್ಟೆಯಿಂದ ಸುತ್ತಿ ಹಾಲಿನ ಬಾಟಲಿಯೊಂದಿಗೆ ಮಗುವನ್ನು ಬಿಟ್ಟಿರುವುದು ಕಂಡುಬಂದಿತ್ತು. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿದ್ದರು. 1.6 ಕೆ.ಜಿ. ತೂಕವಿದ್ದ ಈ ಮಗುವಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಆರೈಕೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

- Available for Sale Item : ಅಕ್ಕಿ Quantity Available : 500 Price : 60 City / Locality : ಹೊಸನಗರ Farming Sector : Crops ಕೆಂಪಕ್ಕಿ ದೊರೆಯುತ್ತದೆ1
- ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.1
- ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.1
- ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.2
- ಬೆಂಗಳೂರಿನಲ್ಲಿ ವ್ಯಾಪಾರ ಮಾಡಲು ಕನ್ನಡಿಗರಿಗೆ ಮಾತ್ರ ಅವಕಾಶ ಇರಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.1
- ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.1
- ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.1
- ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರ ನಾಯ್ಕ್ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಂಬಾಣಿ ಸಮುದಾಯವನ್ನು ಸಂಘಟಿಸಿ, ಪಕ್ಷದತ್ತ ಆಕರ್ಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಹೊಳಲ್ಕೆರೆ ಪಟ್ಟಣದ ಜ್ಞಾಪನಂ ಫೌಂಡೇಶನ್‌ಗೆ ಭೇಟಿ ನೀಡಿದ ಅವರು, ಬಿಜೆಪಿ ಹಿರಿಯ ಮುಖಂಡ ಜಯಸಿಂಹ ಖಾಟ್ರೋತ್ ಅವರೊಂದಿಗೆ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಈ ವಿಷಯವನ್ನು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಶಾಸಕರು ತಿಳಿಸಿದರು. ಇದರ ಭಾಗವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಮತ್ತು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಲಂಬಾಣಿ ತಾಂಡಾಗಳನ್ನು ಗುರುತಿಸಿ, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಸಮುದಾಯದ ಸಂಕಷ್ಟಗಳನ್ನು ಆಲಿಸಿ, ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.1