logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಅರಸಾಳು ಸುತ್ತಮುತ್ತ ಕಾಡಾನೆಗಳ ದಾಂಧಲೆ: ಬೆಳೆ ನಾಶ, ರೈತರು ಕಂಗಾಲು ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅರಸಾಳು ಗ್ರಾ.ಪಂ. ವ್ಯಾಪ್ತಿಯ ತಮ್ಮಡಿ ಕೊಪ್ಪ ಹಾಗೂ ಬಟಾಣಿಜಡ್ಡು ಪ್ರದೇಶಗಳಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಮೂರ್ತಿ ಆಚಾರ್ ಮತ್ತು ಮಂಜಪ್ಪ ಎಂಬ ರೈತರ ತೋಟಗಳಿಗೆ ನುಗ್ಗಿದ ಆನೆಗಳು ಅಡಿಕೆ ಹಾಗೂ ಬಾಳೆ ಬೆಳೆಗಳನ್ನು ಧ್ವಂಸಗೊಳಿ ಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಕಾಡಾನೆಗಳ ಹಾವಳಿ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿರಿಗೆರೆ ವಲಯ ಅರಣ್ಯಾಧಿಕಾರಿ ಸವಿನಯ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳ ಚಲನ ವಲನದ ಬಗ್ಗೆ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಲುವಳ್ಳಿ, ಗಾಳಿಬೈಲು ಹಾಗೂ ಕೆಂಚನಾಲ ಭಾಗದ ಜನರು ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಅರಣ್ಯ ಅಂಚಿನಲ್ಲಿರುವ ಜಮೀನುಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ಕಾಡಾನೆಗಳು ಕಂಡು ಬಂದಲ್ಲಿ ಅವುಗಳನ್ನು ಹಿಂಬಾಲಿಸುವುದು ಅಥವಾ ಹತ್ತಿರ ಹೋಗುವ ಸಾಹಸ ಮಾಡದೆ, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಪದೇಪದೇ ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿರುವುದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಅರಣ್ಯ ಅಂಚಿನ ಗ್ರಾಮಗಳ ಜನರ ಸುರಕ್ಷತೆಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

1 hr ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 hr ago
ff81e474-5035-4947-b58c-ff647d3a77eb

ಶಿವಮೊಗ್ಗ-ಅರಸಾಳು ಸುತ್ತಮುತ್ತ ಕಾಡಾನೆಗಳ ದಾಂಧಲೆ: ಬೆಳೆ ನಾಶ, ರೈತರು ಕಂಗಾಲು ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅರಸಾಳು ಗ್ರಾ.ಪಂ. ವ್ಯಾಪ್ತಿಯ ತಮ್ಮಡಿ ಕೊಪ್ಪ ಹಾಗೂ ಬಟಾಣಿಜಡ್ಡು ಪ್ರದೇಶಗಳಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಮೂರ್ತಿ ಆಚಾರ್ ಮತ್ತು ಮಂಜಪ್ಪ ಎಂಬ ರೈತರ ತೋಟಗಳಿಗೆ ನುಗ್ಗಿದ ಆನೆಗಳು ಅಡಿಕೆ ಹಾಗೂ ಬಾಳೆ ಬೆಳೆಗಳನ್ನು ಧ್ವಂಸಗೊಳಿ ಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಕಾಡಾನೆಗಳ ಹಾವಳಿ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿರಿಗೆರೆ ವಲಯ ಅರಣ್ಯಾಧಿಕಾರಿ ಸವಿನಯ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳ ಚಲನ ವಲನದ ಬಗ್ಗೆ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಲುವಳ್ಳಿ, ಗಾಳಿಬೈಲು ಹಾಗೂ ಕೆಂಚನಾಲ ಭಾಗದ ಜನರು ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಅರಣ್ಯ ಅಂಚಿನಲ್ಲಿರುವ ಜಮೀನುಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ಕಾಡಾನೆಗಳು ಕಂಡು ಬಂದಲ್ಲಿ ಅವುಗಳನ್ನು ಹಿಂಬಾಲಿಸುವುದು ಅಥವಾ ಹತ್ತಿರ ಹೋಗುವ ಸಾಹಸ ಮಾಡದೆ, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಪದೇಪದೇ ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿರುವುದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಅರಣ್ಯ ಅಂಚಿನ ಗ್ರಾಮಗಳ ಜನರ ಸುರಕ್ಷತೆಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    8 hrs ago
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 hrs ago
  • ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು.  ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.  ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ

ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. 
ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. 
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    14 hrs ago
  • ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    1
    ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    1
    ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು
ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ.  ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    1
    ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    15 hrs ago
  • ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
    1
    ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    1
    ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್!
ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.