ಕೆಂಪಯ್ಯನಹಟ್ಟಿ ಗ್ರಾಮಸ್ಥರ ಹೋರಾಟಕ್ಕೆ ಫಲ: ಕೊರೆಸಿದ ಬೋರ್‌ವೆಲ್‌ನಲ್ಲಿ ಸಮೃದ್ಧ ನೀರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಹಲವು ದಿನಗಳಿಂದ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆ ಕೊನೆಗೂ ಬಗೆಹರಿದಿದೆ. ಗ್ರಾಮಸ್ಥರು ನಡೆಸಿದ ರಸ್ತೆ ತಡೆ ಪ್ರತಿಭಟನೆಯ ಫಲವಾಗಿ ತ್ವರಿತವಾಗಿ ಕೊರೆಸಿದ ನೂತನ ಕೊಳವೆಬಾವಿಯಲ್ಲಿ ಸಮೃದ್ಧ ನೀರು ಲಭ್ಯವಾಗಿದ್ದು, ಗ್ರಾಮದಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆಗೆ ಮಣಿದ ಆಡಳಿತ: ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ಮಹಿಳೆಯರು ಇತ್ತೀಚೆಗೆ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಹಾಗೂ ನೋಡಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಸಂಕಷ್ಟವನ್ನು ಮನಗಂಡು ತಕ್ಷಣವೇ ಹೊಸ ಬೋರ್‌ವೆಲ್ ಕೊರೆಸಲು ಸ್ಥಳದಲ್ಲೇ ಆದೇಶ ನೀಡಿದ್ದರು. ಅಧಿಕಾರಿಗಳ ಕ್ಷಿಪ್ರ ಕ್ರಮಕ್ಕೆ ಮೆಚ್ಚುಗೆ: ಅಧಿಕಾರಿಗಳ ಸೂಚನೆ ಮೇರೆಗೆ ಗ್ರಾಮದಲ್ಲಿ ತ್ವರಿತವಾಗಿ ಬೋರ್‌ವೆಲ್ ಕೊರೆಯುವ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು. ಅದೃಷ್ಟವಶಾತ್ ನೂತನ ಕೊಳವೆಬಾವಿಯಲ್ಲಿ ಉತ್ತಮ ಪ್ರಮಾಣದ ನೀರು ಉಕ್ಕಿ ಬಂದಿದೆ. ಇದರಿಂದಾಗಿ ಗ್ರಾಮದ ದೀರ್ಘಕಾಲದ ನೀರಿನ ಸಮಸ್ಯೆ ಬಗೆಹರಿದಂತಾಗಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿ ಬೋರ್‌ವೆಲ್ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮದ ಸಾರ್ವಜನಿಕರು ಹಾಗೂ ಮಹಿಳೆಯರು ಕೃತಜ್ಞತೆ ಸಲ್ಲಿಸಿದ್ದಾರೆ. ನೀರಿನ ಸಂಪರ್ಕವನ್ನು ಮನೆ ಮನೆಗಳಿಗೆ ಸಮರ್ಪಕವಾಗಿ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ಥಳೀಯ ಆಡಳಿತದ ಮೂಲಗಳು ತಿಳಿಸಿವೆ.
ಕೆಂಪಯ್ಯನಹಟ್ಟಿ ಗ್ರಾಮಸ್ಥರ ಹೋರಾಟಕ್ಕೆ ಫಲ: ಕೊರೆಸಿದ ಬೋರ್‌ವೆಲ್‌ನಲ್ಲಿ ಸಮೃದ್ಧ ನೀರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಹಲವು ದಿನಗಳಿಂದ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆ ಕೊನೆಗೂ ಬಗೆಹರಿದಿದೆ. ಗ್ರಾಮಸ್ಥರು ನಡೆಸಿದ ರಸ್ತೆ ತಡೆ ಪ್ರತಿಭಟನೆಯ ಫಲವಾಗಿ ತ್ವರಿತವಾಗಿ ಕೊರೆಸಿದ ನೂತನ ಕೊಳವೆಬಾವಿಯಲ್ಲಿ ಸಮೃದ್ಧ ನೀರು ಲಭ್ಯವಾಗಿದ್ದು, ಗ್ರಾಮದಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆಗೆ ಮಣಿದ ಆಡಳಿತ: ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ಮಹಿಳೆಯರು ಇತ್ತೀಚೆಗೆ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಹಾಗೂ ನೋಡಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಸಂಕಷ್ಟವನ್ನು ಮನಗಂಡು ತಕ್ಷಣವೇ ಹೊಸ ಬೋರ್‌ವೆಲ್ ಕೊರೆಸಲು ಸ್ಥಳದಲ್ಲೇ ಆದೇಶ ನೀಡಿದ್ದರು. ಅಧಿಕಾರಿಗಳ ಕ್ಷಿಪ್ರ ಕ್ರಮಕ್ಕೆ ಮೆಚ್ಚುಗೆ: ಅಧಿಕಾರಿಗಳ ಸೂಚನೆ ಮೇರೆಗೆ ಗ್ರಾಮದಲ್ಲಿ ತ್ವರಿತವಾಗಿ ಬೋರ್‌ವೆಲ್ ಕೊರೆಯುವ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು. ಅದೃಷ್ಟವಶಾತ್ ನೂತನ ಕೊಳವೆಬಾವಿಯಲ್ಲಿ ಉತ್ತಮ ಪ್ರಮಾಣದ ನೀರು ಉಕ್ಕಿ ಬಂದಿದೆ. ಇದರಿಂದಾಗಿ ಗ್ರಾಮದ ದೀರ್ಘಕಾಲದ ನೀರಿನ ಸಮಸ್ಯೆ ಬಗೆಹರಿದಂತಾಗಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿ ಬೋರ್‌ವೆಲ್ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮದ ಸಾರ್ವಜನಿಕರು ಹಾಗೂ ಮಹಿಳೆಯರು ಕೃತಜ್ಞತೆ ಸಲ್ಲಿಸಿದ್ದಾರೆ. ನೀರಿನ ಸಂಪರ್ಕವನ್ನು ಮನೆ ಮನೆಗಳಿಗೆ ಸಮರ್ಪಕವಾಗಿ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ಥಳೀಯ ಆಡಳಿತದ ಮೂಲಗಳು ತಿಳಿಸಿವೆ.
- ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ವಿಎಸ್ ದೊಡ್ಡಿ ಬಳಿ ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.2
- ಕತ್ತಲೆಯಿಂದ ಬೆಳಕಿನೆಡೆಗೆ: ಈದ್ ಮಿಲಾದ್-ಉನ್-ನಬಿ ಹುಟ್ಟಿದ ಕಥೆ ಸುಮಾರು 1400 ವರ್ಷಗಳ ಹಿಂದಿನ ಮಾತು. ಅರೇಬಿಯಾದ ಮರಳುಗಾಡು ಸಂಪೂರ್ಣ ಅಂಧಕಾರದಲ್ಲಿ ಮುಳುಗಿತ್ತು. ಅನ್ಯಾಯ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಮೂಢನಂಬಿಕೆಗಳು ಮತ್ತು ಪರಸ್ಪರ ಕಚ್ಚಾಡುವಿಕೆಗಳು ಸಮಾಜವನ್ನು ಆವರಿಸಿದ್ದವು. ಇಂತಹ ಸಂದರ್ಭದಲ್ಲಿ ಇಡೀ ಮಾನವಕುಲಕ್ಕೆ ಶಾಂತಿ ಮತ್ತು ಕರುಣೆಯ ಸಂದೇಶ ನೀಡಲು ಒಬ್ಬ ಮಾರ್ಗದರ್ಶಿಯ ಅಗತ್ಯವಿತ್ತು. ಇಸ್ಲಾಮಿಕ್ ಕ್ಯಾಲೆಂಡರ್‌ನ ಮೂರನೇ ತಿಂಗಳಾದ ‘ರಬೀ-ಉಲ್-ಅವ್ವಲ್’ 12 ರಂದು, ಮೆಕ್ಕಾ ನಗರದಲ್ಲಿ ಪವಿತ್ರ ಪ್ರವಾದಿ ಮುಹಮ್ಮದ್ (ಸ.ಅ) ಅವರ ಜನನವಾಯಿತು. ತಂದೆ ಅಬ್ದುಲ್ಲಾ ಅವರ ಅಗಲಿಕೆಯ ನಂತರ ಜನಿಸಿದ ಈ ಮಗುವಿಗೆ ತಾಯಿ ಆಮಿನಾ ಮತ್ತು ಅಜ್ಜ ಅಬ್ದುಲ್ ಮುತ್ತಲಿಬ್ ಪ್ರೀತಿಯಿಂದ ಆಸರೆಯಾದರು. ಬೆಳೆಯುತ್ತಾ ತಮ್ಮ ಅಸಾಧಾರಣ ಸತ್ಯಸಂಧತೆ ಮತ್ತು ಪ್ರಾಮಾಣಿಕತೆಯಿಂದಾಗಿ ಜನರು ಅವರನ್ನು ‘ಅಲ್-ಅಮೀನ್’ (ನಂಬಿಕಸ್ಥ) ಎಂದು ಗೌರವದಿಂದ ಕರೆದರು. ಮುಂದೆ ಅವರು ಸಮಾಜಕ್ಕೆ ಕೇವಲ ಧರ್ಮವನ್ನಷ್ಟೇ ಬೋಧಿಸಲಿಲ್ಲ; ಬದಲಿಗೆ: ಹೆಣ್ಣು ಮಕ್ಕಳಿಗೆ ಗೌರವ ಮತ್ತು ಹಕ್ಕುಗಳನ್ನು ನೀಡಿದರು. ಬಡವರು, ಅನಾಥರು ಮತ್ತು ಗುಲಾಮರ ಮೇಲಿನ ಶೋಷಣೆಯನ್ನು ನಿಲ್ಲಿಸಿ ಸಮಾನತೆಯನ್ನು ಸಾರಿದರು. "ನಿಮ್ಮ ನೆರೆಹೊರೆಯವರು ಹಸಿದಿರುವಾಗ ನೀವು ಹೊಟ್ಟೆ ತುಂಬ ಉಣ್ಣುವುದು ಸರಿಯಲ್ಲ" ಎಂದು ಸಹಾನುಭೂತಿಯ ಪಾಠ ಕಲಿಸಿದರು. ಈ ಆಚರಣೆ ಆರಂಭವಾಗಿದ್ದು ಹೇಗೆ? ಪ್ರವಾದಿಯವರ ಕಾಲದ ನಂತರ, ಶತಮಾನಗಳು ಕಳೆದಂತೆ ಜನರು ಅವರ ತ್ಯಾಗ, ಬೋಧನೆ ಮತ್ತು ಮಾನವೀಯ ಸಂದೇಶಗಳನ್ನು ಮುಂದಿನ ಪೀಳಿಗೆಗೆ ನೆನಪಿಸಲು ಒಂದು ವಿಶೇಷ ದಿನವನ್ನು ಮೀಸಲಿಡಲು ಬಯಸಿದರು. 12ನೇ ಶತಮಾನದ ಸುಮಾರಿಗೆ ಇಸ್ಲಾಮಿಕ್ ಜಗತ್ತಿನ ವಿದ್ವಾಂಸರು ಹಾಗೂ ಆಡಳಿತಗಾರರು ಪ್ರವಾದಿಯವರ ಜನ್ಮದಿನವನ್ನು ಸಾರ್ವಜನಿಕವಾಗಿ ಆಚರಿಸಲು ಆರಂಭಿಸಿದರು. ಇರ್ಬಿಲ್ (ಇಂದಿನ ಇರಾಕ್) ನಗರದ ರಾಜ ಮುಜಫ್ಫರ್ ಅಲ್-ದಿನ್ ಈ ದಿನವನ್ನು ದೊಡ್ಡ ಉತ್ಸವದಂತೆ ಆಯೋಜಿಸಿ, ಬಡವರಿಗೆ ಆಹಾರ ವಿತರಿಸಿ, ಪ್ರವಾದಿಯವರ ಜೀವನ ಚರಿತ್ರೆ ಮತ್ತು ಕವಿತೆಗಳನ್ನು ವಾಚಿಸುವ ಸಂಪ್ರದಾಯವನ್ನು ವ್ಯಾಪಕವಾಗಿ ಬೆಳೆಸಿದನು. ಕಾಲಾನಂತರದಲ್ಲಿ ಈ ಸಂಪ್ರದಾಯ ಈಜಿಪ್ಟ್, ಟರ್ಕಿ ಸೇರಿದಂತೆ ಇಡೀ ವಿಶ್ವದಾದ್ಯಂತ ಹರಡಿತು. ಇಂದು ಏಕೆ ಆಚರಿಸಲಾಗುತ್ತದೆ? ಮಿಲಾದ್-ಉನ್-ನಬಿ ಎಂದರೆ ಕೇವಲ ಹಬ್ಬದ ಸಡಗರವಲ್ಲ; ಅದು ಪ್ರವಾದಿಯವರ ಬದುಕನ್ನು ಸ್ಮರಿಸುವ ದಿನ. ಕೃತಜ್ಞತೆ: ಪ್ರವಾದಿಯವರ ಮೂಲಕ ಸಮಾಜಕ್ಕೆ ಸಿಕ್ಕ ಶಾಂತಿ ಮತ್ತು ಜ್ಞಾನದ ಸಂದೇಶಕ್ಕೆ ಕೃತಜ್ಞತೆ ಸಲ್ಲಿಸುವುದು. ದಾನ-ಧರ್ಮ: ಹಸಿದವರಿಗೆ ಅನ್ನದಾನ ಮಾಡುವುದು ಮತ್ತು ಅಗತ್ಯವಿರುವವರಿಗೆ ಸಹಾಯ ಮಾಡುವುದು. ಸೌಹಾರ್ದತೆ: ಮೆರವಣಿಗೆ ಮತ್ತು ಪ್ರಾರ್ಥನೆಗಳ ಮೂಲಕ ಸಮಾಜದಲ್ಲಿ ಸೋದರತ್ವ ಮತ್ತು ಪ್ರೀತಿಯನ್ನು ಸಾರುವುದು. ಕತ್ತಲೆಯನ್ನು ಹೋಗಲಾಡಿಸಿ ಮಾನವೀಯತೆಯ ಬೆಳಕು ಚೆಲ್ಲಿದ ಪ್ರವಾದಿಯವರ ಜನ್ಮದಿನವನ್ನು ಇಂದು ವಿಶ್ವದಾದ್ಯಂತ ಅತ್ಯಂತ ಶ್ರದ್ಧೆಯಿಂದ ‘ಈದ್ ಮಿಲಾದ್-ಉನ್-ನಬಿ’ ಎಂದು ಆಚರಿಸಲಾಗುತ್ತದೆ.2
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ವರದಿ: ಹೊಮ್ಮನಂಜುಂಡನಾಯಕ. ಜಿಲ್ಲೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ನೌಕರರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಕೇಂದ್ರ ನಮಿತಿ ಬೆಂಗಳೂರು ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8, ಶೃಂಗಾರ್ ಪ್ಯಾಲೇನ್‌ನಲ್ಲಿ ಬೆಳಿಗ್ಗೆ 10:30 ಗಂಟೆಗೆ ಆರಂಭವಾಗುವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಜೇತವನ ವಿಹಾರದ ಭೌದ್ಧ ಬಿಕ್ಕು ಮನೋರಕ್ಷಿತ ಬಂತೇಜಿ ವಹಿಸುವವರು, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸುವವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಚಿವರಾದ ಕೆ.ಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್‌ಖರ್ಗೆ, ಶಿವರಾಜ್ ತಂಗಡಗಿ : ಪಿ.ಎಂ.ನರೇಂದ್ರಸ್ವಾಮಿ.ಬಿ. ನಾಗೇಂದ್ರ ರುದ್ರಪ್ಪ ಲಮಾಣಿ, ಕೆ.ಎಸ್.ಬಸವಂತಪ್ಪ, ಟಿ.ರಘುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವವರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 5 ಬಸ್‌ಗಳಲ್ಲಿ ಹೊರಡಲು ವ್ಯವಸ್ಥೆ. ಮಾಡಲಾಗಿದೆ. ಚಾಮರಾಜೇಶ್ವರ ದೇವಸ್ಥಾನ ಮುಂಭಾಗ, ಹೌಸಿಂಗ್ ಬೋರ್ಡ್ ಹತ್ತಿರ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ, ಎಸ್‌ಟಿ ನೌಕರರು ಭಾಗವಹಿಸಿ ಯಶಸ್ವಿಕೊಳಿಸಿಕೊಡುವಂತೆ ಮನವಿ ಮಾಡಿದರು. ಮಾಜಿ ಅಧ್ಯಕ್ಷ ಮಂಜುನಾಥಪ್ರನನ್ನ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ನೌಕರರಿಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ನಾನು ಕೂಡ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ಮಾಡಿ ನೌಕರರು, ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 50 ಸಾವಿರ ಜನರು ಸೇರುತ್ತಾರೆ ನಮ್ಮ ಜಿಲ್ಲೆಯಿಂದ 500 ಮಂದಿ ಭಾಗವಹಿಸುತ್ತಾರೆ. ಈ ಸಮಾವೇಶದಲ್ಲಿ ನಮ್ಮ ಮುಖ್ಯ ಬೇಡಿಕೆಗಳಾದ ಎಸ್ ಸಿ, ಎಸ್‌ಟಿಗಳಿಗೆ ಬ್ಯಾಕ್‌ಲಾಕ್ ಹುದ್ದೆಗಳನ್ನು ಭರ್ತಿ ಮಾಡುವುದು ಮೊದಲು ಆಗಬೇಕು. ಕಾನೂನು ವಿದ್ಯಾರ್ಥಿಗಳು, ಇಂಜಿನಿಯರ್‌ರಿಂಗ್ ವಿದ್ಯಾರ್ಥಿಗಳು, ಮೆಡಿಕಲ್ ವಿದ್ಯಾರ್ಥಿಗಳಿಗೆ ಒಳ ಮೀಸಲಾತಿಯಿಂದ ತುಂಬಾ ಇಕ್ಕಟ್ಟಾಗಿದ್ದು, ಸರಿಯಾಗಿ ಜಾತಿ ಪ್ರಮಾಣ ಕೊಡುತ್ತಿಲ್ಲ. ಅದಕ್ಕಾಗೆ 1 ಸಾವಿರದಿಂದ 2 ಸಾವಿರ ರೂ .ವೆಚ್ಚವಾಗುತ್ತಿದೆ. ಅದನ್ನು ಕಡಿಮೆ ಮಾಡಬೇಕು. ಬಗರ್‌ಹುಕುಂ ಸಾಗುವಳಿಯಲ್ಲಿ ವಿಳಂಬವಾಗುತ್ತಿದೆ. ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳಿಗೆ ಮಂಡಿಸಲಾಗುತ್ತದೆ ಎಂದರು. ಡಾ. ಬಿ.ಆರ್.ಅಂಬೇಡ್ಕರ್ ಮಹಾಸಭಾದ ಜಿಲ್ಲಾಧ್ಯಕ್ಷ ಉಮೇಶ್‌ಕುದರ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ನಿರಂತರವಾಗಿ ಸಮುದಾಯಕ್ಕೆ ಆಗುವ ಎಲ್ಲ ಅನ್ಯಾಯಗಳನ್ನು ತಮ್ಮ ಧ್ವನಿಯ ಮುಖಾಂತರ, ಸಮಾವೇಶಗಳ ಮುಖಾಂತರ ಎಲ್ಲರಿಗೂ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಮ್ಮ ಸಂಘಟನೆಗಳ ವತಿಯಿಂದ ಎಲ್ಲ ರೀತಿ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯಾಧ್ಯಕ್ಷ ಶಿವಕುಮಾರಯ್ಯ, ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ವಾಸು, ಎಸ್ ಸಿ, ಎಸ್ ಟಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.4
- ಮಳವಳ್ಳಿಯಲ್ಲಿ ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಥಮ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಗೆ ಮೈಸೂರು ಕೊಡಗು ಜಿಲ್ಲಾ ಸಹಕಾರ ಒಕ್ಕೂಟಗಳ ಸಂಯೋಜಕರಾದ ಬಲರಾಮ್ ಚಾಲನೆ ಮಳವಳ್ಳಿ;ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ--ಸಂಯೋಜಕ ಬಲರಾಂ ಹೇಳಿಕೆ ಮಳವಳ್ಳಿ:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರಿ ಸಂಘಗಳ ಪಾತ್ರ ಅಪಾರವಾಗಿದೆ ಎಂದು ಮೈಸೂರು ಕೊಡಗು ಸೌಹರ್ಧ ಸಹಕಾರಿ ಒಕ್ಕೂಟದ ವಿಭಾಗದ ಸಂಯೋಜಕ ಎನ್.ಬಲರಾಂ ಹೇಳಿದರು. ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದ ಅವರಣದಲ್ಲಿ ಮಾಮರ ಸೌಹರ್ಧ ಸಹಕಾರಿ ಸಂಘ ಅಯೋಜಿಸಿದ್ದ ಪ್ರಥಮ ವರ್ಷದ ಸರ್ವ ಸದಸ್ಯರ ಸಭೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಹಕಾರಿ ಸಂಘಗಳ ಮೂಲ ಉದ್ದೇಶವೇ ಸದಸ್ಯರಿಗೆ ಮೂಲ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ ಎಂದರು. ಮಾಮರ ಸೌಹರ್ದ ಸಹಕಾರ ಸಂಘ ಅರಂಭದ ವರ್ಷದಲ್ಲೆ ಉತ್ತಮ ಪ್ರಗತಿಯತ್ತ ಸಾಗಿದೆ,೧ ಕೋಟಿ ವಹಿವಾಟು ನಡೆಸಿರುವುದು,೫೦ ಲಕ್ಷಕ್ಕೂ ಮೂಲ ಬಂಡವಾಳ ಹೊಂದಿರುವುದು ಸೇರಿದಂತೆ ಸಂಘದ ಪಾರದರ್ಶಕ ಅರ್ಥಿಕ ವರದಿ ಭವಿಷ್ಯದಲ್ಲಿ ಉನ್ನತ ಸ್ಥಾನದ ಪಡೆಯಲಿದೆ ಎಂದ ಅವರು ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂಘಕ್ಕೆ ಸದಸ್ಯರು ಹೆಚ್ಚಿನ ಸಹಕಾರ ನೀಡಬೇಕು,ಸಂಘದ ಸೌಲಭ್ಯಗಳನ್ನು ಪಡೆಯುವುದಲ್ಲದೇ ಅಕ್ಕಪಕ್ಕದ ಜನರಿಗೂ ಸೌಲಭ್ಯ ಕೊಡಿಸುವತ್ತ ಮುಂದಾಗುವAತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಲೆಕಪರಿಶೋಧಕರಾದ ರಾಜೇಶ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಕವಿತಾ ಶ್ರೀಕಂಠಸ್ವಾಮಿ ಹಾಗೂ ಕು.ಕುಸುಮ ಸಂಘದ ವಾರ್ಷಿಕ ಲೆಕ್ಕ ಪರಿಶೋಧನ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಸAಘದ ಸೌಲಭ್ಯಗಳ ಬಗ್ಗೆ ಸಂಘದ ಅಪಾಧ್ಯಕ್ಷರಾದ ಗುರುಮೂರ್ತಿ ಮಾಹಿತಿ ನೀಡಿದರು.ಸಂಘದ ಸೇವೆಗಳ ಕುರಿತು ನಿರ್ದೇಶಕ ಶಿವಕುಮಾರ್ ಮಾತನಾಡಿದರು.ಮುಖ್ಯ ಕಾರ್ಯನಿರ್ವಹಣಾಧಿಕಶಾರಿ ಪೂರ್ಣಿಮ ಸಂಘ ಬೆಳೆದು ಬಂದ ಹಾದಿಯ ಕುರಿತು ವರದಿ ಮಂಡಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಸಂಘದ ಅರಂಭ ಹಾಗೂ ಮುಂಗಡ ವರ್ಷದ ಯೋಜನೆಗಳು ಬಗ್ಗೆ ಸಭೆಯಲ್ಲಿ ಮಂಡಿಸಿದರು. ಬಾಕ್ಸ್ ಸುದ್ದಿ: ಹೋಸ ಯೋಜನೆಗಳ ಅನುಷ್ಠಾನ್ಕಕೆ ಅನುಮೋಧನೆ: ಸಹಕಾರ ಸಂಘದಿAದ ಸೂಪರ್ ಮಾರ್ಕೆಟ್ ಅರಂಭ,ಹಲಗೂರಿನಲ್ಲಿ ಹೊಸ ಉಪ ಶಾಖೆ ತೆರಯುವುದು,ಬಂಕ್ ಉದ್ಯಮ ಸೇರಿದಂತೆ ಸಹಕಾರ ಸಂಘದ ಪ್ರಗತಿಗೆ ಕೈಗೊಳ್ಳಬೇಕಾದ ಹೊಸ ಯೋಜನೆಗಳ ಅನುಷ್ಠಾನ ಹಾಗೂ ಲೆಕ್ಕ ಪರಿಶೋಧಕರ ನಿಯೋಜನೆ.ಹೊಸ ಕಛೇರಿ ತೆರೆಯುವುದು,ಸಾಮಾನ್ಯ ಸೇವಾ ಕೇಂದ್ರದ ಸೇವೆಗಳನ್ನು ಸದಸ್ಯರ ಮನೆಗೆ ನೀಡುವುದು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿ ಅನುಮೋಧನೆ ಪಡೆಯಲಾಯಿತು. ಇದೇ ಸಂದರ್ಭದಲ್ಲಿ ಸಂಘಕ್ಕೆ ನೂತನ ವೃತ್ತಿ ಪರ ನಿರ್ದೇಶಕರಾಗಿ ಅಯ್ಕಯಾಗಿದ್ದ ಬೆಳಕವಾಡಿ ಚೇತನ್ ಹಾಗೂ ರೇಷ್ಮೆ ಕೃಷಿಕ ಮೂಗನಕೊಪ್ಪಲು ತ್ಯಾಗರಾಜುರವರನ್ನು ಅಭಿನಂಧಿಸಿ ಆಢಳಿತ ಮಂಡಳಿಗೆ ಬರಮಾಡಿಕೊಳ್ಳಲಾಯಿತು. ಸಭೆಯಲ್ಲಿ ಸಂಯೋಜಕ ಬಲರಾಂ,ಲೆಕ್ಕ ಪರಿಶೋಧಕರಾದ ರಾಜೆಶ್.ಪಿ ಹಾಗೂ ಹಿರಿಯ ಸದಸ್ಯರು ಹಾಗೂ ಶಿಕ್ಷಣ ತಜ್ಞೆ ಶಾಂತ ಬಸವರಾಜು,ವೈದ್ಯರಾದ ಗೀರೀಶ್,ಪತ್ರಬರಹಗಾರ ಸದಾಶಿವಮೂರ್ತಿ,ಬಸವೇಶ್ ಮೂರ್ತಿ,ನಿವೃತ್ತ ಉಪ ತಹಶೀಲ್ದಾರ್ ಶಿವಮೂರ್ತಿಯವರನ್ನು ಅಭಿನಂಧಿಸಲಾಯಿತು. ಸಭೆಗೂ ಮುನ್ನ ಶ್ರೀ ವೀರಭದ್ರೇಶ್ವರಸ್ವಾಮಿಗೆ ಸಂಘದವತಿಯಿAದ ವಿಶೇಷ ಪೂಜೆ ಸಲ್ಲಿಸಲಾಯಿತು,ಅರ್ಚಕರಾದ ಮಲ್ಲಯ್ಯನವರು ದೇವರಿಗೆ ಪೂಜೆ ಸಲ್ಲಿಸಿ ಅಗಮಿಸಿದ ಜನರಿಗೆ ಮಹಾಮಂಗಳಾರತಿ ನೀಡಿ ಪ್ರಸಾದ ನೀಡಿದರು. ಸಭೆಯಲ್ಲಿ ಅಢಳಿತ ಮಂಡಳಿಯ ನಿರ್ದೇಶಕರಾದ ಎಸ್ ನಾಗಭೂಷಣಾರಾದ್ಯ,ಎನ್.ಮಂಟ್ಯೆಸ್ವಾಮಿ,ಕವಿತ.ಎಸ್,ಮಾನಸ.ಪಿ,ಗAಗಾಧರ್,ವ್ಯವಸ್ಥಾಪಕಿ ರಮ್ಯ,ಸೇವಾ ಪ್ರತಿನಿಧಿ ಕುಸುಮ,ಸಿಇಓ ಪೂರ್ಣಿಮಾ, ಪಿಗ್ಮಿ ಸಂಗ್ರಾಹಕ ಸುಬ್ರಮಣ್ಯ ಎಂ.ಅರ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.1
- ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ ನಾಲ್ಕು ಚಿರತೆ ಮರಿಗಳು; ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕ ಚನ್ನಪಟ್ಟಣ: ತಾಲೂಕಿನ ನೇರಳೂರು ಗ್ರಾಮದ ನಾಗೇಶ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು ನಾಲ್ಕೈದು ದಿನಗಳ ಪ್ರಾಯದ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕವೂ ಮೂಡಿದೆ. ವಿಷಯ ತಿಳಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಮರಿಗಳ ತಾಯಿ ಚಿರತೆ ಸಮೀಪದಲ್ಲೇ ಇರುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಗದ್ದೆಯೊಳಗೆ ತೆರಳದೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮರಿಗಳ ಸುರಕ್ಷತೆ ಹಾಗೂ ತಾಯಿ ಚಿರತೆಯ ಚಲನವಲನದ ಬಗ್ಗೆ ನಿಗಾ ವಹಿಸಿದ್ದಾರೆ. ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳ ಪತ್ತೆ ಸುದ್ದಿ ಸುತ್ತಮುತ್ತಲಿನ ಗ್ರಾಮಗಳಲ್ಲೂ ಕುತೂಹಲ ಮೂಡಿಸಿದೆ.1
- ಮೈಕ್ರೋ ಗ್ರೀನ್ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್, ಸ್ಯಾಂಡ್‌ವಿಚ್, ಸೂಪ್ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು1
- ಕೆಂಪಯ್ಯನಹಟ್ಟಿ ಗ್ರಾಮಸ್ಥರ ಹೋರಾಟಕ್ಕೆ ಫಲ: ಕೊರೆಸಿದ ಬೋರ್‌ವೆಲ್‌ನಲ್ಲಿ ಸಮೃದ್ಧ ನೀರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಹಲವು ದಿನಗಳಿಂದ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆ ಕೊನೆಗೂ ಬಗೆಹರಿದಿದೆ. ಗ್ರಾಮಸ್ಥರು ನಡೆಸಿದ ರಸ್ತೆ ತಡೆ ಪ್ರತಿಭಟನೆಯ ಫಲವಾಗಿ ತ್ವರಿತವಾಗಿ ಕೊರೆಸಿದ ನೂತನ ಕೊಳವೆಬಾವಿಯಲ್ಲಿ ಸಮೃದ್ಧ ನೀರು ಲಭ್ಯವಾಗಿದ್ದು, ಗ್ರಾಮದಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆಗೆ ಮಣಿದ ಆಡಳಿತ: ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ಮಹಿಳೆಯರು ಇತ್ತೀಚೆಗೆ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಹಾಗೂ ನೋಡಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಸಂಕಷ್ಟವನ್ನು ಮನಗಂಡು ತಕ್ಷಣವೇ ಹೊಸ ಬೋರ್‌ವೆಲ್ ಕೊರೆಸಲು ಸ್ಥಳದಲ್ಲೇ ಆದೇಶ ನೀಡಿದ್ದರು. ಅಧಿಕಾರಿಗಳ ಕ್ಷಿಪ್ರ ಕ್ರಮಕ್ಕೆ ಮೆಚ್ಚುಗೆ: ಅಧಿಕಾರಿಗಳ ಸೂಚನೆ ಮೇರೆಗೆ ಗ್ರಾಮದಲ್ಲಿ ತ್ವರಿತವಾಗಿ ಬೋರ್‌ವೆಲ್ ಕೊರೆಯುವ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು. ಅದೃಷ್ಟವಶಾತ್ ನೂತನ ಕೊಳವೆಬಾವಿಯಲ್ಲಿ ಉತ್ತಮ ಪ್ರಮಾಣದ ನೀರು ಉಕ್ಕಿ ಬಂದಿದೆ. ಇದರಿಂದಾಗಿ ಗ್ರಾಮದ ದೀರ್ಘಕಾಲದ ನೀರಿನ ಸಮಸ್ಯೆ ಬಗೆಹರಿದಂತಾಗಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿ ಬೋರ್‌ವೆಲ್ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮದ ಸಾರ್ವಜನಿಕರು ಹಾಗೂ ಮಹಿಳೆಯರು ಕೃತಜ್ಞತೆ ಸಲ್ಲಿಸಿದ್ದಾರೆ. ನೀರಿನ ಸಂಪರ್ಕವನ್ನು ಮನೆ ಮನೆಗಳಿಗೆ ಸಮರ್ಪಕವಾಗಿ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ಥಳೀಯ ಆಡಳಿತದ ಮೂಲಗಳು ತಿಳಿಸಿವೆ.1