logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಕಾರಿಪುರ. ಗಣಪತಿ ಬಪ್ಪಾ ಮೋರಿಯಾ, ಶಿಕಾರಿಪುರದ ಸ್ವಗೃಹದಲ್ಲಿ ಜನಪ್ರಿಯ ಸಂಸದರಾದ ಬಿ. ವೈ.ರಾಘವೇಂದ್ರ ಅವರ ಕುಟುಂಬದವರೆಲ್ಲರೂ ಸೇರಿ ಗಣೇಶ ಹಬ್ಬ ಆಚರಿಸಲಾಯಿತು. ಶಿಕಾರಿಪುರ: ಗಣಪತಿ ಬಪ್ಪಾ ಮೋರಯ! ಶಿಕಾರಿಪುರದ ಸ್ವಗೃಹದಲ್ಲಿ ಜನಪ್ರಿಯ ಸಂಸದರಾದ ಬಿ. ವೈ. ರಾಘವೇಂದ್ರ ಅವರ ಕುಟುಂಬದವರೆಲ್ಲರೂ ಸೇರಿ ಸಂಭ್ರಮದಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಲಾಯಿತು. ವಿಘ್ನನಿವಾರಕ ಶ್ರೀ ಗಣೇಶನು ನಮ್ಮೆಲ್ಲರಿಗೂ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಈ ನಾಡಿನ ಜನತೆಗೆ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು!

6 hrs ago
user_Press Narashimha swamy SN
Press Narashimha swamy SN
Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
6 hrs ago
a973623a-d120-4db3-ad2a-5d573a98cf69
58f42d63-f7a9-4587-8ac4-e46102e20057
9d28c347-cf86-45cd-abf0-2d0f692cf648
c50fcd0a-9f6a-46ee-b790-d89c38615a5d

ಶಿಕಾರಿಪುರ. ಗಣಪತಿ ಬಪ್ಪಾ ಮೋರಿಯಾ, ಶಿಕಾರಿಪುರದ ಸ್ವಗೃಹದಲ್ಲಿ ಜನಪ್ರಿಯ ಸಂಸದರಾದ ಬಿ. ವೈ.ರಾಘವೇಂದ್ರ ಅವರ ಕುಟುಂಬದವರೆಲ್ಲರೂ ಸೇರಿ ಗಣೇಶ ಹಬ್ಬ ಆಚರಿಸಲಾಯಿತು. ಶಿಕಾರಿಪುರ: ಗಣಪತಿ ಬಪ್ಪಾ ಮೋರಯ! ಶಿಕಾರಿಪುರದ ಸ್ವಗೃಹದಲ್ಲಿ ಜನಪ್ರಿಯ ಸಂಸದರಾದ ಬಿ. ವೈ. ರಾಘವೇಂದ್ರ ಅವರ ಕುಟುಂಬದವರೆಲ್ಲರೂ ಸೇರಿ ಸಂಭ್ರಮದಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಲಾಯಿತು. ವಿಘ್ನನಿವಾರಕ ಶ್ರೀ ಗಣೇಶನು ನಮ್ಮೆಲ್ಲರಿಗೂ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಈ ನಾಡಿನ ಜನತೆಗೆ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು!

More news from ಕರ್ನಾಟಕ and nearby areas
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    21 hrs ago
  • ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ ತರೀಕೆರೆ, ಸೆ.14: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು. ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು. ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು. ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    4
    ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ

ತರೀಕೆರೆ, ಸೆ.14:

 ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು.

ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು.

ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು.

ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು.

ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    user_ಪ್ರದೀಪ್ ಹೆಚ್ ಈ. ತರೀಕೆರೆ
    ಪ್ರದೀಪ್ ಹೆಚ್ ಈ. ತರೀಕೆರೆ
    ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
    21 hrs ago
  • ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    2
    ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ.
ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ! ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು! ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ! ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು! ಯುವಕರ ಜೋಶ್, ಗಣಪತಿ ಭಕ್ತಿಯಲ್ಲಿ ಗ್ರಾಮಸ್ಥರು ಫುಲ್ ಖುಷ್! ಯುವಕರ ಉತ್ಸಾಹ ಹಾಗೂ ಭಕ್ತರ ಸಂಭ್ರಮದ ನಡುವೆ ವಿನಾಯಕನ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಗಣೇಶನ ದರ್ಶನ ಪಡೆಯಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಭಾಗವಹಿಸಿ ಗಣಪತಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ಗಣೇಶೋತ್ಸವದ ಸಂಭ್ರಮ ಶಿಗ್ಲಿ ಗ್ರಾಮದಲ್ಲಿ ಮನೆಮಾಡಿದ್ದು, ವಿನಾಯಕ ಯುವಕ ಮಂಡಳದ ಸದಸ್ಯರು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ವರದಿ ಸೋಮು ಬಿ ಆಡ್ರಕಟ್ಟಿ
    1
    ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ!

ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು!
ಶಿಗ್ಲಿಯಲ್ಲಿ ಗಣೇಶನಿಗೆ ಗ್ರ್ಯಾಂಡ್ ಎಂಟ್ರಿ! ವಿನಾಯಕ ಯುವಕ ಮಂಡಳದ ಭರ್ಜರಿ ಮೆರವಣಿಗೆಗೆ ಗ್ರಾಮವೇ ಫಿದಾ!
ಶಿಗ್ಲಿ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಜೋರಾಗಿದೆ. ವಿನಾಯಕ ಯುವಕ ಮಂಡಳ ವತಿಯಿಂದ ವಿನಾಯಕ ನಗರಕಾ ರಾಜ್ಯ್ ಸಾಮ್ರಾಟ್ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಕಳೆ ಹೆಚ್ಚಿಸಿತು!
ಯುವಕರ ಜೋಶ್, ಗಣಪತಿ ಭಕ್ತಿಯಲ್ಲಿ ಗ್ರಾಮಸ್ಥರು ಫುಲ್ ಖುಷ್!
ಯುವಕರ ಉತ್ಸಾಹ ಹಾಗೂ ಭಕ್ತರ ಸಂಭ್ರಮದ ನಡುವೆ ವಿನಾಯಕನ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಗಣೇಶನ ದರ್ಶನ ಪಡೆಯಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಭಾಗವಹಿಸಿ ಗಣಪತಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ಗಣೇಶೋತ್ಸವದ ಸಂಭ್ರಮ ಶಿಗ್ಲಿ ಗ್ರಾಮದಲ್ಲಿ ಮನೆಮಾಡಿದ್ದು, ವಿನಾಯಕ ಯುವಕ ಮಂಡಳದ ಸದಸ್ಯರು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.
ವರದಿ ಸೋಮು ಬಿ ಆಡ್ರಕಟ್ಟಿ
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    22 hrs ago
  • ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    1
    ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್
#ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ
#ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ
#ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ
#ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ
#BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    1
    ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ನಮಸ್ಕಾರ ಬಂಧುಗಳೇ...
​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ!
​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ.
​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ!
​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ.
​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    12 hrs ago
  • ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾ‌ಪ್ರಭುತ್ವ ದಿನದ ಕಾರ್ಯಕ್ರಮವನ್ನು‌ ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ‌ ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ‌ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ‌ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು‌ ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು. ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ.‌ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ‌. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ‌. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರ‌ದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ‌. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು‌. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು‌. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು. ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು‌‌‌. ಇದು ಅಕ್ಷಮ್ಯ ಅಪರಾಧವಾಗಿದೆ‌. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ‌ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು. ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ.‌ ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ.‌ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದು‌ಕೊಂಡರೆ ತಪ್ಪು‌.‌ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ‌.‌ ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು‌. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು‌. ಆದರೆ ಈಗ ಬೇಡವೇ‌ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ‌‌. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.
    1
    ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ 
ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾ‌ಪ್ರಭುತ್ವ ದಿನದ ಕಾರ್ಯಕ್ರಮವನ್ನು‌ ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು.
ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ‌
ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ‌ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ‌ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು‌ ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು.
ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ.‌ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ‌. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ‌. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರ‌ದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ‌. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು.
ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು‌. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು‌. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು.
ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು‌‌‌. ಇದು ಅಕ್ಷಮ್ಯ ಅಪರಾಧವಾಗಿದೆ‌. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ‌ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು.
ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ.‌ ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ.
ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ.‌ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದು‌ಕೊಂಡರೆ ತಪ್ಪು‌.‌ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ‌.‌ ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು‌.
ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು‌. ಆದರೆ ಈಗ ಬೇಡವೇ‌ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ‌‌. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.