ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ 35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ ಮೋದಿ ಯವರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು ಹಗರಣದ ಮುಕ್ತ, ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ. ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು “ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ 35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ ಮೋದಿ ಯವರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು ಹಗರಣದ ಮುಕ್ತ, ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ. ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು “ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
- ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ. ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.1
- ಪಟ್ಟಣದ ರೋಟರಿ ಶಾಲೆ ಆವರಣದಲ್ಲಿ ಇಂಜಿನಿಯರ್ಸ್ ದಿನಾಚರಣೆ. ಇಂಜೀನಿಯರ್ ದಂಪತಿಗಳಿಗೆ ಸನ್ಮಾನ ಮಳವಳ್ಳಿ ಪಟ್ಟಣದ ರೋಟರಿ ಶಾಲೆ ಹಾಗೂ ತಾಲೂಕಿನ ದೊಡ್ಡಬೂಹಳ್ಳಿ ಮತ್ತು ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವ ರಯ್ಯ ಜನ್ಮದಿನದ ಅಂಗವಾಗಿ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮವನ್ನು ರೋಟರಿ ಸಂಸ್ಥೆ ವತಿಯಿಂದ ಆಯೋಜಿಸ ಲಾಗಿತ್ತು. ಬುಧವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಪಟ್ಟಣದ ರೋಟರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿ ಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಂಪತಿಗಳು, ತಮ್ಮ ವೃತ್ತಿ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ರೋಟರಿ ಸಂಸ್ಥೆ ಕಾರ್ಯದರ್ಶಿ ಆರ್.ಜಿ.ಮಹದೇವಸ್ವಾಮಿ ಅವರು ವಿಶ್ವ ಓಝೋನ್ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿ ಹೊಂದಿರಬೇಕು ಎಂದು ತಿಳಿಸಿದರು. ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆಗಳಲ್ಲೂ ರೋಟರಿ ಸಂಸ್ಥೆ ವತಿಯಿಂದ ಎಂಜಿನಿ ಯರ್ಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು. ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಎಂಜಿನಿಯರ್ ನರಸಿಂಹಮೂರ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನರಸಿಂಹಮೂರ್ತಿ ಅವರು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದೊಡ್ಡಬೂಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ನಾಗೇಂದ್ರ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಜಿನಿಯರ್ಸ್ ದಿನಾಚರಣೆ ಮಾಹಿತಿಯನ್ನು ಎಂಜಿನಿಯರ್ ದಂಪತಿಗಳಾದ ಆರ್.ಜಿ.ಅರುಣ್ ಹಾಗೂ ಸುರಕ್ಷ ಅವರುಗಳು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾರಂಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಘನಶ್ಯಾಮ್ ದಾಸ್, ಆರ್.ಜಿ.ಮಹದೇವ ಸ್ವಾಮಿ, ಎಂ.ವಿ.ಸೋಮ ಶೇಖರ್, ಹರೀಶ್ ಸೇರಿದಂತೆ ಇತರ ಗಣ್ಯರು, ಶಿಕ್ಷಕರು ಉಪಸ್ಥಿತರಿದ್ದರು.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು1
- ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ1
- ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ 35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ ಮೋದಿ ಯವರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು ಹಗರಣದ ಮುಕ್ತ, ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ. ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು “ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.1