ಉರ್ದು ಮಾಧ್ಯಮ ಶಾಲೆಗಳ ಖಾಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು TKS ಮನವಿ ಬೆಂಗಳೂರು: ಉರ್ದು ಮಾಧ್ಯಮ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಟಿಪ್ಪು ಕ್ರಾಂತಿ ಸೇನೆ (TKS) ವಿದ್ಯಾರ್ಥಿ ಘಟಕದ ವತಿಯಿಂದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಸರ್ಕಾರವು 800 ಶಿಕ್ಷಕರ ನೇಮಕಾತಿಗೆ ಸೀಮಿತಗೊಳಿಸದೆ, ಉರ್ದು ಮಾಧ್ಯಮ ಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಸಂಪೂರ್ಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ TKS ವಿದ್ಯಾರ್ಥಿ ಘಟಕ (ಪುರುಷ) ರಾಜ್ಯ ಅಧ್ಯಕ್ಷ ಶಬ್ಬೀರ ಅಹ್ಮದ್ ಮುಜಾವಾರ, ಮುಜೀಬ್ ಅಫಜಲಪುರ ಬಂದೇನವಾಜ ಪುಣೆಕರ ಹಾಗೂ TKS ರಾಜ್ಯ ಮಹಿಳಾ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಆಯಿಷಾ ದೌಲತಕೋಟೆ ಉಪಸ್ಥಿತರಿದ್ದರು.
ಉರ್ದು ಮಾಧ್ಯಮ ಶಾಲೆಗಳ ಖಾಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು TKS ಮನವಿ ಬೆಂಗಳೂರು: ಉರ್ದು ಮಾಧ್ಯಮ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಟಿಪ್ಪು ಕ್ರಾಂತಿ ಸೇನೆ (TKS) ವಿದ್ಯಾರ್ಥಿ ಘಟಕದ ವತಿಯಿಂದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಸರ್ಕಾರವು 800 ಶಿಕ್ಷಕರ ನೇಮಕಾತಿಗೆ ಸೀಮಿತಗೊಳಿಸದೆ, ಉರ್ದು ಮಾಧ್ಯಮ ಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಸಂಪೂರ್ಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ TKS ವಿದ್ಯಾರ್ಥಿ ಘಟಕ (ಪುರುಷ) ರಾಜ್ಯ ಅಧ್ಯಕ್ಷ ಶಬ್ಬೀರ ಅಹ್ಮದ್ ಮುಜಾವಾರ, ಮುಜೀಬ್ ಅಫಜಲಪುರ ಬಂದೇನವಾಜ ಪುಣೆಕರ ಹಾಗೂ TKS ರಾಜ್ಯ ಮಹಿಳಾ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಆಯಿಷಾ ದೌಲತಕೋಟೆ ಉಪಸ್ಥಿತರಿದ್ದರು.
- ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ1
- ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ1
- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ1
- ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿ ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.1
- ಸ್ವ ಕ್ಷೇತ್ರದಲ್ಲೇ ಸಚಿವ ಡಾ. ಅಜಯ್ ಸಿಂಗ್ ವಿರುದ್ಧ ಧಿಕ್ಕಾರದ ಕೂಗು ಜೇವರ್ಗಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಡಾ. ಅಜಯ್ ಸಿಂಗ್ ಅವರ ಸ್ವಕ್ಷೇತ್ರ ಜೇವರ್ಗಿಯಲ್ಲೇ ಕೆಲ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘಟನೆಗಳ ಕಾರ್ಯಕರ್ತರು ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ವಕ್ಷೇತ್ರದಲ್ಲೇ ಸಚಿವರ ವಿರುದ್ಧ ಧಿಕ್ಕಾರದ ಕೂಗು ಕೇಳಿಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಹಾಗೂ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದರು. #ಜೇವರ್ಗಿ #ಅಜಯ್_ಸಿಂಗ್ #ಧಿಕ್ಕಾರದ_ಕೂಗು #ಆಕ್ರೋಶ #ಸಂಘಟನೆಗಳು1