logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.

1 day ago
user_ಶಿವನಿ
ಶಿವನಿ
Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•

More news from ಕರ್ನಾಟಕ and nearby areas
  • ಸಂಪುಟ ಬದಲಾವಣೆ ವಿಚಾರ: ನನಗೇನೂ ಗೊತ್ತಿಲ್ಲ, ಖರ್ಗೆ ಸ್ಪಷ್ಟನೆ. ಬೆಂಗಳೂರು: ಸಂಪುಟ ಪುನಾರಚನೆ ಅಥವಾ ಬದಲಾವಣೆ ಕುರಿತು ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈ ಬಗ್ಗೆ ತಮಗೆ ಏನಾದರೂ ತಿಳಿದಿದ್ದರೆ ಹೇಳಿ, ನನಗೇನೂ ಗೊತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಸಂಪುಟ ಬದಲಾವಣೆ ಹಾಗೂ ಮುಖ್ಯಮಂತ್ರಿಗಳ ದೆಹಲಿ ಭೇಟಿಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿಗಳ ದೆಹಲಿ ಭೇಟಿಯ ವಿಚಾರವಾಗಿ ಮಾತನಾಡುತ್ತಾ, "ನಾನು ಸದ್ಯ ಕಲಬುರಗಿಯಲ್ಲಿದ್ದೇನೆ. ಯಾರೇ ಆದರೂ ದೆಹಲಿಗೆ ತೆರಳುವುದಕ್ಕೂ ಮುನ್ನ ನನ್ನ ಬಳಿಯೇ ಬರಬೇಕಲ್ಲವೇ?" ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಖರ್ಗೆ, ಸರ್ಕಾರದ ಪ್ರಮುಖ ಕಡತಗಳು ಹಾಗೂ ನಿರ್ಧಾರಗಳ ಕುರಿತು ಪ್ರತಿಕ್ರಿಯಿಸುತ್ತಾ, "ಯಾವುದೇ ಮಹತ್ವದ ಕಡತಗಳು ನನ್ನ ಗಮನಕ್ಕೆ ಬಾರದೆ ಹೋಗುವುದಿಲ್ಲ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅಥವಾ ಯಾರನ್ನು ಕೈಬಿಡಬೇಕು ಎಂಬ ಪ್ರಕ್ರಿಯೆಗಳು ನನ್ನ ಬಳಿಯೇ ಬರಬೇಕು. ಅಂತಹ ಯಾವುದೇ ಕಡತಗಳು ಅಥವಾ ಪ್ರಸ್ತಾವನೆಗಳು ಅಧಿಕೃತವಾಗಿ ನನ್ನ ಬಳಿಗೆ ಬಂದಾಗ, ಖಂಡಿತವಾಗಿಯೂ ನಿಮಗೆ ತಿಳಿಸುತ್ತೇನೆ" ಎಂದು ತಿಳಿಸಿದರು.
    1
    ಸಂಪುಟ ಬದಲಾವಣೆ ವಿಚಾರ: ನನಗೇನೂ ಗೊತ್ತಿಲ್ಲ, ಖರ್ಗೆ ಸ್ಪಷ್ಟನೆ.   
ಬೆಂಗಳೂರು: ಸಂಪುಟ ಪುನಾರಚನೆ ಅಥವಾ ಬದಲಾವಣೆ ಕುರಿತು ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈ ಬಗ್ಗೆ ತಮಗೆ ಏನಾದರೂ ತಿಳಿದಿದ್ದರೆ ಹೇಳಿ, ನನಗೇನೂ ಗೊತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಸಂಪುಟ ಬದಲಾವಣೆ ಹಾಗೂ ಮುಖ್ಯಮಂತ್ರಿಗಳ ದೆಹಲಿ ಭೇಟಿಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿಗಳ ದೆಹಲಿ ಭೇಟಿಯ ವಿಚಾರವಾಗಿ ಮಾತನಾಡುತ್ತಾ, "ನಾನು ಸದ್ಯ ಕಲಬುರಗಿಯಲ್ಲಿದ್ದೇನೆ. ಯಾರೇ ಆದರೂ ದೆಹಲಿಗೆ ತೆರಳುವುದಕ್ಕೂ ಮುನ್ನ ನನ್ನ ಬಳಿಯೇ ಬರಬೇಕಲ್ಲವೇ?" ಎಂದು ಪ್ರಶ್ನಿಸಿದರು.
ಮುಂದುವರಿದು ಮಾತನಾಡಿದ ಖರ್ಗೆ, ಸರ್ಕಾರದ ಪ್ರಮುಖ ಕಡತಗಳು ಹಾಗೂ ನಿರ್ಧಾರಗಳ ಕುರಿತು ಪ್ರತಿಕ್ರಿಯಿಸುತ್ತಾ, "ಯಾವುದೇ ಮಹತ್ವದ ಕಡತಗಳು ನನ್ನ ಗಮನಕ್ಕೆ ಬಾರದೆ ಹೋಗುವುದಿಲ್ಲ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅಥವಾ ಯಾರನ್ನು ಕೈಬಿಡಬೇಕು ಎಂಬ ಪ್ರಕ್ರಿಯೆಗಳು ನನ್ನ ಬಳಿಯೇ ಬರಬೇಕು. ಅಂತಹ ಯಾವುದೇ ಕಡತಗಳು ಅಥವಾ ಪ್ರಸ್ತಾವನೆಗಳು ಅಧಿಕೃತವಾಗಿ ನನ್ನ ಬಳಿಗೆ ಬಂದಾಗ, ಖಂಡಿತವಾಗಿಯೂ ನಿಮಗೆ ತಿಳಿಸುತ್ತೇನೆ" ಎಂದು ತಿಳಿಸಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    24 min ago
  • ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ | Veega News Kannada ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ
    1
    ಪ್ರಗತಿ ಪರಿಶೀಲನಾ ಸಭೆಯಲ್ಲಿ 
ಸಚಿವ ಕೃಷ್ಣ ಬೈರೇಗೌಡ ಗರಂ | Veega News Kannada 
ಪ್ರಗತಿ ಪರಿಶೀಲನಾ ಸಭೆಯಲ್ಲಿ 
ಸಚಿವ ಕೃಷ್ಣ ಬೈರೇಗೌಡ ಗರಂ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ city next News 24 7 ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ city next News 24 7
    1
    ಮತ್ತೆ ಸುಳ್ಳು ಹೇಳಿ 
 ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ 
city next News 24 7 
ಮತ್ತೆ ಸುಳ್ಳು ಹೇಳಿ 
ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ 
city next News 24 7
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.
    1
    ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು
    2
    ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ
ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು
ನೆಲಮಂಗಲ
ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ
ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ
ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ
ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು
ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ
ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ
ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    10 hrs ago
  • ಸಿಂಪಲ್ ಮ್ಯಾಚ್..
    1
    ಸಿಂಪಲ್ ಮ್ಯಾಚ್..
    user_JAYASIMHA.M.K{JAISEE}
    JAYASIMHA.M.K{JAISEE}
    Farmer Nelamangala, Bengaluru Rural•
    13 hrs ago
  • ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    1
    ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್! ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್!
    1
    ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ!
ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್!

ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ!
ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.