logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಹಿಷಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನಾಪತ್ತೆ: ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಸಮೀಪದ ಮಹಿಷಿ ನದಿಯಲ್ಲಿ ಗುರುವಾರ ಸಂಜೆ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ಘಟನೆ ಸಂಭವಿಸಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ಕತ್ರಿಗುಪ್ಪೆ ಮೂಲದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಶಿವಮೊಗ್ಗ ನಗರಕ್ಕೆ ಬಂದಿದ್ದ ಇವರು, ಬಳಿಕ ಗೂಗಲ್‌ನಲ್ಲಿ ಪ್ರವಾಸಿ ಸ್ಥಳವನ್ನು ಹುಡುಕಿಕೊಂಡು 2 ಟಿಟಿ ವಾಹನಗಳಲ್ಲಿ ಮಹಿಷಿಯ ಅಶ್ವಥನಾರಾಯಣ ದೇವಸ್ಥಾನದ ಬಳಿ ಬಂದಿದ್ದರು ಎನ್ನಲಾಗಿದೆ. ಸಂಜೆ ವೇಳೆ ದೇವಸ್ಥಾನದ ಹಿಂಭಾಗದ ನದಿಯ ಬಳಿ ಆಟವಾಡುತ್ತಿದ್ದಾಗ ಮೊದಲು ಒಬ್ಬಾತ ನೀರಿಗೆ ಇಳಿದಿದ್ದಾನೆ. ಆತ ನೀರಿನಲ್ಲಿ ಮುಳುಗುವುದನ್ನು ಕಂಡು ಹಿಡಿದು ಮೇಲೆತ್ತಲು ಹೋದ ಉಳಿದ ಮೂವರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ ಯಾಗಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದ ನಾಲ್ವರಿಗಾಗಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

11 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
11 hrs ago

ಮಹಿಷಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನಾಪತ್ತೆ: ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಸಮೀಪದ ಮಹಿಷಿ ನದಿಯಲ್ಲಿ ಗುರುವಾರ ಸಂಜೆ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ಘಟನೆ ಸಂಭವಿಸಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ಕತ್ರಿಗುಪ್ಪೆ ಮೂಲದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಶಿವಮೊಗ್ಗ ನಗರಕ್ಕೆ ಬಂದಿದ್ದ ಇವರು, ಬಳಿಕ ಗೂಗಲ್‌ನಲ್ಲಿ ಪ್ರವಾಸಿ ಸ್ಥಳವನ್ನು ಹುಡುಕಿಕೊಂಡು 2 ಟಿಟಿ ವಾಹನಗಳಲ್ಲಿ ಮಹಿಷಿಯ ಅಶ್ವಥನಾರಾಯಣ ದೇವಸ್ಥಾನದ ಬಳಿ ಬಂದಿದ್ದರು ಎನ್ನಲಾಗಿದೆ. ಸಂಜೆ ವೇಳೆ ದೇವಸ್ಥಾನದ ಹಿಂಭಾಗದ ನದಿಯ ಬಳಿ ಆಟವಾಡುತ್ತಿದ್ದಾಗ ಮೊದಲು ಒಬ್ಬಾತ ನೀರಿಗೆ ಇಳಿದಿದ್ದಾನೆ. ಆತ ನೀರಿನಲ್ಲಿ ಮುಳುಗುವುದನ್ನು ಕಂಡು ಹಿಡಿದು ಮೇಲೆತ್ತಲು ಹೋದ ಉಳಿದ ಮೂವರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ ಯಾಗಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದ ನಾಲ್ವರಿಗಾಗಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

More news from ಕರ್ನಾಟಕ and nearby areas
  • ಮಹಿಷಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನಾಪತ್ತೆ: ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಸಮೀಪದ ಮಹಿಷಿ ನದಿಯಲ್ಲಿ ಗುರುವಾರ ಸಂಜೆ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ಘಟನೆ ಸಂಭವಿಸಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ಕತ್ರಿಗುಪ್ಪೆ ಮೂಲದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಶಿವಮೊಗ್ಗ ನಗರಕ್ಕೆ ಬಂದಿದ್ದ ಇವರು, ಬಳಿಕ ಗೂಗಲ್‌ನಲ್ಲಿ ಪ್ರವಾಸಿ ಸ್ಥಳವನ್ನು ಹುಡುಕಿಕೊಂಡು 2 ಟಿಟಿ ವಾಹನಗಳಲ್ಲಿ ಮಹಿಷಿಯ ಅಶ್ವಥನಾರಾಯಣ ದೇವಸ್ಥಾನದ ಬಳಿ ಬಂದಿದ್ದರು ಎನ್ನಲಾಗಿದೆ. ಸಂಜೆ ವೇಳೆ ದೇವಸ್ಥಾನದ ಹಿಂಭಾಗದ ನದಿಯ ಬಳಿ ಆಟವಾಡುತ್ತಿದ್ದಾಗ ಮೊದಲು ಒಬ್ಬಾತ ನೀರಿಗೆ ಇಳಿದಿದ್ದಾನೆ. ಆತ ನೀರಿನಲ್ಲಿ ಮುಳುಗುವುದನ್ನು ಕಂಡು ಹಿಡಿದು ಮೇಲೆತ್ತಲು ಹೋದ ಉಳಿದ ಮೂವರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ ಯಾಗಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದ ನಾಲ್ವರಿಗಾಗಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
    1
    ಮಹಿಷಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನಾಪತ್ತೆ: 
ಎಸ್ ಪಿ ಹೇಳಿದ್ದೇನು..?
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಸಮೀಪದ ಮಹಿಷಿ ನದಿಯಲ್ಲಿ ಗುರುವಾರ ಸಂಜೆ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ಘಟನೆ ಸಂಭವಿಸಿದೆ.
ನಾಪತ್ತೆಯಾದವರನ್ನು ಬೆಂಗಳೂರಿನ ಕತ್ರಿಗುಪ್ಪೆ ಮೂಲದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ಎಂದು ಗುರುತಿಸಲಾಗಿದೆ.
ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಶಿವಮೊಗ್ಗ ನಗರಕ್ಕೆ ಬಂದಿದ್ದ ಇವರು, ಬಳಿಕ ಗೂಗಲ್‌ನಲ್ಲಿ ಪ್ರವಾಸಿ ಸ್ಥಳವನ್ನು ಹುಡುಕಿಕೊಂಡು 2 ಟಿಟಿ ವಾಹನಗಳಲ್ಲಿ ಮಹಿಷಿಯ ಅಶ್ವಥನಾರಾಯಣ ದೇವಸ್ಥಾನದ ಬಳಿ ಬಂದಿದ್ದರು ಎನ್ನಲಾಗಿದೆ. ಸಂಜೆ ವೇಳೆ ದೇವಸ್ಥಾನದ ಹಿಂಭಾಗದ ನದಿಯ ಬಳಿ ಆಟವಾಡುತ್ತಿದ್ದಾಗ ಮೊದಲು ಒಬ್ಬಾತ ನೀರಿಗೆ ಇಳಿದಿದ್ದಾನೆ. ಆತ ನೀರಿನಲ್ಲಿ ಮುಳುಗುವುದನ್ನು ಕಂಡು ಹಿಡಿದು ಮೇಲೆತ್ತಲು ಹೋದ ಉಳಿದ ಮೂವರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ ಯಾಗಿದ್ದಾರೆ.
ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದ ನಾಲ್ವರಿಗಾಗಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    11 hrs ago
  • ಸಂವಿಧಾನ ಸರ್ವರಿಗೂ ಸಮಾನತೆಯ ಹಕ್ಕು ಕಲ್ಪಿಸಿದೆ ತರೀಕೆರೆ: ನ. 26: ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು. ಪಟ್ಟಣದ ಪುರಸಭೆಯಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ವಿವಿಧ ಜಾತಿ, ಧರ್ಮ ಹಾಗೂ ಭಾಷೆಗಳನ್ನು ಹೊಂದಿರುವ ಭಾರತ ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಿರುವ ಸಂವಿಧಾನವನ್ನು ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅವರ ಕೊಡುಗೆ ದೇಶದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿದೆ ಎಂದರು. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೌರಕಾರ್ಮಿಕರ ಜೀವನಮಟ್ಟ ಸುಧಾರಣೆಯಾಗಿದ್ದು, ಸರ್ಕಾರದಿಂದ ವಿವಿಧ ಸೌಲಭ್ಯಗಳು ದೊರೆಯುತ್ತಿವೆ ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಹರೀಶ್ ಎಂ.ಎನ್. ಮಾತನಾಡಿ, ಸಂವಿಧಾನದ ಆಶಯದಂತೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿರಲು ಸಂವಿಧಾನವೇ ಆಧಾರವಾಗಿದೆ. ನಮ್ಮೆಲ್ಲರ ಹಕ್ಕುಗಳು ಮತ್ತು ಕರ್ತವ್ಯಗಳಿಗೆ ಮಾರ್ಗದರ್ಶಿಯಾಗಿರುವ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರರಾದ ತಹೇರಾ ತಸ್ನಿಮ್, ಕಚೇರಿ ವ್ಯವಸ್ಥಾಪಕ ಪರಶುರಾಮಪ್ಪ ಎಚ್., ಸಮುದಾಯ ಸಂಘಟನಾಧಿಕಾರಿ ಪ್ರಸನ್ನ ಕುಮಾರ್, ಕಂದಾಯ ಅಧಿಕಾರಿ ಯೋಗೀಶ್ ಡಿ.ಎಲ್., ಹಿರಿಯ ಆರೋಗ್ಯ ನಿರೀಕ್ಷಕ ಪರಮೇಶ್, ಸಂಪತ್, ಲಿಂಗರಾಜು ಕೆ., ಅಂತೋನಿ ಕ್ರೂಸ್, ಪ್ರಕಾಶ್, ಅನಿತಾ, ಕಣ್ಣನ್, ಕಿರಣ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    3
    ಸಂವಿಧಾನ ಸರ್ವರಿಗೂ ಸಮಾನತೆಯ ಹಕ್ಕು ಕಲ್ಪಿಸಿದೆ

ತರೀಕೆರೆ: ನ. 26:
 ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ವಿವಿಧ ಜಾತಿ, ಧರ್ಮ ಹಾಗೂ ಭಾಷೆಗಳನ್ನು ಹೊಂದಿರುವ ಭಾರತ ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಿರುವ ಸಂವಿಧಾನವನ್ನು ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅವರ ಕೊಡುಗೆ ದೇಶದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿದೆ ಎಂದರು.

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೌರಕಾರ್ಮಿಕರ ಜೀವನಮಟ್ಟ ಸುಧಾರಣೆಯಾಗಿದ್ದು, ಸರ್ಕಾರದಿಂದ ವಿವಿಧ ಸೌಲಭ್ಯಗಳು ದೊರೆಯುತ್ತಿವೆ ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಹರೀಶ್ ಎಂ.ಎನ್. ಮಾತನಾಡಿ, ಸಂವಿಧಾನದ ಆಶಯದಂತೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿರಲು ಸಂವಿಧಾನವೇ ಆಧಾರವಾಗಿದೆ. ನಮ್ಮೆಲ್ಲರ ಹಕ್ಕುಗಳು ಮತ್ತು ಕರ್ತವ್ಯಗಳಿಗೆ ಮಾರ್ಗದರ್ಶಿಯಾಗಿರುವ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರರಾದ ತಹೇರಾ ತಸ್ನಿಮ್, ಕಚೇರಿ ವ್ಯವಸ್ಥಾಪಕ ಪರಶುರಾಮಪ್ಪ ಎಚ್., ಸಮುದಾಯ ಸಂಘಟನಾಧಿಕಾರಿ ಪ್ರಸನ್ನ ಕುಮಾರ್, ಕಂದಾಯ ಅಧಿಕಾರಿ ಯೋಗೀಶ್ ಡಿ.ಎಲ್., ಹಿರಿಯ ಆರೋಗ್ಯ ನಿರೀಕ್ಷಕ ಪರಮೇಶ್, ಸಂಪತ್, ಲಿಂಗರಾಜು ಕೆ., ಅಂತೋನಿ ಕ್ರೂಸ್, ಪ್ರಕಾಶ್, ಅನಿತಾ, ಕಣ್ಣನ್, ಕಿರಣ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    user_ಪ್ರದೀಪ್ ಹೆಚ್ ಈ. ತರೀಕೆರೆ
    ಪ್ರದೀಪ್ ಹೆಚ್ ಈ. ತರೀಕೆರೆ
    ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
    12 hrs ago
  • NH-69 ರಸ್ತೆ ಬದಿಯಲ್ಲಿ ಅಡಿಕೆ ಸಿಪ್ಪೆಗೆ ಬೆಂಕಿ – ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕೃತ್ಯ! ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕೋರನಹಳ್ಳಿ ಮತ್ತು ಚಟ್ಟನಹಳ್ಳಿ ಗ್ರಾಮಗಳ ಸಮೀಪ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ NH-69ರ ರಸ್ತೆ ಬದಿಯಲ್ಲಿ ಅಡಿಕೆ ಸಿಪ್ಪೆ ಸುರಿದು ಬೆಂಕಿ ಹಚ್ಚುತ್ತಿರುವ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಅಡಿಕೆ ಸಿಪ್ಪೆ ಸುಡುವುದರಿಂದ ಹೊರಬರುವ ದಟ್ಟ ಹೊಗೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದಲ್ಲದೆ, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೂ ತೊಂದರೆಯಾಗುವ ಸಾಧ್ಯತೆಯಿದೆ. ರಸ್ತೆ ಬದಿಯಲ್ಲಿ ಕಸ ಮತ್ತು ಅಡಿಕೆ ಸಿಪ್ಪೆ ಸುರಿದು ಬೆಂಕಿ ಹಚ್ಚುವವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಸಾರ್ವಜನಿಕರ ಆಗ್ರಹ: NH-69 ರಸ್ತೆ ಬದಿಯಲ್ಲಿ ಅಡಿಕೆ ಸಿಪ್ಪೆ ಸುರಿಯುವುದನ್ನು ತಡೆಯಬೇಕು. ಬೆಂಕಿ ಹಚ್ಚುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು. 📢 ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲಿ ಎಂಬುದು ಗ್ರಾಮಸ್ಥರ ಒತ್ತಾಯ.
    1
    NH-69 ರಸ್ತೆ ಬದಿಯಲ್ಲಿ ಅಡಿಕೆ ಸಿಪ್ಪೆಗೆ ಬೆಂಕಿ – ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕೃತ್ಯ!
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕೋರನಹಳ್ಳಿ ಮತ್ತು ಚಟ್ಟನಹಳ್ಳಿ ಗ್ರಾಮಗಳ ಸಮೀಪ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ NH-69ರ ರಸ್ತೆ ಬದಿಯಲ್ಲಿ ಅಡಿಕೆ ಸಿಪ್ಪೆ ಸುರಿದು ಬೆಂಕಿ ಹಚ್ಚುತ್ತಿರುವ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಅಡಿಕೆ ಸಿಪ್ಪೆ ಸುಡುವುದರಿಂದ ಹೊರಬರುವ ದಟ್ಟ ಹೊಗೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದಲ್ಲದೆ, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೂ ತೊಂದರೆಯಾಗುವ ಸಾಧ್ಯತೆಯಿದೆ.
ರಸ್ತೆ ಬದಿಯಲ್ಲಿ ಕಸ ಮತ್ತು ಅಡಿಕೆ ಸಿಪ್ಪೆ ಸುರಿದು ಬೆಂಕಿ ಹಚ್ಚುವವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಸಾರ್ವಜನಿಕರ ಆಗ್ರಹ:
NH-69 ರಸ್ತೆ ಬದಿಯಲ್ಲಿ ಅಡಿಕೆ ಸಿಪ್ಪೆ ಸುರಿಯುವುದನ್ನು ತಡೆಯಬೇಕು.
ಬೆಂಕಿ ಹಚ್ಚುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು.
ರಸ್ತೆ ಬದಿಯ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು.
📢 ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲಿ ಎಂಬುದು ಗ್ರಾಮಸ್ಥರ ಒತ್ತಾಯ.
    user_ಸುನಿಲ್ ಕುಮಾರ್ ಬಿ ಎಸ್
    ಸುನಿಲ್ ಕುಮಾರ್ ಬಿ ಎಸ್
    Electrician ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
    14 hrs ago
  • ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ #ಆಶಾ #protest #ASHA #AIUTUC ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ #ಆಶಾ #protest #ASHA #AIUTUC
    1
    ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ  #ಆಶಾ #protest #ASHA #AIUTUC
ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ  #ಆಶಾ #protest #ASHA #AIUTUC
    user_ಸುರೇಶ್ ಕೆ ಆರ್
    ಸುರೇಶ್ ಕೆ ಆರ್
    Department of Social Services ಚನ್ನಗಿರಿ, ದಾವಣಗೆರೆ, ಕರ್ನಾಟಕ•
    13 hrs ago
  • # ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ನ.30ರಂದು ಬೆಂಗಳೂರಿನಲ್ಲಿ ರೈತಾಕ್ರೋಶ ಆಂದೋಲನ **ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಲು ಭಾರತೀಯ ಕಿಸಾನ್ ಸಂಘದ ಕರೆ** **ಚನ್ನಗಿರಿ, ನ.26:** ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ‘ರೈತಾಕ್ರೋಶ ಆಂದೋಲನ’ ಹಮ್ಮಿಕೊಳ್ಳಲಾಗಿದ್ದು, ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಸೇರಿದಂತೆ ಸಮಸ್ತ ರೈತ ಸಮುದಾಯ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಭು ಬಿ. ಗೊಲ್ಲರಹಳ್ಳಿ ಮನವಿ ಮಾಡಿದರು. ಗುರುವಾರ ಚನ್ನಗಿರಿ ಪಟ್ಟಣದ ಪತ್ರಿಕಾ ಭವನದಲ್ಲಿ ಭಾರತೀಯ ಕಿಸಾನ್ ಸಂಘದ ಚನ್ನಗಿರಿ ತಾಲ್ಲೂಕು ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಹಾಲಿನ ಖರೀದಿ ಬೆಲೆ ಮತ್ತು ಹೈನುಗಾರಿಕೆಗೆ ಸೂಕ್ತ ಪ್ರೋತ್ಸಾಹಧನ, ಕೃಷಿ ಪಂಪ್‌ಸೆಟ್‌ಗಳ ದುರಸ್ತಿಗೆ ಹಳೆಯ ದರದ ವ್ಯವಸ್ಥೆ ಮರುಜಾರಿ, ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿಗಳ ಹಾವಳಿ ನಿಯಂತ್ರಣ ಹಾಗೂ ರೈತರಿಗೆ ಹಗಲಿನ ವೇಳೆಯೇ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು. ಕಂದಾಯ ಇಲಾಖೆಯಲ್ಲಿನ ಪಹಣಿ, ಭೂಮಾಪನ, ಪೋಡಿ ಮತ್ತು ಭೂದಾಖಲೆಗಳ ದೋಷಗಳನ್ನು ತ್ವರಿತವಾಗಿ ಸರಿಪಡಿಸಬೇಕು. ರೈತರ ಸಾಲ ಮತ್ತು ಬೆಳೆಸಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಂಬಲ ಬೆಲೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಾರದರ್ಶಕತೆ ಹಾಗೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರಕಿಸಬೇಕು ಎಂದು ಒತ್ತಾಯಿಸಿದರು. ಇದಲ್ಲದೆ, ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನ, ಕೆರೆಗಳ ಹೂಳೆತ್ತುವಿಕೆ, ಪಶ್ಚಿಮ ಘಟ್ಟದ ರೈತರ ಸಮಸ್ಯೆಗಳಿಗೆ ಪರಿಹಾರ, ರೈತರ ಭೂಹಕ್ಕುಗಳ ರಕ್ಷಣೆ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು. **“ಕೃಷಿ ಉಳಿದರೆ ದೇಶದ ಆಹಾರ ಭದ್ರತೆ ಉಳಿಯುತ್ತದೆ. ರೈತರ ನ್ಯಾಯಯುತ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು”** ಎಂದು ಕರೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ಡಿ.ಎಂ. ಮಂಜುನಾಥ್, ತಾಲ್ಲೂಕು ಕಾರ್ಯದರ್ಶಿ ಜಿ.ಸಿ. ಕುಮಾರಸ್ವಾಮಿ, ತಾಲ್ಲೂಕು ಕಾರ್ಯಕಾರಿಣಿ ಸದಸ್ಯ ಮಹಾಬಲೇಶ್ ಹಾಗೂ ಪ್ರದೀಪ್ ಉಪಸ್ಥಿತರಿದ್ದರು. ವರದಿ :ದೇವರಾಜ್ ಕೆ ನೆಲ್ಲಿಹಂಕಲು ದಾವಣಗೆರೆ
    4
    # ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ನ.30ರಂದು ಬೆಂಗಳೂರಿನಲ್ಲಿ ರೈತಾಕ್ರೋಶ ಆಂದೋಲನ
 
**ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಲು ಭಾರತೀಯ ಕಿಸಾನ್ ಸಂಘದ ಕರೆ**
**ಚನ್ನಗಿರಿ, ನ.26:** ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ‘ರೈತಾಕ್ರೋಶ ಆಂದೋಲನ’ ಹಮ್ಮಿಕೊಳ್ಳಲಾಗಿದ್ದು, ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಸೇರಿದಂತೆ ಸಮಸ್ತ ರೈತ ಸಮುದಾಯ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಭು ಬಿ. ಗೊಲ್ಲರಹಳ್ಳಿ ಮನವಿ ಮಾಡಿದರು.
ಗುರುವಾರ ಚನ್ನಗಿರಿ ಪಟ್ಟಣದ ಪತ್ರಿಕಾ ಭವನದಲ್ಲಿ ಭಾರತೀಯ ಕಿಸಾನ್ ಸಂಘದ ಚನ್ನಗಿರಿ ತಾಲ್ಲೂಕು ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಹಾಲಿನ ಖರೀದಿ ಬೆಲೆ ಮತ್ತು ಹೈನುಗಾರಿಕೆಗೆ ಸೂಕ್ತ ಪ್ರೋತ್ಸಾಹಧನ, ಕೃಷಿ ಪಂಪ್‌ಸೆಟ್‌ಗಳ ದುರಸ್ತಿಗೆ ಹಳೆಯ ದರದ ವ್ಯವಸ್ಥೆ ಮರುಜಾರಿ, ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿಗಳ ಹಾವಳಿ ನಿಯಂತ್ರಣ ಹಾಗೂ ರೈತರಿಗೆ ಹಗಲಿನ ವೇಳೆಯೇ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಕಂದಾಯ ಇಲಾಖೆಯಲ್ಲಿನ ಪಹಣಿ, ಭೂಮಾಪನ, ಪೋಡಿ ಮತ್ತು ಭೂದಾಖಲೆಗಳ ದೋಷಗಳನ್ನು ತ್ವರಿತವಾಗಿ ಸರಿಪಡಿಸಬೇಕು. ರೈತರ ಸಾಲ ಮತ್ತು ಬೆಳೆಸಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಂಬಲ ಬೆಲೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಾರದರ್ಶಕತೆ ಹಾಗೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರಕಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನ, ಕೆರೆಗಳ ಹೂಳೆತ್ತುವಿಕೆ, ಪಶ್ಚಿಮ ಘಟ್ಟದ ರೈತರ ಸಮಸ್ಯೆಗಳಿಗೆ ಪರಿಹಾರ, ರೈತರ ಭೂಹಕ್ಕುಗಳ ರಕ್ಷಣೆ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.
**“ಕೃಷಿ ಉಳಿದರೆ ದೇಶದ ಆಹಾರ ಭದ್ರತೆ ಉಳಿಯುತ್ತದೆ. ರೈತರ ನ್ಯಾಯಯುತ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು”** ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ಡಿ.ಎಂ. ಮಂಜುನಾಥ್, ತಾಲ್ಲೂಕು ಕಾರ್ಯದರ್ಶಿ ಜಿ.ಸಿ. ಕುಮಾರಸ್ವಾಮಿ, ತಾಲ್ಲೂಕು ಕಾರ್ಯಕಾರಿಣಿ ಸದಸ್ಯ ಮಹಾಬಲೇಶ್ ಹಾಗೂ ಪ್ರದೀಪ್ ಉಪಸ್ಥಿತರಿದ್ದರು.
ವರದಿ  :ದೇವರಾಜ್ ಕೆ ನೆಲ್ಲಿಹಂಕಲು ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    13 hrs ago
  • ಶಿಕಾರಿಪುರ: ಜಿಲ್ಲಾ ಕೇಂದ್ರಗಳಲ್ಲಿ ಇಲಾಖಾ ವತಿಯಿಂದ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ, ಕೃಷ್ಣಪ್ಪ ಬಣ ) ತಾಲೂಕು ಸಂಚಾಲಕರಾದ ಜಗದೀಶ್ ಚುರ್ಚಿಗುಂಡಿ. ಶಿಕಾರಿಪುರ: ಸರ್ಕಾರದ ಆದೇಶದಂತೆ ಪ್ರತಿ ವರ್ಷ 2026-27ನೇ ಸಾಲಿನಲ್ಲಿಯೂ ಸಹ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಹಭಾಗಿತ್ವದಲ್ಲಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ "ಯುವಸಂಸತ್ತು ಸಭೆಯನ್ನು ಆಯೋಜಿಸಲು ಉಲ್ಲೇಖದಂತೆ ಆದೇಶಿಸಲಾಗಿರುತ್ತದೆ. ಅದರಂತೆ, ಪ್ರಸಕ್ತ 2026-27ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಮೈಸೂರಿನಲ್ಲಿ ದಿನಾಂಕ: 26.11.2026 ರಂದು ನಡೆಸಲು ಉದ್ದೇಶಿಸಲಾಗಿರುತ್ತದೆ. ಅದೇ ದಿನದಂದು ಬೆಂಗಳೂರಿನಲ್ಲಿ ವಿಧಾನ ಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯರುಗಳು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಪ್ರಸಕ್ತ ವರ್ಷ ನವೆಂಬರ್ 26, ರಂದು "ಸಂವಿಧಾನ ದಿನ' ವನ್ನು ಆಚರಿಸುವಂತೆ ಹಾಗೂ ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ ರಾಷ್ಟ್ರೀಯ ಆಚರಣೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವುದು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಕಚೇರಿಗಳು, ವಿದ್ಯಾರ್ಥಿನಿಲಯಗಳು/ವಸತಿ ಶಾಲೆಗಳಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ದಿನಾಂಕ: 26.11.2026 ರಂದು ಸಾಮೂಹಿಕವಾಗಿ ಓದುವುದರ ಮೂಲಕ ಆಯೋಜಿಸಿ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕೆಂದು ಪ್ರತಿಭಟಿಸಲಾಯಿತು ಹಾಗೂ ಸಮಾಜ ಕಲ್ಯಾಣ ಇಲಾಖೆ ತಹಶೀಲ್ದಾರ್ ರವರಿಗೆ ಪ್ರತಿಭಟನಾಕಾರರು ಮುಂದಿನ ದಿನದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಯಾರು ಈ ಸಂವಿಧಾನಕ್ಕೆ ಅಗೌರವವರನ್ನು ತೋರಿಸಿದ್ದಾರೆ ಎಂಬುದನ್ನು ಕುರಿತು ಅಂತ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಮಧು, ಮಂಜುನಾಥ, ಪರಮೇಶ ,ಲಕ್ಷ್ಮಣ, ಹಾಗೂ ಹಲವು ಮುಖಂಡರು ಭಾಗವಹಿಸಿದ್ದರು.
    4
    ಶಿಕಾರಿಪುರ: ಜಿಲ್ಲಾ ಕೇಂದ್ರಗಳಲ್ಲಿ ಇಲಾಖಾ ವತಿಯಿಂದ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ, ಕೃಷ್ಣಪ್ಪ ಬಣ ) ತಾಲೂಕು ಸಂಚಾಲಕರಾದ ಜಗದೀಶ್  ಚುರ್ಚಿಗುಂಡಿ.
ಶಿಕಾರಿಪುರ: ಸರ್ಕಾರದ ಆದೇಶದಂತೆ
ಪ್ರತಿ ವರ್ಷ 2026-27ನೇ ಸಾಲಿನಲ್ಲಿಯೂ ಸಹ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಹಭಾಗಿತ್ವದಲ್ಲಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ "ಯುವಸಂಸತ್ತು ಸಭೆಯನ್ನು ಆಯೋಜಿಸಲು ಉಲ್ಲೇಖದಂತೆ ಆದೇಶಿಸಲಾಗಿರುತ್ತದೆ.
ಅದರಂತೆ, ಪ್ರಸಕ್ತ 2026-27ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಮೈಸೂರಿನಲ್ಲಿ ದಿನಾಂಕ: 26.11.2026 ರಂದು ನಡೆಸಲು ಉದ್ದೇಶಿಸಲಾಗಿರುತ್ತದೆ. ಅದೇ ದಿನದಂದು ಬೆಂಗಳೂರಿನಲ್ಲಿ ವಿಧಾನ ಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯರುಗಳು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.
ಪ್ರಸಕ್ತ ವರ್ಷ ನವೆಂಬರ್ 26, ರಂದು "ಸಂವಿಧಾನ ದಿನ' ವನ್ನು ಆಚರಿಸುವಂತೆ ಹಾಗೂ ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ ರಾಷ್ಟ್ರೀಯ ಆಚರಣೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವುದು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಕಚೇರಿಗಳು, ವಿದ್ಯಾರ್ಥಿನಿಲಯಗಳು/ವಸತಿ ಶಾಲೆಗಳಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ದಿನಾಂಕ: 26.11.2026 ರಂದು ಸಾಮೂಹಿಕವಾಗಿ ಓದುವುದರ ಮೂಲಕ ಆಯೋಜಿಸಿ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕೆಂದು ಪ್ರತಿಭಟಿಸಲಾಯಿತು ಹಾಗೂ ಸಮಾಜ ಕಲ್ಯಾಣ ಇಲಾಖೆ ತಹಶೀಲ್ದಾರ್ ರವರಿಗೆ ಪ್ರತಿಭಟನಾಕಾರರು ಮುಂದಿನ ದಿನದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಯಾರು ಈ ಸಂವಿಧಾನಕ್ಕೆ ಅಗೌರವವರನ್ನು ತೋರಿಸಿದ್ದಾರೆ ಎಂಬುದನ್ನು ಕುರಿತು ಅಂತ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ 
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಮಧು, ಮಂಜುನಾಥ, ಪರಮೇಶ ,ಲಕ್ಷ್ಮಣ, ಹಾಗೂ ಹಲವು ಮುಖಂಡರು ಭಾಗವಹಿಸಿದ್ದರು.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    19 hrs ago
  • ### ಹೆಚ್ಚುವರಿ ಹಣ ವಸೂಲಿ ಆರೋಪ: ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ವಜಾ **ಜಗಳೂರು:** ವಿವಿಧ ಸರ್ಕಾರಿ ಅರ್ಜಿಗಳ ಸಲ್ಲಿಕೆಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್‌ನನ್ನು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ವಜಾಗೊಳಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರು ಹದ್ದುಬಸ್ತು, ಮೋಜಣಿ ಸೇರಿದಂತೆ ವಿವಿಧ ಅರ್ಜಿಗಳ ಪ್ರಕ್ರಿಯೆಗಾಗಿ ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ರೈತರು ಹಾಗೂ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರಿಂದಲೂ ಗಂಭೀರ ದೂರುಗಳು ಬಂದಿದ್ದವು. ಪ್ರತಿಭಟನೆ ಹಾಗೂ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಹೆಚ್ಚುವರಿ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಕ್ರಮ ಕೈಗೊಂಡಿದೆ. ಈ ಕ್ರಮದಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಅನಗತ್ಯವಾಗಿ ಹೆಚ್ಚುವರಿ ಹಣ ವಸೂಲಿ ಮಾಡುವ ಸಿಬ್ಬಂದಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದಂತಾಗಿದೆ.
    1
    ### ಹೆಚ್ಚುವರಿ ಹಣ ವಸೂಲಿ ಆರೋಪ: ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ವಜಾ
**ಜಗಳೂರು:** ವಿವಿಧ ಸರ್ಕಾರಿ ಅರ್ಜಿಗಳ ಸಲ್ಲಿಕೆಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್‌ನನ್ನು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ವಜಾಗೊಳಿಸಿದ್ದಾರೆ.
ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರು ಹದ್ದುಬಸ್ತು, ಮೋಜಣಿ ಸೇರಿದಂತೆ ವಿವಿಧ ಅರ್ಜಿಗಳ ಪ್ರಕ್ರಿಯೆಗಾಗಿ ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ರೈತರು ಹಾಗೂ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರಿಂದಲೂ ಗಂಭೀರ ದೂರುಗಳು ಬಂದಿದ್ದವು.
ಪ್ರತಿಭಟನೆ ಹಾಗೂ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಹೆಚ್ಚುವರಿ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಕ್ರಮ ಕೈಗೊಂಡಿದೆ.
ಈ ಕ್ರಮದಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಅನಗತ್ಯವಾಗಿ ಹೆಚ್ಚುವರಿ ಹಣ ವಸೂಲಿ ಮಾಡುವ ಸಿಬ್ಬಂದಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದಂತಾಗಿದೆ.
    user_Chaithra bk
    Chaithra bk
    Local News Reporter ದಾವಣಗೆರೆ, ದಾವಣಗೆರೆ, ಕರ್ನಾಟಕ•
    9 hrs ago
  • ಸ್ನೇಹಜೀವಿ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ: ಶಾಲಾ ಮಕ್ಕಳಿಗೆ ಸಲಕರಣೆ ವಿತರಣೆ ಭದ್ರಾವತಿ: ನಗರದ ಜನ್ನಾಪುರ ಜಯಶ್ರೀ ಸರ್ಕಲ್ ನಲ್ಲಿನ ವಿಶ್ವೇಶ್ವರಯ್ಯ ಆಟೋ ಚಾಲಕರ ಸಂಘ ಮತ್ತು ಸ್ನೇಹಜೀವಿ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಇದೆ ಸಂದರ್ಭದಲ್ಲಿ ಸ್ನೇಹಜೀವಿ ಬಳಗದ ಪ್ರಮುಖ ಪೊಲೀಸ್ ಉಮೇಶ್ ಮಾರ್ಗದರ್ಶನದಲ್ಲಿ ಸುಹಾಸ್ ಗೌಡ ರವರಿಂದ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಜಾಮಿಟ್ರಿ ಬಾಕ್ಸ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ನಂತರ ಅನ್ನದಾನ ಏರ್ಪಡಿಸಲಾಗಿತ್ತು. ನೂರಾರು ಕನ್ನಡ ಅಭಿಮಾನಿಗಳು ಭಾಗವಹಿಸಿದ್ದರು.
    1
    ಸ್ನೇಹಜೀವಿ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ: ಶಾಲಾ ಮಕ್ಕಳಿಗೆ ಸಲಕರಣೆ ವಿತರಣೆ
ಭದ್ರಾವತಿ: ನಗರದ ಜನ್ನಾಪುರ ಜಯಶ್ರೀ  ಸರ್ಕಲ್ ನಲ್ಲಿನ ವಿಶ್ವೇಶ್ವರಯ್ಯ ಆಟೋ ಚಾಲಕರ ಸಂಘ ಮತ್ತು ಸ್ನೇಹಜೀವಿ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಸ್ನೇಹಜೀವಿ ಬಳಗದ ಪ್ರಮುಖ ಪೊಲೀಸ್ ಉಮೇಶ್ ಮಾರ್ಗದರ್ಶನದಲ್ಲಿ ಸುಹಾಸ್ ಗೌಡ ರವರಿಂದ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಜಾಮಿಟ್ರಿ ಬಾಕ್ಸ್ ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ನಂತರ ಅನ್ನದಾನ ಏರ್ಪಡಿಸಲಾಗಿತ್ತು. ನೂರಾರು ಕನ್ನಡ ಅಭಿಮಾನಿಗಳು ಭಾಗವಹಿಸಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.