logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ ಕೂಡ್ಲಿಗಿ: ಆಗಷ್ಟ-15ರಂದು ನಡೆಯುವ 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶನಿವಾರ ನಡೆಯಿತು. ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ವಿ.ಕೆ ನೇತ್ರಾವತಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನ ಮಾಡುವ ಮುಖೇನ ಅವರಿಗೆ ಗೌರವ ಸಲ್ಲಿಸೋಣ. ಪ್ರೌಢಶಾಲಾ ಹಾಗೂ ಕಾಲೇಜು ಮಟ್ಟದ ವಿಧ್ಯಾರ್ಥಿಗಳಿಗೆ ದೇಶ ಭಕ್ತಿ ಹುಟ್ಟಿಸುವ ಹಾಗೂ ದೇಶದ ಪ್ರಗತಿ ವಿಷಯವಾಗಿ ಭಾಷಣ ಹಾಗೂ ಪ್ರಭಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಮೊದಲು ಪುಷ್ಪ ನಮನ ಸಲ್ಲಿಸಿ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜಾ ವಂದನೆ ಕಾರ್ಯಕ್ರಮ, ಆಯ್ದಾ ಹತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಿದ್ದು ಸುಗಮ ಸಂಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಇಒ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಪಿಎಸ್ಐ ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಗುನ್ನಳ್ಳಿ ರಾಘವೇಂದ್ರ, ಕಾಟೇರ ಹಾಲೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

2 hrs ago
user_ಹೂಡೇಂ ಮಂಜುನಾಥ
ಹೂಡೇಂ ಮಂಜುನಾಥ
Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
2 hrs ago

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ ಕೂಡ್ಲಿಗಿ: ಆಗಷ್ಟ-15ರಂದು ನಡೆಯುವ 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶನಿವಾರ ನಡೆಯಿತು. ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ವಿ.ಕೆ ನೇತ್ರಾವತಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನ ಮಾಡುವ ಮುಖೇನ ಅವರಿಗೆ ಗೌರವ ಸಲ್ಲಿಸೋಣ. ಪ್ರೌಢಶಾಲಾ ಹಾಗೂ ಕಾಲೇಜು ಮಟ್ಟದ ವಿಧ್ಯಾರ್ಥಿಗಳಿಗೆ ದೇಶ ಭಕ್ತಿ ಹುಟ್ಟಿಸುವ ಹಾಗೂ ದೇಶದ ಪ್ರಗತಿ ವಿಷಯವಾಗಿ ಭಾಷಣ ಹಾಗೂ ಪ್ರಭಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಮೊದಲು ಪುಷ್ಪ ನಮನ ಸಲ್ಲಿಸಿ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜಾ ವಂದನೆ ಕಾರ್ಯಕ್ರಮ, ಆಯ್ದಾ ಹತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಿದ್ದು ಸುಗಮ ಸಂಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಇಒ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಪಿಎಸ್ಐ ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಗುನ್ನಳ್ಳಿ ರಾಘವೇಂದ್ರ, ಕಾಟೇರ ಹಾಲೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

More news from Karnataka and nearby areas
  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    2
    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ
ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:*
***********"
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.
ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.
ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    3 hrs ago
  • ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌ ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    1
    ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ
ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌
ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು
ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    1
    ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.

ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ  ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ ..
ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ  ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ   ತಕ್ಷಣ  ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು
ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.
ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ. ವರದಿ:- ಪವಾಡೆಪ್ಪ ಚೌಡ್ಕಿ ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. *ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ ಸಾರ್ವಜನಿಕರ ಆಕ್ರೋಶ* ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ ಹಾಳಾಗಿ ಒಡೆದು ಹೋಗಿವೆ. ಈ ಆಸ್ಪತ್ರೆಯ ಸ್ಥಿತ ಇದೇ ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. *ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ. *ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು. *ಕೇಂದ್ರ ಬಸ್ ನಿಲ್ದಾಣದಿಂದ 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಸಾರಿಗೆ ವ್ಯವಸ್ಥೆಗೆ ಆಗ್ರಹ.* ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ. *ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ರೋಗಿಗಳು ಅವಳನ್ನು ತೊಂಡಿಕೊಂಡಿದ್ದಾರೆ. *ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ. ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು. ಬೈಟ್:- ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. *ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ* -------------------------------- ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ. *ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    2
    ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ.
ವರದಿ:- ಪವಾಡೆಪ್ಪ ಚೌಡ್ಕಿ
ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ   ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
*ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ  ಸಾರ್ವಜನಿಕರ ಆಕ್ರೋಶ* 
ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ  ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ  ಹಾಳಾಗಿ ಒಡೆದು ಹೋಗಿವೆ.
ಈ ಆಸ್ಪತ್ರೆಯ ಸ್ಥಿತ ಇದೇ  ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು  ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
*ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* 
ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ,  ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ.
*ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* 
ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು   ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು.
*ಕೇಂದ್ರ ಬಸ್ ನಿಲ್ದಾಣದಿಂದ  2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ  ಸಾರಿಗೆ ವ್ಯವಸ್ಥೆಗೆ ಆಗ್ರಹ.* 
ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು  ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ  ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ  ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ.
*ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* 
ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ  ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು  ಆಸ್ಪತ್ರೆಗೆ ಬಂದ ರೋಗಿಗಳು  ಅವಳನ್ನು ತೊಂಡಿಕೊಂಡಿದ್ದಾರೆ.
*ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* 
ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು  ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ.
ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು  ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ  ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ.  ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ  ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು.
ಬೈಟ್:-  ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. 
ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
*ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ  ದೊಡ್ಡನಗೌಡ ಪಾಟೀಲ* 
--------------------------------
ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ  ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ  ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ.
*ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. #DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka
    1
    ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ
ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
#DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka
    user_AsnNews24Kannada
    AsnNews24Kannada
    Local News Reporter Kushtagi, Koppal•
    11 hrs ago
  • ಪ್ರಧಾನಿ ಶ್ರೀ Narendra Modi ಅವರು ವಿವೇಕ ಸ್ಮಾರಕದಲ್ಲಿ ಯೋಗ ಮತ್ತು ಧ್ಯಾನ ಸಭಾಂಗಣ ಹಾಗೂ ಪ್ರದರ್ಶನ ಸಭಾಂಗಣವನ್ನು ಉದ್ಘಾಟಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಚಿತ್ರಪಟದ ಮುಂದೆ ಶ್ರದ್ಧಾ-ಭಕ್ತಿಯಿಂದ ಧ್ಯಾನ ಮಗ್ನರಾಗಿ ಅವರನ್ನು ಸ್ಮರಿಸಿದರು.
    1
    ಪ್ರಧಾನಿ ಶ್ರೀ Narendra Modi ಅವರು ವಿವೇಕ ಸ್ಮಾರಕದಲ್ಲಿ ಯೋಗ ಮತ್ತು ಧ್ಯಾನ ಸಭಾಂಗಣ ಹಾಗೂ ಪ್ರದರ್ಶನ ಸಭಾಂಗಣವನ್ನು ಉದ್ಘಾಟಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಚಿತ್ರಪಟದ ಮುಂದೆ ಶ್ರದ್ಧಾ-ಭಕ್ತಿಯಿಂದ ಧ್ಯಾನ ಮಗ್ನರಾಗಿ ಅವರನ್ನು ಸ್ಮರಿಸಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* *ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01: ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    1
    ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
*ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01:
ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್  ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು  ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    4 hrs ago
  • ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮೀನು ವರ್ಗಾವಣೆ ಮಾಡಿದ್ದು ಇದನ್ನ ಖಂಡಿಸಿ ಕರುನಾಡ ವಿಜಯ ಸೇನೆ ವತಿಯಿಂದ ಚಿತ್ರದುರ್ಗದ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಗೂಳಯ್ಯನಹಟ್ಟಿ ಗ್ರಾಮದ ವಾಸಿಯಾದ ಚಂದ್ರಪ್ಪ ಅವರ ಹೆಸರಿಗೆ ಚಿಕ್ಕಪುರ ಗ್ರಾಮದ ರಿ.ಸ. ನಂ:8/1 ರಲ್ಲಿ 2 ಎಕರೆ 20 ಗುಂಟೆ ಜಮೀನು ಇರುತ್ತದೆ. ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಟೇಚ್ ನಕ್ಷೆ ಸಂಖ್ಯೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೊಂದಣಿ ಆಗಿರುತ್ತದೆ. ಇದರ ಪ್ರಕಾರ ಕಾನೂನುಬದ್ದವಾಗಿ ಜಯಲಕ್ಷ್ಮಿ ಇವರಿಗೆ 1 ಎಕರೆ 20 ಗುಂಟೆ ಜಮೀನು ಪಹಣಿ ವರ್ಗಾವಣೆಯಾಗಬೇಕಾಗಿದ್ದು, ಆದರೆ ತಾಲ್ಲೂಕು ಕಛೇರಿಯ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನದಿಂದ ಪೂರಾ 2 ಎಕರೆ 20 ಗುಂಟೆ ಜಮೀನು ಜಯಲಕ್ಷ್ಮೀ ಇವರ ಹೆಸರಿಗೆ ಪಹಣಿ ಮಾಡಲು ಮುಂದಾಗಿರುತ್ತಾರೆ
    1
    ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ
ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮೀನು ವರ್ಗಾವಣೆ ಮಾಡಿದ್ದು ಇದನ್ನ ಖಂಡಿಸಿ ಕರುನಾಡ ವಿಜಯ ಸೇನೆ ವತಿಯಿಂದ ಚಿತ್ರದುರ್ಗದ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಗೂಳಯ್ಯನಹಟ್ಟಿ ಗ್ರಾಮದ ವಾಸಿಯಾದ ಚಂದ್ರಪ್ಪ ಅವರ ಹೆಸರಿಗೆ ಚಿಕ್ಕಪುರ ಗ್ರಾಮದ ರಿ.ಸ. ನಂ:8/1 ರಲ್ಲಿ 2 ಎಕರೆ 20 ಗುಂಟೆ ಜಮೀನು ಇರುತ್ತದೆ.  ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಟೇಚ್ ನಕ್ಷೆ ಸಂಖ್ಯೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೊಂದಣಿ ಆಗಿರುತ್ತದೆ. ಇದರ ಪ್ರಕಾರ ಕಾನೂನುಬದ್ದವಾಗಿ ಜಯಲಕ್ಷ್ಮಿ ಇವರಿಗೆ 1 ಎಕರೆ 20 ಗುಂಟೆ ಜಮೀನು ಪಹಣಿ ವರ್ಗಾವಣೆಯಾಗಬೇಕಾಗಿದ್ದು, ಆದರೆ ತಾಲ್ಲೂಕು ಕಛೇರಿಯ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನದಿಂದ ಪೂರಾ 2 ಎಕರೆ 20 ಗುಂಟೆ ಜಮೀನು ಜಯಲಕ್ಷ್ಮೀ ಇವರ ಹೆಸರಿಗೆ ಪಹಣಿ ಮಾಡಲು ಮುಂದಾಗಿರುತ್ತಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ:ನಿತೀಶ್ ಮತ್ತು ತಂಡ ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ *ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ *ಎತ್ತರ ಜಿಗಿತ* ತೃತೀಯ : ಮೇಘನಾ *400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ ನಾಗಭೂಷಣ್, B.P ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
    1
    *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ
*ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಚಳ್ಳಕೆರೆ ತಾಲ್ಲೂಕಿನ
ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ  ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
ಪ್ರಥಮ:ನಿತೀಶ್ ಮತ್ತು ತಂಡ   ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ
ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
*ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ 
*ಎತ್ತರ ಜಿಗಿತ* ತೃತೀಯ : ಮೇಘನಾ 
*400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ  ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ  ನಾಗಭೂಷಣ್,  B.P
ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.