ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಖಾಲಿ ಕೊಡ ಪ್ರದರ್ಶಿಸಿ ಅಕ್ರೋಶ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಖಾಲಿ ಕೊಡ ಪ್ರದರ್ಶಿಸಿ ಅಕ್ರೋಶ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಖಾಲಿ ಕೊಡ' ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರುಮಲ್ಲು ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕೈ ಖಾಲಿ ಕೊಡ ಹಿಡಿದು ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿವಿಷ್ಠ 3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಮಟ್ಟಿಗೆ ಸರಿ?. ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಹಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಆಲೂರುಮಲ್ಲು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲ್ಕೈದು ದಿನಗಳಿಂದ ಕದ್ದುಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಕರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿ.ಎಂ.ಶಂಕರ್, ವಡ್ಡಗೆರೆಕೃಷ್ಣ,ಕಾಳನಹುಂಡಿ ಮಲ್ಲಿಕ್, ಬಡಗಲಪುರ ಕೆಂಪ,ಪಣ್ಯದಹುಂಡಿ ರಾಜಣ್ಣ, ಹರದನಹಳ್ಳಿ ರಾಮಚಂದ್ರ ನಾಯಕ, ಹೆಗ್ಗೋಠಾರ ರಾಜಶೇಖರ, ರಾಜಣ್ಣ ದೇಶಿಗೌಡನಪುರ, ಮಹೇಶ್, ನಮ್ಮನೆ ಪ್ರಶಾಂತ್, ಡಿ.ಎನ್.ಉಷಾ, ಆಟೋ ಮಂಜು, ಭಾಗ್ಯ, ಮಣಿಕಂಠ ಇತರರು ಭಾಗವಹಿಸಿದ್ದರು.
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಖಾಲಿ ಕೊಡ ಪ್ರದರ್ಶಿಸಿ ಅಕ್ರೋಶ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಖಾಲಿ ಕೊಡ ಪ್ರದರ್ಶಿಸಿ ಅಕ್ರೋಶ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಖಾಲಿ ಕೊಡ' ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರುಮಲ್ಲು ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು
ಕೈ ಖಾಲಿ ಕೊಡ ಹಿಡಿದು ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿವಿಷ್ಠ
3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಮಟ್ಟಿಗೆ ಸರಿ?. ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಹಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಆಲೂರುಮಲ್ಲು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲ್ಕೈದು ದಿನಗಳಿಂದ ಕದ್ದುಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು
ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಕರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿ.ಎಂ.ಶಂಕರ್, ವಡ್ಡಗೆರೆಕೃಷ್ಣ,ಕಾಳನಹುಂಡಿ ಮಲ್ಲಿಕ್, ಬಡಗಲಪುರ ಕೆಂಪ,ಪಣ್ಯದಹುಂಡಿ ರಾಜಣ್ಣ, ಹರದನಹಳ್ಳಿ ರಾಮಚಂದ್ರ ನಾಯಕ, ಹೆಗ್ಗೋಠಾರ ರಾಜಶೇಖರ, ರಾಜಣ್ಣ ದೇಶಿಗೌಡನಪುರ, ಮಹೇಶ್, ನಮ್ಮನೆ ಪ್ರಶಾಂತ್, ಡಿ.ಎನ್.ಉಷಾ, ಆಟೋ ಮಂಜು, ಭಾಗ್ಯ, ಮಣಿಕಂಠ ಇತರರು ಭಾಗವಹಿಸಿದ್ದರು.
- ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು4
- ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.1
- ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್‌ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು. ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.2
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.4
- ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.4