logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನ್ನಡ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಅಧಿಕ ಸುಮಧುರ ಗೀತೆಗಳಿಗೆ ಜೀವ ತುಂಬಿದ್ದ ದಂತಕಥೆ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮನವರ ನಿಧನದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಮುಖರಾದ ವಿ ಶ್ರೀನಿವಾಸ್, ಕೆ ರಂಗನಾಥ್, ಸಿ ರವಿ, ಸೋಮೇಶ್, ಎಸ್ ಶಿವು, ಕೇಶವಮೂರ್ತಿ, ವಿ ಗೋಪಿ, ಎನ್ ದಿವಾಕರ್, ಕೆ ಸಿ ವೆಂಕಟೇಶ್, ಎಸ್ ಬಸವರಾಜ್, ಜಯ ಪ್ರಕಾಶ್, ಲೋಕೇಶ್ ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

2 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 hrs ago
3c8dbe4a-9995-47a4-aa03-2ce8c92a7d7c
7c132584-bd7f-4f51-b797-21e4d13d214f

ಕನ್ನಡ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಅಧಿಕ ಸುಮಧುರ ಗೀತೆಗಳಿಗೆ ಜೀವ ತುಂಬಿದ್ದ ದಂತಕಥೆ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮನವರ ನಿಧನದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಮುಖರಾದ ವಿ ಶ್ರೀನಿವಾಸ್, ಕೆ ರಂಗನಾಥ್, ಸಿ ರವಿ, ಸೋಮೇಶ್, ಎಸ್ ಶಿವು, ಕೇಶವಮೂರ್ತಿ, ವಿ ಗೋಪಿ, ಎನ್ ದಿವಾಕರ್, ಕೆ ಸಿ ವೆಂಕಟೇಶ್, ಎಸ್ ಬಸವರಾಜ್, ಜಯ ಪ್ರಕಾಶ್, ಲೋಕೇಶ್ ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿವಮೊಗ್ಗ ನಗರದ ಕೆಲವು ವಾರ್ಡ್‌ಗಳಲ್ಲಿ ಕಳೆದ ಕೆಲವು ದಿನಗಳಿಂದ ತಾಂತ್ರಿಕ ಅಡಚಣೆಯಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಶಾಸಕ ಚನ್ನಬಸಪ್ಪ ಅವರು ನ್ಯೂ ಮಂಡ್ಲಿಯಲ್ಲಿರುವ ವಾಟರ್ ಪಂಪ್ ಹೌಸ್‌ಗೆ ಖುದ್ದಾಗಿ ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಮಾಧ್ಯಮ ಮಿತ್ರರೊಂದಿಗೆ ಜಂಟಿಯಾಗಿ ಈ ಪರಿಶೀಲನೆ ನಡೆಸಿದ ಶಾಸಕರು, ನಗರದ ನಾಗರಿಕರ ದೈನಂದಿನ ಅಗತ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಮುಖ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಜಲಮಂಡಳಿ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ತಂಡ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತವಾಗಿದೆ. ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಿಸಿ, ಸಾರ್ವಜನಿಕರಿಗೆ ಎಂದಿನಂತೆ ಸುಗಮವಾಗಿ ಕುಡಿಯುವ ನೀರು ಸರಬರಾಜು ಮಾಡಲು ಶಾಸಕರು ಕಟ್ಟುನಿಟ್ಟಿನ ಜವಾಬ್ದಾರಿಯುತ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕರಿಗೆ ಆಗಿರುವ ತಾತ್ಕಾಲಿಕ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಅವರು, ಇಲಾಖೆಯು ಹಗಲಿರುಳು ಶ್ರಮಿಸುತ್ತಿದ್ದು ಅತ್ಯಂತ ಶೀಘ್ರದಲ್ಲಿಯೇ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
    1
    ಶಿವಮೊಗ್ಗ ನಗರದ ಕೆಲವು ವಾರ್ಡ್‌ಗಳಲ್ಲಿ ಕಳೆದ ಕೆಲವು ದಿನಗಳಿಂದ ತಾಂತ್ರಿಕ ಅಡಚಣೆಯಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಶಾಸಕ ಚನ್ನಬಸಪ್ಪ ಅವರು ನ್ಯೂ ಮಂಡ್ಲಿಯಲ್ಲಿರುವ ವಾಟರ್ ಪಂಪ್ ಹೌಸ್‌ಗೆ ಖುದ್ದಾಗಿ ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಮಾಧ್ಯಮ ಮಿತ್ರರೊಂದಿಗೆ ಜಂಟಿಯಾಗಿ ಈ ಪರಿಶೀಲನೆ ನಡೆಸಿದ ಶಾಸಕರು, ನಗರದ ನಾಗರಿಕರ ದೈನಂದಿನ ಅಗತ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಮುಖ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಜಲಮಂಡಳಿ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ತಂಡ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತವಾಗಿದೆ. ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಿಸಿ, ಸಾರ್ವಜನಿಕರಿಗೆ ಎಂದಿನಂತೆ ಸುಗಮವಾಗಿ ಕುಡಿಯುವ ನೀರು ಸರಬರಾಜು ಮಾಡಲು ಶಾಸಕರು ಕಟ್ಟುನಿಟ್ಟಿನ ಜವಾಬ್ದಾರಿಯುತ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕರಿಗೆ ಆಗಿರುವ ತಾತ್ಕಾಲಿಕ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಅವರು, ಇಲಾಖೆಯು ಹಗಲಿರುಳು ಶ್ರಮಿಸುತ್ತಿದ್ದು ಅತ್ಯಂತ ಶೀಘ್ರದಲ್ಲಿಯೇ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಸುತ್ತಲೂ ಕಸದ ರಾಶಿ ಹಾಗೂ ಕೊಚ್ಛೆ ತುಂಬಿಕೊಂಡಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ ಸ್ವಚ್ಛತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಎನ್. ರಾಜು ಅವರು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ಅವರಿಗೆ ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಕುಟುಂಬಗಳ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರು ರೋಗರುಜಿನಗಳಿಗೆ ತುತ್ತಾಗುವ ಮುನ್ನವೇ ಶಾಲಾ ಆವರಣವನ್ನು ಸ್ವಚ್ಛಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಕೊಚ್ಛೆ ತುಂಬಿಕೊಂಡಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
    1
    ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಸುತ್ತಲೂ ಕಸದ ರಾಶಿ ಹಾಗೂ ಕೊಚ್ಛೆ ತುಂಬಿಕೊಂಡಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ ಸ್ವಚ್ಛತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಎನ್. ರಾಜು ಅವರು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ಅವರಿಗೆ ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಕುಟುಂಬಗಳ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರು ರೋಗರುಜಿನಗಳಿಗೆ ತುತ್ತಾಗುವ ಮುನ್ನವೇ ಶಾಲಾ ಆವರಣವನ್ನು ಸ್ವಚ್ಛಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಕೊಚ್ಛೆ ತುಂಬಿಕೊಂಡಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    20 hrs ago
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮುಖಂಡರುಗಳ ಮಹಾಸಭೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆಆರ್‌ಐಡಿಎಲ್ ಅಧ್ಯಕ್ಷರಾದ ಬಿ.ಕೆ. ಸಂಗಮೇಶ್ ಮತ್ತು ಪಂಚ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಿ.ಎಸ್. ಗಣೇಶ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ಜರುಗಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಎಸ್. ಕುಮಾರ್, ನಗರಸಭೆಯ ಎಲ್ಲಾ ವಿಭಾಗದ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ತಾಲೂಕು ಮತ್ತು ಗ್ರಾಮೀಣ ಪ್ರದೇಶದ ಒಕ್ಕಲಿಗ ಸಮಾಜದ ಪ್ರಮುಖ ಮುಖಂಡರುಗಳು ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಮುಖರು ಕಾಂಗ್ರೆಸ್ ಪಕ್ಷದ ಕಾರ್ಯಚಟುವಟಿಕೆಗಳು ಹಾಗೂ ಶಾಸಕ ಬಿ.ಕೆ. ಸಂಗಮೇಶ್ ಅವರು ಭದ್ರಾವತಿ ತಾಲೂಕಿನಲ್ಲಿ ಕೈಗೊಂಡಿರುವ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳು ಒಕ್ಕಲಿಗ ಸಮುದಾಯದ ವತಿಯಿಂದ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಭವ್ಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.
    4
    ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮುಖಂಡರುಗಳ ಮಹಾಸಭೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆಆರ್‌ಐಡಿಎಲ್ ಅಧ್ಯಕ್ಷರಾದ ಬಿ.ಕೆ. ಸಂಗಮೇಶ್ ಮತ್ತು ಪಂಚ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಿ.ಎಸ್. ಗಣೇಶ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ಜರುಗಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಎಸ್. ಕುಮಾರ್, ನಗರಸಭೆಯ ಎಲ್ಲಾ ವಿಭಾಗದ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ತಾಲೂಕು ಮತ್ತು ಗ್ರಾಮೀಣ ಪ್ರದೇಶದ ಒಕ್ಕಲಿಗ ಸಮಾಜದ ಪ್ರಮುಖ ಮುಖಂಡರುಗಳು ಭಾಗವಹಿಸಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಮುಖರು ಕಾಂಗ್ರೆಸ್ ಪಕ್ಷದ ಕಾರ್ಯಚಟುವಟಿಕೆಗಳು ಹಾಗೂ ಶಾಸಕ ಬಿ.ಕೆ. ಸಂಗಮೇಶ್ ಅವರು ಭದ್ರಾವತಿ ತಾಲೂಕಿನಲ್ಲಿ ಕೈಗೊಂಡಿರುವ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳು ಒಕ್ಕಲಿಗ ಸಮುದಾಯದ ವತಿಯಿಂದ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಭವ್ಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    12 hrs ago
  • ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್. ಹನುಮಂತಪ್ಪ ಅವರು ನಿನ್ನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ರಾಜ್ಯಸಭಾ ಸಂಸದರಾಗಿದ್ದ ಅವರು, ಶ್ರೀ ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರ ಅಂತ್ಯಕ್ರಿಯೆಯನ್ನು ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸದ್ಯ ಹೊಳಲ್ಕೆರೆ ರಸ್ತೆಯ ನೆಹರು ನಗರದಲ್ಲಿರುವ ಮೃತರ ನಿವಾಸದ ಬಳಿ ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಜಮಾಯಿಸಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ.
    1
    ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್. ಹನುಮಂತಪ್ಪ ಅವರು ನಿನ್ನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ರಾಜ್ಯಸಭಾ ಸಂಸದರಾಗಿದ್ದ ಅವರು, ಶ್ರೀ ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರ ಅಂತ್ಯಕ್ರಿಯೆಯನ್ನು ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸದ್ಯ ಹೊಳಲ್ಕೆರೆ ರಸ್ತೆಯ ನೆಹರು ನಗರದಲ್ಲಿರುವ ಮೃತರ ನಿವಾಸದ ಬಳಿ ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಜಮಾಯಿಸಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 min ago
  • ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಚ್. ಹನುಮಂತಪ್ಪ ಅವರು ನಿಧನರಾಗಿದ್ದಾರೆ. ಜನನಾಯಕ ಹನುಮಂತಪ್ಪ ಅವರ ಅಗಲಿಕೆ ರಾಜಕೀಯ ವಲಯಕ್ಕೆ ತೀವ್ರ ದುಃಖ ತಂದಿದ್ದು, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಅಂತಿಮ ನಮನಗಳನ್ನು ಸಲ್ಲಿಸಲಾಗುತ್ತಿದೆ.
    1
    ಚಿತ್ರದುರ್ಗದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಚ್. ಹನುಮಂತಪ್ಪ ಅವರು ನಿಧನರಾಗಿದ್ದಾರೆ. ಜನನಾಯಕ ಹನುಮಂತಪ್ಪ ಅವರ ಅಗಲಿಕೆ ರಾಜಕೀಯ ವಲಯಕ್ಕೆ ತೀವ್ರ ದುಃಖ ತಂದಿದ್ದು, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಅಂತಿಮ ನಮನಗಳನ್ನು ಸಲ್ಲಿಸಲಾಗುತ್ತಿದೆ.
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಭಾರತೀಯ ಸಂಗೀತ ಲೋಕದ ಅಮೂಲ್ಯ ರತ್ನ, ಗಾನ ಕೋಗಿಲೆ ಡಾಕ್ಟರ್ ಎಸ್. ಜಾನಕಿ ಅಮ್ಮ ಅವರ ಅಂತಿಮ ದರ್ಶನ ಪಡೆದು ಹಲವಾರು ಗಣ್ಯರು ಭಾವಪೂರ್ಣ ನಮನ ಸಲ್ಲಿಸಿದ್ದು, ಈ ವೇಳೆ ಸಮಾಜಮುಖಿ ವ್ಯಕ್ತಿತ್ವ ಹಾಗೂ ಯುವ ಉದ್ಯಮಿ ಜಿಮ್ ರವಿ ಅವರೂ ಸಹ ಆಗಮಿಸಿ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಗೀತ ಲೋಕಕ್ಕೆ ಜಾನಕಿ ಅಮ್ಮ ಅವರು ನೀಡಿದ ಅಪಾರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಜಿಮ್ ರವಿ ಅವರು, ಅವರ ಅಗಲಿಕೆಯು ಇಡೀ ದೇಶದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    1
    ಭಾರತೀಯ ಸಂಗೀತ ಲೋಕದ ಅಮೂಲ್ಯ ರತ್ನ, ಗಾನ ಕೋಗಿಲೆ ಡಾಕ್ಟರ್ ಎಸ್. ಜಾನಕಿ ಅಮ್ಮ ಅವರ ಅಂತಿಮ ದರ್ಶನ ಪಡೆದು ಹಲವಾರು ಗಣ್ಯರು ಭಾವಪೂರ್ಣ ನಮನ ಸಲ್ಲಿಸಿದ್ದು, ಈ ವೇಳೆ ಸಮಾಜಮುಖಿ ವ್ಯಕ್ತಿತ್ವ ಹಾಗೂ ಯುವ ಉದ್ಯಮಿ ಜಿಮ್ ರವಿ ಅವರೂ ಸಹ ಆಗಮಿಸಿ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಗೀತ ಲೋಕಕ್ಕೆ ಜಾನಕಿ ಅಮ್ಮ ಅವರು ನೀಡಿದ ಅಪಾರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಜಿಮ್ ರವಿ ಅವರು, ಅವರ ಅಗಲಿಕೆಯು ಇಡೀ ದೇಶದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    16 hrs ago
  • ಚಿತ್ರದುರ್ಗದ ರಾಂಪುರದಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಮೊಹಮ್ಮದ್ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಸ್ಥಳೀಯರು, ಗಾಯಾಳುಗಳನ್ನು ತಕ್ಷಣವೇ ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಚಿತ್ರದುರ್ಗದ ರಾಂಪುರದಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಮೊಹಮ್ಮದ್ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಸ್ಥಳೀಯರು, ಗಾಯಾಳುಗಳನ್ನು ತಕ್ಷಣವೇ ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.