logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎಚ್.ಪಿ.ವಿ ಲಸಿಕೆ ಸುರಕ್ಷಿತೆ ಬಗ್ಗೆ ಜಾಗೃತಿ ಕಾರ್ಯಕ್ರಮ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ ಲಸಿಕೆ ಪರಿಣಾಮಕಾರಿ:- ಡಾ.ನಿತಿನ್ ಬಾಗೇಪಲ್ಲಿ :-ತಾಲ್ಲೂಕು ಮಿಟ್ಟೇಮರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಚ್.ಪಿ.ವಿ ಲಸಿಕೆ ಸುರಕ್ಷಿತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಡಾ.ನಿತಿನ್ ಉದ್ಘಾಟನೆ ಮಾಡಿ ಮಾತನಾಡಿದರು. ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ ವೈರಸ್‌ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನೂ ತಡೆಗಟ್ಟಲು ಸಹಾಯ ಮಾಡುತ್ತದೆ. ಗರ್ಭಕಂಠ, ಯೋನಿ, ಶಿಶ್ನ, ಗುದ ಮತ್ತು ಗಂಟಲು ವಿವಿಧ ಭಾಗದ ಕ್ಯಾನ್ಸರ್‌ಗಳನ್ನು ಎಚ್‌ಪಿವಿ ಲಸಿಕೆಯಿಂದ ತಡೆಗಟ್ಟಬಹುದಾಗಿದೆ. ಇದರಿಂದ ಹೆಣ್ಣುಮಕ್ಕಳ ಆರೋಗ್ಯವು ನಾಡಿನ ಸುಭದ್ರತೆಯ ಭವಿಷ್ಯದ ಬುನಾದಿಯಾಗಿದೆ ಎಂದರು. ಪ್ರಸ್ತುತ ಸದರಿ ಲಸಿಕೆಯನ್ನು 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುತ್ತದೆ. ಸದರಿ ಲಸಿಕಾಕರಣವನ್ನು ರಾಷ್ಟ್ರೀಯ ಸಾರ್ವತ್ರೀಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞ ವೈದ್ಯರ ಮೂಲಕ ಲಸಿಕೆ ನೀಡಲಿದ್ದಾರೆ ಎಂದರು. ಲಸಿಕೆ ಪಡೆದ ಮ್ಕಕಳಿಗೆ ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಆ ಮೂಲಕ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನೂ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲ ಫಲಾನುಭವಿಗಳು ಆಗತ್ಯವಾದ ಸೂಕ್ತ ಗುರುತಿನ ಚೀಟಿಯೊಂದಿಗೆ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು. ಈ ಲಸಿಕೆಯನ್ನು ಪಡೆಯುವ ಮೂಲಕ ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲ ಪಾಲಕರು ಸಹಕಾರ ನೀಡಬೇಕು ಎಂದರು. ಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳ್ಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ, ನಮ್ಮ ಹೆಣ್ಣು ಮಕ್ಕಳ ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷವಾಕ್ಯದೊಂದಿಗೆ ಲಸಿಕೆ ನೀಡಲಾಗುತ್ತಿದೆ. ಗರ್ಭಕಂಠದ ಕ್ಯಾನ್ಸರ್‌ಮುಕ್ತ ಸಮಾಜ ಮಾಡಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ಅರ್ಹ ಎಲ್ಲ ಹೆಣ್ಣು ಮಗುವಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತವಾಗಿದೆ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿ ರಾಜೇಶ್ ಶ್ಯಾಲಿನಿ,ಅಖಿಲ್, ನಾಗಮಣಿ,ರಾಜೇಶ್ವರಿ, ಅಶಾ,ಅಂಗನವಾಡಿ ಕಾರ್ಯಕರ್ತರು ಹಾಗೂ ಮಿಟ್ಟೇಮರಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

on 13 March
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
on 13 March
bb8bf414-a8f7-4275-84ab-e0d8b27d5d1c

ಎಚ್.ಪಿ.ವಿ ಲಸಿಕೆ ಸುರಕ್ಷಿತೆ ಬಗ್ಗೆ ಜಾಗೃತಿ ಕಾರ್ಯಕ್ರಮ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ ಲಸಿಕೆ ಪರಿಣಾಮಕಾರಿ:- ಡಾ.ನಿತಿನ್ ಬಾಗೇಪಲ್ಲಿ :-ತಾಲ್ಲೂಕು ಮಿಟ್ಟೇಮರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಚ್.ಪಿ.ವಿ ಲಸಿಕೆ ಸುರಕ್ಷಿತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಡಾ.ನಿತಿನ್ ಉದ್ಘಾಟನೆ ಮಾಡಿ ಮಾತನಾಡಿದರು. ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ ವೈರಸ್‌ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನೂ ತಡೆಗಟ್ಟಲು ಸಹಾಯ ಮಾಡುತ್ತದೆ. ಗರ್ಭಕಂಠ, ಯೋನಿ, ಶಿಶ್ನ, ಗುದ ಮತ್ತು ಗಂಟಲು ವಿವಿಧ ಭಾಗದ ಕ್ಯಾನ್ಸರ್‌ಗಳನ್ನು ಎಚ್‌ಪಿವಿ ಲಸಿಕೆಯಿಂದ ತಡೆಗಟ್ಟಬಹುದಾಗಿದೆ. ಇದರಿಂದ ಹೆಣ್ಣುಮಕ್ಕಳ ಆರೋಗ್ಯವು ನಾಡಿನ ಸುಭದ್ರತೆಯ ಭವಿಷ್ಯದ ಬುನಾದಿಯಾಗಿದೆ ಎಂದರು. ಪ್ರಸ್ತುತ ಸದರಿ ಲಸಿಕೆಯನ್ನು 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುತ್ತದೆ. ಸದರಿ ಲಸಿಕಾಕರಣವನ್ನು ರಾಷ್ಟ್ರೀಯ ಸಾರ್ವತ್ರೀಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞ ವೈದ್ಯರ ಮೂಲಕ

2bb2b6a2-a63f-4fa2-8674-9dc61b33300b

ಲಸಿಕೆ ನೀಡಲಿದ್ದಾರೆ ಎಂದರು. ಲಸಿಕೆ ಪಡೆದ ಮ್ಕಕಳಿಗೆ ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಆ ಮೂಲಕ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನೂ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲ ಫಲಾನುಭವಿಗಳು ಆಗತ್ಯವಾದ ಸೂಕ್ತ ಗುರುತಿನ ಚೀಟಿಯೊಂದಿಗೆ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು. ಈ ಲಸಿಕೆಯನ್ನು ಪಡೆಯುವ ಮೂಲಕ ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲ ಪಾಲಕರು ಸಹಕಾರ ನೀಡಬೇಕು ಎಂದರು. ಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳ್ಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ, ನಮ್ಮ ಹೆಣ್ಣು ಮಕ್ಕಳ ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷವಾಕ್ಯದೊಂದಿಗೆ ಲಸಿಕೆ ನೀಡಲಾಗುತ್ತಿದೆ. ಗರ್ಭಕಂಠದ ಕ್ಯಾನ್ಸರ್‌ಮುಕ್ತ ಸಮಾಜ ಮಾಡಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ಅರ್ಹ ಎಲ್ಲ ಹೆಣ್ಣು ಮಗುವಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತವಾಗಿದೆ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿ ರಾಜೇಶ್ ಶ್ಯಾಲಿನಿ,ಅಖಿಲ್, ನಾಗಮಣಿ,ರಾಜೇಶ್ವರಿ, ಅಶಾ,ಅಂಗನವಾಡಿ ಕಾರ್ಯಕರ್ತರು ಹಾಗೂ ಮಿಟ್ಟೇಮರಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

More news from ಕರ್ನಾಟಕ and nearby areas
  • ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    4
    ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ!
17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ
ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ
ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ
ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ
ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 
18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ
ಮಧ್ಯರಾತ್ರಿ 3 ಗಂಟೆಗೆ  ದಾಳಿ ನಡೆಸಿ ಬಾಲಕಿ ರಕ್ಷಣೆ
ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    14 hrs ago
  • ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
    1
    ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    13 hrs ago
  • Post by Shilpa
    3
    Post by Shilpa
    user_Shilpa
    Shilpa
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.
    1
    ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.
    1
    ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    1
    ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.