logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗೇಪಲ್ಲಿ:ಅಂತರಾಜ್ಯ ಬೈಕ್ ಕಳ್ಳನ‌ ಬಂಧನ 13 ಬೈಕ್‌ಗಳು ವಶ ಬಾಗೇಪಲ್ಲಿ:- ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬಾಗೇಪಲ್ಲಿ ಪೊಲೀಸ್ ಠಾಣೆ ಪೊಲೀಸರು ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಈತನಿಂದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ ಬೈಕ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 2022ರಲ್ಲಿ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಮುಂದುವರಿಸಿದ ವೇಳೆ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ 13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಅಜಯ್‌ ಸಾರಥಿ,ಸುನಿಲ್ ಕುಮಾರ್, ಸುರೇಶ್, ಧನಂಜಯ್ ಕುಮಾರ್, ವೆಂಕಟಶಿವ,ನಾಗಾರ್ಜುನ, ಲಕ್ಷ್ಮಿಪತಿ,ಕೃಷ್ಣಪ್ಪ ರಾಜಪ್ಪ ಹಾಗೂ ಇತರರು ಹಾಜರಿದ್ದರು.

on 10 March
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
on 10 March
d1c6385a-390a-4cf9-8c1b-126efc2ad439

ಬಾಗೇಪಲ್ಲಿ:ಅಂತರಾಜ್ಯ ಬೈಕ್ ಕಳ್ಳನ‌ ಬಂಧನ 13 ಬೈಕ್‌ಗಳು ವಶ ಬಾಗೇಪಲ್ಲಿ:- ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬಾಗೇಪಲ್ಲಿ ಪೊಲೀಸ್ ಠಾಣೆ ಪೊಲೀಸರು ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಈತನಿಂದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ ಬೈಕ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 2022ರಲ್ಲಿ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಮುಂದುವರಿಸಿದ ವೇಳೆ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ 13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಅಜಯ್‌ ಸಾರಥಿ,ಸುನಿಲ್ ಕುಮಾರ್, ಸುರೇಶ್, ಧನಂಜಯ್ ಕುಮಾರ್, ವೆಂಕಟಶಿವ,ನಾಗಾರ್ಜುನ, ಲಕ್ಷ್ಮಿಪತಿ,ಕೃಷ್ಣಪ್ಪ ರಾಜಪ್ಪ ಹಾಗೂ ಇತರರು ಹಾಜರಿದ್ದರು.

More news from ಕರ್ನಾಟಕ and nearby areas
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    22 hrs ago
  • ಭೀಕರ ದುರಂತದಲ್ಲಿ ಹೆಂಡತಿ ಮಗ ಸಾ** ಹಣೆ ಚಚ್ಚಿಕೊಂಡು ಕಣ್ಣೀರಿಟ್ಟ ಪತಿ
    1
    ಭೀಕರ ದುರಂತದಲ್ಲಿ ಹೆಂಡತಿ ಮಗ ಸಾ**
ಹಣೆ ಚಚ್ಚಿಕೊಂಡು ಕಣ್ಣೀರಿಟ್ಟ ಪತಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    17 hrs ago
  • ಆನೇಕಲ್ : ದಶಕಗಳ ಹಿಂದೆ ರಾಜ್ಯದ ಕಾಡುಗಳಿಂದ ನಾಶವಾಗಿದ್ದ ‘ಶಿವಂಗಿ’ (ಚೀತಾ)ಗಳು ಮತ್ತೆ ಕರ್ನಾಟಕದ ಮಣ್ಣಿಗೆ ಮರಳಿ ಕಾಲಿಟ್ಟಿದೆ. ದಕ್ಷಿಣ ಆಫ್ರಿಕಾದಿಂದ ತರಿಸಲಾದ ನಾಲ್ಕು ಚೀತಾಗಳು ಶನಿವಾರ ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದು, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಸ್ವತಃ ವಿಮಾನ ನಿಲ್ದಾಣದ ಕಾರ್ಗೋ ವಿಭಾಗಕ್ಕೆ ಭೇಟಿ ನೀಡಿ ಚೀತಾಗಳನ್ನು ಸ್ವಾಗತಿಸಿದರು. ನಂತರ ಈ ಚೀತಾಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು. ಈ ವಿದೇಶಿ ಅತಿಥಿಗಳಾದ ಚೀತಾಗಳನ್ನು ಮುಂದಿನ 30 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಹೊಸ ಹವಾಮಾನ ಮತ್ತು ಪರಿಸರಕ್ಕೆ ಹೊಂದಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಾಣಿಗಳ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ತಜ್ಞರ ಮಾರ್ಗದರ್ಶನದಲ್ಲಿ ನಿರ್ದಿಷ್ಟ ಆಹಾರ ಕ್ರಮವನ್ನು ಅನುಸರಿಸಲಾಗುತ್ತಿದ್ದು, ಯಾವುದೇ ಸೋಂಕು ಅಥವಾ ಆರೋಗ್ಯ ಸಮಸ್ಯೆ ಉಂಟಾಗದಂತೆ ವಿಶೇಷ ಎಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಚೀತಾಗಳ ಸಂಪೂರ್ಣ ಸುರಕ್ಷತಾ ಜವಾಬ್ದಾರಿ ವಹಿಸಲಾಗಿದೆ. ಈ ಕುರಿತು ಮಾತನಾಡಿದ ಸಚಿವ ಖಂಡ್ರೆ, ಒಂದು ಕಾಲದಲ್ಲಿ ನಮ್ಮ ಕಾಡುಗಳಲ್ಲಿ ವಿಪುಲವಾಗಿದ್ದ ಶಿವಂಗಿಗಳು ಇಂದು ಸಂಪೂರ್ಣವಾಗಿ ಅಳಿದು ಹೋಗಿವೆ. ಇವುಗಳನ್ನು ಮತ್ತೆ ಪರಿಚಯಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
    1
    ಆನೇಕಲ್ : ದಶಕಗಳ ಹಿಂದೆ ರಾಜ್ಯದ ಕಾಡುಗಳಿಂದ ನಾಶವಾಗಿದ್ದ ‘ಶಿವಂಗಿ’ (ಚೀತಾ)ಗಳು ಮತ್ತೆ ಕರ್ನಾಟಕದ ಮಣ್ಣಿಗೆ ಮರಳಿ ಕಾಲಿಟ್ಟಿದೆ.
ದಕ್ಷಿಣ ಆಫ್ರಿಕಾದಿಂದ ತರಿಸಲಾದ ನಾಲ್ಕು ಚೀತಾಗಳು ಶನಿವಾರ ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದು, ಅರಣ್ಯ ಸಚಿವ
ಈಶ್ವರ ಬಿ. ಖಂಡ್ರೆ ಅವರು ಸ್ವತಃ ವಿಮಾನ ನಿಲ್ದಾಣದ ಕಾರ್ಗೋ ವಿಭಾಗಕ್ಕೆ ಭೇಟಿ ನೀಡಿ ಚೀತಾಗಳನ್ನು ಸ್ವಾಗತಿಸಿದರು. ನಂತರ ಈ ಚೀತಾಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು.
ಈ ವಿದೇಶಿ ಅತಿಥಿಗಳಾದ ಚೀತಾಗಳನ್ನು ಮುಂದಿನ 30 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಹೊಸ ಹವಾಮಾನ ಮತ್ತು ಪರಿಸರಕ್ಕೆ ಹೊಂದಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಾಣಿಗಳ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ತಜ್ಞರ ಮಾರ್ಗದರ್ಶನದಲ್ಲಿ ನಿರ್ದಿಷ್ಟ ಆಹಾರ ಕ್ರಮವನ್ನು ಅನುಸರಿಸಲಾಗುತ್ತಿದ್ದು, ಯಾವುದೇ ಸೋಂಕು ಅಥವಾ ಆರೋಗ್ಯ ಸಮಸ್ಯೆ ಉಂಟಾಗದಂತೆ ವಿಶೇಷ ಎಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಚೀತಾಗಳ ಸಂಪೂರ್ಣ ಸುರಕ್ಷತಾ ಜವಾಬ್ದಾರಿ ವಹಿಸಲಾಗಿದೆ.
ಈ ಕುರಿತು ಮಾತನಾಡಿದ ಸಚಿವ ಖಂಡ್ರೆ, ಒಂದು ಕಾಲದಲ್ಲಿ ನಮ್ಮ ಕಾಡುಗಳಲ್ಲಿ ವಿಪುಲವಾಗಿದ್ದ ಶಿವಂಗಿಗಳು ಇಂದು ಸಂಪೂರ್ಣವಾಗಿ ಅಳಿದು ಹೋಗಿವೆ. ಇವುಗಳನ್ನು ಮತ್ತೆ ಪರಿಚಯಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
    user_Chakravarthy
    Chakravarthy
    Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯವನ್ನು ಶನಿವಾರ ವೀಕ್ಷಿಸಿದರು.
    1
    ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯವನ್ನು ಶನಿವಾರ ವೀಕ್ಷಿಸಿದರು.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    23 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಈ ವ್ಯಕ್ತಿಗೆ ಎಲ್ಲಿದ್ದೀನಿ ಎನ್ನುವಂತಹ ಜ್ಞಾನ ಇದೆಯೇ? ಯುವತಿಯ ಪಕ್ಕದಲ್ಲಿ ಪ್ಯಾಂಟ್ ತೆಗೆದು ಅಸಭ್ಯ ವರ್ತನೆ!?
    1
    ಈ ವ್ಯಕ್ತಿಗೆ ಎಲ್ಲಿದ್ದೀನಿ ಎನ್ನುವಂತಹ ಜ್ಞಾನ ಇದೆಯೇ?
ಯುವತಿಯ ಪಕ್ಕದಲ್ಲಿ ಪ್ಯಾಂಟ್ ತೆಗೆದು ಅಸಭ್ಯ ವರ್ತನೆ!?
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ಚಳ್ಳಕೆರೆ ವೀರಶೈವ ಸಮಾಜ ಸೇವಾ ಸಂಘ. ಚಳ್ಳಕೆರೆ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದ ಹಿರಿಯೂರು ರಸ್ತೆಯಲ್ಲಿನ ಬಸವೇಶ್ವರ ವೃತ್ತದಲ್ಲಿನ ಅಶ್ವಾರೂಡ ಢ ಬಸವೇಶ್ವರ ಪುತ್ಥಳಿ ಪುನರ್ ಪ್ರತಿಸ್ಥಾಪನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.. ಕಾರ್ಯಕ್ರಮದಲ್ಲಿ ತುಮಕೂರು ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕರ್ಣ ಕೊಪ್ಪಳದ ಗವಿಮಠ ಸಂಸ್ಥಾನದ ಗವಿಸಿದ್ದೇಶ್ವರ ಮಹಾಸ್ವಾಮಿಗಳು.. ನೀನು ಕೊನೆಯ ಯಜಮಾನ ಕೊರಟಗೆರೆ ತಾಲೂಕಿನ ಕ್ಷೇತ್ರ ಸಿದ್ದಿರಿ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಹಾಗೂ ಚಿತ್ರದುರ್ಗ ಎಂಎಲ್ ಸಿ. ಕೆ ಎಸ್ ನವೀನ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ ನಾಗರಾಜ್ ,ಶಾಸಕ ಟಿ.ರಘಮೂರ್ತಿ ವಿಶ್ವರೂಢ ಬಸವೇಶ್ವರ ಕಂಚಿನ ಪುತ್ಥಳಿಯನ್ನ ಪುನರ್ ಪ್ರತಿಷ್ಠಾಪನೆಯನ್ನು ನೆರವೇರಿಸಿದರು...
    1
    ಚಳ್ಳಕೆರೆ ವೀರಶೈವ ಸಮಾಜ ಸೇವಾ ಸಂಘ. ಚಳ್ಳಕೆರೆ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದ ಹಿರಿಯೂರು ರಸ್ತೆಯಲ್ಲಿನ  ಬಸವೇಶ್ವರ ವೃತ್ತದಲ್ಲಿನ ಅಶ್ವಾರೂಡ
ಢ ಬಸವೇಶ್ವರ ಪುತ್ಥಳಿ  ಪುನರ್ ಪ್ರತಿಸ್ಥಾಪನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು..
ಕಾರ್ಯಕ್ರಮದಲ್ಲಿ ತುಮಕೂರು ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕರ್ಣ ಕೊಪ್ಪಳದ ಗವಿಮಠ ಸಂಸ್ಥಾನದ ಗವಿಸಿದ್ದೇಶ್ವರ ಮಹಾಸ್ವಾಮಿಗಳು.. ನೀನು ಕೊನೆಯ ಯಜಮಾನ ಕೊರಟಗೆರೆ ತಾಲೂಕಿನ ಕ್ಷೇತ್ರ ಸಿದ್ದಿರಿ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಹಾಗೂ ಚಿತ್ರದುರ್ಗ ಎಂಎಲ್ ಸಿ. ಕೆ ಎಸ್ ನವೀನ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ ನಾಗರಾಜ್ ,ಶಾಸಕ ಟಿ.ರಘಮೂರ್ತಿ ವಿಶ್ವರೂಢ ಬಸವೇಶ್ವರ ಕಂಚಿನ ಪುತ್ಥಳಿಯನ್ನ ಪುನರ್ ಪ್ರತಿಷ್ಠಾಪನೆಯನ್ನು ನೆರವೇರಿಸಿದರು...
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಏ.25 ಮತ್ತು 26 ರಂದು ಕೃಷಿ ಪ್ರಾಯೋಗಿಕ ತರಬೇತಿ ಶಿಭಿರ ಆಯೋಜಿಸಲಾಗಿದೆ. ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು.
    1
    ಏ.25 ಮತ್ತು 26 ರಂದು ಕೃಷಿ ಪ್ರಾಯೋಗಿಕ ತರಬೇತಿ ಶಿಭಿರ ಆಯೋಜಿಸಲಾಗಿದೆ. ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ.
ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.